ಸುಳ್ಯ
Sullia-ಸುಳ್ಯದ ವಿವಿಧ ಕಡೆ ಮಳೆ : ಅನಿರೀಕ್ಷಿತ ಮಳೆಗೆ ಅಡಿಕೆ ಕೃಷಿಕರು ಕಂಗಾಲು
ಸೋಮವಾರ ಸಂಜೆ ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಕೆಲವೆಡೆ ಸಂಜೆಯ ವೇಳೆಗೆ ಹಗುರ ಮಳೆಯಾದರೆ ಇನ್ನೂ ಕೆಲವೆಡೆ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗಿದೆ. ಅನಿರೀಕ್ಷಿತವಾಗಿ ಮಳೆ ಬಂದ ಕಾರಣ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಒದ್ದೆಯಾಗಿದೆ.
ಸುಳ್ಯ: ಸೋಮವಾರ ಸಂಜೆ ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಕೆಲವೆಡೆ ಸಂಜೆಯ ವೇಳೆಗೆ ಹಗುರ ಮಳೆಯಾದರೆ ಇನ್ನೂ ಕೆಲವೆಡೆ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗಿದೆ.
ಸುಳ್ಯ ತಾಲೂಕಿನ ಸೋಣಂಗೇರಿ ಭಾಗದಲ್ಲಿ ಸಂಜೆ ಸಾಧಾರಣ ಮಳೆಯಾಗಿದೆ. ಸುಳ್ಯ ನಗರ ಸೇರಿದಂತೆ ಕೆಲವೆಡೆ ಹನಿ ಮಳೆಯಾಗಿದೆ. ರಾತ್ರಿಯ ವೇಳೆಗೆ ಆಲೆಟ್ಟಿಯ ಬಡ್ಡಡ್ಕ ಸೇರಿ ಕೆಲವೆಡೆ ಸಾಧಾರಣ ಮಳೆಯಾಗಿದೆ. ಅನಿರೀಕ್ಷಿತವಾಗಿ ಮಳೆ ಬಂದ ಕಾರಣ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಒದ್ದೆಯಾಗಿದೆ.
ಬಡ್ಡಡ್ಕ ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು ಅಡಿಕೆ ಒದ್ದೆಯಾಗಿದೆ ಎಂದು ಕೃಷಿಕರು ಹೇಳಿದ್ದಾರೆ.
ತಾಲೂಕಿನ ಕೆಲವು ಭಾಗಗಳಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದ್ದು ಚಂಡ ಮಾರುತದ ಪ್ರಭಾವದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಜ.13 ಮತ್ತು 14 ರಂದು ಮಳೆಯಾಗಲಿದೆ ಎಂಬ ಸೂಚನೆ ನೀಡಿದೆ.
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
-
ನಿಧನ ವಾರ್ತೆ19 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಬಿಗ್ ನ್ಯೂಸ್14 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ19 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ19 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ19 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ಬಿಗ್ ನ್ಯೂಸ್14 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ರಾಜಕೀಯ19 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ17 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















