ಕಾರ್ಯಕ್ರಮಗಳು
Shri Ram Leelotsavam-ಗಣರಾಜ್ಯೋತ್ಸವದಂದು ಕುಂಬ್ರದಲ್ಲಿ ವಿಜೃಂಭಿಸಲಿದೆ ʻಶ್ರೀರಾಮ ಲೀಲೋತ್ಸವʼ – ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ ವಾರ್ಷಿಕೋತ್ಸವದ ಪ್ರಯುಕ್ತ ಅದ್ದೂರಿ ಕಾರ್ಯಕ್ರಮ
ಸ್ಪಂದನಾ ಸೇವಾ ಬಳಗ ಕುಂಬ ಆಯೋಜಿಸಿರುವ ಪುತ್ತೂರಿನ ಇತಿಹಾಸದಲ್ಲೇ ವಿನೂತನ ಧಾರ್ಮಿಕ ಕಾರ್ಯಕ್ರಮ ‘ಶ್ರೀ ರಾಮ ಲೀಲೋತ್ಸವʼ ಜ.26 ರಂದು ಕುಂಬ್ರದ ಅಲ್ಲಂಗಾರ್ ಗದ್ದೆಯಲ್ಲಿ ವೈಭವದಿಂದ ನಡೆಯಲಿರುವುದು.
ಪುತ್ತೂರು: ಸ್ಪಂದನಾ ಸೇವಾ ಬಳಗ ಕುಂಬ ಆಯೋಜಿಸಿರುವ ಪುತ್ತೂರಿನ ಇತಿಹಾಸದಲ್ಲೇ ವಿನೂತನ ಧಾರ್ಮಿಕ ಕಾರ್ಯಕ್ರಮ ‘ಶ್ರೀ ರಾಮ ಲೀಲೋತ್ಸವʼ ಜ.26 ರಂದು ಕುಂಬ್ರದ ಅಲ್ಲಂಗಾರ್ ಗದ್ದೆಯಲ್ಲಿ ವೈಭವದಿಂದ ನಡೆಯಲಿರುವುದು.

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ ವಾರ್ಷಿಕೋತ್ಸವದ ಪ್ರಯುಕ್ತ ಮನೆ ಮನೆಗಳಲ್ಲಿ ರಾಮ ರಾಜ್ಯ ನಿರ್ಮಾಣದ ಕನಸು ನನಸಾಗಿಸುವ ಸಂಕಲ್ಪದೊಂದಿಗೆ ಸನಾತನ ಹಿಂದೂ ಧರ್ಮದ ಆಚಾರ ವಿಚಾರಗಳು ಮತ್ತು ನಂಬಿಕೆಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ‘ನಂಬಿಕೆಗಳು ಮತ್ತು ಅದರ ಅರ್ಥ ವಿವರಣೆ’ಯ ಪುಸ್ತಕ ವಿತರಣೆ ಮತ್ತು ಮೌಲ್ಯಮಾಪನ ಉದ್ದೇಶ ಹೊಂದಿರುವ ‘ಸುಜ್ಞಾನ ದೀಪಿಕೆ’ ಕಾರ್ಯಕ್ರಮ, ಭಜನಾ ತಂಡಗಳಿಂದ ಕುಣಿತ ಭಜನೆಯ ಮೂಲಕ ಶ್ರೀರಾಮ ಸಂಕೀರ್ತನೆಯ ಭಕ್ತಿ ಲಾಸ್ಯ ಅನಾವರಣ ಧರ್ಮ ಜಾಗೃತಿಗಾಗಿ ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರ ಸಮ್ಮಿಲನ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅಮೂಲ್ಯ ಸೇವೆಗೈದವರಿಗೆ ಗೌರವಾರ್ಪಣೆ ಇತ್ಯಾದಿ ಕಾರ್ಯಕ್ರಮಗಳು ಶ್ರೀರಾಮ ಲೀಲೋತ್ಸವದಲ್ಲಿ ಮೇಳೈಸಲಿದೆ.

ಕಾರ್ಯಕ್ರಮಗಳ ಮಾಹಿತಿ:
ಸಂಜೆ 4 ಕ್ಕೆ ಕುಂಬ್ರ ಶ್ರೀ ರಾಮ ಭಜನಾ ಮಂದಿರದಿಂದ ಅಲ್ಲಂಗಾರ್ ಗದ್ದೆ ತನಕ ವೈಭವದ ಶೋಭಾಯಾತ್ರೆ ನಡೆಯಲಿದೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಅಲ್ಲಂಗಾರ್ 6 ಗದ್ದೆಯಲ್ಲಿ ದೀಪ ಬೆಳಗಿಸುವ ಮೂಲಕ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರು ಕುಣಿತ ಭಜನೆಗೆ ಚಾಲನೆ ನೀಡಲಿದ್ದಾರೆ. 6 ಗಂಟೆಗೆ ಕುಂಬ್ರ ಮನೆ ವಿ.ತಾರವತಿ ರೈ ವೇದಿಕೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ.

ಸ್ಪಂದನಾ ಸೇವಾ ಬಳಗದ ಅಧ್ಯಕ್ಷ ರತನ್ ರೈ ಕುಂಬ್ರರವರ ಸಭಾಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ಶ್ರೀರಾಮ ಮಾಣಿಲದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ವಿಜಯ ಸಾಮ್ರಾಟ್ ಪುತ್ತೂರು ಇದರ ಸ್ಥಾಪಕ ಅಧ್ಯಕ್ಷ ಸಹಜ್ ರೈ ಬಳಜ್ಜರವರು ಶ್ರೀರಾಮನಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.
ರಾಷ್ಟ್ರೀಯ ಕೃಷಿ ಪ್ರಶಸ್ತಿ, ಚಿನ್ನದ ಪದಕ ಪುರಸ್ಕೃತರಾದ ಕಡಮಜಲು ಸುಭಾಷ್ ರೈಯವರು ಸುಜ್ಞಾನ ದೀಪಿಕೆ ಪುಸ್ತಕ ಅನಾವರಣ ಮಾಡಲಿದ್ದಾರೆ. ಬೆಂಗಳೂರು ಉದ್ಯಮಿ ಕಿಶೋರ್ ಶೆಟ್ಟಿ ಆರಿಯಡ್ಕರವರು ಸುಜ್ಞಾನ ದೀಪಿಕೆ ಪುಸ್ತಕ ಚಾಲನೆ ನೀಡಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಗೊಟ್ಟುರವರು ಗೌರವಾರ್ಪಣೆ ಮಾಡಲಿದ್ದಾರೆ. ವಿಧಾನ ಪರಿಷತ್ತು ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿಯವರು ಸನ್ಮಾನ ಕಾರ್ಯಕ್ರಮ ನೆರವೇರಿಸಲಿದ್ದಾರೆ.

ಸನ್ಮಾನ ಕಾರ್ಯಕ್ರಮ
ವೈದ್ಯಕೀಯ ಕ್ಷೇತ್ರ ಮತ್ತು ಸಮಾಜ ಸೇವೆಯ ಸಾಧನೆಗಾಗಿ ಪುತ್ತೂರು ಶ್ರೀಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಎಂ.ಕೆ ಪ್ರಸಾದ್ ಮತ್ತು ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ಪುತ್ತೂರು ಶ್ರೀ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಗೌರವ ಮಾರ್ಗದರ್ಶಕರಾದ ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಕರಾವಳಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪ್ರಗತಿಪರ ಕೃಷಿಕ ಯತೀಂದ್ರ ಕೊಚ್ಚಿರವರುಗಳು ಕುಣಿತ ಭಜನಾ ತರಬೇತುದಾರರಿಗೆ ಗೌರವಾರ್ಪಣೆ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪುತ್ತೂರು ಶ್ರೀ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದ ಗೌರವಾಧ್ಯಕ್ಷ ಗುಂಡ್ಯಡ್ಕ ವಾಸು ಪೂಜಾರಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಕುಂಬ್ರ ದುರ್ಗಾಪ್ರಸಾದ್ ರೈ, ಹಿಂದೂ ಮುಖಂಡ ಮುರಳೀಕೃಷ್ಣ ಹಸಂತಡ್ಕ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿಟ್ರಸ್ಟ್ ಪುತ್ತೂರು ಇವರ ಯೋಜನಾಧಿಕಾರಿ ಶಶಿಧರ ಎಂ, ಪರ್ಪುಂಜ ರಾಮಜಾಲು ಶ್ರೀ ಬ್ರಹ್ಮಬೈದೆರ್ಕಳ ಗರಡಿಯ ಆಡಳಿತ ಮೊತ್ತೇಸರ ಸಂಜೀವ ಪೂಜಾರಿ ಕೂರೇಲು, ಪರಿಗೇರಿ ಉದ್ಯಮಿ ಶ್ರೀನಿವಾಸ ಗೌಡ ಕನ್ನಯ, ಬೈಟ್ ವೇ ಇಂಡಿಯಾದ ಆಡಳಿತ ನಿರ್ದೇಶಕ ಡಾ. ಹರ್ಷ ಕುಮಾರ್ ರೈ ಮಾಡಾವು, ಉದ್ಯಮಿ ಎಮ್.ಡಿ ವೆಂಕಟೇಶ್ ಹಿಂದಾರು, ಪ್ರಗತಿಪರ ಕೃಷಿಕ ಮನಮೋಹನ್ ರೈ ಕುಂಬ್ರ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉರುಮಾರು, ಪುತ್ತೂರು ಅಕ್ಷಯ ಕಾಲೇಜಿನ ಸಂಚಾಲಕ, ಉದ್ಯಮಿ ಜಯಂತ ನಡುಬೈಲ್, ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣರೈ, ಬಿಜೆಪಿ ಗ್ರಾಮಾಂತರ ಮಂಡಲ ಮಾಜಿ ಅಧ್ಯಕ್ಷ ರಾಧಾಕೃಷ್ಣ ಆಳ್ವಸಾಜ, ಉದ್ಯಮಿ ಹರಿಹರ ಕೋಡಿಬೈಲ್, ಕುಂಬ್ರ ಪ್ರಾ.ಕೃ.ಪ.ಸಹಕಾರ ಸಂಘದ ನಿರ್ದೇಶಕ ವಿನೋದ್ ಶೆಟ್ಟಿ ಅರಿಯಡ್ಕ, ಉಜಿರೆ ಎಸ್‌ಡಿಎಮ್ ಉಪನ್ಯಾಸಕಿ ಹರಿಣಿ ಪುತ್ತೂರಾಯ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್.ಗೌರಿ, ನಿವೃತ್ತ ಸೈನಿಕ ಕಣ್ಣೂರುಗುತ್ತು ಶ್ರೀನಿವಾಸಕ್ಕೆ ಕುಂಬ್ರ, ಆಲಡ್ಕ ಶ್ರೀ ಸದಾಶಿವ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷತೀನಪ್ಪ ರೈ ಕೊಡಂತೀರಿ, ಬೆಂಗಳೂರು ಉದ್ಯಮಿ ಗುರುಪ್ರಸಾದ್ ರೈ ಮೊರಂಗಲ್ಲು, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಭಾಸ್ಕರ ಬಲ್ಯಾಯ ಮದ್ವ ಭಾಗವಹಿಸಲಿದ್ದಾರೆ.
ಅಲ್ಲದೇ ಕುಂಬ್ರ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಮೋನಪ್ಪ ಪೂಜಾರಿ ಬಡಕ್ಕೋಡಿ, ಪ್ರವೀಣ್ ರೈ ಪನೆಕ್ಕಳ ಮದ್ಯಂಗಳ, ಈಶ್ವರ ನಾಯ್ಕ ಮುಂಡೋವುಮೂಲೆ, ಸತೀಶ್ ಹೆಚ್.ಕೆ ಸ್ಟಾಮಿನಗರ, ಜೈಶಂಕರ ರೈ ಬೆದ್ರು ಮಾರು ಸನ್ಯಾಸಿಗುಡ್ಡೆ, ಸುಂದರ ಗಾಂಧಿನಗರ ತಿಂಗಳಾಡಿ,ರಮೇಶ್ ಆಳ್ವ ಕಲ್ಲಡ್ಕ ಸದಾಶಿವನಗರ, ಜಯರಾಮ ರೈ ಮಿತ್ರಂಪಾಡಿ ದೇವಗಿರಿ ತಿಂಗಳಾಡಿ, ರವಿಕುಮಾರ್ ಕೌಡಿಚ್ಚಾರು, ಅರುಣ್ ಆಳ್ವ ಬೋಳೋಡಿ ಆಲಡ್ಕ, ರಾಮದಾಸ್ ರೈ ಮದ್ವ ಕೌಡಿಚ್ಚಾರು, ವಾಸು ಮಣಿಯಾಣಿ ದರ್ಬೆತ್ತಡ್ಕ, ಅಜಿತ್ ಹೊಸಮನೆ ಅಜ್ಜಿಕಲ್ಲು ವಿವಿಧ ಭಜನಾ ಮಂದಿರದ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀರಾಮ ಲೀಲೋತ್ಸವ ಸಮಿತಿ ಸಂಚಾಲಕ ಸುಧಾಕರ್ ರೈ ಕುಂಬ್ರ, ಸ್ಪಂದನಾ ಸೇವಾ ಬಳಗದ ಅಧ್ಯಕ್ಷ ರತನ್ ರೈ ಕುಂಬ್ರ, ಗೌರವಾಧ್ಯಕ್ಷರುಗಳಾದ ಮೋಹನ್ ದಾಸ ರೈ ಕುಂಬ್ರ, ವೆಂಕಪ್ಪ ಗೌಡ ಬೊಳ್ಳಾಡಿ, ದುಗ್ಗಿತ್ ರೈ ಓಲೆಮುಂಡೋವು, ಪ್ರಧಾನ ಕಾರ್ಯದರ್ಶಿ ಹರೀಶ್ ರೈ ಚಾರತ್ತಾರು, ಕಾರ್ಯಾಧ್ಯಕ್ಷ ಅಶೋಕ್ ತ್ಯಾಗರಾಜನಗರ, ಉಪಾಧ್ಯಕ್ಷರುಗಳಾದ ರಾಜೇಶ್ ರೈ ಪರ್ಪುಂಜ, ಸಂತೋಷ್ ಮಣಿಯಾಣಿ ಕುತ್ಯಾಡಿ, ಉಷಾ ನಾರಾಯಣ್, ಕೋಶಾಧಿಕಾರಿ ಜನಾರ್ದನ ರೈ ಪಡ್ಡಂಬೈಲು, ಕಾರ್ಯದರ್ಶಿಗಳಾದ ಚಂದ್ರ ಇದ್ದಾಡಿ, ಹರೀಶ್ ಬಿಜತ್ರೆ, ಪುಷ್ಟ ಬೋಳೋಡಿ, ಗೌರವ ಸಲಹೆಗಾರರಾದ ಪ್ರಕಾಶ್ಚಂದ್ರ ರೈ ಕೈಕಾರ, ಸುಧಾಕರ ರೈ ಕುಂಬ್ರ, ಹರಿಹರ ಕೋಡಿಬೈಲು, ತಿಲಕ್ ರೈ ಕುತ್ಯಾಡಿ, ನಿತೀಶ್ ಕುಮಾರ್ ಶಾಂತಿವನ, ತ್ರಿವೇಣಿ ಪಲ್ಲತ್ತಾರು, ಸುಂದರ ರೈ ಮಂದಾರ, ಸಂಚಾಲಕರುಗಳಾದ ಶರತ್ ಗುತ್ತು, ಸುಕುಮಾರ ಮದ್ಯಂಗಳ, ಮಹೇಶ್ ಕೇರಿ, ಶ್ರೀ ರಾಮ ಲೀಲೋತ್ಸವ ಸಮಿತಿಯ ಸಹಸಂಚಾಲಕರಾದ ಉಷಾ ನಾರಾಯಣ್, ಕೋಶಾಧಿಕಾರಿ ಚಂದ್ರ ಇದ್ದಾಡಿ, ಆರ್ಥಿಕ ಸಮಿತಿ ಸಂಚಾಲಕ ಪ್ರಕಾಶ್ಚಂದ್ರ ರೈ ಕೈಕಾರ, ಕುಣಿತ ಭಜನೆ ನಿರ್ವಹಣ ಸಮಿತಿ ಸಂಚಾಲಕ ಆರುಣ್ ರೈ ಬಿಜಳ, ಮುದ್ರಣ ಸಮಿತಿ ಸಂಚಾಲಕ ಸಂತೋಷ್ ರೈ ಕೈತಾರ, ವೇದಿಕೆ ಮತ್ತು ವಿದ್ಯುತ್ ಅಲಂಕಾರ ಸಮಿತಿ ಸಂಚಾಲಕ ಚಂದ್ರಕಾಂತ್ ಶಾಂತಿವನ, ಆಲಂಕಾರ ಸಮಿತಿ ಸಂಚಾಲಕ ಪದ್ಮನಾಭಗೌಡ ಮುಂಡಾಲ, ಆಹಾರ ಸಮಿತಿ ಸಂಚಾಲಕ ಉದಯ ಕುಂಬ್ರ, ಶೋಭಾಯಾತ್ರೆ ನಿರ್ವಹಣಾ ಸಮಿತಿ ಸಂಚಾಲಕ ಎಸ್.ಮಾಧವ ರೈ ಕುಂಬ್ರ, ಮಹಿಳಾ ಸಮಿತಿ ಸಂಚಾಲಕರಾದ ತ್ರಿವೇಣಿ ಪಲ್ಲತ್ತಾರುರವರುಗಳು ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
-
ಮಂಗಳೂರು8 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ11 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ13 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್13 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ8 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಅಪರಾಧ13 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಸಿನೆಮಾ12 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್11 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ


















