Connect with us

ಅಪರಾಧ

Uppinangady-ಉಪ್ಪಿನಂಗಡಿ: ರಿಕ್ಷಾದಲ್ಲಿ ಗಾಂಜಾ ಸಾಗಾಟ-ಮಾಲು ಸಹಿತ ಆರೋಪಿಯ ಬಂಧನ

Published

on



Ad Widget

Ad Widget

Ad Widget

Ad Widget

ಒಂದೂವರೆ ಕೆಜಿ ತೂಕದ ಗಾಂಜಾವನ್ನು ರಿಕ್ಷಾವೊಂದರಲ್ಲಿ ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಗುರುವಾರದಂದು ಆರೋಪಿಯನ್ನು ಮಾಲು ಸಹಿತ ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ಒಂದೂವರೆ ಕೆಜಿ ತೂಕದ ಗಾಂಜಾವನ್ನು ರಿಕ್ಷಾವೊಂದರಲ್ಲಿ ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಗುರುವಾರದಂದು ಆರೋಪಿಯನ್ನು ಮಾಲು ಸಹಿತ ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

34ನೇ ನೆಕ್ಕಿಲಾಡಿಯಲ್ಲಿ ಎಸ್‌ಐ ಅವಿನಾಶ್‌ ಎಚ್‌. ಮತ್ತವರ ತಂಡ ವಾಹನ ತಪಾಸಣೆ ಮಾಡುತ್ತಿದ್ದಾಗ ಬಂಟ್ವಾಳದ ಕಡೆಯಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ರಿಕ್ಷಾವನ್ನು ನಿಲ್ಲಿಸಲು ಸೂಚಿಸಿದ್ದು, ಆದರೆ ಚಾಲಕ ವಾಹನವನ್ನು ನಿಲ್ಲಿಸದೆ ಮುಂದಕ್ಕೆ ಚಲಾಯಿಸಿ ರಿಕ್ಷಾದಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

Ad Widget

Ad Widget <> Ad Widget

ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಅಬ್ದುಲ್‌ ಸಲೀಂ (35 ವ) ಆರೋಪಿ ರಿಕ್ಷಾ ಚಾಲಕ. ಪೊಲೀಸರು ಆತನನ್ನುವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಸಾಗಿಸುತ್ತಿದ್ದುದು ತಿಳಿದು ಬಂದಿದೆ.



Ad Widget

ನೌಶಾದ್‌ ಎಂಬಾತ ತನಗೆ ಗಾಂಜಾ ನೀಡಿದ್ದಾಗಿ ಆರೋಪಿ ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

Ad Widget

Ad Widget

ಗಾಂಜಾ ಸೇವಿಸುತ್ತಿದ್ದ ಯುವಕ ಪೊಲೀಸರ ವಶಕ್ಕೆ
ಮಂಗಳೂರಿನ ಉತ್ತರ ಮೀನುಗಾರಿಕೆ ದಕ್ಕೆಯಲ್ಲಿ ತೂರಾಡುತ್ತಾ ಸಾಗುತ್ತಿದ್ದ ಉಳ್ಳಾಲ ಹಳೆ ಕೋಟೆ ಮಸೀದಿ ಬಳಿಯ ನಿವಾಸಿ ಶಾಕ್ಲೇನ್‌ ಮುಸ್ತಾಕ್‌ (21 ವ.) ಎಂಬಾತನನ್ನು ಬಂದರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಚಾರಣೆ ನಡೆಸಿದಾಗ ಆತ ಗಾಂಜಾ ಸೇವಿಸಿರುವುದಾಗಿ ತಿಳಿಸಿದ್ದಾನೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಎನ್‌ಡಿಪಿಎಸ್‌ ಕಾಯ್ದೆಯಡಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Ad Widget
Click to comment

Leave a Reply

ಅಪರಾಧ

Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ

Published

on



Ad Widget

Ad Widget

Ad Widget

Ad Widget

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್‌ ಅಧಿಕಾರಿ ಸಂದೀಪ್‌ ರಾವ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್‌ ಗೋಯಲ್‌ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.

Ad Widget

Ad Widget <> Ad Widget

ಬಳಿಕ ಮತ್ತೊಂದು ಮೊಬೈಲ್‌ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್‌ ಪವಾರ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್‌ ಸೀಕ್ರೆಸಿ ಆ್ಯಕ್ಟ್‌’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.



Ad Widget

ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್‌ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

Ad Widget

Ad Widget

ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್‌ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್‌ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.

ಸೈಬರ್‌ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್‌ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on



Ad Widget

Ad Widget

Ad Widget

Ad Widget

ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.



Ad Widget

ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Ad Widget

Ad Widget

ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.

ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.

ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Ad Widget
Continue Reading

ಅಪರಾಧ

Uppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ

Published

on



Ad Widget

Ad Widget

Ad Widget

Ad Widget

ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಕೋಡಿಂಬಾಡಿ ಪರಿಸರದ ಪ್ರಗತಿಪರ ಕೃಷಿಕರೊಬ್ಬರ ಮನೆಗೆ ನಾಲ್ಕು ದಿನಗಳ ಹಿಂದೆ ತೆರಳಿದ ಅಪರಿಚಿತ ವ್ಯಕ್ತಿ, ತಾನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯವನು ಎಂದು ಪರಿಚಯಿಸಿಕೊಂಡಿದ್ದಾನೆ. ತೋಟದ ಕೆಲಸಕ್ಕೆ ಶಾಶ್ವತವಾಗಿ ಕಾರ್ಮಿಕರು ಬೇಕೇ ಎಂದು ವಿಚಾರಿಸಿದ್ದಾನೆ. ಕೆಲಸಗಾರರ ಅಗತ್ಯವಿದ್ದ ಹಿನ್ನೆಲೆಯಲ್ಲಿ ಕೃಷಿಕರು ಬೇಕು ಎಂದು ತಿಳಿಸಿದಾಗ, ತಾನು ಸದ್ಯ ಗೇರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದ ತನ್ನ ಬಟ್ಟೆ-ಬರೆ ಹಾಗೂ ಇತರ ಸಾಮಗ್ರಿಗಳನ್ನು ತೆಗೆದುಕೊಂಡು, ಹೆಂಡತಿ-ಮಕ್ಕಳೊಂದಿಗೆ ಬರುವುದಾಗಿ ಹೇಳಿದ್ದಾನೆ.

Ad Widget

Ad Widget <> Ad Widget

ಆದರೆ ರಿಕ್ಷಾ ಮಾಡಿಕೊಂಡು ಬರಲು ತನ್ನ ಬಳಿ ಹಣವಿಲ್ಲ ಎಂದು ಹೇಳಿ ಮೊದಲಿಗೆ ₹1 ಸಾವಿರ ಕೇಳಿದ್ದಾನೆ. ಆತನ ಮಾತನ್ನು ನಂಬಿದ ತೋಟದ ಮಾಲಕರು ಹಣ ನೀಡಿದ್ದಾರೆ. ಬಳಿಕ ಅಂಗಡಿಯಲ್ಲಿ ಸ್ವಲ್ಪ ಸಾಲವಿದ್ದು, ಅದನ್ನು ತೀರಿಸಲು ಮತ್ತೊಂದು ₹1 ಸಾವಿರ ನೀಡುವಂತೆ ಕೇಳಿಕೊಂಡಿದ್ದಾನೆ. ಇದಕ್ಕೂ ಒಪ್ಪಿದ ಕೃಷಿಕರು ಒಟ್ಟು ₹2 ಸಾವಿರ ನೀಡಿದ್ದಾರೆ.



Ad Widget

ಹಣ ಪಡೆದುಕೊಂಡು ತೆರಳಿದ ವ್ಯಕ್ತಿ ನಾಲ್ಕು ದಿನ ಕಳೆದರೂ ಮತ್ತೆ ಕೃಷಿಕರ ಮನೆಗೆ ಬಂದಿಲ್ಲ. ಆತನ ಮೊಬೈಲ್‌ ನಂಬರ್ ಕೇಳಿದಾಗ ತನ್ನ ಬಳಿ ಮೊಬೈಲ್ ಇಲ್ಲ ಎಂದು ಹೇಳಿದ್ದ ಎನ್ನಲಾಗಿದೆ.

Ad Widget

Ad Widget

ತೋಟದ ಕೆಲಸಗಾರರ ಕೊರತೆಯನ್ನು ಬಳಸಿಕೊಂಡು ಇಂತಹ ರೀತಿಯಲ್ಲಿ ಕೃಷಿಕರನ್ನು ವಂಚಿಸುವ ಸಾಧ್ಯತೆಯಿದ್ದು, ಇದೇ ವ್ಯಕ್ತಿ ಇತರ ಕೃಷಿಕರನ್ನೂ ಸಂಪರ್ಕಿಸಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ. ಹೀಗಾಗಿ ಅಪರಿಚಿತ ವ್ಯಕ್ತಿಗಳ ಮಾತನ್ನು ನಂಬಿ ಹಣ ನೀಡುವ ಮುನ್ನ ಕೃಷಿಕರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading