ರಾಜಕೀಯ
Laxmi Hebbalkar-ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲೇ ಡಿಕೆಶಿ – ಜಾರಕಿಹೋಳಿ ಕೋಲ್ಡ್ ವಾರ್ – ಸಮರಕ್ಕೆ ಕಾರಣವಾದ್ರು ಲಕ್ಷ್ಮೀ ಹೆಬ್ಬಾಳ್ಕರ್
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಡುವೆ ಹಲವು ದಿನಗಳಿಂದ ಮಡುಗಟ್ಟಿದ ಅಸಮಾಧಾನ ಕಾಂಗ್ರೆಸ್‌ನ ಶಾಸಕಾಂಗ ಸಭೆಯಲ್ಲಿ ಸ್ಫೋಟಗೊಂಡಿದ್ದು, ರಾಜ್ಯ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಬೆಂಗಳೂರು,ಜ.14: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಡುವೆ ಹಲವು ದಿನಗಳಿಂದ ಮಡುಗಟ್ಟಿದ ಅಸಮಾಧಾನ ಕಾಂಗ್ರೆಸ್‌ನ ಶಾಸಕಾಂಗ ಸಭೆಯಲ್ಲಿ ಸ್ಫೋಟಗೊಂಡಿದ್ದು, ರಾಜ್ಯ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಬಣ ರಾಜಕೀಯಗಳು ಮೊದಲಿನಿಂದಲೂ ಹೊಗೆಯಾಡುತ್ತಲೇ ಇದೆ. ಇಬ್ಬರೂ ತಮ್ಮ ಹಿಂಬಾಲಕರು ಅಥವಾ ಬೆಂಬಲಿಗರನ್ನು ಪರಸ್ಪರ ಹೊಗಳುವುದು, ಮುನ್ನೆಲೆಗೆ ತರಲು ಪ್ರಯತ್ನಿಸುವುದು ನಡೆಯುತ್ತಲೇ ಇದೆ.
ನಿನ್ನೆ ನಡೆದ ಶಾಸಕಾಂಗ ಸಭೆಯಲ್ಲೂ ಇದೇ ರೀತಿಯ ಬೆಳವಣಿಗೆಗಳಾಗಿದ್ದು, ಅದಕ್ಕೆ ಸತೀಶ್ ಜಾರಕಿಹೊಳಿ ತತ್‌ಕ್ಷಣವೇ ಪ್ರತಿಕ್ರಿಯಿಸಿದ್ದರಿಂದಾಗಿ ಗೊಂದಲ ಉಂಟಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಶಾಸಕರು, ಸಚಿವರು ಅದರಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಕಾಂಗ್ರೆಸ್ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು. ಪಕ್ಷದ ಕಚೇರಿಗಳ ಕಟ್ಟಡ ನಿರ್ಮಾಣಕ್ಕೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ವಿಷಯ ಪ್ರಸ್ತಾಪಿಸಿದರು.
ಬೆಳಗಾವಿ ಜಿಲ್ಲೆಯಲ್ಲಿನ ಪಕ್ಷದ ಕಚೇರಿ ನಿರ್ಮಾಣ ಉದಾಹರಣೆಯನ್ನಾಗಿ ನೀಡಿ ಲಕ್ಷ್ಮೀಹೆಬ್ಬಾಳ್ಕರ್ ಅವರು ಸಚಿವರಾದ ಬಳಿಕ ಕಟ್ಟಡ ನಿರ್ಮಾಣ ಚುರುಕಾಗಿ ಮುಗಿದಿದೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.
ಈ ವೇಳೆ ಅಸಹನೆಗೀಡಾದ ಸತೀಶ್ ಜಾರಕಿಹೊಳಿಯವರು ತಪ್ಪು ಮಾಹಿತಿ ನೀಡಲಾಗುತ್ತಿದೆ ಎಂದು ಪ್ರತಿರೋಧಿಸಿದ್ದಾರೆ. ಬೆಳಗಾವಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ನಿವೇಶನ ಒದಗಿಸಿದ್ದು, ಈ ಹಿಂದೆ ಕಾಂಗ್ರೆಸ್ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ, ಕಟ್ಟಡ ನಿರ್ಮಾಣಕ್ಕೆ ತಾವು 3 ಕೋಟಿ ರೂ. ಸ್ವಂತ ಹಣವನ್ನು ಖರ್ಚು ಮಾಡಿದ್ದೇನೆ. ಕೆಪಿಸಿಸಿ ಅಧ್ಯಕ್ಷರು ವಾಸ್ತವಾಂಶವನ್ನು ಮರೆಮಾಚಿ ತಪ್ಪು ಮಾಹಿತಿ ನೀಡಿದರೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಆಕ್ಷೇಪಿಸಿದ್ದಾರೆ.
ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಮಧ್ಯಪ್ರವೇಶ ಮಾಡಿ, ತಾವು ಸಚಿವರಾದ ಬಳಿಕ ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಬಾಕಿ ಇದ್ದ ಹಣಕಾಸು ಸೌಲಭ್ಯ ಒದಗಿಸಿದ್ದು, ವಿದ್ಯುತ್ ಬಿಲ್, ನೀರಿನ ಬಿಲ್ ಎಲ್ಲಾ ಸೇರಿ ಸರಿಸುಮಾರು 7 ಕೋಟಿ ರೂ.ಗಳಷ್ಟು ಸಂಪನೂಲವನ್ನು ದಾನಿಗಳ ಸಹಕಾರದಿಂದ ಒದಗಿಸಿದ್ದೇನೆ ಎಂದು ಹೇಳಿದ್ದಾರೆ.
ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿರುವುದನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದರಿಂದ ಕಟ್ಟಡ ಪೂರ್ಣಗೊಂಡಿದೆ. ಕಚೇರಿ ಸಿಕ್ಕಿದೆ. ಇದು ಸಂತೋಷದ ವಿಚಾರ. ಹೆಚ್ಚಿನ ಚರ್ಚೆ ಬೇಡ ಎಂದು ಸಲಹೆ ನೀಡಿದ್ದಲ್ಲದೆ, ಇತರ ಜಿಲ್ಲೆಗಳಲ್ಲೂ ಇದೇ ರೀತಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಸಹಕಾರ ನೀಡಬೇಕೆಂದು ಸೂಚನೆ ನೀಡಿದ್ದಾರೆ.
ಬೆಳಗಾವಿ ಜಿಲ್ಲಾ ರಾಜಕಾರಣ ಕಾಂಗ್ರೆಸ್‌ನಲ್ಲಿ ಸದಾಕಾಲ ವಿವಾದ ಕೇಂದ್ರಬಿಂದುವಾಗಿಯೇ ಉಳಿದಿದೆ. ಈ ಹಿಂದೆ ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸಮಿಶ್ರ ಸರ್ಕಾರವನ್ನು ಪತನಗೊಳಿಸಲು ಬೆಳಗಾವಿ ಜಿಲ್ಲಾ ರಾಜಕಾರಣವೇ ಮೂಲವಾಗಿತ್ತು. ಬೆಳಗಾವಿಯಲ್ಲಿ ಲಕ್ಷ್ಮೀಹೆಬ್ಬಾಳ್ಕರ್ ಸಚಿವರಾದ ಬಳಿಕವಂತೂ ಜಾರಕಿಹೊಳಿ ಸಹೋದರರು ಒಳಗೊಳಗೇ ಒಗ್ಗಟ್ಟಾಗಿ ಹಲ್ಲು ಮಸೆಯುತ್ತಿರುವುದು ಸಾಮಾನ್ಯವಾಗಿದೆ.
ಲಕ್ಷ್ಮೀಹೆಬ್ಬಾಳ್ಕರ್ ಜಿಲ್ಲೆಯಲ್ಲಿ ಪಕ್ಷಾತೀತವಾಗಿ ನಾಯಕರ ಬೆಂಬಲ ಪಡೆದು ಜಾರಕಿ ಹೊಳಿ ಸಹೋದರರಿಗೆ ಸೆಡ್ಡು ಹೊಡೆಯಲು ಯತ್ನಿಸುತ್ತಿದ್ದಾರೆ.ಈ ಜಿದ್ದಾಜಿದ್ದಿ ಹಲವಾರು ವರ್ಷಗಳಿಂದಲೂ ನಡೆಯುತ್ತಲೇ ಇದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಅವರಿಗೆ ಬೆಂಬಲ ನೀಡುತ್ತಿದ್ದಾರೆ ಎಂಬ ಅಸಹನೆ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಅಸಮಾಧಾನ ಮಡುಗಟ್ಟಿದೆ.
ಸತೀಶ್ ಜಾರಕಿಹೊಳಿಯವರಂತೂ ಸದಾಕಾಲ ಪಕ್ಷ ಎಂದ ಮೇಲೆ ಅಸಮಾಧಾನ ಸಹಜ, ಎಲ್ಲರೂ ಒಟ್ಟಾಗಿದ್ದೇವೆ ಎಂದು ಹೇಳುವುದು ಸಿನಿ ಕಥನ ಎಂದು ಹೇಳುತ್ತಲೇ ಕಾಂಗ್ರೆಸ್‌ನಲ್ಲಿರುವ ಗುಂಪುಗಾರಿಕೆಯನ್ನು ಹೊರಹಾಕುತ್ತಿದ್ದಾರೆ. ಇದು ನಿನ್ನೆ ಶಾಸಕಾಂಗ ಸಭೆಯಲ್ಲೂ ಪ್ರಸ್ತಾಪಗೊಂಡಿರುವುದು ಹೊಸ ಬೆಳವಣಿಗೆಯಾಗಿದೆ.
ಅಂತರ ರಾಜ್ಯ
Rahul Gandhi-‘45 FIR ನನಗೆ ಪದಕವಿದ್ದಂತೆ, 100 FIR ನನ್ನ ಗುರಿ’-ರಾಹುಲ್ ಗಾಂಧಿ
ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.
ಹೊಸದಿಲ್ಲಿ, ಅ.7: ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧವೂ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು. ಅವರ ಕಾರ್ಯವೈಖರಿ ಹಾಗೂ ಅಧೀನ ಅಧಿಕಾರಿಗಳೊಂದಿಗಿನ ಭಿನ್ನಮತದ ಕುರಿತು ಪ್ರತಿಪಕ್ಷಗಳು ಪ್ರಶ್ನೆಗಳನ್ನು ಎತ್ತುತ್ತಿರುವ ಹಿನ್ನೆಲೆಯಲ್ಲಿ ರಾಹುಲ್, ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ದೆಹಲಿಯ ಜಂತರ್ ಮಂತರ್‌ನಲ್ಲಿ ದಿಢೀರ್ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ ಅವರು, ಜ್ಞಾನೇಶ್ ಕುಮಾರ್ ಅವರನ್ನು ‘ಅಕ್ರಮ ಚುನಾವಣಾ ಆಯೋಗದ ಮುಖ್ಯಸ್ಥ’ ಎಂದು ಆರೋಪಿಸಿದರು.
“ನಾವು ಜಂತರ್ ಮಂತರ್‌ಗೆ ತೆರಳಿ ಒಟ್ಟಾಗಿ ಕುಳಿತು, ಕುಮಾರ್ ಈ ದೇಶದ ಕಾನೂನುಬದ್ಧ ಚುನಾವಣಾ ಆಯುಕ್ತರಲ್ಲ ಎಂಬುದನ್ನು ದೇಶಕ್ಕೆ ತಿಳಿಸುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧವೂ ಅವರು ಆರೋಪಗಳನ್ನು ಮಾಡಿದರು. ಈ ಮೂವರು ಜ್ಞಾನೇಶ್ ಕುಮಾರ್ ಅವರೊಂದಿಗೆ ಸೇರಿ ದೇಶದ ಪ್ರಜಾಪ್ರಭುತ್ವವನ್ನು ನಾಶಗೊಳಿಸಿದ್ದಾರೆ ಎಂದು ರಾಹುಲ್ ಗಾಂಧಿ ದೂರಿದರು.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳ ಕುರಿತು ಮಾತನಾಡಿದ ಅವರು, “ನನ್ನ ವಿರುದ್ಧ 45 ಎಫ್‌ಐಆರ್‌ಗಳಿವೆ. 100 ಎಫ್‌ಐಆರ್‌ಗಳನ್ನು ಹೊಂದುವುದು ನನ್ನ ಗುರಿ. ಪ್ರತಿಯೊಂದು ಎಫ್‌ಐಆರ್ ನನಗೆ ಪದಕವಿದ್ದಂತೆ” ಎಂದು ಹೇಳಿದರು.
ಇದೇ ವೇಳೆ, ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮಂಗಳವಾರ ಪ್ರತಿಪಕ್ಷಗಳ ನಾಯಕರು ದಿನವಿಡೀ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದರು. ಚುನಾವಣಾ ಆಯುಕ್ತರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ತಿಳಿಸಿದೆ.
ಮತ್ತೊಂದೆಡೆ, ‘ಮತ ಕಳವು’ ಆರೋಪಕ್ಕೆ ಸಂಬಂಧಿಸಿ ದೆಹಲಿ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಲು ಮುಂದಾದ ಆಮ್ ಆದ್ಮಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್‌ಗಳ ಮೂಲಕ ತಡೆದರು.
ಅಂತರ ರಾಜ್ಯ
Jnanesh kumar-ವಿಪಕ್ಷಗಳ ರಾಜೀನಾಮೆ ಒತ್ತಾಯದ ನಡುವೆ ಜ್ಞಾನೇಶ್ ಕುಮಾರ್ ಛತ್ತೀಸ್‌ಗಢ ಭೇಟಿ ಮುಂದೂಡಿಕೆ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.
ಅಕ್ಟೋಬರ್ 7 ಮತ್ತು 8ರಂದು ಜ್ಞಾನೇಶ್ ಕುಮಾರ್ ಅವರು ಛತ್ತೀಸ್‌ಗಢಕ್ಕೆ ಭೇಟಿ ನೀಡಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಈ ಭೇಟಿಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಂಡನೆ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎಂಬ ವದಂತಿಗಳು ಹರಿದಾಡುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ.
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳ ಆಕ್ರೋಶ
ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹಾಗೂ ಅರ್ಜಿ ನಮೂನೆ-6ರಲ್ಲಿನ ಮಾರ್ಪಾಡು ಸೇರಿದಂತೆ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗ ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿವೆ.
ದೇವಾಲಯ, ಜಲಪಾತಗಳಿಗೆ ಭೇಟಿ ನೀಡಬೇಕಿತ್ತು
ಎರಡು ದಿನಗಳ ಛತ್ತೀಸ್‌ಗಢ ಪ್ರವಾಸದ ವೇಳೆ ಜ್ಞಾನೇಶ್ ಕುಮಾರ್ ಅವರು ದಾಂತೇವಾಡದಲ್ಲಿರುವ ದಾಂತೇಶ್ವರಿ ದೇವಾಲಯ, ಬಸ್ತಾರ್‌ನ ಚಿತ್ರಕೋಟೆ ಜಲಪಾತ ಹಾಗೂ ಕಬೀರ್ ಧಾಮ್ ಜಿಲ್ಲೆಯ ಭೋರಂಡಿಯೊ ದೇವಾಲಯಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು.
ಈ ಭೇಟಿಯ ಹಿನ್ನೆಲೆಯಲ್ಲಿ ಛತ್ತೀಸ್‌ಗಢ ಸರ್ಕಾರವು ಜ್ಞಾನೇಶ್ ಕುಮಾರ್ ಅವರಿಗೆ ರಾಜ್ಯ ಅತಿಥಿಯ ಗೌರವ ನೀಡಲು ನಿರ್ಧರಿಸಿತ್ತು. ಅವರನ್ನು ಸ್ವಾಗತಿಸುವುದು ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳಲು ರಾಯ್‌ಪುರ ಜಿಲ್ಲಾಡಳಿತ, ಪೊಲೀಸರು ಮತ್ತು ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣ ಪ್ರಾಧಿಕಾರಗಳು ಸಿದ್ಧತೆ ಆರಂಭಿಸಿದ್ದವು. ಇದೀಗ ಭೇಟಿಯನ್ನು ಮುಂದೂಡಲಾಗಿದೆ.
ರಾಜಕೀಯ
Ashok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರು: ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರಿಗೆ ಆಗಮಿಸಿದ ಬೊಲೆರೋ ವಾಹನವನ್ನು ‘ಬ್ಲಾಕ್ ಕಾಂಗ್ರೆಸ್ ವಾಹನ’ ಎಂದು ನಾಮಕರಣ ಮಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಹಸ್ತಾಂತರಿಸಿದರು.
ಮೂರು ಬ್ಲಾಕ್‌ಗಳಿಗೆ ಒಂದೇ ವಾಹನ
ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ಗಳ ಸಂಘಟನಾ ಚಟುವಟಿಕೆಗಳಿಗೆ ಈ ವಾಹನವನ್ನು ಬಳಸಲಾಗುತ್ತದೆ. ಶಾಸಕರು ಯಾವ ಕ್ಷೇತ್ರ ವ್ಯಾಪ್ತಿಗೆ ಭೇಟಿ ನೀಡುತ್ತಾರೋ, ಆ ಸಂದರ್ಭ ಆಯಾ ಬ್ಲಾಕ್‌ನ ಅಧ್ಯಕ್ಷರು ವಾಹನವನ್ನು ಬಳಸಿಕೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯದಲ್ಲೇ ಮಾದರಿಯಾಗುವ ರೀತಿಯಲ್ಲಿ ಈ ಬ್ಲಾಕ್ ಕಾಂಗ್ರೆಸ್ ವಾಹನವನ್ನು ತರಿಸಲಾಗಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿದರು.
ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು, ಪುಡಾ ಸದಸ್ಯ ನಿಹಾಲ್ ಪಿ. ಶೆಟ್ಟಿ, ಪುತ್ತೂರು ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ., ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಉದ್ಯಮಿ ಸಿಯಾನ್ ದರ್ಬೆ, ವಿಕ್ರಂ ರೈ ಸಾಂತ್ಯ ಮೊದಲಾದವರು ಉಪಸ್ಥಿತರಿದ್ದರು.
-
Uncategorized20 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized22 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ24 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
Uncategorized8 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಸ್ಥಳೀಯ24 hours agoKalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
-
Uncategorized6 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ7 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ಮಂಗಳೂರು6 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ


















