ಅಂತರ ರಾಜ್ಯ
ATM robbers-ಬೀದರ್: ಶೂಟೌಟ್ ನಡೆಸಿ ಇಬ್ಬರ ಕೊಂದ ಎಟಿಎಂ ದರೋಡೆಕೋರರಿಂದ ಹೈದರಾಬಾದ್ ನಲ್ಲೂ ಶೂಟೌಟ್ : ಬೆನ್ನತ್ತಿದ ಪೊಲೀಸರು..!
ಕರ್ನಾಟಕದ ಬೀದರ್ ನಲ್ಲಿ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಎಟಿಎಂಗೆ ಹಾಕಬೇಕಿದ್ದ 93 ಲಕ್ಷ ರೂ ದರೋಡೆ ಮಾಡಿ ತೆಲಂಗಾಣಕ್ಕೆ ಪರಾರಿಯಾಗಿದ್ದ ದರೋಡೆಕೋರರು ಹೈದರಾಬಾದ್ ನಲ್ಲೂ ಶೂಟೌಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಹೈದರಾಬಾದ್: ಕರ್ನಾಟಕದ ಬೀದರ್ ನಲ್ಲಿ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಎಟಿಎಂಗೆ ಹಾಕಬೇಕಿದ್ದ 93 ಲಕ್ಷ ರೂ ದರೋಡೆ ಮಾಡಿ ತೆಲಂಗಾಣಕ್ಕೆ ಪರಾರಿಯಾಗಿದ್ದ ದರೋಡೆಕೋರರು ಹೈದರಾಬಾದ್ ನಲ್ಲೂ ಶೂಟೌಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ದರೋಡೆಕೋರರ ತಂಡವು ಕರ್ನಾಟಕದಿಂದ ತಪ್ಪಿಸಿಕೊಂಡು ತೆಲಂಗಾಣಕ್ಕೆ ಪರಾರಿಯಾಗಿದ್ದು, ತೆಲಂಗಾಣ ರಾಜಧಾನಿ ಹೈದರಾಬಾದ್ ನ ಅಫ್ಜಲ್ ಗಂಜ್ ನಲ್ಲಿರುವ ಒಂದು ಟ್ರಾವೆಲ್ ಕಚೇರಿಗೆ ನುಗ್ಗಿ ಅಲ್ಲಿನ ಮ್ಯಾನೇಜರ್ ಮೇಲೂ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆನ್ನತ್ತಿದ ಬೀದರ್ ಪೊಲೀಸರು
ಕಳ್ಳರ ಗುಂಪನ್ನು ಬೀದರ್ ಪೊಲೀಸರು ಬಂಧಿಸಲು ಹೈದರಾಬಾದ್ಗೆ ಬಂದಿದ್ದು, ಪೊಲೀಸರನ್ನು ಕಂಡ ಕಳ್ಳರ ಗುಂಪೊಂದು ತಪ್ಪಿಸಿಕೊಳ್ಳಲು ಅಫ್ಜಲ್ಗಂಜ್ನಲ್ಲಿರುವ ಟ್ರಾವೆಲ್ಸ್ ಕಚೇರಿಗೆ ನುಗ್ಗಿದೆ. ಈ ವೇಳೆ ಪೊಲೀಸರು ಮತ್ತು ದರೋಡೆಕೋರರ ನಡುವೆ ಗುಂಡಿನ ಕಾಳಗ ನಡೆದಿದ್ದು, ಟ್ರಾವೆಲ್ಸ್ ಕಚೇರಿಯಲ್ಲಿದ್ದ ಮ್ಯಾನೇಜರ್ ಗೆ ಗುಂಡು ತಗುಲಿದೆ ಎಂದು ತಿಳಿದುಬಂದಿದೆ. ಬಳಿಕ ದರೋಡೆಕೋರರು ಅಲ್ಲಿಂದ ಪರಾರಿಯಾಗಿದ್ದು, ತೀವ್ರ ರಕ್ತಸ್ರಾವವಾಗಿ ಬಿದ್ದಿದ್ದ ಮ್ಯಾನೇದರ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ವಿಚಾರ ತಿಳಿದು ಘಟನಾ ಸ್ಥಳಕ್ಕೆ ದೌಡಾಯಿಸಿದ ಹೈದರಾಬಾದ್ ಪೊಲೀಸರು ಬೀದರ್ ಪೊಲೀಸರೊಂದಿಗೆ ಸೇರಿ ದರೋಡೆಕೋರರ ವಿರುದ್ಧ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಸುತ್ತಮುತ್ತಲ ಪ್ರದೇಶಗಳಲ್ಲಿ ನಾಕಾಬಂದಿ ಘೋಷಿಸಲಾಗಿದ್ದು, ಬೀದರ್ ಪೊಲೀಸರೊಂದಿಗೆ ಸೇರಿ ಕಳ್ಳರ ಗ್ಯಾಂಗ್ ಅನ್ನು ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪೂರ್ವ ವಲಯ ಡಿಸಿಪಿ ಸ್ಥಳಕ್ಕಾಗಮಿಸಿ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Restaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
ಮುದ್ರಿತ ಗರಿಷ್ಠ ಚಿಲ್ಲರೆ ಬೆಲೆಗಿಂತ (MRP) ಹೆಚ್ಚುವರಿಯಾಗಿ ನೀರಿನ ಬಾಟ್ಲಿಗೆ ₹2 ವಸೂಲಿ ಮಾಡಿದ ಪ್ರಕರಣದಲ್ಲಿ ಹಥರಸ್ನ ರೆಸ್ಟೋರೆಂಟ್ವೊಂದಕ್ಕೆ ಅಲಿಗಡ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು ₹1 ಲಕ್ಷ ದಂಡ ವಿಧಿಸಿದೆ.
ಅಲಿಗಡ (ಉತ್ತರ ಪ್ರದೇಶ): ಮುದ್ರಿತ ಗರಿಷ್ಠ ಚಿಲ್ಲರೆ ಬೆಲೆಗಿಂತ (MRP) ಹೆಚ್ಚುವರಿಯಾಗಿ ನೀರಿನ ಬಾಟ್ಲಿಗೆ ₹2 ವಸೂಲಿ ಮಾಡಿದ ಪ್ರಕರಣದಲ್ಲಿ ಹಥರಸ್ನ ರೆಸ್ಟೋರೆಂಟ್ವೊಂದಕ್ಕೆ ಅಲಿಗಡ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು ₹1 ಲಕ್ಷ ದಂಡ ವಿಧಿಸಿದೆ.
ಇದಲ್ಲದೆ, ದೂರುದಾರರಿಗೆ ಮಾನಸಿಕ ಕಿರುಕುಳಕ್ಕೆ ಪರಿಹಾರವಾಗಿ ₹1,000 ಹಾಗೂ ಮೊಕದ್ದಮೆ ವೆಚ್ಚವಾಗಿ ₹5,000 ಪಾವತಿಸುವಂತೆಯೂ ಆಯೋಗ ಆದೇಶಿಸಿದೆ. ಆದೇಶವನ್ನು 45 ದಿನಗಳೊಳಗೆ ಪಾಲಿಸಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ರೆಸ್ಟೋರೆಂಟ್ ಮಾಲೀಕರಿಗೆ ಎಚ್ಚರಿಕೆ ನೀಡಿದೆ.
₹18ರ ಬಾಟ್ಲಿಗೆ ₹20 ವಸೂಲಿ
ಅಲಿಗಡ ನಿವಾಸಿಯೊಬ್ಬರು 2026ರ ಮಾರ್ಚ್ 11ರಂದು ಹಥರಸ್ನ ಈ ರೆಸ್ಟೋರೆಂಟ್ಗೆ ಭೇಟಿ ನೀಡಿದ್ದರು. ಊಟದ ವೇಳೆ ಕುಡಿಯಲು ನೀರು ಕೇಳಿದಾಗ, ₹18 ಎಂಆರ್ಪಿ ನಮೂದಿಸಿದ್ದ ನೀರಿನ ಬಾಟ್ಲಿಯನ್ನು ನೀಡಲಾಗಿತ್ತು. ಆದರೆ, ಬಿಲ್ನಲ್ಲಿ ₹20 ವಿಧಿಸಲಾಗಿತ್ತು. ಮುದ್ರಿತ ಬೆಲೆಗಿಂತ ₹2 ಹೆಚ್ಚುವರಿಯಾಗಿ ವಸೂಲಿ ಮಾಡಿರುವುದನ್ನು ಪ್ರಶ್ನಿಸಿ ಗ್ರಾಹಕರು ದೂರು ದಾಖಲಿಸಿದ್ದರು.
ಈ ಘಟನೆಯಿಂದ ತಮಗೆ ಮಾನಸಿಕ ವೇದನೆ ಹಾಗೂ ಆರ್ಥಿಕ ನಷ್ಟ ಉಂಟಾಗಿದೆ ಎಂದು ಆರೋಪಿಸಿದ್ದ ಗ್ರಾಹಕರು, ₹10 ಲಕ್ಷ ಪರಿಹಾರ ಮತ್ತು ₹15,000 ಕಾನೂನು ವೆಚ್ಚ ನೀಡುವಂತೆ ಕೋರಿ ಆಯೋಗದ ಮೊರೆ ಹೋಗಿದ್ದರು. ರೆಸ್ಟೋರೆಂಟ್ನ ಸೇವಾ ನ್ಯೂನತೆ ಹಾಗೂ ಅನ್ಯಾಯದ ವ್ಯಾಪಾರ ಪದ್ಧತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದ್ದರು.
ನೋಟಿಸ್ಗೆ ಉತ್ತರಿಸದ ರೆಸ್ಟೋರೆಂಟ್
ಆಯೋಗದ ಅಧ್ಯಕ್ಷ ಹಸ್ಟೈನ್ ಖುರೇಷಿ ಮತ್ತು ಸದಸ್ಯೆ ಪೂರ್ಣಿಮಾ ಸಿಂಗ್ ರಜಪೂತ್ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ರೆಸ್ಟೋರೆಂಟ್ಗೆ ನೋಟಿಸ್ ಜಾರಿಗೊಳಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ಮೇ 21ರಂದು ಆಯೋಗವು ಏಕಪಕ್ಷೀಯ ವಿಚಾರಣೆ ಮುಂದುವರಿಸಿತು.
ದೂರುದಾರರು ಸಲ್ಲಿಸಿದ್ದ ಮಾರ್ಚ್ 11ರ ಬಿಲ್ ಹಾಗೂ ₹18 ಎಂಆರ್ಪಿ ನಮೂದಿಸಿದ್ದ ನೀರಿನ ಬಾಟ್ಲಿಯ ಛಾಯಾಚಿತ್ರವನ್ನು ಪರಿಶೀಲಿಸಿದ ಆಯೋಗ, ₹20 ವಸೂಲಿ ಮಾಡಿರುವುದನ್ನು ದೃಢಪಡಿಸಿತು. ಇದು ಅನ್ಯಾಯದ ವ್ಯಾಪಾರ ಪದ್ಧತಿಯಾಗಿದೆ ಎಂದು ತೀರ್ಮಾನಿಸಿ ರೆಸ್ಟೋರೆಂಟ್ಗೆ ₹1 ಲಕ್ಷ ದಂಡ ಹಾಗೂ ದೂರುದಾರರಿಗೆ ಪರಿಹಾರ ಪಾವತಿಸುವಂತೆ ಆದೇಶಿಸಿತು.
ನಿಧನ ವಾರ್ತೆ
Boat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
ಬಿಹಾರದ ವೈಶಾಲಿ ಜಿಲ್ಲೆಯ ಹಾಜಿಪುರ ಸಮೀಪ ಗಂಗಾ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ. ಐವರನ್ನು ರಕ್ಷಿಸಲಾಗಿದೆ ಎಂದು ವೈಶಾಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.
ಹಾಜಿಪುರ: ಬಿಹಾರದ ವೈಶಾಲಿ ಜಿಲ್ಲೆಯ ಹಾಜಿಪುರ ಸಮೀಪ ಗಂಗಾ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ. ಐವರನ್ನು ರಕ್ಷಿಸಲಾಗಿದೆ ಎಂದು ವೈಶಾಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.
ರಘೋಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಮ್ಪುರ್ ಶ್ಯಾಮ್ಚಂದ್ ಗ್ರಾಮದ ಸಮೀಪ ಈ ದುರಂತ ಸಂಭವಿಸಿದೆ. ಸುಮಾರು 15ರಿಂದ 20 ಮಂದಿಯನ್ನು ಹೊತ್ತೊಯ್ಯುತ್ತಿದ್ದ ದೋಣಿಯಲ್ಲಿದ್ದವರು ಔತಣಕೂಟವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ದೋಣಿ ನದಿಯಲ್ಲಿ ಮಗುಚಿ ಬಿದ್ದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಆರಂಭದಲ್ಲಿ ಐದರಿಂದ ಎಂಟು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಬಳಿಕ ಸಾವಿನ ಸಂಖ್ಯೆ 11ಕ್ಕೆ ಏರಿರುವುದು ದೃಢಪಟ್ಟಿದೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ವರದಿಯಾಗಿದೆ.
ದೋಣಿ ಮಗುಚಿ ಬೀಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಮೃತಪಟ್ಟವರ ಗುರುತು ಹಾಗೂ ದೋಣಿಯಲ್ಲಿದ್ದವರ ನಿಖರ ಸಂಖ್ಯೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ದೋಣಿ ದುರಂತಕ್ಕೆ ತೇಜಸ್ವಿ ಯಾದವ್ ಸಂತಾಪ
ಈ ದುರಂತದ ಬಗ್ಗೆ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಘೋಪುರ್ ದಿಯಾರಾ ಪ್ರದೇಶದಲ್ಲಿ ದೋಣಿ ಮಗುಚಿ ಬಿದ್ದಿರುವ ಆತಂಕಕಾರಿ ಸುದ್ದಿ ಬಂದಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಮಕ್ಕಳು ಎಂದು ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಸ್ಥಳೀಯ ನಿವಾಸಿಗಳು, ಆಡಳಿತ ಮಂಡಳಿ ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ಚುರುಕುಗೊಳಿಸುವುದರ ಜೊತೆಗೆ ಗಾಯಾಳುಗಳಿಗೆ ತ್ವರಿತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅಂತರ ರಾಜ್ಯ
March to Supreme Court-ಮತಗಳವು ಆರೋಪ: ಇಂಡಿಯಾ ಕೂಟದಿಂದ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ
ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಸಂಜೆ 4ರಿಂದ 5 ಗಂಟೆಯ ನಡುವೆ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ಸಮಯ ಕೋರಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತಿಳಿಸಿದ್ದಾರೆ.
ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಸಂಜೆ 4ರಿಂದ 5 ಗಂಟೆಯ ನಡುವೆ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ಸಮಯ ಕೋರಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನಿಯೋಜಿಸಿರುವ ಪೊಲೀಸರ ಸಂಖ್ಯೆಯನ್ನು ನೋಡಿದರೆ ಕೇಂದ್ರ ಸರ್ಕಾರದ ಆತಂಕ ಅರ್ಥವಾಗುತ್ತದೆ ಎಂದೂ ಅವರು ಹೇಳಿದ್ದಾರೆ.
ಇಂಡಿಯಾ ಕೂಟದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ವಿರೋಧ ಪಕ್ಷಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ಇತರ ಸಂಘಟನೆಗಳಿಗೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.
ಶನಿವಾರ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ದೇಶದ ವಿವಿಧ ಭಾಗಗಳಿಂದ ಯುವಕರು ಆಗಮಿಸಿದ್ದರು. ಆದರೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. “ನಮಗೆ ಬೇಕಿರುವುದು ಇಂತಹ ಭಾರತವಲ್ಲ” ಎಂದು ಅವರು ಹೇಳಿದ್ದಾರೆ.
-
ದಕ್ಷಿಣ ಕನ್ನಡ23 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ21 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಕಾರ್ಯಕ್ರಮಗಳು15 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಸುಳ್ಯ22 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized21 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ಕಾರ್ಯಕ್ರಮಗಳು15 hours agoPuttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
-
ಕಾರ್ಯಕ್ರಮಗಳು14 hours ago‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
-
ಬಿಗ್ ನ್ಯೂಸ್22 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ


















