ಸುಳ್ಯ
Official website-ಚೊಕ್ಕಾಡಿ ಶ್ರೀರಾಮ ದೇವಾಲಯದ ಅಧಿಕೃತ ಜಾಲತಾಣ ಅನಾವರಣ
ಸುಳ್ಯ ತಾಲೂಕು ಅಮರಪಡ್ನೂರು ಗ್ರಾಮದ ಚೊಕ್ಕಾಡಿಯಲ್ಲಿರುವ ಶ್ರೀರಾಮ ದೇವಾಲಯದ ಅಧಿಕೃತ ಜಾಲತಾಣ http://www.srtchokkadi.org ಇದರ ಅನಾವರಣ ಕಾರ್ಯಕ್ರಮವು ಜ.26ರಂದು ಉಪಾಸನಾ,ಚೂಂತಾರು ಇಲ್ಲಿ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಗಳ ಅಮೃತ ಹಸ್ತದಿಂದ ನೆರವೇರಿತು.
ಸುಳ್ಯ ತಾಲೂಕು ಅಮರಪಡ್ನೂರು ಗ್ರಾಮದ ಚೊಕ್ಕಾಡಿಯಲ್ಲಿರುವ ಶ್ರೀರಾಮ ದೇವಾಲಯದ ಅಧಿಕೃತ ಜಾಲತಾಣ http://www.srtchokkadi.org ಇದರ ಅನಾವರಣ ಕಾರ್ಯಕ್ರಮವು ಜ.26ರಂದು ಉಪಾಸನಾ,ಚೂಂತಾರು ಇಲ್ಲಿ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಗಳ ಅಮೃತ ಹಸ್ತದಿಂದ ನೆರವೇರಿತು.
ಜಾಲತಾಣದಲ್ಲಿ ದೇವಸ್ಥಾನದ ಮಾಹಿತಿ, ಆನ್‌ಲೈನ್ ಸಭಾಂಗಣ ಬುಕ್ಕಿಂಗ್, ದೇಣಿಗೆ ಸೇವೆಗಳನ್ನು ಕಲ್ಪಿಸಲಾಗಿದೆ. ಇದೇ ಸಂದರ್ಭದಲ್ಲಿ ಜಾಲತಾಣದ ವಿನ್ಯಾಸ ಹಾಗು ನಿರ್ವಹಣೆ ಮಾಡುತ್ತಿರುವ ಐಎಸ್‌ಡಿಸಿ ತಂಡದ ಮುಖ್ಯಸ್ಥರಾದ ಮಾ.ಶ್ರೀಕರ ಅವರು ಜಾಲತಾಣದ ಸಂಪೂರ್ಣ ಮಾಹಿತಿಯನ್ನು ನೀಡಿದರು. ಜಾಲತಾಣ ಅನಾವರಣಗೊಳಿಸುವ ಮೊದಲು ಶ್ರೀ ರಾಮ ಸೇವಾ ಸಮಿತಿ ಚೊಕ್ಕಾಡಿ ಇದರ ಅಧ್ಯಕ್ಷರಾದ ಶ್ರೀ ಮಹೇಶ್ ಭಟ್ ಚೂಂತಾರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು.

ಈ ಸಂದರ್ಭದಲ್ಲಿ ಹವ್ಯಕ ಮಹಾಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಉದಯಶಂಕರ ಭಟ್ ಮಿತ್ತೂರು ಹಾಗು ಮಂಡಲದ ಇತರ ಪದಾಧಿಕಾರಿಗಳು,ಶ್ರೀ ರಾಮ ಸೇವಾ ಸಮಿತಿಯ ಸರ್ವ ಸದಸ್ಯರು, ಶ್ರೀ ರಾಮಚಂದ್ರಾಪುರ ಮಠದ ವಿವಿಧ ಸಮಿತಿಗಳ ಪದಾಧಿಕಾರಿಗಳು, ಐಎಸ್‌ಡಿಸಿ ತಂಡದ ಸದಸ್ಯರಾದ ಮಾ. ಪ್ರದ್ಯುಮ್ನ ಪಿ, ಮಾ.ಸ್ಕಂದ ಗಣೇಶ ಪಾಲೆಚ್ಚಾರು ಹಾಗು ಮಠದ ಶಿಷ್ಯರು, ಶ್ರೀರಾಮ ದೇವಾಲಯದ ಭಕ್ತರು ಉಪಸ್ಥಿತರಿದ್ದರು.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
ಬಿಗ್ ನ್ಯೂಸ್20 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ24 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
Uncategorized21 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ20 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized20 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಅಂತರ ರಾಜ್ಯ23 hours agoYouTuber-89 ವರ್ಷದ ವೃದ್ಧನ 5 ಸವರನ್ ಚಿನ್ನದ ಸರ ಕಳವು ಆರೋಪ; 118 ಸವರನ್ ಚಿನ್ನ ಕಳವು ಪ್ರಕರಣದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲು
-
ಸ್ಥಳೀಯ24 hours agoUT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ


















