ಬಿಗ್ ನ್ಯೂಸ್
Puttur-Big Breaking: ದೇಶಾದ್ಯಂತ ಸದ್ದು ಮಾಡಿದ ಪುತ್ತೂರು ಬ್ಯಾನರ್ ಪ್ರಕರಣ : ಪೊಲೀಸ್ ದೌರ್ಜನ್ಯ ತನಿಖೆಗೆ ‘ಬಿ’ ರಿಪೋರ್ಟ್ : ತಿರಸ್ಕರಿಸಿದ ನ್ಯಾಯಾಲಯ: ಡಿವೈಎಸ್ಪಿ ಹಿರೇಮಠ್ ಸಹಿತ ಮೂವರಿಗೆ ಸಮನ್ಸ್ ಜಾರಿಗೆ ಆದೇಶ
ದೇಶಾದ್ಯಂತ ಸದ್ದು ಮಾಡಿದ ಪುತ್ತೂರಿನ ಬ್ಯಾನರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಿದ ಉಡುಪಿಯ ತನಿಖಾಧಿಕಾರಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ ” ಬಿ” ರಿಪೋರ್ಟ್ ನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
ಪುತ್ತೂರು: ದೇಶಾದ್ಯಂತ ಸದ್ದು ಮಾಡಿದ ಪುತ್ತೂರಿನ ಬ್ಯಾನರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಿದ ಉಡುಪಿಯ ತನಿಖಾಧಿಕಾರಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ ” ಬಿ” ರಿಪೋರ್ಟ್ ನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
ಪುತ್ತೂರಿನ ಹೃದಯ ಭಾಗದಲ್ಲಿ 2023ರಲ್ಲಿ ಡಿವಿ ಸದಾನಂದ ಗೌಡ ಮತ್ತು ನಳಿನ್ ಕುಮಾರ್ ಪ್ಲೆಕ್ಸ್ ಅಳವಡಿಸಿ ಬಿಜೆಪಿ ಸೋಲಲು ನೀವೇ ಕಾರಣ ಎಂದು ಬರೆದು ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಯುವಕರ ಮೇಲೆ ನಡೆದಿದ್ದ ಪೊಲೀಸ್ ದೌರ್ಜನ್ಯದ ಹಿನ್ನೆಲೆಯಲ್ಲಿ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್ಐ ಶ್ರೀನಾಥ್ ರೆಡ್ಡಿ ಹಾಗೂ ಕಾನ್ಸ್ಟೇಬಲ್ ಹರ್ಷಿತ್ ಎಂಬವರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.
ದೌರ್ಜನ್ಯಕ್ಕೆ ಒಳಗಾಗಿದ್ದ ಪುರುಷರಕಟ್ಟೆಯ ಅವಿನಾಶ್ ಮತ್ತು ಇತರರು ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಪೊಲೀಸರ ವಿರುದ್ಧ ದೂರು ನೀಡಿದ್ದು, ಎಫ್ ಐ ಆರ್ ದಾಖಲಾಗಿತ್ತು. ಬಳಿಕ ನಡೆದ ಬೆಳವಣಿಗೆಯಲ್ಲಿ ಉಡುಪಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನು ಘಟನೆಯ ತನಿಖೆಗಾಗಿ ನೇಮಿಸಲಾಗಿತ್ತು.
ತನಿಖೆ ನಡೆಸಿದ ಅವರು “ಈ ದೂರು ಸುಳ್ಳಾಗಿದ್ದು ತನಿಖೆ ನಡೆಸಲು ತಕ್ಕುದಲ್ಲ, ಕಾನೂನಿನ ತಪ್ಪು ತಿಳುವಳಿಕೆಯೆಂದು, ಕ್ರಮ ಜರಗಿಸತಕ್ಕುದಲ್ಲವೆಂದು ತನಿಖೆ ವೇಳೆ ತಿಳಿದುಬಂದಿರುವುದಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.
ವರದಿ ಸ್ವೀಕರಿಸಿರುವ ನ್ಯಾಯಾಲಯ ದೂರುದಾರರಿಗೆ ವರದಿಯೊಂದಿಗೆ ನೋಟೀಸ್ ಜಾರಿ ಮಾಡಿದ್ದು ವರದಿಯನ್ನು ತಿರಸ್ಕರಿಸುವುದಿದ್ದರೆ ನೋಟೀಸ್ ತಲುಪಿದ ಒಂದು ವಾರದೊಳಗಾಗಿ ಸಂಬಂಧಿತ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಿ ವಿರೋಧಿಸಬಹುದು ಎಂದು ತಿಳಿಸಿದ್ದು, ಈ ವರದಿಗೆ ಸಂಬಂಧಿಸಿ ದೂರುದಾರ ಅವಿನಾಶ್ ಮತ್ತು ಇತರರ ಪರವಾಗಿ ನಿವೃತ್ತ ಸರಕಾರಿ ಅಭಿಯೋಜಕ ಉದಯಶಂಕರ, ಚಿನ್ಮಯ್ ರೈ ಈಶ್ವರಮಂಗಲ, ಶಿವಾನಂದ ವಿಟ್ಲ ಅವರು ನ್ಯಾಯಾಲಯಕ್ಕೆ ಅಕ್ಷೇಪ ಅರ್ಜಿಯನ್ನು ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಬಿ ರಿಪೋರ್ಟ್ ವರದಿಯನ್ನು ತಿರಸ್ಕರಿಸಿದೆ. ಜೊತೆಗೆ ಆಗ ಕರ್ತವ್ಯದಲ್ಲಿದ್ದ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್ಐ ಶ್ರೀನಾಥ್ ರೆಡ್ಡಿ ಹಾಗೂ ಕಾನ್ಸ್ಟೇಬಲ್ ಹರ್ಷಿತ್ ಎಂಬವರ ವಿರುದ್ದ ಮಾ.10 ಕ್ಕೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲು ಆದೇಶಿಸಿದೆ.
ಈ ಪ್ರಕರಣ ದೇಶಾದ್ಯಂತ ಸದ್ದು ಮಾಡಿದ್ದು , ಯತ್ನಾಳ್ ಸಹಿತ ಹಲವು ನಾಯಕರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ದೌರ್ಜನ್ಯಕ್ಕೊಳಕ್ಕಾದ ಯುವಕರನ್ನು ಭೇಟಿಯಾಗಿದ್ದರು.
ಬಿಗ್ ನ್ಯೂಸ್
Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್ಗೆ ಹೈಕೋರ್ಟ್ನಲ್ಲಿ ಹಿನ್ನಡೆ; ಎಫ್ಐಆರ್ ರದ್ದುಪಡಿಸಲು ನಿರಾಕರಣೆ
ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್, ಎಸ್ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ವೇಳೆ, ಗಿರೀಶ್ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.
ಮತ್ತೊಂದೆಡೆ, ಎಸ್ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.
ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.
ಮಂಗಳೂರು
Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಪಸ್ಥಿತರಿದ್ದರು.
ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬಿಗ್ ನ್ಯೂಸ್
High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.
-
ಅಪರಾಧ17 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಶಿಕ್ಷಣ23 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಚಿನ್ನ-ಬೆಳ್ಳಿ ದರ22 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ರಾಜಕೀಯ17 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್16 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸಿನೆಮಾ21 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ22 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಸ್ಥಳೀಯ22 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ















