Connect with us

ಅಂತರ ರಾಜ್ಯ

PM Modi-ದೆಹಲಿಯಲ್ಲಿ ‘ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ 2025’ ಉದ್ಘಾಟನೆ; ಮೊಬಿಲಿಟಿ ವಲಯದಲ್ಲಿ ಹೂಡಿಕೆಗೆ ಭಾರತ ಅತ್ಯುತ್ತಮ ತಾಣ : ಪ್ರಧಾನಿ ಮೋದಿ

Published

on

Ad Widget

Ad Widget

Ad Widget

Ad Widget

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೊಬಿಲಿಟಿ ವಲಯದಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಬಯಸುವ ಪ್ರತಿಯೊಬ್ಬ ಹೂಡಿಕೆದಾರರಿಗೆ ಭಾರತವು ಅತ್ಯುತ್ತಮ ತಾಣವಾಗಿದೆ ಎಂದು ಹೇಳಿದ್ದಾರೆ. ಹೂಡಿಕೆದಾರರಿಗೆ ಸರ್ಕಾರ ಎಲ್ಲಾ ರೀತಿಯಲ್ಲಿ ಬೆಂಬಲ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೊಬಿಲಿಟಿ ವಲಯದಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಬಯಸುವ ಪ್ರತಿಯೊಬ್ಬ ಹೂಡಿಕೆದಾರರಿಗೆ ಭಾರತವು ಅತ್ಯುತ್ತಮ ತಾಣವಾಗಿದೆ ಎಂದು ಹೇಳಿದ್ದಾರೆ. ಹೂಡಿಕೆದಾರರಿಗೆ ಸರ್ಕಾರ ಎಲ್ಲಾ ರೀತಿಯಲ್ಲಿ ಬೆಂಬಲ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಇಂದು ದೆಹಲಿಯ ಭಾರತ್ ಮಂಟಪದಲ್ಲಿ ‘ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025’ ನ್ನು ಉದ್ಘಾಟಿಸಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತವು ಹಸಿರು ತಂತ್ರಜ್ಞಾನ, ಎಲೆಕ್ಟ್ರಿಕ್ ವಾಹನಗಳು, ಹೈಡ್ರೋಜನ್ ಇಂಧನ ಮತ್ತು ಜೈವಿಕ ಇಂಧನಗಳ ಅಭಿವೃದ್ಧಿಯತ್ತ ಗಮನ ಹರಿಸುತ್ತಿದೆ ಎಂದು ಹೇಳಿದರು.

Ad Widget

Ad Widget <> Ad Widget

‘ಮೇಕ್ ಇನ್ ಇಂಡಿಯಾ’ ಉಪಕ್ರಮದ ಬಲವು ದೇಶದ ಆಟೋ ಉದ್ಯಮದ ಬೆಳವಣಿಗೆಯ ನಿರೀಕ್ಷೆಗಳನ್ನು ಹೆಚ್ಚಿಸುತ್ತದೆ ಎಂದು ಒತ್ತಿ ಹೇಳಿದ ಪ್ರಧಾನ ಮಂತ್ರಿಗಳು, ಈ ದಶಕದ ಅಂತ್ಯದ ವೇಳೆಗೆ ಎಲೆಕ್ಟ್ರಿಕ್ ವಾಹನಗಳ ಮಾರಾಟ ದೇಶದಲ್ಲಿ ಎಂಟು ಪಟ್ಟು ಹೆಚ್ಚಾಗಲಿದೆ ಎಂದರು.

ಆರ್ಥಿಕತೆ ಮತ್ತು ಪರಿಸರ ವಿಜ್ಞಾನವನ್ನು ಬೆಂಬಲಿಸುವ ಮತ್ತು ಪಳೆಯುಳಿಕೆ ಇಂಧನಗಳ ಆಮದಿನ ಮೇಲಿನ ದೇಶದ ಅವಲಂಬನೆಯನ್ನು ಕಡಿಮೆ ಮಾಡುವ ವ್ಯವಸ್ಥೆಯನ್ನು ರಚಿಸುವ ಮೊಬಿಲಿಟಿ ವಲಯಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡಿ ಕಾರ್ಯನಿರ್ವಹಿಸುತ್ತಿದೆ ಎಂದರು.

Ad Widget

Ad Widget

1.5 ಲಕ್ಷಕ್ಕೂ ಹೆಚ್ಚು ನೇರ ಉದ್ಯೋಗ ಸೃಷ್ಠಿ
‘ಮೇಕ್ ಇನ್ ಇಂಡಿಯಾ’ ಉಪಕ್ರಮವು ಆಟೋ ಉದ್ಯಮದ ಅಭಿವೃದ್ಧಿಯಲ್ಲಿ ದೊಡ್ಡ ಪಾತ್ರವನ್ನು ವಹಿಸಿದೆ ಎಂದು ಹೇಳಿದರು. ಈ ಉಪಕ್ರಮವು ಪಿಎಲ್ಐ (ಉತ್ಪಾದನಾ ಸಂಬಂಧಿತ ಪ್ರೋತ್ಸಾಹಕ) ಯೋಜನೆಯಿಂದ ಉತ್ತೇಜನ ಪಡೆದಿದ್ದು, ಇದು ಈ ವಲಯದಲ್ಲಿ 2.25 ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಮಾರಾಟಕ್ಕೆ ಸಹಾಯ ಮಾಡಿದೆ.ಇದರಿಂದ ಆಟೋಮೊಬೈಲ್ ವಲಯದಲ್ಲಿ 1.5 ಲಕ್ಷಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ ಎಂದರು.

ಸುಲಭ ಪ್ರಯಾಣವು ಇತ್ತೀಚಿನ ದಿನಗಳಲ್ಲಿ ಭಾರತದ ದೊಡ್ಡ ಆದ್ಯತೆಯಾಗಿದೆ. ಕಳೆದ ಬಜೆಟ್‌ನಲ್ಲಿ, ದೇಶದ ಮೂಲಸೌಕರ್ಯ ಅಭಿವೃದ್ಧಿಗಾಗಿ 11 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಒದಗಿಸಲಾಗಿದೆ. ಬಹುಪಥಗಳು ಮತ್ತು ಹೆದ್ದಾರಿಗಳ ಜಾಲವನ್ನು ವಿಸ್ತರಿಸಲಾಗಿದೆ ಎಂದು ಹೇಳಿದರು.

ಭಾರತದ ವಾಹನ ಉದ್ಯಮ ವಲಯವು ಅದ್ಭುತವಾಗಿದ್ದು ಭವಿಷ್ಯಕ್ಕೆ ಸಿದ್ಧವಾಗಿದೆ. ಕಳೆದ ವರ್ಷ ಭಾರತದ ಆಟೋ ಉದ್ಯಮವು ಶೇಕಡಾ 12 ರಷ್ಟು ವಾರ್ಷಿಕ ಬೆಳವಣಿಗೆಯನ್ನು ಕಂಡಿತ್ತು. ರಫ್ತಿನಲ್ಲಿ ಕೂಡ ಗಮನಾರ್ಹ ಏರಿಕೆ ಕಂಡುಬಂತು ಎಂದರು.

ಭಾರತದಲ್ಲಿ ಹೆಚ್ಚೆಚ್ಚು ಹೂಡಿಕೆ ಮಾಡಿ
ಕಾರ್ಪೊರೇಟರ್ ಗಳು ವಾಹನ ಉದ್ಯಮ ವಲಯದಲ್ಲಿ ಹೆಚ್ಚೆಚ್ಚು ಹೂಡಿಕೆ ಮಾಡಿ ಎಂದು ಉತ್ತೇಜಿಸಿದ ಪ್ರಧಾನ ಮಂತ್ರಿಗಳು ಹೆಚ್ಚುತ್ತಿರುವ ಮಧ್ಯಮ ವರ್ಗ, ತ್ವರಿತ ನಗರೀಕರಣ, ಉತ್ತಮ ಗುಣಮಟ್ಟದ ಮೂಲಸೌಕರ್ಯ ಅಭಿವೃದ್ಧಿ ಮತ್ತು ಕೈಗೆಟುಕುವ ವಾಹನಗಳು ಆಟೋಮೊಬೈಲ್ ವಲಯವನ್ನು ಉತ್ತೇಜಿಸಲಿವೆ ಎಂದರು.

ಚಲನಶೀಲತೆಗಾಗಿ ಸಂಪೂರ್ಣ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ಪ್ರಯತ್ನವಾಗಿದೆ ಎಂದರು. ಭಾರತದಲ್ಲಿ ಬ್ಯಾಟರಿ ಶೇಖರಣಾ ವ್ಯವಸ್ಥೆಯಲ್ಲಿ ಹೂಡಿಕೆ ಮಾಡಲು ಇದು ಸೂಕ್ತ ಸಮಯ ಎಂದರು.

ದೆಹಲಿಯ ಭಾರತ್ ಮಂಟಪ ಮತ್ತು ಯಶೋಭೂಮಿ ಮತ್ತು ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ ಸೆಂಟರ್ ಮತ್ತು ಮಾರ್ಟ್ ಎಂಬ ಮೂರು ಸ್ಥಳಗಳಲ್ಲಿ ನಡೆಯುತ್ತಿರುವ ಐದು ದಿನಗಳ ಪ್ರದರ್ಶನವು ಆಟೋಮೊಬೈಲ್‌ಗಳು, ಘಟಕ ಉತ್ಪನ್ನಗಳು ಮತ್ತು ತಂತ್ರಜ್ಞಾನಗಳಲ್ಲಿ 100 ಕ್ಕೂ ಹೆಚ್ಚು ಹೊಸ ಆರಂಭಗಳಿಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ.

ಇಂದಿನಿಂದ ಜನವರಿ 22ರವರೆಗೆ ನಡೆಯಲಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025, ಆಟೋಮೊಬೈಲ್ ತಯಾರಕರಿಂದ ಘಟಕಗಳು, ಎಲೆಕ್ಟ್ರಾನಿಕ್ಸ್ ಭಾಗಗಳು, ಟೈರ್ ಮತ್ತು ಇಂಧನ ಸಂಗ್ರಹ ತಯಾರಕರು ಮತ್ತು ಆಟೋಮೋಟಿವ್ ಸಾಫ್ಟ್‌ವೇರ್ ಸಂಸ್ಥೆಗಳು ಮತ್ತು ವಸ್ತುಗಳ ಮರುಬಳಕೆದಾರರವರೆಗೆ ಚಲನಶೀಲ ಪರಿಸರ ವ್ಯವಸ್ಥೆಯ ಸಂಪೂರ್ಣ ಮೌಲ್ಯ ಸರಪಳಿಯನ್ನು ಒಂದೇ ಸೂರಿನಡಿ ತರುತ್ತದೆ.

Ad Widget
Click to comment

Leave a Reply

ನಿಧನ ವಾರ್ತೆ

Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ

Published

on

Ad Widget

Ad Widget

Ad Widget

Ad Widget

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

Ad Widget

Ad Widget

ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.

ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Ad Widget

Ad Widget

ಯೋಗಿ ಆದಿತ್ಯನಾಥ್ ಅವರು ತಾಯಿಯ ಅಂತಿಮ ದರ್ಶನಕ್ಕೆ ತೆರಳುವ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Ad Widget
Continue Reading

ಸಿನೆಮಾ

Arjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು

Published

on

Ad Widget

Ad Widget

Ad Widget

Ad Widget

ಹಿರಿಯ ಪುತ್ರಿ ಐಶ್ವರ್ಯಾ ಅವರ ವೈಯಕ್ತಿಕ ಜೀವನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆಧಾರರಹಿತ ಮತ್ತು ಅವಹೇಳನಕಾರಿ ಆರೋಪಗಳ ವಿರುದ್ಧ ಬಹುಭಾಷಾ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಅರ್ಜುನ್ ಸರ್ಜಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಅಧಿಕೃತ ದೂರು ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಚೆನ್ನೈ: ಹಿರಿಯ ಪುತ್ರಿ ಐಶ್ವರ್ಯಾ ಅವರ ವೈಯಕ್ತಿಕ ಜೀವನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆಧಾರರಹಿತ ಮತ್ತು ಅವಹೇಳನಕಾರಿ ಆರೋಪಗಳ ವಿರುದ್ಧ ಬಹುಭಾಷಾ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಅರ್ಜುನ್ ಸರ್ಜಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಅಧಿಕೃತ ದೂರು ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಇತ್ತೀಚೆಗೆ ಅರ್ಜುನ್ ಸರ್ಜಾ ಅವರ ಕಿರಿಯ ಪುತ್ರಿಯ ವಿವಾಹ ಸಮಾರಂಭದಲ್ಲಿ ಅಳಿಯ ಉಮಾಪತಿ ರಾಮಯ್ಯ ಅವರು ಹೆಚ್ಚಾಗಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ, ಐಶ್ವರ್ಯಾ ಮತ್ತು ಉಮಾಪತಿ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಗಳು ಕೆಲವು ಆನ್‌ಲೈನ್ ಪೋರ್ಟಲ್‌ಗಳಲ್ಲಿ ಪ್ರಕಟವಾಗಿದ್ದವು. ಇದರ ಬೆನ್ನಲ್ಲೇ ಕೆಲವು ಮಾಧ್ಯಮಗಳು ಐಶ್ವರ್ಯಾ ಅವರನ್ನು ಮದ್ಯವ್ಯಸನಿ ಎಂದು ಬಿಂಬಿಸುವ ವರದಿಗಳನ್ನೂ ಪ್ರಸಾರ ಮಾಡಿದ್ದವು.

Ad Widget

Ad Widget <> Ad Widget

ಈ ವರದಿಗಳ ವಿರುದ್ಧ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅರ್ಜುನ್ ಸರ್ಜಾ, ವ್ಯಕ್ತಿಯ ಗೌರವ ಮತ್ತು ಘನತೆಯ ವಿಚಾರದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ.

“ಕಲಾವಿದರ ಸಾರ್ವಜನಿಕ ಜೀವನದಲ್ಲಿ ಊಹಾಪೋಹಗಳು ಮತ್ತು ಟೀಕೆಗಳು ಸಹಜ. ಆದರೆ ಊಹಾಪೋಹಗಳಿಗೂ ಉದ್ದೇಶಪೂರ್ವಕವಾಗಿ ಆಧಾರರಹಿತ ಆರೋಪಗಳನ್ನು ಹರಡುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಸಾರ್ವಜನಿಕ ವಿಮರ್ಶೆಯ ಹೆಸರಿನಲ್ಲಿ ಕಟ್ಟುಕಥೆಗಳನ್ನು ಸೃಷ್ಟಿಸಲು ಅಥವಾ ವ್ಯಕ್ತಿಯ ಚಾರಿತ್ರ್ಯವಧೆ ಮಾಡಲು ಯಾರಿಗೂ ಅಧಿಕಾರವಿಲ್ಲ. ಯಾವುದೇ ಆಧಾರವಿಲ್ಲದೆ ಮಹಿಳೆಯೊಬ್ಬರನ್ನು ಮದ್ಯವ್ಯಸನಿ ಎಂದು ಕರೆಯುವುದು ಅತ್ಯಂತ ಬೇಜವಾಬ್ದಾರಿಯುತ ಮತ್ತು ಸ್ವೀಕಾರಾರ್ಹವಲ್ಲದ ವರ್ತನೆ” ಎಂದು ಅವರು ಕಿಡಿಕಾರಿದ್ದಾರೆ.

Ad Widget

Ad Widget

ಮೌನವನ್ನು ಒಪ್ಪಿಗೆ ಎಂದು ಭಾವಿಸಬೇಡಿ
ತಂದೆಯಾಗಿ ಪುತ್ರಿಯ ವಿರುದ್ಧದ ಇಂತಹ ಆರೋಪಗಳನ್ನು ಸಹಿಸಿಕೊಂಡು ಮೌನವಾಗಿರಲು ಸಾಧ್ಯವಿಲ್ಲ ಎಂದು ಅರ್ಜುನ್ ಸರ್ಜಾ ಸ್ಪಷ್ಟಪಡಿಸಿದ್ದಾರೆ.

“ಮೌನವೇ ಅತ್ಯಂತ ಘನತೆಯ ಪ್ರತಿಕ್ರಿಯೆ ಎಂದು ನಾವು ನಂಬಿದ್ದೇವೆ. ಆದರೆ ನಮ್ಮ ಮೌನವನ್ನು ಒಪ್ಪಿಗೆ ಎಂದು ಭಾವಿಸಬಾರದು. ತಪ್ಪು ಮಾಹಿತಿಯನ್ನು ಪದೇಪದೆ ಹರಡಲು ಅವಕಾಶ ನೀಡಲೂ ಸಾಧ್ಯವಿಲ್ಲ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಿ ಸೂಕ್ತ ಕ್ರಮಕ್ಕೆ ಮುಂದಾಗಿದ್ದೇವೆ” ಎಂದು ತಿಳಿಸಿದ್ದಾರೆ.

ಇದು ಕೇವಲ ತಮ್ಮ ಪುತ್ರಿಗೆ ಸಂಬಂಧಿಸಿದ ವಿಚಾರವಲ್ಲ. ಮಹಿಳೆಯರ ಘನತೆಗೆ ಧಕ್ಕೆ ಉಂಟಾದಾಗ ಹಾಗೂ ಅವರ ವೈಯಕ್ತಿಕ ಆಯ್ಕೆಗಳನ್ನು ಸಾರ್ವಜನಿಕವಾಗಿ ಪ್ರಶ್ನಿಸಿದಾಗ ಎದುರಾಗುವ ನೋವಿನ ವಿಚಾರವೂ ಹೌದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕುಟುಂಬದ ಬೆಂಬಲವಿಲ್ಲದ ಮಹಿಳೆಯರಿಗೆ ಇಂತಹ ಆರೋಪಗಳು ಮತ್ತಷ್ಟು ನೋವುಂಟುಮಾಡಬಹುದು. ಯಾವುದೇ ಮಹಿಳೆ ಇಂತಹ ಪರಿಸ್ಥಿತಿಯನ್ನು ಏಕಾಂಗಿಯಾಗಿ ಎದುರಿಸುವಂತಾಗಬಾರದು ಅಥವಾ ತನ್ನ ಜೀವನಶೈಲಿಯನ್ನು ಸಮರ್ಥಿಸಿಕೊಳ್ಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಬಾರದು ಎಂದು ಅರ್ಜುನ್ ಸರ್ಜಾ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

Ad Widget
Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!