ಮಂಗಳೂರು
Mangalore-‘ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ; ನನ್ನ ಪೂರ್ಣ ಬೆಂಬಲವಿದೆ’ ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ
ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಲಹೆ ನೀಡಿದ್ದು, ಇದಕ್ಕೆ ತಮ್ಮ ಕಡೆಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಲಹೆ ನೀಡಿದ್ದು, ಇದಕ್ಕೆ ತಮ್ಮ ಕಡೆಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆಯುತ್ತಿರುವ ಲಿಟ್ ಫೆಸ್ಟ್ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿದ್ದ ಅವರಿಗೆ, ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿನ ಸಾಮರ್ಥ್ಯವನ್ನು ಬಳಸಿಕೊಳ್ಳಲು ದೊಡ್ಡ ನಗರಗಳನ್ನು ಮೀರಿ ಇಂಧನ ಭದ್ರತಾ ಶೃಂಗಸಭೆಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಧ್ಯತೆಯ ಬಗ್ಗೆ ಲೇಖಕಿ ಹರ್ಷ ಭಟ್ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಈ ಭರವಸೆ ನೀಡಿದ್ದಾರೆ.

” ಮಂಗಳೂರಿನಂತಹ ನಗರದಲ್ಲಿ ಖಂಡಿತವಾಗಿಯೂ ಇಂಧನ ಭದ್ರತಾ ಸಮಿಟ್ ಮಾಡಬಹುದು. ನನ್ನ ಸ್ನೇಹಿತ ಮತ್ತು ಸಂಸದರಾದ ಕ್ಯಾ. ಚೌಟ ಅವರು ನಿನ್ನೆ ಈ ಭಾಗದ ಎಲ್ಲಾ ತೈಲ ಮಾರಾಟ ಕಂಪನಿಗಳ ಪ್ರಮುಖರನ್ನು ಭೇಟಿ ಮಾಡಿದ್ದಾರೆ. ಒಂದು ವೇಳೆ ನೀವು ಇಲ್ಲಿಇಂಧನ ಭದ್ರತಾ ಕಾರ್ಯಕ್ರಮವನ್ನು ಆಯೋಜಿಸಲು ಬಯಸಿದರೆ, ಈ ತೈಲ ಕಂಪನಿಗಳೊಂದಿಗೆ ಮಾತನಾಡಬಹುದು. ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿರುತ್ತದೆ. ಭಾರತ ಇಂಧನ ಸಪ್ತಾಹದ ಜತೆಗೆ ಇಂಥ ಇಂಧನ ಭದ್ರತಾ ಸಮ್ಮೇಳನಗಳನ್ನು ಆಯೋಜಿಸುವುದರಿಂದ ಹೆಚ್ಚಿನ ತೈಲೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ, ಅನುಕೂಲತೆ ದೊರೆಯಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಇಂಧನ ಸಪ್ತಾಹಕ್ಕೆ ಆಹ್ವಾನ”
ಮೊತ್ತ ಮೊದಲ ಭಾರತ ಇಂಧನ ಸಪ್ತಾಹವನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದು ಬಳಿಕ ಗೋವಾದಲ್ಲಿ ನಡೆಸಿದ್ದೆವು. ನಂತರ ಗೋವಾವನ್ನು ಇಂಡಿಯಾ ಎನರ್ಜಿ ವೀಕ್ (ಐಇಡಬ್ಲ್ಯು) ಗಾಗಿ ಶಾಶ್ವತ ಸ್ಥಳವಾಗಿ ಆಯ್ಕೆ ಮಾಡಿ ಅಲ್ಲಿ ಸವಲತ್ತುಗಳನ್ನು ಒದಗಿಸುತ್ತಿದ್ದೇವೆ. ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಲಿಮಿಟೆಡ್ (ಒಎನ್‌ಜಿಸಿ) ಗೋವಾದಲ್ಲಿ 240 ಎಕರೆ ಭೂಮಿಯನ್ನು ಹೊಂದಿದ್ದು, ದೆಹಲಿಯಲ್ಲಿರುವ ಭಾರತ್ ಮಂಗಳಂ ಅಥವಾ ಯಶೋ ಭೂಮಿಯಂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಿದರೆ ಮುಂದೆ ಜಾಗತಿಕ ಮಟ್ಟದ ಸಂಸ್ಥೆಗಳು ಇಲ್ಲಿ ತಮ್ಮ ಸಮ್ಮೇಳನಗಳನ್ನು ಯಶಸ್ವಿಯಾಗಿ ಆಯೋಜಿಸಲು ಸಾಧ್ಯವಾಗಲಿದೆ “ಎಂದರು.
ದೆಹಲಿಯಲ್ಲಿ ಇಂಡಿಯಾ ಎನರ್ಜಿ ವೀಕ್ ಆಯೋಜಿಸಿದ್ದ ವೇಳೆ ಈ ರೀತಿಯ ವಸ್ತುಪ್ರದರ್ಶನವನ್ನು ಯುವಜನತೆ ನೋಡಬೇಕು ಎನ್ನುವ ಸಲಹೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿದ್ದರು. ಹೀಗಾಗಿ, ಮೋದಿ ಅವರ ಸಲಹೆಯಂತೆ ಈ ಬಾರಿಯ ಇಂಡಿಯಾ ಎನರ್ಜಿ ವೀಕ್ ನಲ್ಲಿ ಪ್ರತಿದಿನವೂ ಯುವ ಸಮುದಾಯ ಸೇರಿದಂತೆ ಎಲ್ಲ ಸಾರ್ವಜನಿಕರು ಕೂಡ ಮುಕ್ತವಾಗಿ ಭಾಗವಹಿಸುವುದಕ್ಕೆ ಅವಕಾಶ ಕಲ್ಪಿಸಲಾಗುವುದು. ಒಂದು ತಿಂಗಳ ಕಾಲ ನಡೆಯುವ ಈ ಇಂಡಿಯಾ ಎನರ್ಜಿ ವೀಕ್ ಶೀಘ್ರದಲ್ಲೇ ಶುರುವಾಗಲಿದೆ ಎಂದು ಸಚಿವರು ತಿಳಿಸಿದರು.

ದೇಶದಲ್ಲಿ ಮೂರು ವರ್ಷಗಳ ಹಿಂದೆಯಷ್ಟೇ ಇಂಡಿಯಾ ಇಂಧನ ಸಪ್ತಾಹ ಪಾರಂಭಿಸಲಾಗಿದೆ. ಆದರೆ, ಪ್ರಸ್ತುತ ಇದು ವಿಶ್ವದಲ್ಲೇ ಅತಿದೊಡ್ಡ ಇಂಧನ ವಸ್ತು ಪ್ರದರ್ಶನವಾಗಿ ಬದಲಾಗಿದೆ. ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ತಂತ್ರಜ್ಞಾನ, ಸಲಕರಣೆಗಳು ಈ ಇಂಡಿಯಾ ಇಂಧನ ವೀಕ್ ನಲ್ಲಿ ಪ್ರದರ್ಶನಗೊಳ್ಳಲಿದ್ದು, ಸ್ಟಾರ್ಟಪ್ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ, ಮಾರ್ಗದರ್ಶನ ಪಡೆಯುವುದಕ್ಕೆ ಉತ್ತಮ ವೇದಿಕೆಯಾಗಿದೆ. ಹೀಗಾಗಿ, ಎಲ್ಲ ಯುವಜನರು ಕೂಡ ಈ ಇಂಡಿಯಾ ಎನರ್ಜಿ ವೀಕ್ ಗೆ ಭೇಟಿ ನೀಡಿ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ಕರೆ ನೀಡಿದ್ದಾರೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ಬಿಗ್ ನ್ಯೂಸ್22 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ22 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು23 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಶಿಕ್ಷಣ23 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ5 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಅಂತರ ರಾಜ್ಯ4 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ5 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ6 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















