Connect with us

ಸ್ಥಳೀಯ

Shivraj Singh Chouhan-ʻಅಡಕೆ ಕ್ಯಾನ್ಸರ್‌ಕಾರಕವೆಂಬ ಗಾಳಿಸುದ್ದಿ ಹಬ್ಬಿಸಬೇಡಿʼ: ಸಚಿವ ಶಿವರಾಜ್‌ ಸಿಂಗ್‌ ಚೌವ್ಹಾಣ್‌

Published

on



Ad Widget

Ad Widget

Ad Widget

Ad Widget

ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ ಸಿಂಗ್‌ ಚೌವ್ಹಾಣ್‌ ಅವರು ಅಡಕೆ ಕ್ಯಾನ್ಸರ್‌ಕಾರಕ ಅಲ್ಲ ಎಂಬ ಸಂಶೋಧನಾ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಶೀಘ್ರವೇ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಸಾಗರ: ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ ಸಿಂಗ್‌ ಚೌವ್ಹಾಣ್‌ ಅವರು ಅಡಕೆ ಕ್ಯಾನ್ಸರ್‌ಕಾರಕ ಅಲ್ಲ ಎಂಬ ಸಂಶೋಧನಾ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಶೀಘ್ರವೇ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಗರ ಪ್ರಾಂತ್ಯ ಅಡಕೆ ಬೆಳೆಗಾರರ ಸಂಘ ಶನಿವಾರ ಶಿವಮೊಗ್ಗದ ಸಂತೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಅಡಕೆ ಬೆಳೆಗಾರರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

Ad Widget

Ad Widget <> Ad Widget

ಪುರಾತನ ಕಾಲದಿಂದಲೂ ಬಳಕೆಯಾಗುತ್ತಿರುವ ಅಡಕೆ ಕ್ಯಾನ್ಸರ್‌ಕಾರಕ ಎಂಬ ಮಾತುಗಳು ಈಚೆಗೆ ಕೇಳಿ ಬರುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ನೀಡಿದ ವರದಿಯಲ್ಲೂ ಅದು ಪ್ರಸ್ತಾಪವಾಗಿದೆ. ಈ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವಿದೆ. ಇದನ್ನೆಲ್ಲ ಮನಗಂಡ ಕೇಂದ್ರ ಸರಕಾರ, ದೇಶದ ಅತಿ ಉನ್ನತ 16 ಸಂಶೋಧನಾ ಕೇಂದ್ರಗಳಲ್ಲಿ ಅಡಕೆ ಬಗ್ಗೆ ಸಂಶೋಧನೆ ಮಾಡಿಸುತ್ತಿದೆ.



Ad Widget

ಸರಕಾರ ಸಂಶೋಧನಾ ಕೇಂದ್ರಗಳ ಬಗ್ಗೆಯೂ ತೀವ್ರ ಗಮನ ಹರಿಸಿದೆ. ಇವುಗಳಿಂದ ಸಕಾರಾತ್ಮಕ ವರದಿಗಳು ಬರುವುದು ಖಚಿತ. ಬಂದ ತಕ್ಷಣವೇ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗುವುದುʼ ಎಂದು ಅವರು ಹೇಳಿದ್ದಾರೆ.

Ad Widget

Ad Widget

ಅಡಕೆ ಬಗ್ಗೆ ಗಾಳಿ ಸುದ್ದಿಗಳನ್ನು ಹರಡಬಾರದು. ಅಡಕೆಗೆ ಕಲಬೆರೆಕೆ ಮಾಡಿದಾಗ ಕ್ಯಾನ್ಸರ್‌ಕಾರಕ ಆಗಬಹುದು. ಆದರೆ ಅಡಕೆಯೇ ಕ್ಯಾನ್ಸರ್‌ಕಾರಕ ಅಲ್ಲ ಎಂದು ಪ್ರತಿಪಾದಿಸಿದ ಅವರು, ಅಧಿಕೃತ ಸಂಶೋಧನಾ ವರದಿಗಳು ಬಂದ ಮೇಲೆ ನಮ್ಮೆಲ್ಲರ ಮಾತುಗಳಿಗೆ ಬಲ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಡಕೆಯ ಆಮದು ತಗ್ಗಿಸುವ ದೃಷ್ಟಿಯಿಂದ ಈ ಹಿಂದಿದ್ದ ಕನಿಷ್ಠ ಆಮದು ದರವನ್ನು 251 ರೂ. ಗಳಿಂದ 351ರೂ.ಗೆ ಹೆಚ್ಚು ಮಾಡಿದ್ದೇವೆ. ಅಲ್ಲದೇ, ಅಡಕೆಯ ಅನಧಿಕೃತ ಆಮದು ದೇಸಿ ಮಾರುಕಟ್ಟೆ ಮೇಲೆ ದುಷ್ಪರಿಣಾಮ ಬೀರುತ್ತಿರುವುದು ಸರಕಾರದ ಗಮನದಲ್ಲಿದೆ. ಪರೋಕ್ಷ ತೆರಿಗೆ ಹಾಗೂ ಸುಂಕಗಳ ಕೇಂದ್ರೀಯ ಮಂಡಳಿ (ಸಿಬಿಐಸಿ)ಗೆ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ ಎಂದರು.

ಅಡಕೆ ಪರ್ಯಾಯ ಬಳಕೆ ಇತ್ಯಾದಿ ಕುರಿತು ಇನ್ನಷ್ಟು ಸಂಶೋಧನೆಗಳು ಆಗಬೇಕಿದೆ. ಮುಂಬರುವ ಬಜೆಟ್‌ನಲ್ಲಿ ಇದಕ್ಕಾಗಿ ಹೆಚ್ಚಿನ ಅನುದಾನ ಮೀಸಲಿಡಲಾಗುವುದು. ಅಡಕೆ ಬೆಳೆಗಾರರ ಹಿತ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ಈ ವರ್ಷ ಜಲಾನಯನ ಅಭಿವೃದ್ಧಿ ಕೆಲಸಗಳಿಗೆ ಕರ್ನಾಟಕಕ್ಕೆ ಹೆಚ್ಚುವರಿಯಾಗಿ 97 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಹೇಳಿದರು.

ಸಮ್ಮೇಳನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದರಾದ ಬಿ.ವೈ.ರಾಘವೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿದರು. ಶಾಸಕರಾದ ಅರಗ ಜ್ಞಾನೇಂದ್ರ, ಗೋಪಾಲಕೃಷ್ಣ ಬೇಳೂರು, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ಕುಮಾರ್‌ ಕೊಡ್ಗಿ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಹರತಾಳು ಹಾಲಪ್ಪ, ಹೊರನಾಡು ಧರ್ಮದರ್ಶಿ ಭೀಮೇಶ್ವರ ಜೋಶಿ, ಮಾಜಿ ಶಾಸಕ ಸ್ವಾಮಿರಾಮ, ಬೆಳೆಗಾರರ ಸಂಘದ ಅಧ್ಯಕ್ಷ ವ.ಶಂ. ರಾಮಚಂದ್ರಭಟ್‌ ಇನ್ನಿತರರು ಇದ್ದರು.

ರೈತರ ಸಾಗಣೆ ವೆಚ್ಚ ಭರಿಸುವ ಚಿಂತನೆ
ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಉತ್ಪನ್ನಗಳನ್ನು ಮಹಾನಗರಗಳಿಗೆ ತಂದು ಮಾರಾಟ ಮಾಡುವಂತಹ ರೈತರಿಗೆ ಸಾಗಣೆ ವೆಚ್ಚವನ್ನು ಸರಕಾರವೇ ಭರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿದರು. ಪಿಇಎಸ್‌ ಶಿಕ್ಷಣ ಸಂಸ್ಥೆಯ ಪ್ರೇರಣಾ ಸಭಾಂಗಣದಲ್ಲಿ ಶನಿವಾರ ಅನ್ವೇಷಣಾ ಇನ್ನೋವೇಶನ್‌ ಆಯೋಜಿಸಿದ್ದ ಮಲ್ನಾಡ್‌ ಸ್ಟಾರ್ಟ್‌ಅಪ್‌ ಸಮ್ಮೇಳನ-2025 ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ರೈತರ ಉತ್ಪನ್ನಗಳಿಗೆ ಸರಿಯಾದ ಮೌಲ್ಯ ಸಿಗುತ್ತಿಲ್ಲ. ಅದೇ ಉತ್ಪನ್ನಗಳಿಗೆ ಮಹಾನಗರಗಳಲ್ಲಿ ಅತಿ ಹೆಚ್ಚಿನ ಬೆಲೆ ಇರುತ್ತದೆ. ರೈತರಿಂದ ಉತ್ಪನ್ನಗಳನ್ನು ಖರೀದಿಸುವ ಮಧ್ಯವರ್ತಿಗಳು ಅದರ ಲಾಭ ಪಡೆಯುತ್ತಿದ್ದಾರೆ. ಈ ಲಾಭಾಂಶ ರೈತರಿಗೆ ಸಿಗಬೇಕು ಎಂಬುದು ಸರಕಾರದ ಉದ್ದೇಶ. ಹೀಗಾಗಿ ರೈತರ ಸಾಗಣೆ ವೆಚ್ಚವನ್ನು ಸರಕಾರವೆ ಭರಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ, ಬ್ರ್ಯಾಂಡಿಂಗ್‌, ಮೌಲ್ಯವರ್ಧನೆ ಮುಖ್ಯ. ಈ ಎಲ್ಲವುಗಳಿಗೆ ಸ್ಟಾರ್ಟ್‌ಅಪ್‌ಗಳು ಸಹಾಯ ಮಾಡುತ್ತವೆ. ಕೃಷಿ ಎಂದರೆ ಕೇವಲ ಒಂದೇ ಬೆಳೆಯನ್ನು ಅವಲಂಭಿಸುವುದಲ್ಲ. ಮೀನುಗಾರಿಕೆ, ಜೇನು, ರೇಷ್ಮೆ ಸೇರಿದಂತೆ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಇಂದಿನ ಅಗತ್ಯ. ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಭೂಮಿಯ ಫಲವತ್ತತೆ ಕಡಿಮೆಯಾಗುತ್ತಿದೆ. ಮುಂದಿನ ಪೀಳಿಗೆಗೆ ಫಲವಂತಿಕೆಯ ಭೂಮಿ ನೀಡಲು ಸಾವಯವ ಕೃಷಿ ಪದ್ದತಿ ಅನುಸರಣೆ ಅಗತ್ಯ ಎಂದರು.

Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget <> Ad Widget

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕೆ. ವಿ. ನಿಖಿಲ್ ಕುಮಾರ್, ನಿಹಾಲ್ ಸಿ. ರೈ. ದ್ವಿತೀಯ ಪಿಯುಸಿ ಅಭಿಲಾಷ್, ವಿಕ್ರಮ್ ಎ. ಜಿ ಹಾಗೂ ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ಆತ್ಮಿಕಾ, ಎಚ್. ಮನ್ಮಿತಾ, ಶರಣ್ಯಾ ಎಚ್. ಎನ್ ಭಾಗವಹಿಸಿರುತ್ತಾರೆ.



Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗು ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Continue Reading

ಸ್ಥಳೀಯ

Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Published

on



Ad Widget

Ad Widget

Ad Widget

Ad Widget

ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget

Ad Widget

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

Ad Widget

Ad Widget <> Ad Widget

ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.



Ad Widget
Ad Widget
Continue Reading

ಸ್ಥಳೀಯ

Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು

Published

on



Ad Widget

Ad Widget

Ad Widget

Ad Widget

ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.

Ad Widget

Ad Widget <> Ad Widget

ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.



Ad Widget

ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Ad Widget

Ad Widget

ಈ ಸಂದರ್ಭದಲ್ಲಿ ಅಶ್ರಫ್ ಚಾರ್ಮಾಡಿ, ಫಾರೂಕ್ ಕಕ್ಕಿಂಜೆ ಗಾಂಧಿನಗರ, ನೌಫಲ್ ಕಕ್ಕಿಂಜೆ ಗಾಂಧಿನಗರ ಹಾಗೂ ಬಸ್ ನಿರ್ವಾಹಕ ಸಂತೋಷ್ ಸಂಗಪ್ಪ ಗೌಡ ಅವರು ಸಹಕರಿಸಿದರು. ಚಾಲಕ ಕಿರಣ್ ಅವರ ಸಮಯಪ್ರಜ್ಞೆ ಹಾಗೂ ಸಹಪ್ರಯಾಣಿಕರ ಮಾನವೀಯ ನೆರವಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading