ಅಂತರ ರಾಜ್ಯ
Uttar Pradesh-ಉತ್ತರ ಪ್ರದೇಶ: ಯುವಜನತೆಗೆ ಉಚಿತವಾಗಿ ನೀಡಲು 25 ಲಕ್ಷ ಸ್ಮಾರ್ಟ್‌ಫೋನ್ ಖರೀದಿ ಟೆಂಡರ್‌ಗೆ ಸರ್ಕಾರದಿಂದ ಅನುಮೋದನೆ
ಉತ್ತರ ಪ್ರದೇಶ ಸರ್ಕಾರದ ಸಂಪುಟ ಸಭೆಯಲ್ಲಿ ಯುವಜನತೆಗೆ ಉಚಿತವಾಗಿ ನೀಡಲು 25 ಲಕ್ಷ ಸ್ಮಾರ್ಟ್‌ಫೋನ್ ಖರೀದಿ ಟೆಂಡರ್‌ಗೆ ಅನುಮೋದನೆ ನೀಡಲು ನಿರ್ಧರಿಸಲಾಗಿದೆ. ಬುಧವಾರ ಪ್ರಯಾಗರಾಜ್‌ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಮಹಾಕುಂಭ ನಗರ: ಉತ್ತರ ಪ್ರದೇಶ ಸರ್ಕಾರದ ಸಂಪುಟ ಸಭೆಯಲ್ಲಿ ಯುವಜನತೆಗೆ ಉಚಿತವಾಗಿ ನೀಡಲು 25 ಲಕ್ಷ ಸ್ಮಾರ್ಟ್‌ಫೋನ್ ಖರೀದಿ ಟೆಂಡರ್‌ಗೆ ಅನುಮೋದನೆ ನೀಡಲು ನಿರ್ಧರಿಸಲಾಗಿದೆ.
ಬುಧವಾರ ಪ್ರಯಾಗರಾಜ್‌ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಅಲ್ಲದೇ ಹಾಥರಸ್, ಕಾಸಗಂಜ್ ಮತ್ತು ಬಾಗಪತ್ ಜಿಲ್ಲೆಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಪಾಲುದಾರಿಕೆಯ ವೈದ್ಯಕೀಯ ಕಾಲೇಜು ಮಂಜೂರಿಗೂ ಸಂಪುಟ ಅಸ್ತು ಎಂದಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಸ್ವಾಮಿ ವಿವೇಕಾನಂದ ಯುವ ಸಶಕ್ತಿಕರಣ ಯೋಜನೆಯಡಿ 25 ಲಕ್ಷ ಯುವಜನತೆಗೆ ಉಚಿತವಾಗಿ ಹಂಚಲು ಉತ್ತರ ಪ್ರದೇಶ ಸರ್ಕಾರ 25 ಲಕ್ಷ ಸ್ಮಾರ್ಟ್ ಫೋನ್ ಖರೀದಿಸುತ್ತಿದೆ. ಈ ಯೋಜನೆ ಮೂಲಕ ತಂತ್ರಜ್ಞಾನ ಕ್ಷೇತ್ರದಲ್ಲಿ ಯುವಜನತೆ ಸಬಲೀಕರಣಗೊಳಿಸುವ ಗುರಿ ಹೊಂದಲಾಗಿದ್ದು, ಮುಂದಿನ ಐದು ವರ್ಷಗಳವರೆಗೆ ಈ ಯೋಜನೆ ಜಾರಿಯಲ್ಲಿರಲಿದೆ’ ಎಂದಿದ್ದಾರೆ.
‘ಈ ಯೋಜನೆಗಾಗಿ 2024-25ರಲ್ಲಿ ₹4 ಸಾವಿರ ಕೋಟಿ ಅನುದಾನವನ್ನು ಉತ್ತರ ಪ್ರದೇಶ ಸರ್ಕಾರ ಮೀಸಲಿಟ್ಟಿದೆ. ತಾಂತ್ರಿಕ, ಆರೋಗ್ಯ, ಕೌಶಲಾಭಿವೃದ್ಧಿ ಹಾಗೂ ಐಟಿಐ ಸೇರಿದಂತೆ ವೃತ್ತಿಪರ ಮತ್ತು ಉನ್ನತ ಶಿಕ್ಷಣಕ್ಕೆ ಸೇರುವ ವಿದ್ಯಾರ್ಥಿಗಳಲ್ಲಿ ತಂತ್ರಜ್ಞಾನ ಆಧಾರಿತ ಕೌಶಲ ಹೆಚ್ಚಳಕ್ಕೆ ಹಾಗೂ ಭವಿಷ್ಯಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ’ ಎಂದು ಸರ್ಕಾರ ಹೇಳಿದೆ.
‘ರಾಜ್ಯದಲ್ಲಿರುವ 62 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಟಾಟಾ ಟೆಕ್ನಾಲಜೀಸ್ ಕಂಪನಿ ಸಹಯೋಗದಲ್ಲಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಯು ₹3,634 ಕೋಟಿ ವೆಚ್ಚದ್ದಾಗಿದೆ. ಈ ಯೋಜನೆಗಾಗಿ ಸರ್ಕಾರವು ಕಂಪನಿಯೊಂದಿಗೆ 11 ವರ್ಷಗಳ ಒಪ್ಪಂದ ಮಾಡಿಕೊಳ್ಳಲಿದೆ. ಇದರಿಂದ ವಾರ್ಷಿಕ 12,500 ಅಭ್ಯರ್ಥಿಗಳನ್ನು ತರಬೇತುಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ಸರ್ಕಾರ ಹೇಳಿದೆ.
ಅಂತರ ರಾಜ್ಯ
Blackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!
ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.
ಮುಂಬೈ: ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.
ಸೆ.24ರಂದು ಮಾನ್ಸಿ ಎಂಬ ಮಹಿಳೆ ತನ್ನ ಮಗುವಿನೊಂದಿಗೆ ಇಬ್ಬರು ಪುರುಷರ ಜತೆ ಬೊರಿವಲಿಯ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಮೈಸೂರು ಮಸಾಲೆ ದೋಸೆ ಆರ್ಡರ್ ಮಾಡಿದ್ದರು. ದೋಸೆ ತಿನ್ನುವ ಸಂದರ್ಭದಲ್ಲಿ ಅದರೊಳಗೆ ಸತ್ತ ಸಣ್ಣ ಇಲಿ ಪತ್ತೆಯಾಗಿದೆ ಎಂದು ಅವರು ಆರೋಪಿಸಿದ್ದರು.
ಮಾನ್ಸಿ ಅವರ ಹೇಳಿಕೆಯಂತೆ, ಅವರ ಸಹೋದರ ದೋಸೆಯ ಕೆಲವು ಭಾಗಗಳನ್ನು ಸೇವಿಸಿದ ಬಳಿಕ ಅದರೊಳಗೆ ಸತ್ತ ಇಲಿ ಇರುವುದನ್ನು ಗಮನಿಸಿದ್ದರು. ಇದರಿಂದ ಆಘಾತಗೊಂಡ ಅವರು ವಾಂತಿ ಮಾಡಿಕೊಂಡಿದ್ದರು. ಬಳಿಕ ಮಾನ್ಸಿ ಬೊರಿವಲಿ ಪೊಲೀಸ್ ಠಾಣೆಗೆ ಕರೆ ಮಾಡಿ ಘಟನೆ ಕುರಿತು ದೂರು ನೀಡಿದ್ದರು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆ ಸೆ.28ರಂದು ಹೋಟೆಲ್‌ನ ಪರವಾನಗಿಯನ್ನು ಅಮಾನತುಗೊಳಿಸಿತ್ತು. ಇದರಿಂದ ಹೋಟೆಲ್ ಮುಚ್ಚುವ ಪರಿಸ್ಥಿತಿ ಎದುರಾಗಿತ್ತು.
₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್
ವಿಡಿಯೋ ವೈರಲ್ ಆದ ಬಳಿಕ ಹೋಟೆಲ್ ಮಾಲೀಕರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿದ್ದವು. ವಿಡಿಯೋವನ್ನು ಮತ್ತಷ್ಟು ವೈರಲ್ ಮಾಡುವುದಾಗಿ ಹಾಗೂ ಸಂಬಂಧಿಕರಿಗೆ ಕಳುಹಿಸುವುದಾಗಿ ಬೆದರಿಸಿ ₹25 ಲಕ್ಷ ನೀಡುವಂತೆ ಒತ್ತಾಯಿಸಲಾಗಿತ್ತು ಎನ್ನಲಾಗಿದೆ.
ನಿರಂತರ ಬೆದರಿಕೆ ಮತ್ತು ಮಾನಸಿಕ ಕಿರುಕುಳದಿಂದಾಗಿ ಹೋಟೆಲ್ ಮಾಲೀಕರು ₹6 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದರು. ಅದರಂತೆ ₹1 ಲಕ್ಷವನ್ನು ಮುಂಗಡವಾಗಿ ನಗದು ರೂಪದಲ್ಲಿ ನೀಡಿದ್ದರು.
ಹಣ ಪಡೆಯುವ ವೇಳೆ ರೆಡ್‌ಹ್ಯಾಂಡ್ ಆಗಿ ಬಂಧನ
ಸೆ.29ರಂದು ಹೋಟೆಲ್ ಮಾಲೀಕರು ಬೊರಿವಲಿ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಪೊಲೀಸರು ಬಲೆ ಬೀಸಿ, ಮತ್ತಷ್ಟು ಹಣ ಪಡೆಯಲು ಮಹಿಳೆಯನ್ನು ಕರೆಸಿಕೊಂಡಿದ್ದರು. ಹಣ ಸ್ವೀಕರಿಸುತ್ತಿದ್ದ ವೇಳೆ ಪೊಲೀಸರು ಆಕೆಯನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ತನಿಖೆ ವೇಳೆ ಬಂಧಿತ ಮಹಿಳೆ ಬೇರೆ ಯಾರೂ ಅಲ್ಲ, ದೋಸೆಯಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂದು ದೂರು ನೀಡಿದ್ದ ಮಾನ್ಸಿ ಅಮಿತ್ ಎಂಬುದು ಬೆಳಕಿಗೆ ಬಂದಿದೆ. ಅವರು ಬೊರಿವಲಿಯ ಗೋರೆಗಾಂವ್ ಪ್ರದೇಶದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದು, ಬ್ಲ್ಯಾಕ್‌ಮೇಲ್‌ನಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿಸಿದ್ದಾರೆ.
ಅಂತರ ರಾಜ್ಯ
Premananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
ಪ್ರೇಮಾನಂದ ಮಹಾರಾಜರ ಆಶ್ರಮದಲ್ಲಿ ಶಿಷ್ಯ ರಸಿಕ್ ದುಲಾರಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಪ್ರಕರಣದ ತನಿಖೆಯನ್ನು ಮಥುರಾ ಪೊಲೀಸರು ಚುರುಕುಗೊಳಿಸಿದ್ದಾರೆ. ಸೆ.25ರಂದು ನಡೆದ ಈ ಘಟನೆ ಆರಂಭದಲ್ಲಿ ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ, ಸಿಸಿಟಿವಿ ದೃಶ್ಯಗಳು ಹಾಗೂ ತನಿಖೆಯಲ್ಲಿ ಸಿಕ್ಕಿರುವ ಕೆಲವು ಮಾಹಿತಿಗಳಿಂದ ಪ್ರಕರಣವು ಅನೂಹ್ಯ ತಿರುವು ಪಡೆದಿದೆ.
ಮಥುರಾ: ಪ್ರೇಮಾನಂದ ಮಹಾರಾಜರ ಆಶ್ರಮದಲ್ಲಿ ಶಿಷ್ಯ ರಸಿಕ್ ದುಲಾರಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಪ್ರಕರಣದ ತನಿಖೆಯನ್ನು ಮಥುರಾ ಪೊಲೀಸರು ಚುರುಕುಗೊಳಿಸಿದ್ದಾರೆ. ಸೆ.25ರಂದು ನಡೆದ ಈ ಘಟನೆ ಆರಂಭದಲ್ಲಿ ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ, ಸಿಸಿಟಿವಿ ದೃಶ್ಯಗಳು ಹಾಗೂ ತನಿಖೆಯಲ್ಲಿ ಸಿಕ್ಕಿರುವ ಕೆಲವು ಮಾಹಿತಿಗಳಿಂದ ಪ್ರಕರಣವು ಅನೂಹ್ಯ ತಿರುವು ಪಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 85 ಮಂದಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ರಸಿಕ್ ಅವರ ಕುಟುಂಬಸ್ಥರು, ಸ್ನೇಹಿತರು ಹಾಗೂ ಹಳೆಯ ಪರಿಚಯಸ್ಥರಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ಆಶ್ರಮಕ್ಕೆ ಸೇರುವ ಮುನ್ನ ಅವರ ಜೀವನ ಹೇಗಿತ್ತು, ಬಳಿಕ ಅವರ ನಡೆ-ನುಡಿಯಲ್ಲಿ ಯಾವುದೇ ಬದಲಾವಣೆಯಾಗಿತ್ತೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಆಶ್ರಮಕ್ಕೆ ಸೇರುವವರ ವೈಯಕ್ತಿಕ ಮೊಬೈಲ್‌ಗಳನ್ನು ಪಡೆದುಕೊಂಡು, ಬದಲಿಗೆ ಆಶ್ರಮದ ವ್ಯವಸ್ಥೆಯಲ್ಲಿರುವ ಮೊಬೈಲ್ ಮತ್ತು ಸಿಮ್ ನೀಡಲಾಗುತ್ತಿತ್ತು ಎನ್ನಲಾಗಿದೆ. ಹೀಗೆ ಮೊಬೈಲ್ ಬದಲಾಯಿಸುವ ಅಗತ್ಯ ಏನಿತ್ತು, ಆ ಮೊಬೈಲ್‌ಗಳ ಬಳಕೆಯ ಮೇಲೆ ಯಾರಾದರೂ ನಿಗಾ ಇಡುತ್ತಿದ್ದರೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಆಶ್ರಮದಲ್ಲಿದ್ದವರು ಕುಟುಂಬದವರು ಹಾಗೂ ಸ್ನೇಹಿತರನ್ನು ಎಷ್ಟು ಬಾರಿ ಸಂಪರ್ಕಿಸುತ್ತಿದ್ದರು ಎಂಬುದನ್ನೂ ತನಿಖೆ ನಡೆಸಲಾಗುತ್ತಿದೆ. ರಸಿಕ್ ಅವರ ಹಳೆಯ ಮೊಬೈಲ್, ಹೊಸ ಸಿಮ್, ಕರೆಗಳ ವಿವರ ಹಾಗೂ ಸಂದೇಶಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಸಾವಿಗೂ ಮುನ್ನ ಏನಾಗಿತ್ತು?
ರಸಿಕ್ ಕೊಠಡಿಯಿಂದ ಹೊರಬಂದಾಗಲೇ ಅವರ ಬಟ್ಟೆಯಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದವು ಎಂದು ಸಿಸಿಟಿವಿ ದೃಶ್ಯಗಳಿಂದ ತಿಳಿದುಬಂದಿದೆ ಎನ್ನಲಾಗಿದೆ. ನಂತರ ಅವರು ನಾಲ್ಕನೇ ಮಹಡಿಯ ಮೇಲ್ಛಾವಣಿಗೆ ತೆರಳಿದ್ದಾರೆ. ಅಲ್ಲಿ ಕೆಲಕಾಲ ಕುಳಿತುಕೊಂಡು, ಬಳಿಕ ಮಲಗಿದ್ದರು. ನಂತರ ಎದ್ದು ನಿಂತ ಕೆಲವೇ ಕ್ಷಣಗಳಲ್ಲಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ.
ರಸಿಕ್ ಅವರ ದೇಹದಲ್ಲಿ, ವಿಶೇಷವಾಗಿ ತೊಡೆಸಂಧಿ ಭಾಗದಲ್ಲಿ ಗಂಭೀರ ಗಾಯವಾಗಿರುವುದು ತನಿಖೆಯಲ್ಲಿ ಗಮನಕ್ಕೆ ಬಂದಿದೆ. ಈ ಗಾಯ ಹೇಗೆ ಉಂಟಾಯಿತು ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಯಾವುದೇ ಮಾನಸಿಕ ಒತ್ತಡ ಅಥವಾ ಖಿನ್ನತೆಯಿಂದ ಬಳಲುತ್ತಿದ್ದರೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಈ ಕುರಿತು ಅವರು ಕುಟುಂಬದವರು ಅಥವಾ ಸ್ನೇಹಿತರ ಬಳಿ ಏನಾದರೂ ಹೇಳಿಕೊಂಡಿದ್ದರೇ ಎಂಬುದನ್ನು ಪೊಲೀಸರು ತಿಳಿದುಕೊಳ್ಳುತ್ತಿದ್ದಾರೆ.
ಇದಲ್ಲದೆ, ಸಾವಿಗೂ ಮುನ್ನ ಅವರು ಮದ್ಯ, ಮಾದಕ ವಸ್ತು ಅಥವಾ ಇತರ ಯಾವುದೇ ಮನಸ್ಸಿನ ಮೇಲೆ ಪರಿಣಾಮ ಬೀರುವ ವಸ್ತು ಸೇವಿಸಿದ್ದರೇ ಎಂಬುದನ್ನು ತಿಳಿಯಲು ಅವರ ರಕ್ತದ ಮಾದರಿಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಸಿಸಿಟಿವಿ ದೃಶ್ಯಗಳು, ಮೊಬೈಲ್ ದಾಖಲೆ, ವೈದ್ಯಕೀಯ ವರದಿ ಹಾಗೂ ವಿಚಾರಣೆ ವೇಳೆ ಸಿಕ್ಕ ಮಾಹಿತಿಗಳನ್ನು ಆಧರಿಸಿ ರಸಿಕ್ ಅವರ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪೊಲೀಸರು ಪತ್ತೆಹಚ್ಚಲು ಮುಂದಾಗಿದ್ದಾರೆ.
ಅಂತರ ರಾಜ್ಯ
Jnanesh kumar-ವಿಪಕ್ಷಗಳ ರಾಜೀನಾಮೆ ಒತ್ತಾಯದ ನಡುವೆ ಜ್ಞಾನೇಶ್ ಕುಮಾರ್ ಛತ್ತೀಸ್‌ಗಢ ಭೇಟಿ ಮುಂದೂಡಿಕೆ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.
ಅಕ್ಟೋಬರ್ 7 ಮತ್ತು 8ರಂದು ಜ್ಞಾನೇಶ್ ಕುಮಾರ್ ಅವರು ಛತ್ತೀಸ್‌ಗಢಕ್ಕೆ ಭೇಟಿ ನೀಡಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಈ ಭೇಟಿಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಂಡನೆ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎಂಬ ವದಂತಿಗಳು ಹರಿದಾಡುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ.
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳ ಆಕ್ರೋಶ
ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹಾಗೂ ಅರ್ಜಿ ನಮೂನೆ-6ರಲ್ಲಿನ ಮಾರ್ಪಾಡು ಸೇರಿದಂತೆ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗ ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿವೆ.
ದೇವಾಲಯ, ಜಲಪಾತಗಳಿಗೆ ಭೇಟಿ ನೀಡಬೇಕಿತ್ತು
ಎರಡು ದಿನಗಳ ಛತ್ತೀಸ್‌ಗಢ ಪ್ರವಾಸದ ವೇಳೆ ಜ್ಞಾನೇಶ್ ಕುಮಾರ್ ಅವರು ದಾಂತೇವಾಡದಲ್ಲಿರುವ ದಾಂತೇಶ್ವರಿ ದೇವಾಲಯ, ಬಸ್ತಾರ್‌ನ ಚಿತ್ರಕೋಟೆ ಜಲಪಾತ ಹಾಗೂ ಕಬೀರ್ ಧಾಮ್ ಜಿಲ್ಲೆಯ ಭೋರಂಡಿಯೊ ದೇವಾಲಯಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು.
ಈ ಭೇಟಿಯ ಹಿನ್ನೆಲೆಯಲ್ಲಿ ಛತ್ತೀಸ್‌ಗಢ ಸರ್ಕಾರವು ಜ್ಞಾನೇಶ್ ಕುಮಾರ್ ಅವರಿಗೆ ರಾಜ್ಯ ಅತಿಥಿಯ ಗೌರವ ನೀಡಲು ನಿರ್ಧರಿಸಿತ್ತು. ಅವರನ್ನು ಸ್ವಾಗತಿಸುವುದು ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳಲು ರಾಯ್‌ಪುರ ಜಿಲ್ಲಾಡಳಿತ, ಪೊಲೀಸರು ಮತ್ತು ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣ ಪ್ರಾಧಿಕಾರಗಳು ಸಿದ್ಧತೆ ಆರಂಭಿಸಿದ್ದವು. ಇದೀಗ ಭೇಟಿಯನ್ನು ಮುಂದೂಡಲಾಗಿದೆ.
-
ಮಂಗಳೂರು14 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized12 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ19 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ19 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು21 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ13 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!
-
ಉದ್ಯೋಗ15 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ರಾಜಕೀಯ20 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ


















