ಕಾರ್ಯಕ್ರಮಗಳು
Sunil Kumar-ಯಕ್ಷಗಾನ ಪ್ರದರ್ಶನ ಅನುಮತಿ ನಿಯಮ ಸರಳೀಕರಿಸಲು ಪ್ರಯತ್ನ: ಅರುಣ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನಿಸಿ ಶಾಸಕ ಸುನೀಲ್ ಕುಮಾರ್
ರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ಕಾನೂನಿನ ಆತಂಕ ಎದುರಾಗುತ್ತಿರುವ ನಿಟ್ಟಿನಲ್ಲಿ ಎಲ್ಲ ಮೇಳಗಳಿಗೂ ಯಕ್ಷಗಾನ ಪ್ರದರ್ಶನಕ್ಕೆ ಏಕಗಂಟಿನಲ್ಲಿ ಅನುಮತಿ ನೀಡುವ ವ್ಯವಸ್ಥೆ ಆಗಬೇಕು. ಈ ನಿಟ್ಟಿನಲ್ಲಿ ಸರಕಾರ ನಿಯಮ ರೂಪಿಸಲು ಪ್ರಯತ್ನಿಸುವುದಾಗಿ ಶಾಸಕ ವಿ. ಸುನೀಲ್ ಕುಮಾರ್ ಹೇಳಿದರು.
ಕಾರ್ಕಳ: ರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ಕಾನೂನಿನ ಆತಂಕ ಎದುರಾಗುತ್ತಿರುವ ನಿಟ್ಟಿನಲ್ಲಿ ಎಲ್ಲ ಮೇಳಗಳಿಗೂ ಯಕ್ಷಗಾನ ಪ್ರದರ್ಶನಕ್ಕೆ ಏಕಗಂಟಿನಲ್ಲಿ ಅನುಮತಿ ನೀಡುವ ವ್ಯವಸ್ಥೆ ಆಗಬೇಕು. ಈ ನಿಟ್ಟಿನಲ್ಲಿ ಸರಕಾರ ನಿಯಮ ರೂಪಿಸಲು ಪ್ರಯತ್ನಿಸುವುದಾಗಿ ಶಾಸಕ ವಿ. ಸುನೀಲ್ ಕುಮಾರ್ ಹೇಳಿದರು.
ಹಿರ್ಗಾನ ಶ್ರೀಕುಂದೇಶ್ವರ ಕ್ಷೇತ್ರದಲ್ಲಿ ಹಾಸ್ಯಗಾರ ಅರುಣ್ ಕುಮಾರ್ ಜಾರ್ಕಳ ಅವರಿಗೆ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಯಕ್ಷಗಾನ ನಮ್ಮ ಸಂಸ್ಕೃತಿ. ನಮ್ಮ ಅಸ್ಮಿತೆಗೆ ಧಕ್ಕೆಯಾಗುವ ನಿಯಮಗಳನ್ನು ಸಡಿಲಿಸಿ, ಯಕ್ಷಗಾನ ಪ್ರದರ್ಶನಗಳಿಗೆ ಯಾವುದೇ ಅಡೆತಡೆ ಇಲ್ಲದೆ ಅನುಮತಿ ನೀಡುವ ಬೇಡಿಕೆಯನ್ನು ಈಡೇರಿಕೆಗೆ ಸರಕಾರ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದರು
ಹಾಸ್ಯ ಕಲಾವಿದ ಅರುಣ್ ಕುಮಾರ್ ಜಾರ್ಕಳ ಅವರ ತಾಯಿಯ ಹೆಸರಲ್ಲಿ ಮಂಜೂರಾದ ಅಕ್ರಮ ಸಕ್ರಮ ಜಾಗ ತಡೆ ಹಿಡಿದಿರುವ ಕುರಿತು ಪರಿಶೀಲನೆ ನಡೆಸಿ ನ್ಯಾಯ ಒದಗಿಸುವ ಭರವಸೆ ನೀಡಿದರು.
ಧಾರ್ಮಿಕವಾಗಿ ಮತ್ತು ಯಕ್ಷಗಾನ ಕ್ಷೇತ್ರದಲ್ಲಿ ಋಷಿಯಂತೆ ಬದುಕನ್ನು ಸವೆಸಿದ ದಿ.ರಾಘವೇಂದ್ರ ಭಟ್ಟರ ನೆನಪಲ್ಲಿ ಕ್ಷೇತ್ರದ ವತಿಯಿಂದ ನೀಡಲಾಗುತ್ತಿರುವ ಈ ಪ್ರಶಸ್ತಿಗೆ ಯಕ್ಷಗಾನ ರಂಗದಲ್ಲಿಯೇ ವಿಶಿಷ್ಟ ಮನ್ನಣೆ, ಗೌರವ ಇದೆ ಎಂದು ಪ್ರಸಿದ್ದ ಯಕ್ಷಗಾನ ಕಲಾವಿದ ನ್ಯಾಯವಾದಿ ಶ್ರೀರಮಣಾಚಾರ್ ಹೇಳಿದರು.
ರಾತ್ರಿ ಹತ್ತು ಗಂಟೆ ಮೇಲೆ ಯಕ್ಷಗಾನವನ್ನು ಪ್ರದರ್ಶಿಸುವುದು ಕಾನೂನಿನ ತೊಡಕಾಗಿ ಪರಿಣಮಿಸಿದೆ. ತಲೆ ತಲಾಂತರಗಳಿಂದ ಪ್ರದರ್ಶನವಾಗುತ್ತಿರುವ ಯಕ್ಷಗಾನ ಪ್ರದರ್ಶನಕ್ಕೆ ಪೂರ್ವಭಾವಿಯಾಗಿ ಹಲವು ಅನುಮತಿ ಪಡೆಯುವ ವ್ವಯಸ್ಥೆಯನ್ನು ಸರಳೀಕರಿಸುವಂತೆ ಮನವಿ ಮಾಡಿದರು.
ಕುಂದೇಶ್ವರ ಸಮ್ಮಾನ್ ಸ್ವೀಕರಿಸಿದ ಅರುಣ್ ಕುಮಾರ್ ಜಾರ್ಕಳ ಮಾತನಾಡಿ, ಅತಿಯಾದ ನೋವು ಇದ್ದವರು ಮಾತ್ರ ಇತರರನ್ನು ನಗಿಸಲು ಸಾಧ್ಯ, ಅವರು ಹಾಸ್ಯದ ಮೂಲಕ ಖುಷಿ ಕೊಡಬಲ್ಲರು ಎಂದ ಅವರು. ಬದುಕಿನ ಕಟು ಸತ್ಯವೇ ಹಾಸ್ಯ ಎಂದು ವಿಶ್ಲೇಷಿಸಿದರು.
ತೆಲಂಗಾಣ ಮೂಲದ ನಾನು ಹುಟ್ಟಿ ಬೆಳೆದದ್ದು ತುಳುನಾಡಿನಲ್ಲಿ. ಜಾರ್ಕಳದಲ್ಲಿ ತಾಯಿಯ ಹೆಸರಲ್ಲಿ ಅಕ್ರಮ ಸಕ್ರಮ ಜಾಗ ಮಂಜೂರಾಗಿದೆ. ಆದರೆ ತಾಯಿ ತೀರಿ ಹೋಗಿದ್ದಾರೆ, ಈಗ ಜಾಗ ನೀಡುತ್ತಿಲ್ಲ. ೨೬೬ ಸನ್ಮಾನ ಸ್ವೀಕರಿಸಿದ್ದೇನೆ ಆದರೆ ಕುಂದೇಶ್ವರ ಸನ್ಮಾನ ಘೋಷಣೆಯಾದ ಬಳಿಕ ರಾಜ್ಯಾದ್ಯಂತ ಅಭಿನಂದನೆಗಳ ಮಹಾಪೂರವೇ ಬಂದಿದ. ಯಕ್ಷಗಾನ ಶೆಟ್ರುಗಳಿಗೆ ಮತ್ತು ಭಟ್ರುಗಳಿಗೆ ಮಾತ್ರ ಎಂಬ ಮಾತಿದೆ. ಆದರೆ ಯಕ್ಷಗಾನ ರಂಗದಲ್ಲಿ ಹಾಗಿಲ್ಲ. ತೆಲುಗಿನವ, ತಮಿಳಿನವ ಎಂದೆಣಿಸದೆ, ವಶೀಲಿ ಬಾಜಿ ಇಲ್ಲದೆ ಇಲ್ಲದೆ ಈ ರಂಗದವರು ನಮ್ಮನ್ನೆಲ್ಲ ಬೆಳೆಸಿ ಗೌರವಿಸಿದ್ದಾರೆ ಎಂದರು.
ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ಅಭಿನಂದಿಸಿ ಮಾತನಾಡಿದರು. ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಗಂಗಾ ರಾಘವೇಂದ್ರ ಭಟ್, ಧರ್ಮದರ್ಶಿಗಳಾದ ಕೃಷ್ಣರಾಜೇಂದ್ರ ಭಟ್, ರವೀಂದ್ರ ಭಟ್, ಸುಧೀಂದ್ರ ಭಟ್, ಯಕ್ಷಕೂಟದ ಸಂಚಾಲಕ ಎಲ್ಲೂರು ರಾಮಚಂದ್ರ ರಾವ್, ಸಿದ್ಧಕಟ್ಟೆ ವೈಭವ್ ಮೆಡಿಕಲ್ಸ್‌ನ ಸಚ್ಚಿದಾನಂದ ಎಡಮಲೆ, ನವೀನ್ ಟಿ.ಆರ್., ನ್ಯೂಸ್ ಕಾರ್ಕಳ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ಬರೆಪ್ಪಾಡಿ, ನಿರ್ದೇಶಕ ಅರುಣ್ ಮಾಂಜ, ಬೆಂಕಿನಾಥ ಮೇಳದ ಸಂಚಾಲಕ ಸುರೇಂದ್ರನಾಥ ಮಲ್ಲಿ, ಬ್ರಹ್ಮವಾಹಕ ಕದ್ರಿ ಕೃಷ್ಣ ಭಟ್,ಉದ್ಯಮಿಗಳಾದ ಕುಂಜತ್ತೋಡಿ ವಾಸುದೇವ ಅಲೆವೂರಾಯ, ರವಿಕಾಂತ ಭಟ್, ಬಜಗೋಳಿ ಸರಕಾರಿ ಕಾಲೇಜು ಪ್ರಾಂಶುಪಾಲ ಕೆ.ಪಿ.ಲಕ್ಷ್ಮೀನಾರಾಯಣ, ರಂಜಿನಿ ಉಪಸ್ಥಿತರಿದ್ದರು.
ವರ್ಷಾವಧಿ ಉತ್ಸವಳ ಕುಂದೇಶ್ವರ ಕ್ಷೇತ್ರದಲ್ಲಿ ರಂಗಪೂಜೆ, ಸುತ್ತುಬಲಿ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು, ರಕ್ತೇಶ್ವರಿ ನೇಮ ಭಕ್ತಿ ಸಂಭ್ರಮದಿಂದ ನಡೆಯಿತು. ಬೆಂಕಿನಾಥೇಶ್ವರ ಮೇಳದಿಂದ ಶ್ರೀದೇವಿ ಅಗ್ನಿ ಕಲ್ಲುರ್ಟಿ ಯಕ್ಷಗಾನ ಬಯಲಾಟ ನಡೆಯಿತು. ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ದಕ ಫೋಟೋಗ್ರಾಫರ್ ಅಸೋಸಿಯೇಶನ್ ಅಧ್ಯಕ್ಷ ಪದ್ಮಪ್ರಸಾದ್ ಜೈನ್, ಉದ್ಯಮಿಗಳಾದ ಬೋಳ ಅಜಿತ್ ಕಾಮತ್, ಸಿರಿಯಣ್ಣ ಶೆಟ್ಟಿ ಮೊದಲಾದವರು ಆಗಮಿಸಿದರು.
ಕಾರ್ಕಗಳ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಜಾತ್ರೆ ಸಂದರ್ಭ ಹಾಸ್ಯಗಾರ ಅರುಣ್ ಕುಮಾರ್ ಜಾರ್ಕಳ ಅವರಿಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.
ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.
-
ಬಿಗ್ ನ್ಯೂಸ್19 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ನಿಧನ ವಾರ್ತೆ23 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಶಿಕ್ಷಣ22 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ24 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ23 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ಬಿಗ್ ನ್ಯೂಸ್24 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ
-
Uncategorized20 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ಅಂತರ ರಾಜ್ಯ23 hours agoYouTuber-89 ವರ್ಷದ ವೃದ್ಧನ 5 ಸವರನ್ ಚಿನ್ನದ ಸರ ಕಳವು ಆರೋಪ; 118 ಸವರನ್ ಚಿನ್ನ ಕಳವು ಪ್ರಕರಣದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲು


















