Connect with us

ನಿಧನ ವಾರ್ತೆ

Harassment-ಮೆಸೇಜ್ ವಿಚಾರವಾಗಿ ಕಿರುಕುಳ – ಜೀವನ ಮುಗಿಸಿದ ಕವನ

Published

on

Ad Widget

Ad Widget

Ad Widget

Ad Widget

ಚನ್ನಮಲ್ಲಿಪುರ ಗ್ರಾಮದಲ್ಲಿ ಯುವತಿಯೋರ್ವಳು ಮೊಬೈಲ್‌ಗೆ ಬರುತ್ತಿದ್ದ ಮೆಸೇಜ್ ವಿಷಯದಲ್ಲಿ ಪಕ್ಕದ ಮನೆಯವರ ಮಾನಸಿಕ ಕಿರುಕುಳದಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು, ಮಾತ್ರೆ ಸೇವಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ತಾಲೂಕಿನ ಚನ್ನಮಲ್ಲಿಪುರ ಗ್ರಾಮದ ಕವನಾ (24) ಮೃತ ಯುವತಿ.

Ad Widget

Ad Widget

Ad Widget

Ad Widget

ಗುಂಡ್ಲುಪೇಟೆ (ಚಾಮರಾಜನಗರ): ಇಲ್ಲಿನ ಚನ್ನಮಲ್ಲಿಪುರ ಗ್ರಾಮದಲ್ಲಿ ಯುವತಿಯೋರ್ವಳು ಮೊಬೈಲ್‌ಗೆ ಬರುತ್ತಿದ್ದ ಮೆಸೇಜ್ ವಿಷಯದಲ್ಲಿ ಪಕ್ಕದ ಮನೆಯವರ ಮಾನಸಿಕ ಕಿರುಕುಳದಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು, ಮಾತ್ರೆ ಸೇವಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.

Ad Widget

Ad Widget alt="Ad Widget"/>

Ad Widget

ತಾಲೂಕಿನ ಚನ್ನಮಲ್ಲಿಪುರ ಗ್ರಾಮದ ಕವನಾ (24) ಮೃತ ಯುವತಿ.

Ad Widget

Ad Widget <> Ad Widget

ಅಕ್ಕ ಕಾವ್ಯಾಳಿಗೆ ದೂರವಾಣಿ ಕರೆ ಮಾಡಿ ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕಾವ್ಯ ತಿಳಿಸಿದ್ದಾಳೆ. ಅಕ್ಕ ಬೇಡ ಎಂದು ಹೇಳಿದರೂ ಕೇಳದೆ ಆತ್ಮಹತ್ಯೆಗೆ ಯತ್ನಿಸಿದ್ದು, ನಂತರ ಕರೆಯನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ತನ್ನ ತಾಯಿಗೆ ಕರೆ ಮಾಡಿ ಮನೆಗೆ ಹೋಗಿ ನೋಡಿ ಎಂದು ದೂರವಾಣಿ ಕರೆ ಮಾಡಿ ತಿಳಿಸಿದ್ದರು ಎಂದು ಮೃತಳ ತಾಯಿ ಗಾಯತ್ರಿ ದೂರಿನಲ್ಲಿ ತಿಳಿಸಿದ್ದಾರೆ.

ಕೂಲಿ ಕೆಲಸಕ್ಕೆ ಹೋಗಿದ್ದ ನಾನು ಊರಿಗೆ ವಾಪಸ್ಸಾಗಿ ಒಳಗಿನಿಂದ ಮುಚ್ಚಿದ್ದ ಬಾಗಿಲನ್ನು ಬಲವಂತವಾಗಿ ಮುರಿದು ಒಳಗೆ ಹೋಗಿ ನೋಡಿದಾಗ ಹಾಲ್‌ನಲ್ಲಿ ಮಗಳು ಕವನಾ ಪ್ರಜ್ಞೆ ಇಲ್ಲದೇ ಬಿದ್ದಿದ್ದಳು.

Ad Widget

Ad Widget

ಬಳಿಕ ಆಕೆಯನ್ನು ಗ್ರಾಮದವರೊಬ್ಬರ ಕಾರಿನಲ್ಲಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಜಿಲ್ಲಾಸ್ಪತ್ರೆ, ನಂತರ ಮೈಸೂರಿನ ಸೆಕ್ಯೂರ್ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾರೆ ಎಂದು ತಾಯಿ ತಿಳಿಸಿದ್ದಾರೆ.

ಡೆತ್‌ನೋಟ್ ನಲ್ಲಿ ನಾಲ್ವರ ಹೆಸರು:
ಮೃತ ಕಾವ್ಯ ಆತ್ಮಹತ್ಯೆಗೂ ಮುನ್ನ ಬರೆದ ಡೆತ್‌ನೋಟ್‌ನಲ್ಲಿ ನಾಲ್ವರ ಹೆಸರನ್ನು ಬರೆದಿಟ್ಟಿದ್ದಾರೆ ಎಂದು ಅವರ ತಾಯಿ ತಿಳಿಸಿದ್ದಾರೆ.

ನನ್ನ ಮಗಳ ಸಾವಿಗೆ ವೃಷಬೇಂದ್ರ, ಇವರ ಪತ್ನಿ ಕವಿತಾ ಮತ್ತು ಮಕ್ಕಳಾದ ಕಾವೇರಿ ಮತ್ತು ಕೀರ್ತನ ಕಾರಣರಾಗಿದ್ದಾರೆ. ನನ್ನ ಮಗಳು ಡೆತ್ ನೋಟ್ ಮತ್ತು ಮನೆಯ ಬಾಗಿಲಿನ ಮೇಲೂ ತನ್ನ ಸಾವಿಗೆ ಈ ನಾಲ್ವರು ಕಾರಣ ಎಂದು ಬರೆದಿದ್ದಾಳೆ.

ಮಾನಸಿಕ ಕಿರುಕುಳ ನೀಡಿದ ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೃತಳ ತಾಯಿ ಗಾಯತ್ರಿ ದೂರಿನಲ್ಲಿ ತಿಳಿಸಿದ್ದಾರೆ. ಘಟನೆ ಸಂಬಂಧ ಕೇಸು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Accident-ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ

Published

on

Ad Widget

Ad Widget

Ad Widget

Ad Widget

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮಂಡ್ಯದ ಗುತ್ತಲು ಬಡಾವಣೆಯ ಮಹದೇವು ಹಾಗೂ ತೈಲೂರು ಗ್ರಾಮದ ಎಂಟು ವರ್ಷದ ಬಾಲಕಿ ರಿತ್ವಿಕಾ ಮೃತಪಟ್ಟವರು. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

Ad Widget

Ad Widget <> Ad Widget

ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಸರಕು ಸಾಗಣೆ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

ಕುಟುಂಬದ ಸದಸ್ಯರು ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ, ದೇವರ ದರ್ಶನ ಪಡೆದು ಮನೆಗೆ ಮರಳುತ್ತಿದ್ದ ಕುಟುಂಬದ ಪ್ರಯಾಣ ಕೆಲವೇ ಸಮಯದಲ್ಲಿ ಭೀಕರ ದುರಂತದಲ್ಲಿ ಅಂತ್ಯಗೊಂಡಿರುವುದು ಸಂಬಂಧಿಕರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖವನ್ನುಂಟುಮಾಡಿದೆ.

Ad Widget
Continue Reading

ನಿಧನ ವಾರ್ತೆ

Babu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಮೃತರು ಪತ್ನಿ ಶಾರದಾ, ಮಕ್ಕಳಾದ ಕುಸುಮಾವತಿ ಗೌಡ, ಯಶೋಧ ಗೌಡ, ಪ್ರೇಮಾ ಗೌಡ, ಪುಷ್ಪ ಗೌಡ, ವಿಠಲ ಗೌಡ ಹಾಗೂ ಪುರಂದರ ಗೌಡ ಸೇರಿದಂತೆ ಬಂಧುಮಿತ್ರರನ್ನು ಅಗಲಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ನಿಧನ ವಾರ್ತೆ

One-sided love-ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಮೇಲಿನ ಒನ್‌ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು

Published

on

Ad Widget

Ad Widget

Ad Widget

Ad Widget

ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget alt="Ad Widget"/>

Ad Widget

ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.

Ad Widget

Ad Widget <> Ad Widget

ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್‌ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್‌ಐಆರ್‌ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.

ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್‌ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.

ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.

ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!