ಮಂಗಳೂರು
Kotekaru-ಕೋಟೆಕಾರು ಬ್ಯಾಂಕ್ ದರೋಡೆ : ಆರೋಪಿಗಳನ್ನು ಮಂಗಳೂರಿನ ನ್ಯಾಯಾಲಯಕ್ಕೆ ಕರೆತಂದ ಪೊಲೀಸರು
ಕೋಟೆಕಾರು ದರೋಡೆ ಪ್ರಕರಣದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ಆರೋಪಿಗಳಾದ ಮುರುಗನ್ ದೇವರ್ ಹಾಗೂ ರಾಜೇಂದ್ರನ್ ನನ್ನು ಜಿಲ್ಲಾ 4ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಉಳ್ಳಾಲ ಪೊಲೀಸರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಕೇಳಲಿದ್ದಾರೆ.
ಮಂಗಳೂರು: ಕೋಟೆಕಾರು ದರೋಡೆ ಪ್ರಕರಣದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದಾರೆ.
ಆರೋಪಿಗಳಾದ ಮುರುಗನ್ ದೇವರ್ ಹಾಗೂ ರಾಜೇಂದ್ರನ್ ನನ್ನು ಜಿಲ್ಲಾ 4ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಉಳ್ಳಾಲ ಪೊಲೀಸರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಕೇಳಲಿದ್ದಾರೆ.
ಸಿಸಿಬಿ ಪೊಲೀಸರ ತಂಡದೊಂದಿಗೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತರಲಾಯಿತು.
ಅಪರಾಧ
Arrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.
ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.
ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.
ಉತ್ತರ ಪ್ರದೇಶ ಮೂಲದ ಮನೀಶ್ ಶರ್ಮಾ (25) ಎಂಬ ಯುವಕನನ್ನು ಆತನ ಸ್ನೇಹಿತ ಶ್ರವಣ್ ಕೊಲೆ ಮಾಡಿ ಬಳಿಕ ತನ್ನ ಊರಾದ ಉತ್ತರ ಪ್ರದೇಶದ ಖುಷಿನಗರಕ್ಕೆ ಪರಾರಿಯಾಗಿದ್ದ ಎನ್ನಲಾಗಿದೆ. ಪ್ರಕರಣವನ್ನು ವ್ಯವಸ್ಥಿತ ಕೊಲೆ ಎಂದು ಶಂಕಿಸಿ ಮೃತನ ಸಹೋದರ ಸೋನು ಶರ್ಮಾ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಬಜಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸಾಲದ ಇಎಂಐ ಕಟ್ಟಲು ಕೊಲೆ?
ಆರೋಪಿಗೆ ಸಾಲದ ಇಎಂಐ ಪಾವತಿಸಲು ಹಣದ ಅವಶ್ಯಕತೆ ಇದ್ದು, ಸ್ನೇಹಿತ ಮನೀಶ್ ಬಳಿ ಹಣವಿರುವುದನ್ನು ತಿಳಿದುಕೊಂಡಿದ್ದ ಎನ್ನಲಾಗಿದೆ. ಅಲ್ಲದೆ, ಮನೀಶ್ನ ಮೊಬೈಲ್ ಪಾಸ್ವರ್ಡ್ಗಳನ್ನು ಮೊದಲೇ ತಿಳಿದುಕೊಂಡಿದ್ದ ಶ್ರವಣ್, ಹಣ ಪಡೆಯುವ ಉದ್ದೇಶದಿಂದ ಆತನನ್ನು ಉಪಾಯವಾಗಿ ಊಟಕ್ಕೆಂದು ಕರೆದುಕೊಂಡು ಹೋಗಿದ್ದಾನೆ. ಬಳಿಕ ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿ, ನಿರ್ಜನ ಪ್ರದೇಶದಲ್ಲಿ ಮೃತದೇಹವನ್ನು ಬಿಸಾಡಿದ್ದಾಗಿ ಪೊಲೀಸ್ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಖಾತೆಯಿಂದ ₹63,720 ವರ್ಗಾವಣೆ
ಕೊಲೆ ಬಳಿಕ ಮನೀಶ್ನ ಬ್ಯಾಂಕ್ ಖಾತೆಯಲ್ಲಿದ್ದ ₹63,720 ಹಣವನ್ನು ರಾಜನ್ ಎಂಬ ವ್ಯಕ್ತಿಯ ಖಾತೆಗೆ ವರ್ಗಾಯಿಸಿ, ಬಳಿಕ ರಾಜನ್ ಮೂಲಕ ತನ್ನ ಖಾತೆಗೆ ಹಣ ಪಡೆದುಕೊಂಡಿದ್ದ ಎನ್ನಲಾಗಿದೆ. ಈ ಹಣ ವರ್ಗಾವಣೆಯ ಸುಳಿವು ಪ್ರಕರಣದ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಿದೆ.
ಸಿಸಿಟಿವಿ ದೃಶ್ಯಗಳಿಂದ ಸುಳಿವು
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅ.27ರಂದು ಮನೀಶ್ ಮತ್ತು ಶ್ರವಣ್ ಒಟ್ಟಿಗೆ ತೆರಳಿರುವುದು ಹಾಗೂ ಬಳಿಕ ಶ್ರವಣ್ ಒಬ್ಬನೇ ವಾಪಸ್ ಬಂದಿರುವುದು ಕಂಡುಬಂದಿತ್ತು. ಈ ಸುಳಿವುಗಳ ಆಧಾರದ ಮೇಲೆ ತನಿಖೆ ಮುಂದುವರಿದಿತ್ತು.
ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಿದ ಪೊಲೀಸರಿಗೆ ಅಸ್ಥಿಪಂಜರದ ತುಂಡುಗಳು ಹಾಗೂ ತಲೆಬುರುಡೆಯ ಅವಶೇಷಗಳು ಪತ್ತೆಯಾಗಿದ್ದವು. ಸ್ಥಳದಲ್ಲಿ ದೊರೆತ ಶರ್ಟ್ ಮತ್ತು ಪ್ಯಾಂಟ್ಗಳನ್ನು ಮೃತನ ಸಹೋದರ ಸೋನು ಶರ್ಮಾ ಗುರುತಿಸಿದ್ದರು.
ಆರೋಪಿಯನ್ನು ಉತ್ತರ ಪ್ರದೇಶದಿಂದ ಬಂಧಿಸಿ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
-
ಸ್ಥಳೀಯ7 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್6 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಶಿಕ್ಷಣ8 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಬಿಗ್ ನ್ಯೂಸ್2 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಶಿಕ್ಷಣ8 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
-
ಕಾರ್ಯಕ್ರಮಗಳು1 hour agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ2 minutes agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ















