Connect with us

ಕಾರ್ಯಕ್ರಮಗಳು

JCI-ಜೆಸಿಐನಿಂದ 100 ಶಾಲೆಗಳಲ್ಲಿ “ಡ್ರಗ್ಸ್ ಮುಕ್ತ ಪುತ್ತೂರು” ಕಾರ್ಯಕ್ರಮಕ್ಕೆ ಚಾಲನೆ; “ಪುತ್ತೂರಿನಲ್ಲೊಂದು ಐತಿಹಾಸಿಕ ಜಾಗೃತಿ ಕಾರ್ಯಕ್ರಮ”

Published

on

Ad Widget

Ad Widget

Ad Widget

Ad Widget

ವ್ಯಕ್ತಿತ್ವ ವಿಕಸನ ಹಾಗೂ ತರಬೇತಿಗಾಗಿಯೇ ಇರುವ ಅಂತರಾಷ್ಟ್ರೀಯ ಸಂಸ್ಥೆ ಜೆಸಿಐ ಇದರ ಪುತ್ತೂರು ಘಟಕದ ಅಧ್ಯಕ್ಷರಾದ ಭಾಗ್ಯೇಶ್ ರೈ ಯವರ ನೇತೃತ್ವದಲ್ಲಿ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕುರಿತಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ, ಕರ್ನಾಟಕ ಪೊಲೀಸ್, ಆರೋಗ್ಯ ಇಲಾಖೆಗಳ ಸಹಕಾರದೊಂದಿಗೆ ಪುತ್ತೂರು ತಾಲೂಕು ವ್ಯಾಪ್ತಿಯ 100 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಪುತ್ತೂರಿನ ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನ ಕೊಂಬೆಟ್ಟು ಇಲ್ಲಿ ಚಾಲನೆಯನ್ನು ನೀಡಲಾಯಿತು.

Ad Widget

Ad Widget

Ad Widget

Ad Widget

ವ್ಯಕ್ತಿತ್ವ ವಿಕಸನ ಹಾಗೂ ತರಬೇತಿಗಾಗಿಯೇ ಇರುವ ಅಂತರಾಷ್ಟ್ರೀಯ ಸಂಸ್ಥೆ ಜೆಸಿಐ ಇದರ ಪುತ್ತೂರು ಘಟಕದ ಅಧ್ಯಕ್ಷರಾದ ಭಾಗ್ಯೇಶ್ ರೈ ಯವರ ನೇತೃತ್ವದಲ್ಲಿ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕುರಿತಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ, ಕರ್ನಾಟಕ ಪೊಲೀಸ್, ಆರೋಗ್ಯ ಇಲಾಖೆಗಳ ಸಹಕಾರದೊಂದಿಗೆ ಪುತ್ತೂರು ತಾಲೂಕು ವ್ಯಾಪ್ತಿಯ 100 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಪುತ್ತೂರಿನ ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನ ಕೊಂಬೆಟ್ಟು ಇಲ್ಲಿ ಚಾಲನೆಯನ್ನು ನೀಡಲಾಯಿತು.

Ad Widget

Ad Widget alt="Ad Widget"/>

Ad Widget

ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಶುಭ ಹಾರೈಸಿದ ಅವರು ಜೆಸಿಐ ಪುತ್ತೂರಿನ ವಿಭಿನ್ನ ಪ್ರಯತ್ನಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಎಸ್. ಆರ್. , ತಾಲೂಕು ವೈದ್ಯಾಧಿಕಾರಿ ದೀಪಕ್ ರೈ , ಪುತ್ತೂರು ನಗರ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಅವರು ಮಾದಕ ವಸ್ತುಗಳಿಂದ ಉಂಟಾಗುವ ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರು ಜೆಸಿಐ ಅಧ್ಯಕ್ಷರಾದ ಭಾಗ್ಯೇಶ್ ರೈ ಅವರು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಿವರಿಸಿದರು ಮತ್ತು ವಿವಿಧ ಶಾಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ನಡೆಸಿಕೊಡುವ ಜೆಸಿ ಕೃಷ್ಣ ಮೋಹನ್, ಜೆಸಿ ದಾಮೋದರ ಪಾಟಾಳಿ, ಜೆಸಿ ಶಶಿರಾಜ್ ರೈ, ಜೆಸಿ ಮಾಲಿನಿ ಕಶ್ಯಪ್, ಜೆಸಿ ಪಶುಪತಿ ಶರ್ಮ, ಜೆಸಿ ಮನೋಹರ ಪಾಟಳಿ, ಜೆಸಿ ಶರತ್ ಶ್ರೀನಿವಾಸ, ಜೆಸಿ ಸೃಜನ್ ಕೇವಳ ಜೆಸಿ ಜಗನ್ನಾಥ್ ಅರಿಯಡ್ಕರವರಿಗೆ “ಡ್ರಗ್ಸ್ ಮುಕ್ತ ಪುತ್ತೂರು” ಇದರ ಲೋಗೋ ಇರುವ ಕ್ಯಾಪ್ ತೊಡಿಸುವ ಮೂಲಕ ತರಬೇತುದಾರರಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಜೆಸಿ ರಂಜಿನಿ ಶೆಟ್ಟಿಯವರು ಬರಮಾಡಿಕೊಂಡರು. ಜೆಸಿ ವಾಣಿಯನ್ನು ಜೆಸಿ ಜಗನ್ನಾಥ ಅರಿಯಡ್ಕರವರು ವಾಚಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಜೆಸಿಐ ವಲಯ ಉಪಾಧ್ಯಕ್ಷರಾದ ಜೆಸಿ ಸುಹಾಸ್ ಮರಿಕೆ, ನಿಕಟ ಪೂರ್ವ ಅಧ್ಯಕ್ಷರಾದ ಮೋಹನ್ ಕೆ ಕಾರ್ಯಕ್ರಮದ ನಿರ್ದೇಶಕರಾದ ಜೆಸಿ ಜಿತೇಶ್ ರೈ (ಉಪಾಧ್ಯಕ್ಷರು ಮ್ಯಾನೇಜ್ಮೆಂಟ್), ಜೆಸಿ ಶರತ್ ಶ್ರೀನಿವಾಸ್ (ಉಪಾಧ್ಯಕ್ಷರು ಟ್ರೈನಿಂಗ್), ಕಾರ್ಯದರ್ಶಿ ಜೆಸಿ ಮನೋಹರ ಪಾಟಾಳಿ ಉಪಸ್ಥಿತರಿದ್ದರು.

Ad Widget

Ad Widget

ರಾಮಕೃಷ್ಣ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಹಾಗೂ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾದ ವಸಂತ ಮೂಲ್ಯರವರನ್ನು ಜೆಸಿಐಯ ವತಿಯಿಂದ ಗೌರವಿಸಲಾಯಿತು. ಜಾಗೃತಿ ಕಾರ್ಯಕ್ರಮವನ್ನು ಜೆಸಿ ಕೃಷ್ಣ ಮೋಹನ್ ರವರು ನಡೆಸಿಕೊಟ್ಟರು.

ಜಾಗೃತಿ ಕಾರ್ಯಕ್ರಮವನ್ನು ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಕೊಂಬೆಟ್ಟು ಇಲ್ಲಿನ ಪ್ರೌಢಶಾಲಾದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಹಿಳಾ ಸಮನ್ವಯಾಧಿಕಾರಿ ಜೆಸಿ ಆಶಾ ಮೋಹನ್, ಜೆಸಿ ಭವಿತ್, ಕೋಶಾಧಿಕಾರಿ ಜೆಸಿ ರುಕ್ಮಯ್ಯ, ಜೆಸಿ ರಘು ಶೆಟ್ಟಿ, ರಾಮಕೃಷ್ಣ ಪ್ರೌಢಶಾಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಇಲ್ಲಿನ ಪ್ರೌಢಶಾಲಾ ವಿಭಾಗದ ಶಿಕ್ಷಕ ವೃಂದದವರು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು

Ad Widget

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ

Published

on

Ad Widget

Ad Widget

Ad Widget

Ad Widget

ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.

Ad Widget

Ad Widget <> Ad Widget

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Ad Widget

Ad Widget

ವೇದಿಕೆಯಲ್ಲಿ ಉದ್ಯಮಿ ಜಯಕುಮಾರ್ ನಾಯರ್, ಸ್ವರ್ಣೋದ್ಯಮಿ ಈಶ್ವರ ಮುರಳಿ ಹಾಗೂ ದೀಪೋತ್ಸವ ಸಮಿತಿ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಂದಿಸಿದರು. ಸಂಚಾಲಕ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026

Published

on

Ad Widget

Ad Widget

Ad Widget

Ad Widget

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

Ad Widget

Ad Widget <> Ad Widget

ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.

Ad Widget

Ad Widget

ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.

ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!