ಸ್ಥಳೀಯ
Hassan-ಹಾಸನ: ಬಿಜೆಪಿಗೆ ಬಿಗ್ ಶಾಕ್; ಮಾಜಿ ಶಾಸಕ ಪ್ರೀತಂ ಗೌಡ ಕಾಂಗ್ರೆಸ್ಗೆ ಸೇರ್ಪಡೆ?
ಕರ್ನಾಟಕದ ಆಡಳಿತದ ಪಕ್ಷದಲ್ಲಿ ಸಿಎಂ ಕುರ್ಚಿಗಾಗಿ ಹಗ್ಗಾಜಗ್ಗಾಟ ಮುಂದುವರಿದಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಶೀತಲ ಸಮರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸದ್ಯ ಯಾವ ಚುನಾವಣೆಗಳು ಇಲ್ಲದೇ ಇದ್ದರೂ ಸಹ ಪಕ್ಷಾಂತರ ಮುಂದುವರಿದಿದ್ದು, ಇದೀಗ ಬಿಜೆಪಿಯ ಪ್ರಬಲ ನಾಯಕ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಕಾಂಗ್ರೆಸ್ನತ್ತ ಒಲವು ತೋರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು, ಜ.15: ಕರ್ನಾಟಕದ ಆಡಳಿತದ ಪಕ್ಷದಲ್ಲಿ ಸಿಎಂ ಕುರ್ಚಿಗಾಗಿ ಹಗ್ಗಾಜಗ್ಗಾಟ ಮುಂದುವರಿದಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಶೀತಲ ಸಮರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸದ್ಯ ಯಾವ ಚುನಾವಣೆಗಳು ಇಲ್ಲದೇ ಇದ್ದರೂ ಸಹ ಪಕ್ಷಾಂತರ ಮುಂದುವರಿದಿದ್ದು, ಇದೀಗ ಬಿಜೆಪಿಯ ಪ್ರಬಲ ನಾಯಕ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಕಾಂಗ್ರೆಸ್ನತ್ತ ಒಲವು ತೋರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎನ್ನುವ ಲೆಕ್ಕಾಚಾರದಲ್ಲಿರುವ ಬಿಜೆಪಿಗೆ ಇದರಿಂದಾಗಿ ಬಿಗ್ ಶಾಕ್ ಎದುರಾದಂತಾಗಿದೆ. ಕಾಂಗ್ರೆಸ್ನಿಂದ ಅಧಿಕಾರ ಕಸಿಯಲು ಬಿಜೆಪಿ ಪ್ರಯತ್ನಿಸುತ್ತಿದ್ದರೆ, ಇತ್ತ ಬಿಜೆಪಿಯ ಪ್ರಮುಖ ನಾಯಕರುಗಳನ್ನೇ ತನ್ನತ್ತ ಸೆಳೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.
ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನುವ ವಿಚಾರವನ್ನು ಪ್ರೀತಂ ಗೌಡ ಆಪ್ತರೊಬ್ಬರು ಬಹಿರಂಗ ಪಡಿಸಿದ್ದಾರೆ. ಬಿಜೆಪಿಯ ಯುವ ಮುಖಂಡರಲ್ಲಿ ಪ್ರಮುಖರಾಗಿರುವ ಪ್ರೀತಂ ಗೌಡ, ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯಲ್ಲಿ ನನಗೆ ಯಾವುದೇ ಭವಿಷ್ಯವಿಲ್ಲ ಎನ್ನುವ ಅಸಮಾಧಾನದಿಂದ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಪಕ್ಷಾಂತರಕ್ಕೆ ಸಜ್ಜು:
ಪ್ರೀತಂ ಗೌಡ ಬಿಜೆಪಿ ಪಕ್ಷ ತೊರೆಯಲು ಸಿದ್ಧರಾಗಿರುವುದಕ್ಕೆ ಸಾಕ್ಷಿ ಎನ್ನುವಂತೆ ಇತ್ತೀಚಿಗೆ ಪ್ರೀತಂ ಗೌಡ ಬಿಜೆಪಿಯ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ. ಹಾಗೂ ಬಿಜೆಪಿಗೆ ಸಂಬಂಧಪಟ್ಟ ವೇದಿಕೆಗಳಲ್ಲಿಯೂ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಪಕ್ಷವನ್ನೂ ಹೊರತು ಪಡಿಸಿ ತನ್ನದೇ ಆದ ಕಾರ್ಯಕರ್ತರ ಬಲ ಹಾಗೂ ಸಂಘಟನೆ ಹೊಂದಿರುವ ಪ್ರೀತಂ ಗೌಡ ಸದ್ಯ ಪಕ್ಷಾಂತರಕ್ಕೆ ಸಜ್ಜಾದ ಬಗ್ಗೆ ಮಾತುಗಳು ಜೋರಾಗಿಯೇ ಕೇಳಿಬರುತ್ತಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ನುಂಗಲಾರದ ತುತ್ತು:
ಬಿಜೆಪಿ ವಿರುದ್ಧ ಅದೇ ಪಕ್ಷದ ನಾಯಕ ಪ್ರೀತಂ ಗೌಡ ಅಸಮಾಧಾನಕ್ಕೆ ಪ್ರಮುಖ ಕಾರಣವೇ ಬಿಜೆಪಿ-ಜೆಡಿಎಸ್ ಮೈತ್ರಿ. ತಮ್ಮ ರಾಜಕೀಯ ಜೀವನದ ಆರಂಭದಿಂದಲೂ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಕುಟುಂಬದ ವಿರುದ್ಧ ಹೋರಾಡಿಕೊಂಡು ಹಾಸನದಲ್ಲಿ ಬಿಜೆಪಿ ಬಲಗೊಳಿಸಿದ್ದ ಪ್ರೀತಂ ಗೌಡಗೆ ಇದೀಗ ಬಿಜೆಪಿ-ಜೆಡಿಎಸ್ ಮೈತ್ರಿ ನುಂಗಲಾರದ ತುತ್ತಾಗಿದೆ. ಹೀಗಾಗಿ ಇದೇ ಕಾರಣಕ್ಕೆ ಅವರು ಬಿಜೆಪಿ ತೊರೆದು ಸದ್ಯ ರಾಜ್ಯದಲ್ಲಿ ಆಡಳಿತರೂಢ ಪಕ್ಷವಾಗಿರುವ ಕಾಂಗ್ರೆಸ್ ಸೇರ್ಪಡೆಗೊಳ್ಳಲು ಸಜ್ಜಾಗಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ಗೆ ಆನೆ ಬಲ:
ಒಂದು ವೇಳೆ ಪ್ರೀತಂ ಗೌಡ ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಗೊಂಡರೆ ಪಕ್ಷಕ್ಕೆ ಭಾರೀ ಲಾಭವಾಗಲಿದೆ. ಜೆಡಿಎಸ್ನ ಭದ್ರಕೋಟೆ ಎಂದೇ ಪರಿಗಣಿಸಲಾಗಿದ್ದ ಹಾಸನದಲ್ಲಿ ಕಾಂಗ್ರೆಸ್ ಮತ್ತೆ ಪಾರುಪತ್ಯ ಸಾಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಇಬ್ಬರೂ ಉತ್ಸುಕರಾಗಿದ್ದಾರೆ. ಇದೀಗ ಪ್ರೀತಂ ಗೌಡ ಪಕ್ಷ ಸೇರ್ಪಡೆಗೊಂಡರೆ ಕಾಂಗ್ರೆಸ್ಗೆ ಆನೆ ಬಲ ಬಂದಂತಾಗುತ್ತದೆ. ಸದ್ಯ ಹಾಸನದಲ್ಲಿ ಯಾವುದೇ ಪಕ್ಷ ಪ್ರಬಲವಾಗಿರದ ಕಾರಣ ಪ್ರೀತಂ ಗೌಡ ತಮ್ಮ ವೈಯಕ್ತಿಕ ವರ್ಚಸ್ಸಿನಿಂದ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸುವ ಸಾಧ್ಯತೆ ಹೆಚ್ಚಿದೆ. ಇನ್ನು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪ್ರೀತಂ ಗೌಡ ಈವರೆಗೂ ಯಾವುದೇ ಅಧೀಕೃತ ಮಾಹಿತಿ ಬಹಿರಂಗಪಡಿಸಿಲ್ಲ. ಹೀಗಾಗಿ ಅವರ ಮುಂದಿನ ನಿರ್ಧಾರವನ್ನು ಕಾದು ನೋಡಬೇಕಿದೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್22 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್15 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ20 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು23 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized22 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್23 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ21 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್21 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















