Uncategorized
Ashok Kumar Rai | ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ : ಕಾಂಗ್ರೇಸ್ ಬೆಂಬಲಿತ ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ – ಅಧಿಕಾರಿಯ ಅಮಾನತಿಗೆ ಸೂಚನೆ
ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ,ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕ ಅಶೋಕ್ ರೈ (Ashok Kumar Rai) ಗರಂ ಆಗಿದ್ದು ಆದಿತ್ಯವಾರ ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡ ಘಟನೆ ನಡೆದಿದೆ.
ಅಶೋಕ್ ರೈ ದಿಡೀರ್ ಭೇಟಿ
ಪಿಎಲ್ ಡಿ ಬ್ಯಾಂಕಿನ ಚುನಾವಣೆಗೆ ಒಟ್ಟು ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ರಾಜಶೇಖರ ಜೈನ್ ಮತ್ಗು ಅಶೋಕ್ ರೈ ದೇರ್ಲ ಎಂಬವರ ನಾಮಪತ್ರವನ್ನು ಚುನಾವಣಾ ಅಧಿಜಾರಿ ಎಆರ್ ಒ ರಘು ಎಂಬವರು ತಿರಸ್ಕೃತಗೊಳಿಸಿದ್ದರು. ಸಕಾರಣವಿಲ್ಲದೆ ಮತ್ತು ಉದ್ದೇಶಪೂರ್ವಕವಾಗಿ ನಮ್ಮ ನಾಮಪತ್ರವನ್ನು ತಿರಸ್ಕಾರ ಮಾಡಿದ್ದಾರೆ ಎಂದು ಇಬ್ಬರು ಅಭ್ಯರ್ಥಿಗಳು ಬ್ಲಾಕ್ ಅಧ್ಯಕ್ಷರಾದ ಕೆ ಪಿ ಆಳ್ವರ ಗಮನಕ್ಕೆ ತಂದಿದ್ದಾರೆ. ಕೆ ಪಿ ಆಳ್ವರು ಶಾಸಕರ ಗಮನಕ್ಕೆ ತಂದು ಬಳಿಕ ಶಾಸಕರು ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿ ಅವರನ್ನು ತರಾಟೆಗೆ ಎತ್ಗಿಕೊಂಡರು. ಸಲ್ಲಿಸಲಾಗಿದ್ದ ನಾಮಪತ್ರವನ್ನು ಪರಿಶೀಲನೆ ಮಾಡುವ ವೇಳೆ ಅದು ಸರಿಯಾಗಿಯೇ ಇತ್ತು, ಯಾವುದೇ ಕಾರಣವಿಲ್ಲದೆ ದುರುದ್ದೇಶದಿಂದ ಅಧಿಕಾರಿ ಈ ಕೆಲಸ ಮಾಡಿದ್ದಾರೆ ಎಂದು ಶಾಸಕರು ನೇರ ಆರೋಪ ಮಾಡಿದರು.
ಅಧಿಕಾರಿ ಹೇಳಿದ ಕಾರಣ..
ನಾಮಪತ್ರ ಸಲ್ಲಿಸುವ ವೇಳೆ ಸ್ಪರ್ದಿಸುವ ಅಭ್ಯರ್ಥಿ ಯಾವ ಕೆಟಗರಿಯಲ್ಲಿ ಸ್ಪರ್ದೆ ಮಾಡುತ್ತಿದ್ದಾನೆ ಎಂಬ ವಿಚಾರವನ್ನು ನಾಮಪತ್ರದಲ್ಲಿ ನಮೂದಿಸಬೇಕು, ನಮೂದಿಸಿದ ಬಳಿಕ ಉಳಿದ ಕೆಟಗರಿ ಹೆಸರನ್ನು ಅಳಿಸಬೇಕು, ಅಳಿಸದ ಕಾರಣ ನಾಮಪತ್ರ ತಿರಸ್ಕಾರ ಮಾಡಿದ್ದೇನೆ ಎಂದುಶಾಸಕರಲ್ಲಿ ತಿಳಿಸಿದ್ದಾರೆ. ಆದರೆ ಕಾನೂನು ಪ್ರಕಾರ ಅಭ್ಯರ್ಥಿಯು ತಾನು ಸ್ಪರ್ಧಿಸುವ ವಿಭಾಗಕ್ಕೆ ರೈಟ್ ಗುರುತು ಹಾಕಬೇಕು ಎಂದು ಇದ್ದು ಉಳಿದ ಕೆಟಗರಿಯನ್ನು ಅಳಿಸಬೇಕೆಂಬ ನಿಯಮವಿರುವುದಿಲ್ಲ ಆದರೆ ಅಧಿಕಾರಿ ಈ ವಿಚಾರದಲ್ಲಜ ತಪ್ಪು ಮಾಡಿರುವುದು ಸಾಭೀತಾಗಿದೆ ಎಂದು ಶಾಸಕರು ಹೇಳಿದರು.
ಎಷ್ಟು ತಗೊಂಡಿದ್ದೀರಿ..?
ನಾಮಪತ್ರ ತಿರಸ್ಕಾರ ಮಾಡಲು ಎಷ್ಟು ಲಂಚ ತಗೊಂಡಿದ್ದೀರಿ ಎಂದು ಅಧಿಕಾರಿ ರಘು ಅವರನ್ನು ಪ್ರಶ್ನಿಸಿದ ಶಾಸಕ ಅಶೋಕ್ ರೈ ಅವರು ಪುತ್ತೂರಿನಲ್ಲಿ ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ಲಂಚ ತಗೊಂಡು ಮೋಸ ಮಾಡಲು ಬಿಡುವುದಿಲ್ಲ. ಉದ್ದೇಶಪೂರ್ವಕವಾಗಿ ಈ ಕೃತ್ಯ ಮಾಡಿದ್ದೀರಿ ಎಂದು ಮತ್ತೆ ಅಧಿಕಾರಿಯನ್ನುತರಾಟೆಗೆ ಎತ್ತಿಕೊಂಡರು.
ನಿಮ್ಮಮೇಲೆ ದೂರು ಮೊದಲೇ ಇತ್ತು
ನಿಮ್ಮಮೇಲೆಮೊದಲೇ ನನಗೆ ದೂರು ಬಂದಿತ್ತು, ಸುದಾರಿಸಬಹುದು ಎಂದು ಸುಮ್ಮನಿದ್ದೆ ಈಗ ಬಣ್ಣ ಬಯಲಾಯಿತು ಎಂದು ಶಾಸಕರು ಅಧಿಕಾರಿಯ ಎಚ್ಚರಿಸಿದರು.
ನಮ್ಮ ನಾಮಪತ್ರ ಸರಿ ಇದೆ
ಸ್ಪರ್ಧಿಗಳಾದ ರಾಜಶೇಖರ್ ಜೈನ್ ಮಾತನಾಡಿ ನಮ್ಮ ಇಬ್ಬರ ನಾಮಪತ್ರ ಸರಿಯಾಗಿಯೇ ಇದೆ ಕಾರಣವಿಲ್ಲದೆ ತಿರಸ್ಕಾರ ಮಾಡಿದ್ದಾರೆ. ಇದಕ್ಕಾಗಿ ನಾವು ಶಾಸಕರಲ್ಲಿ ದೂರು ನೀಡಿರುವುದಾಗಿ ಹೇಳಿದರು.
ಸಸ್ಪೆಂಡ್ ಮಾಡ್ತೇನೆ
ಲಂಚ ತಗೊಂಡು,ಅನ್ಯಾಯಮಾಡಿದನಿಮ್ಮನ್ನು ಸಸ್ಪೆಂಡ್ ಮಾಡಿಸ್ತೇನೆ.ನಿಮಗೆ ಬೇಕಾದ ಹಾಗೆ ಕಾನೂನು ಬದಲಾವಣೆ ಮಾಡುವ ಅಧಿಕಾರ ನಿಮಗಿಲ್ಲ ಎಂದು ಅಧಿಕಾರಿಗೆ ಶಾಸಕರುಎಚ್ಚರಿಸಿದರು.
Uncategorized
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ

ಪುತ್ತೂರು: ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್ ಮುಳಿಯ ಶ್ಯಾಮ ಭಟ್ (81ವ) ಅವರು ಅ.4ರಂದು ನಿಧನರಾದರು. ಪುತ್ತೂರಿನ ಪಾಂಗ್ಲಾಯಿಯಲ್ಲಿರುವ `ಶ್ಯಾಮಸುಲೋಚನಾ’ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಅವರು ಕೊನೆಯುಸಿರೆಳೆದರು
ಚಿನ್ನಾಭರಣ ವ್ಯವಹಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಶ್ಯಾಮ ಭಟ್ ಅವರು ಮುಳಿಯ ಗೋಲ್ಡ್ ಆಂಡ್ಯಂಡ್ ಡೈಮಂಡ್ಸ್ ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಚಿನ್ನಾಭರಣ, ಬೆಳ್ಳಿ ಮತ್ತು ವಜ್ರ ವ್ಯವಹಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಮುಳಿಯ ಶ್ಯಾಮ ಭಟ್ ಅವರು ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಸಾಮಾಜಿಕ, ಸಾಹಿತ್ಯ ಕ್ಷೇತ್ರ ಮಾತ್ರವಲ್ಲದೇ ಧಾರ್ಮಿಕ ಕ್ಷೇತ್ರಗಳಿಗೆ ದಾನ ನೀಡುತ್ತಿದ್ದ ಅವರು ಕೊಡುಗೈ ದಾನಿ ಎಂದೇ ಪ್ರಸಿದ್ಧರಾಗಿದ್ದರು.ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಗಳು, ಸ್ನೇಹಿತರು ಹಾಗೂ ಉದ್ಯಮ ಕ್ಷೇತ್ರದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ
ಮೃತರು ಪುತ್ರರಾದ ಕೇಶವ ಪ್ರಸಾದ್ ಮುಳಿಯ, ಕೃಷ್ಣನಾರಾಯಣ ಮುಳಿಯ, ಪುತ್ರಿ ವಿದ್ಯಾಸರಸ್ವತಿ, ಅಳಿಯ ಶ್ಯಾಮಸುಂದರ್, ಸೊಸೆಯಂದಿರಾದ ಕೃಷ್ಣವೇಣಿಪ್ರಸಾದ್ ಮುಳಿಯ, ಅಶ್ವಿನಿಕೃಷ್ಣ ಮುಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಅ.6ರಂದು ಸಾರ್ವಜನಿಕ ದರ್ಶನ
ಮೃತರ ಅಂತಿಮ ದರ್ಶನ ಹಾಗೂ ನಮನ ಸಲ್ಲಿಸಲು ಅ.6ರಂದು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪುತ್ರರಾದ ಕೇಶವ ಪ್ರಸಾದ್ ಮುಳಿಯ ಮತ್ತು ಕೃಷ್ಣನಾರಾಯಣ ಮುಳಿಯ ತಿಳಿಸಿದ್ದಾರೆ.
Uncategorized
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ

ಮಂಗಳೂರು, ಅ.4: ಸಣ್ಣ ವಿಚಾರಕ್ಕೆ ಸಹಪಾಠಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಯೊಬ್ಬನ ಮೇಲೆ ಸಹಪಾಠಿ ಸೇರಿದಂತೆ ಆರು ಮಂದಿ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಮಹಮ್ಮದ್ ಉನೈಸ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಮಂಗಳೂರು ನಗರದ ಸರ್ಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಅ.3ರಂದು ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿರುವ ಉನೈಸ್ ಅವರು ಬೆಳಿಗ್ಗೆ 11.30ರ ಸುಮಾರಿಗೆ ಕಾಲೇಜಿನ ಸಮೀಪದ ಟರ್ಫ್‌ಗೆ ಕಬಡ್ಡಿ ಆಡಲು ತೆರಳಿದ್ದರು. ಈ ವೇಳೆ ಟರ್ಫ್ ಎದುರಿನ ರಸ್ತೆಯಲ್ಲಿ ಅವರ ಸ್ನೇಹಿತ ಹಾಗೂ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ರಾಯಿಝ್ ಮತ್ತು ಅದೇ ಕಾಲೇಜಿನ ಬಿಕಾಂ ವಿದ್ಯಾರ್ಥಿ, ಕಾಟಿಪಳ್ಳ ನಿವಾಸಿ ರಿಯಾನ್ ನಡುವೆ ಸಣ್ಣ ವಿಚಾರಕ್ಕೆ ಜಗಳ ನಡೆದಿದೆ ಎನ್ನಲಾಗಿದೆ.
ಜಗಳ ಬಿಡಿಸಲು ಉನೈಸ್ ಸೇರಿದಂತೆ ಕೆಲ ವಿದ್ಯಾರ್ಥಿಗಳು ಮಧ್ಯಪ್ರವೇಶಿಸಿದಾಗ ರಿಯಾನ್ ಉನೈಸ್‌ಗೆ ಕೈಯಿಂದ ಹೊಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಉನೈಸ್ ಹಾಗೂ ಇತರ ವಿದ್ಯಾರ್ಥಿಗಳು ಕಾಲೇಜಿಗೆ ವಾಪಸಾಗಿದ್ದರು.
ಮಧ್ಯಾಹ್ನ 1.45ರ ಸುಮಾರಿಗೆ ಉನೈಸ್ ಕಾಲೇಜಿನ ಕ್ಯಾಂಟೀನ್ ಬಳಿ ನಿಂತಿದ್ದಾಗ ರಿಯಾನ್ ಹಾಗೂ ಐವರು ಸಹಚರರು ಎರಡು ದ್ವಿಚಕ್ರ ವಾಹನಗಳಲ್ಲಿ ಅಲ್ಲಿಗೆ ಬಂದಿದ್ದಾರೆ ಎನ್ನಲಾಗಿದೆ. ಆರೋಪಿಗಳು ಉನೈಸ್ ಅವರನ್ನು ಸುತ್ತುವರಿದು ಹಲ್ಲೆ ನಡೆಸಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.
ಈ ವೇಳೆ ಚೂರಿಯಿಂದ ಉನೈಸ್ ಅವರ ತಲೆ, ಬೆನ್ನು, ಎಡ ಕಿವಿ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಇರಿದು ಗಾಯಗೊಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.
ಗಾಯಗೊಂಡ ಉನೈಸ್ ಅವರನ್ನು ತಕ್ಷಣ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.
Uncategorized
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ

ಪುತ್ತೂರು: ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಹೈಕೋರ್ಟ್ ವಕೀಲ ಮೊಹಿತ್ ಕುಮಾರ್ ಅವರ ತಾಯಿ, ಕೊಳ್ತಿಗೆ ಗ್ರಾಮದ ಕುಂಡಡ್ಕ ನಿವಾಸಿ ಪಾರ್ವತಿ ಕುಂಡಡ್ಕ ಅವರು ಅಲ್ಪಕಾಲದ ಅಸ್ವಸ್ಥತೆಯಿಂದ ಅ.3ರಂದು ಸ್ವಗೃಹದಲ್ಲಿ ನಿಧನರಾದರು.
ಪಾರ್ವತಿ ಅವರು ಚಾರ್ವಕ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ಹಾಗೂ ಪುತ್ತೂರಿನ ಪಶುವೈದ್ಯ ಧರ್ಮಪಾಲ ಕರಂದ್ಲಾಜೆ ಅವರ ಸಹೋದರಿ.
ಮೃತರು ಪುತ್ರರಾದ ತೀರ್ಥಪ್ರಸಾದ್ ಕೆ., ಚಿತ್ರಶೇಖರ್, ಮೋಹಿತ್ ಕುಮಾರ್ ಹಾಗೂ ಚಿರಣ್ ಕುಮಾರ್ ಅವರನ್ನು ಅಗಲಿದ್ದಾರೆ.
ವಕೀಲ ಮೋಹಿತ್ ಕುಮಾರ್ ಅವರು ಸೌಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಪರ ಸಿಬಿಐ ವಿಶೇಷ ನ್ಯಾಯಾಲಯ, ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು. ಸೌಜನ್ಯ ಪ್ರಕರಣದ ನ್ಯಾಯಾಂಗ ಹೋರಾಟದಲ್ಲಿ ಅವರು ಪ್ರಮುಖವಾಗಿ ಗುರುತಿಸಿಕೊಂಡಿದ್ದರು.
ಸೌಜನ್ಯ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಹಲವು ನಾಯಕರು ಅಂತಿಮ ನಮನ ಸಲ್ಲಿಸಿದರು.
-
Uncategorized20 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized12 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
Uncategorized20 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ
-
ದಕ್ಷಿಣ ಕನ್ನಡ14 hours ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು
-
ಅಪರಾಧ35 minutes agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಬಿಗ್ ನ್ಯೂಸ್16 minutes agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಸ್ಥಳೀಯ4 minutes agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ


















