Connect with us

ಮಂಗಳೂರು

Mangalore-ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ಘೋಷಿಸಲಾದ ವ್ಯಕ್ತಿ ಕೇರಳದ ಶವಗಾರದಲ್ಲಿ ಬದುಕಿ ಬಂದ್ರು !

Published

on



Ad Widget

Ad Widget

Ad Widget

Ad Widget

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ಘೋಷಿಸಲಾದ ವ್ಯಕ್ತಿಯನ್ನು ಕಣ್ಣೂರಿನ ಶವಗಾರದಲ್ಲಿ ಇರಿಸಿದ್ದ ವೇಳೆ ಇದ್ದಕ್ಕಿದ್ದಂತೆ ಅವರ ಕೈಗಳಲ್ಲಿ ಚಲನೆ ಕಾಣಿಸಿಕೊಂಡ ಹಾಗೂ ಬಳಿಕ ಪರೀಕ್ಷಿಸಿದ ಸ್ಥಳೀಯ ಅಸ್ಪತ್ರೆಯ ತಂಡ ಅವರು ಬದುಕಿರುವುದಾಗಿ ತಿಳಿಸಿದ ಅಚ್ಚರಿಯ ವಿದ್ಯಮಾನ ವರದಿಯಾಗಿದೆ ಈ ಮೂಲ;ಕ ಮಂಗಳೂರಿನ ಆಸ್ಫತ್ರೆಯಲ್ಲಿ ಮೃತಪಟ್ಟ ವ್ಯಕ್ತಿ ಕೇರಳದ ಆಸ್ಫತ್ರೆಯಲ್ಲಿ ಬದುಕಿ ಬಂದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ಘೋಷಿಸಲಾದ ವ್ಯಕ್ತಿಯನ್ನು ಕಣ್ಣೂರಿನ ಶವಗಾರದಲ್ಲಿ ಇರಿಸಿದ್ದ ವೇಳೆ ಇದ್ದಕ್ಕಿದ್ದಂತೆ ಅವರ ಕೈಗಳಲ್ಲಿ ಚಲನೆ ಕಾಣಿಸಿಕೊಂಡ ಹಾಗೂ ಬಳಿಕ ಪರೀಕ್ಷಿಸಿದ ಸ್ಥಳೀಯ ಅಸ್ಪತ್ರೆಯ ತಂಡ ಅವರು ಬದುಕಿರುವುದಾಗಿ ತಿಳಿಸಿದ ಅಚ್ಚರಿಯ ವಿದ್ಯಮಾನ ವರದಿಯಾಗಿದೆ ಈ ಮೂಲ;ಕ ಮಂಗಳೂರಿನ ಆಸ್ಫತ್ರೆಯಲ್ಲಿ ಮೃತಪಟ್ಟ ವ್ಯಕ್ತಿ ಕೇರಳದ ಆಸ್ಫತ್ರೆಯಲ್ಲಿ ಬದುಕಿ ಬಂದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈ ಘಟನೆಯೂ ಮಂಗಳೂರಿನ ಖಾಸಗಿ ಆಸ್ಪತ್ರೆ ಮಾಡಿದ ಸಾವಿನ ದೃಢೀಕರಣದ ಬಗ್ಗೆ ಹಲವು ಪ್ರಶ್ನೆಗಳು ಸೃಷ್ಟಿಯಾಗಿದೆ. ವ್ಯಕ್ತಿಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಬೆನ್ನಲ್ಲೇ ಕುಟುಂಬಸ್ಥರು ಆಸ್ಪತ್ರೆಯ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

ಏನಿದು ಪ್ರಕರಣ ?
ಕಣ್ಣೂರಿನ ವೆಳ್ಳುವಕಂಡಿ ಪವಿತ್ರನ್ ಅವರು ನ್ಯುಮೋನಿಯದಿಂದ ಬಳಲುತ್ತಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ನಲ್ಲಿ ಇರಿಸಲಾಗಿದ್ದರೂ, ಅವರ ಸ್ಥಿತಿಯು ಹದಗೆಟ್ಟಿತ್ತು, ಯಾವುದೇ ಸುಧಾರಣೆ ಕಂಡುಬರುತ್ತಿಲ್ಲ, ವೆಂಟಿಲೇಟರ್ನಿಂದ ತೆಗೆದುಬಿಡುವುದೇ ಒಳ್ಳೆಯದು ಎಂದು ವೈದ್ಯರು ಅಭಿಪ್ರಾಯಪಟ್ಟು ಕುಟುಂಬದವರಿಗೆ ತಿಳಿಸಿದರು.



Ad Widget

ಸಂಜೆಯ ಹೊತ್ತಿಗೆ ಅವರು ಮೃತಪಟ್ಟಿದ್ದಾರೆಂದು ಘೋಷಿಸಲಾಯಿತು. ದೇಹವನ್ನು ಊರಿಗೆ ಸಾಗಿಸಲು ವ್ಯವಸ್ಥೆ ಮಾಡಲಾಯಿತು. ಸಂಜೆ 6.30ರ ಸುಮಾರಿಗೆ ಅವರನ್ನು ಆಂಬ್ಯುಲೆನ್ಸ್ನಲ್ಲಿ ಕಣ್ಣೂರಿಗೆ ಕಳುಹಿಸಲಾಯಿತು. ರಾತ್ರಿ ತುಂಬಾ ತಡವಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿ ಮರುದಿನ ಅಂತ್ಯ ಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದರು.

Ad Widget

Ad Widget

ರಾತ್ರಿ 11:30ರ ಹೊತ್ತಿಗೆ ಶವವನ್ನು ಶವಾಗಾರಕ್ಕೆ ಸ್ಥಳಾಂತರಿಸುತ್ತಿದ್ದಾಗ ಪವಿತ್ರನ್ ಕೈ ಅಲುಗಾಡುವನ್ನು ಕರ್ತವ್ಯದಲ್ಲಿದ್ದ ಅಟೆಂಡೆಂಟ್ ಜಯನ್ ಗಮನಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಆಸ್ಪತ್ರೆಯ ವೈದ್ಯಕೀಯ ತಂಡವು ದೇಹ ಪರೀಕ್ಷಿಸಿ ಪವಿತ್ರನ್ ಜೀವಂತವಾಗಿರುವುದನ್ನು ಎಂದು ದೃಢಪಡಿಸಿತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ತಕ್ಷಣವೇ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಯಿತು. ಈಗ ಚಿಕಿತ್ಸೆಗೆ ಪವಿತ್ರನ್ ಸ್ಪಂದಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಅಟೆಂಡೆಂಟ್ ಜಯನ್ ಪ್ರತಿಕ್ರಿಯಿಸಿ, ಅಂಬುಲೆನ್ಸ್‌ನಿಂದ ದೇಹವನ್ನು ಇಳಿಸಿದಾಗ ಕೈ ಸ್ವಲ್ಪ ಚಲಿಸಿದನ್ನು ನೋಡಿದೆ. ನನಗೆ ಅನುಮಾನ ಬಂದ ವಿಚಾರವನ್ನು ನನ್ನ ಸಹೋದ್ಯೋಗಿ ಜೊತೆ ಹೇಳಿದೆ. ನಂತರ ಅವರ ಹೃದಯದ ನಾಡಿ ಮಿಡಿತ ಪರೀಕ್ಷೆ ಮಾಡಿದಾಗ ಅವರು ಜೀವಂತ ಇರುವುದು ದೃಢವಾಯಿತು ಎಂದು ತಿಳಿಸಿದರು.

Ad Widget
Click to comment

Leave a Reply

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಅಪರಾಧ

Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ

Published

on



Ad Widget

Ad Widget

Ad Widget

Ad Widget

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್‌ ಅಧಿಕಾರಿ ಸಂದೀಪ್‌ ರಾವ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್‌ ಗೋಯಲ್‌ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.

Ad Widget

Ad Widget <> Ad Widget

ಬಳಿಕ ಮತ್ತೊಂದು ಮೊಬೈಲ್‌ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್‌ ಪವಾರ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್‌ ಸೀಕ್ರೆಸಿ ಆ್ಯಕ್ಟ್‌’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.



Ad Widget

ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್‌ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

Ad Widget

Ad Widget

ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್‌ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್‌ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.

ಸೈಬರ್‌ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್‌ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.

Ad Widget
Continue Reading

ಮಂಗಳೂರು

Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್‌ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

Published

on



Ad Widget

Ad Widget

Ad Widget

Ad Widget

ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.

Ad Widget

Ad Widget <> Ad Widget

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್‌ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.



Ad Widget

ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading