ಸ್ಥಳೀಯ
Campco-ಅಡಿಕೆ ಬೆಳೆಗಾರರ ಹಿತಾಸಕ್ತಿ ಕಾಪಾಡಲು ಕ್ರಮಕೈಗೊಳ್ಳುವಂತೆ ಕ್ಯಾಂಪ್ಕೋ ಮನವಿ
ಭಾರತಕ್ಕೆ ಹುರಿದ ಅಡಿಕೆಯ ಆಮದಿನಿಂದ ದೇಶೀಯ ಅಡಿಕೆ ಬೆಳೆಗಾರರು ಭಾರಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕ್ಯಾಂಪ್ಕೋ ತೀವ್ರ ಚಿಂತೆ ವ್ಯಕ್ತಪಡಿಸಿದೆ. ಈ ಕುರಿತು ಕೇಂದ್ರ ವಾಣಿಜ್ಯ ಮತ್ತು ಉದ್ಯಮ ಸಚಿವರಿಗೆ ತಕ್ಷಣದ ಹಸ್ತಕ್ಷೇಪಕ್ಕಾಗಿ ಪತ್ರವೊಂದನ್ನು ಕಳುಹಿಸಲಾಗಿದೆ.
ಭಾರತಕ್ಕೆ ಹುರಿದ(Roasted) ಅಡಿಕೆಯ ಆಮದಿನಿಂದ ದೇಶೀಯ ಅಡಿಕೆ ಬೆಳೆಗಾರರು ಭಾರಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕ್ಯಾಂಪ್ಕೋ ತೀವ್ರ ಚಿಂತೆ ವ್ಯಕ್ತಪಡಿಸಿದೆ. ಈ ಕುರಿತು ಕೇಂದ್ರ ವಾಣಿಜ್ಯ ಮತ್ತು ಉದ್ಯಮ ಸಚಿವರಿಗೆ ತಕ್ಷಣದ ಹಸ್ತಕ್ಷೇಪಕ್ಕಾಗಿ ಪತ್ರವೊಂದನ್ನು ಕಳುಹಿಸಲಾಗಿದೆ.
ಹುರಿದ ಅಡಿಕೆ HSN ಕೋಡ್ 20081920 ಅಡಿಯಲ್ಲಿ ಮೌಲ್ಯವರ್ಧಿತ ಉತ್ಪನ್ನದ ರೂಪದಲ್ಲಿ ಆಮದು ಮಾಡಲಾಗುತ್ತಿದ್ದು, ಕಸ್ಟಮ್ಸ್ ಡ್ಯೂಟಿ ತಪ್ಪಿಸಲು ತಪ್ಪು ವರ್ಗೀಕರಣದ ಮೂಲಕ ಮಾರುಕಟ್ಟೆಗೆ ಪ್ರವೇಶಿಸುತ್ತಿದೆ. ಈ ರೀತಿಯ ಅಕ್ರಮಗಳು ಮಾರುಕಟ್ಟೆಯ ಸಮತೋಲನವನ್ನು ಹಾಳುಮಾಡುವುದಲ್ಲದೇ ಸರಬರಾಜು ಕೊರತೆಯಿದ್ದರೂ ಬೆಲೆ ಏರಿಕೆಗೆ ಅವಕಾಶ ನೀಡದೆ ದೇಶೀಯ ಬೆಳೆಗಾರರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವಲ್ಲಿ ತಡೆಯಾಗಿದೆ.
CAMPCO ಮಾಹಿತಿಯ ಪ್ರಕಾರ, ಈ ಆಮದು ಅಡ್ವಾನ್ಸ್ ರೂಲಿಂಗ್ ಲೈಸೆನ್ಸ್‌ಗಳ ಮೂಲಕ ಕೇವಲ 12% GST ನಿಗದಿಯಾಗಿದ್ದು, ಈ ಅಡಿಕೆಯನ್ನು ಸ್ಥಳೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಉತ್ಪನ್ನದ ಗುಣಮಟ್ಟ ಹಾಳಾಗುತ್ತಿದೆ ಮತ್ತು ಖರೀದಿದಾರರಿಂದ ಸಗಟಾಗಿ ತಿರಸ್ಕಾರವಾಗುವ ಸಾಧ್ಯತೆ ಇದೆ.
ಇದಲ್ಲದೇ, ಸ್ಥಳೀಯ ಖರೀದಿದಾರರು ಕೂಡಾ ಈ ಮಿಶ್ರಿತ ಅಡಿಕೆಯನ್ನು ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದು ಈ ಅಡಿಕೆ ಉತ್ತರ ಭಾರತಕ್ಕೆ ಸಗಟು ಮಾಡಿದ ನಂತರ ತಿರಸ್ಕಾರಗೊಳ್ಳುತ್ತದೆ. ಇದರಿಂದ ಚಾಲಿ ಅಡಿಕೆಯ ಬೆಲೆ ಕುಸಿದು, ಅಡಿಕೆಯ ಮಾರುಕಟ್ಟೆ ಮೇಲೆ ಪರಿಣಾಮ ಬೀರಿ, ಬೆಳೆಗಾರರ ಆದಾಯಕ್ಕೆ ತೀವ್ರ ಹಾನಿಯುಂಟಾಗುವ ಸಾಧ್ಯತೆಗಳಿವೆ.
CAMPCO ಸರ್ಕಾರಕ್ಕೆ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದೆ:
- * ಯಾವುದೇ ರೂಪದ ಅಡಿಕೆಯ ಆಮದಿಗೆ ಕನಿಷ್ಠ ಆಮದು ದರವನ್ನು ನಿಗದಿ ಮಾಡುವುದು.
- * HSN ಕೋಡ್‌ಗಳ ತಪ್ಪು ವರ್ಗೀಕರಣವನ್ನು ತಡೆಯಲು ಎಲ್ಲಾ ರೀತಿಯ ಅಡಿಕೆಗೆ ಏಕ ರೂಪ HSN ಕೋಡ್ ನಿಗದಿ ಪಡಿಸುವುದು ಮತ್ತು ನಿಯಂತ್ರಣ ಕ್ರಮಗಳನ್ನು ಬಲಪಡಿಸುವುದು.
- * ದೇಶೀಯ ಬೆಳೆಗಾರರಿಗೆ ನ್ಯಾಯಸಮ್ಮತ ದರ ದೊರಕುವಂತೆ ನೀತಿಗಳನ್ನು ರೂಪಿಸುವುದು.
CAMPCO, ಬೆಳೆಗಾರರನ್ನು ಆಮದು ಅಡಿಕೆ ಖರೀದಿ ಮತ್ತು ಸ್ಥಳೀಯ ಅಡಿಕೆಯೊಂದಿಗೆ ಮಿಶ್ರಣ ಮಾಡದಂತೆ ಮನವಿ ಮಾಡಿದೆ, ಇದು ಕೃಷಿಕ ಸಮುದಾಯದ ಹಿತವನ್ನು ಕಾಪಾಡಲು ಅಗತ್ಯವಾಗಿದೆ. CAMPCO ಬೆಳೆಗಾರರ ಹಿತ ಕಾಪಾಡಲು ಸದಾ ಬದ್ಧವಾಗಿದೆ.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.
ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.
ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ಗೆ ಆಯ್ಕೆ
ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಗುಜರಾತ್‌ನಲ್ಲಿ ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್ ನಡೆಯುತ್ತಿದ್ದು, ಈ ಕ್ಯಾಂಪ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನವೆಂಬರ್ ೧ರಂದು ನಡೆಯುವ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗಣ್ಯ ವ್ಯಕ್ತಿಯಾಗಿ ಆಗಮಿಸಲಿದ್ದಾರೆ.
ಇವರಿಗೆ ಎನ್.ಸಿ.ಸಿ ಘಟಕದ ಮುಖ್ಯಸ್ಥ ಲೆ. ಭಾಮಿ ಅತುಲ್ ಶೆಣೈ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್.ಸಿ.ಸಿ ಘಟಕ, ಐಕ್ಯೂಎಸಿ ಘಟಕ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದ ಶುಭಾಶಯಗಳನ್ನು ಕೋರುತ್ತಾರೆ.
-
ಬಿಗ್ ನ್ಯೂಸ್22 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
Uncategorized23 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ22 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized23 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಅಂತರ ರಾಜ್ಯ9 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು11 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಸ್ಥಳೀಯ9 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ರಾಜಕೀಯ10 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ


















