ಪುತ್ತೂರು
ಉಪ್ಪಿನಂಗಡಿ: ಕಮರಿಗೆ ಬಿದ್ದ ಗ್ಯಾಸ್ ತುಂಬಿದ್ದ ಟ್ಯಾಂಕರ್ – ರಸ್ತೆ ಅಂಚಿನಲ್ಲಿ ಚಾಲಕ ನಿಲ್ಲಿಸಿ ಹೋಗಿದ್ದಾಗ ಅವಘಡ

ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿವಮೊಗ್ಗದ ಕಡೆಗೆ ಚಲಿಸುತ್ತಿದ್ದ ವೇಳೆ ಅವಘಡ ನಡದಿದೆ. ಟ್ಯಾಂಕರ್ ಬೊಳ್ಳಾರು ತಲುಪುತ್ತಲೇ ಅದರ ಬ್ರೇಕಿಂಗ್ ಸಿಸ್ಟಮ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.
ಉಪ್ಪಿನಂಗಡಿ : ತಾಂತ್ರಿಕ ದೋಷದ ಹಿನ್ನಲೆಯಲ್ಲಿ ರಸ್ತೆ ಬದಿಯಲ್ಲಿ ಚಾಲಕ ನಿಲ್ಲಿಸಿ ಹೋದ ಗ್ಯಾಸ್ ಟ್ಯಾಂಕರ್ ಇದ್ದಕ್ಕಿದಂತೆ ಸರಿದು ಕಮರಿಗೆ ಬಿದ್ದ ಘಟನೆ ಉಪ್ಪಿನಂಗಡಿ ಬಳಿಯ 34 ನೆಕ್ಕಿಲಾಡಿ ಸಮೀಪದ ಬೊಳ್ಳಾರು ಎಂಬಲ್ಲಿ ನ 25ರಂದು ನಡೆದಿದೆ. ದುರ್ಘಟನೆ ಸಂಭವಿಸಿದ ಸಂದರ್ಭ ಟ್ಯಾಂಕರ್ ನಲ್ಲಿ ಯಾರು ಇಲ್ಲದಿದ್ದುರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿವಮೊಗ್ಗದ ಕಡೆಗೆ ಚಲಿಸುತ್ತಿದ್ದ ವೇಳೆ ಅವಘಡ ನಡದಿದೆ. ಟ್ಯಾಂಕರ್ ಬೊಳ್ಳಾರು ತಲುಪುತ್ತಲೇ ಅದರ ಬ್ರೇಕಿಂಗ್ ಸಿಸ್ಟಮ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.
ಹೀಗಾಗಿ ಚಾಲಕ ಕನಕರಾಜ್ ಅವರು ಇಳಿಜಾರಿನಲ್ಲಿ ಹ್ಯಾಂಡ್ ಬ್ರೇಕ್ ಎಳೆದು, ವಾಹನದಿಂದ ಇಳಿದು ಮೆಕ್ಯಾನಿಕ್ ಅನ್ನು ಹುಡುಕಿಕೊಂಡು ಗ್ಯಾರೇಜ್ ನತ್ತ ಹೋಗಿದ್ದಾರೆ. ಇದೆ ವೇಳೆ ಟ್ಯಾಂಕರ್ ಸರಿದು ಹೆದ್ದಾರಿ ಪಕ್ಕದ ಕಮರಿಗೆ ಬಿದ್ದಿದೆ. ಈ ವೇಳೆ ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ. ಟ್ಯಾಂಕರ್ ನಲ್ಲಿ ಗ್ಯಾಸ್ ತುಂಬಿತ್ತಾದರೂ, ಸೋರಿಕೆಯಾಗದ ಹಿನ್ನಲೆಯಲ್ಲಿ ಯಾವುದೇ ಆಪಾಯ ಸಂಭವಿಸಿಲ್ಲ .
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.
ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.
ಸದಸ್ಯರಾಗಿ: ಶ್ರೀಮತಿ ತ್ರಿವೇಣಿ ಪೆರ್ವೋಡಿ , ಶಮಂತ ಕೃಷ್ಣ ಕೆ ಉರಿಮಜಲು, ಕೇಶವ ಅಮೈ , ರವಿರಾಜ ಶೆಟ್ಟಿ, ಬಿ ರೋಹಿತ್ ಕುಮಾರ್, ಶ್ರೀಮತಿ ಮೋಹಿನಿ ದಿವಾಕರ ಜವಾಬ್ದಾರಿ ವಹಿಸಿಕೊಂಡರು.
ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೃಷ್ಣಕುಮಾರ್ ಶೆಟ್ಟಿ, ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ., ಜತೆ ಕಾರ್ಯದರ್ಶಿ ಭರತ್ ಪೈ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಸಾದ್, ಹಿಂದಿನ ಆಡಳಿತ ಮಂಡಳಿಯ ಸಂಚಾಲಕರು, ಸದಸ್ಯರು, ಪ್ರಾಂಶುಪಾಲರು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್24 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್16 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ22 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
Uncategorized23 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ರಾಜಕೀಯ22 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್23 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ಆರೋಗ್ಯ18 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಸುಳ್ಯ22 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

















