ಮಂಗಳೂರು
Kotekar-ಸುಳಿವೇ ಇಲ್ಲದ ಕೋಟೆಕಾರ್ ಬ್ಯಾಂಕ್ ದರೋಡೆಯನ್ನು 3700 ಕಿಮೀ ಸುತ್ತಾಡಿ ಪೊಲೀಸರು ಭೇದಿಸಿದ ರೋಚಕ ಸ್ಟೋರಿ – 6 ತಿಂಗಳ ಹಿಂದೆ ಸ್ಕೆಚ್, ಕಿಂಗ್ ಪಿನ್ ಶಶಿ ಥೇವರ್ ಹಿಂದೆ ಸ್ಥಳೀಯ ಸೂತ್ರದಾರ ?
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ದರೋಡೆ ಪ್ರಕರಣದಲ್ಲಿ ದಕ್ಷಿಣ ಜಿಲ್ಲಾ ಪೊಲೀಸರು ಭರ್ಜರಿ ಯಶಸ್ಸು ಸಾಧಿಸಿದ್ದಾರೆ. ಸುಳಿವೇ ಇಲ್ಲದ ಪ್ರಕರಣವನ್ನು ಅತ್ಯಂತ ಚಾಣಕ್ಷ್ಯತನದಿಂದ ಭೇಧಿಸಿದ ಪೊಲೀಸರು, ಪ್ರಮುಖ ನಾಲ್ವರು ದರೋಡೆಕೋರರನ್ನು ಹಡೆ ಮುರಿ ಕಟ್ಟಿದ್ದು ಮಾತ್ರವಲ್ಲದೇ, ದರೋಡೆಗೆಯ್ಯಲಾದ ಬಹುತೇಕ ಚಿನ್ನ ಹಾಗೂ ನಗದನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಉಳ್ಳಾಲ: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ದರೋಡೆ ಪ್ರಕರಣದಲ್ಲಿ ದಕ್ಷಿಣ ಜಿಲ್ಲಾ ಪೊಲೀಸರು ಭರ್ಜರಿ ಯಶಸ್ಸು ಸಾಧಿಸಿದ್ದಾರೆ. ಸುಳಿವೇ ಇಲ್ಲದ ಪ್ರಕರಣವನ್ನು ಅತ್ಯಂತ ಚಾಣಕ್ಷ್ಯತನದಿಂದ ಭೇಧಿಸಿದ ಪೊಲೀಸರು, ಪ್ರಮುಖ ನಾಲ್ವರು ದರೋಡೆಕೋರರನ್ನು ಹಡೆ ಮುರಿ ಕಟ್ಟಿದ್ದು ಮಾತ್ರವಲ್ಲದೇ, ದರೋಡೆಗೆಯ್ಯಲಾದ ಬಹುತೇಕ ಚಿನ್ನ ಹಾಗೂ ನಗದನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರ ಕಾರ್ಯಾಚರಣೆಗೆ ನಾಗರೀಕ ಸಮಾಜದಿಂದಲೂ ಪ್ರಶಂಸೆ ವ್ಯಕ್ತವಾಗುತ್ತಿದೆ. ಆದರೇ ಈ ಪ್ರಕರಣದ ಕಿಂಗ್ ಪಿನ್ ಹಾಗೂ ಅತನನ್ನು ಆಡಿಸುತ್ತಿರುವ ಸೂತ್ರದಾರನೊಬ್ಬನಿದ್ದಾನೆ ಎನ್ನುವ ಸಂಶಯ ಪೊಲೀಸ್ ಇಲಾಖೆ ಹಾಗು ಸಾರ್ವಜನಿಕರಿಗಿದೆ. ಇವರ ರಹಸ್ಯ ಬಹಿರಂಗವಾಗದ ವಿನ: ಪ್ರಕರಣದ ತನಿಖೆ ಪೂರ್ಣಗೊಳ್ಳುವುದಿಲ್ಲ.
ತನಿಖೆಗೆ ತೀವ್ರ ಹಿನ್ನಡೆ
ಬ್ಯಾಂಕಿನ ಸಿಸಿಟಿವಿ ಕೆಟ್ಟು ಹೋದದ್ದು ಪೊಲೀಸರ ತನಿಖೆಗೆ ದೊಡ್ಡ ಹಿನ್ನಡೆಯಾಗಿತ್ತು. ಹೀಗಾಗಿ ಪೊಲೀಸರ ತನಿಖೆಗೆ ನೆರವಾಗಬಹುದಾಗಿದ್ದ ಒಂದೇ ಒಂದು ಸಾಕ್ಷಿಯೂ ಪ್ರಕರಣದ ಆರಂಭದಲ್ಲೆ ಇಲ್ಲವಾಗಿತ್ತು. ಆದರೂ ಪ್ರಕರಣದ ತನಿಖೆಯ ಸಂದರ್ಭ ಸಿಕ್ಕ ಏಕೈಕ ಮಾಹಿತಿ ದರೋಡೆಕೋರರು ಕೃತ್ಯಕ್ಕೆ ಬಳಸಿದ ಫಿಯೇಟ್ ಕಾರು. ಕೊನೆಗೆ ಇದೇ ತನಿಖಾಧಿಕಾರಿಗಳನ್ನು ದರೋಡೆಕೋರರ ಮನೆಯಂಗಳಕ್ಕೆ ತಲುಪಿಸಿತ್ತು.
ಇದಕ್ಕಾಗಿ ಪೊಲೀಸರು ಕ್ರಮಿಸಿದ್ದು ಬರೋಬ್ಬರು 3700 ರ ಕಿಮೀ. ಶೋಧಿಸಿದ್ದು ಅಸಂಖ್ಯಾತ ಸಿಸಿಟಿವಿಗಳು. ಎಡತಾಕಿದ್ದು ನೂರಾರು ಮಾಹಿತಿದಾರರನ್ನು. ಕರ್ನಾಟಕ ಮಹಾರಾಷ್ಟ್ರ ಹಾಗೂ ತಮಿಳುನಾಡು ಪೊಲೀಸರ ಸಂಘಟಿತ ಪ್ರಯತ್ನದ ಫಲವಾಗಿ 1600 ಗ್ರಾಹಕರ ಚಿನ್ನಾಭರಣ ಇದೀಗ ಸುರಕ್ಷಿತವಾಗಿ ಮಂಗಳೂರು ತಲುಪಿದೆ.
ಸುಳಿವು ಸಿಕ್ಕಿದು ಹೀಗೆ
ಶೂನ್ಯ ಸುಳಿವಿನ ಈ ಪ್ರಕರಣದಲ್ಲಿ ಮುಳುಗುವವನಿಗೆ ಹುಲ್ಲುಕಡ್ಡಿ ಆಸರೆ ಎಂಬಂತೆ ಸಿಕ್ಕಿದ್ದು ಹಳೇ ಫೀಯೇಟ್ ಕಾರು. ಇದರ ಬೆನ್ನು ಬಿದ್ದ ಪೊಲೀಸರಿಗೆ ಇದು ದರೋಡೆ ಕೃತ್ಯದ ಬಳಿಕ (ಆ ದಿನ ಮಧ್ಯಾಹ್ನ) ತಲಪಾಡಿ ಟೋಲ್ ಗೇಟ್ ಪಾಸಾಗಿರುವುದು ಕಾಣಿಸಿದೆ. ಆದರೇ ಅದರ ಹಿಂದಿನ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಕೃತ್ಯ ಎಸಗಲು ಆ ಕಾರು ತಲಪಾಡಿ ಟೋಲ್ ಗೇಟ್ ಮೂಲಕ ಉಳ್ಳಾಲಕ್ಕೆ ಬಂದಿಲ್ಲ ಎನ್ನುವುದು ಖಚಿತವಾಗಿದೆ. ಇದಾಗುತ್ತಲೇ ಉಳ್ಳಾಲಕ್ಕೆ ಬರುವ ಎಲ್ಲ ಮಾರ್ಗಗಳ ಸಿಸಿಟಿವಿ ಗಳ ಪರಿಶೀಲನೆಗೆ ಪೊಲೀಸರು ಇಳಿದಿದ್ದಾರೆ. ಇನ್ನು ಕಾರಿಗೆ ಅಳವಡಿಸಿದ ನಂಬರ್ ಪ್ಲೇಟ್ ಕೂಡ ನಕಲಿ ಎನ್ನುವುದು RTO ದತ್ತಾಂಶದ ಮೂಲಕ ಪತ್ತೆಯಾಗಿದೆ.
ಸಿಸಿಟಿವಿ ಪರಿಶೀಲನೆ ವೇಳೆ ಈ ಕಾರು ಕೃತ್ಯ ನಡೆದ ದಿನ ಬೆಳಿಗ್ಗೆ ಉಡುಪಿ ಮಾರ್ಗವಾಗಿ ಮಂಗಳೂರು ಪ್ರವೇಶಿಸಿರುವುದು ಗೊತ್ತಾಗಿದೆ ಹಾಗೂ ಆಗಲೂ ಅ ಕಾರಿನಲ್ಲಿ ನಕಲಿ ನಂಬರ್ ಪ್ಲೇಟ್ ಬಳಸಲಾಗಿತ್ತು. ಆದರೇ ಕೃತ್ಯ ನಡೆದ ದಿನ ಬೆಳಿಗ್ಗೆ ಆ ಕಾರು ಶಿರೂರು ಟೋಲ್ ಗೇಟ್ ಬಳಿ ಮಹಾರಾಷ್ಟ್ರ ನೋಂದಣಿಯ ನಂಬರ್ ಪ್ಲೇಟ್ ನೊಂದಿಗೆ ಪತ್ತೆಯಾಗಿದೆ. ಇದರ ಜಾಡು ಹಿಡಿದು ಕಾರಿನ ಮಾಲೀಕನ ಪತ್ತೆಗಿಳಿದ ಪೊಲೀಸರು ಕೊನೆಗೆ ತಲುಪಿದ್ದು ಮಹಾರಾಷ್ಟ್ರದ ಕುಖ್ಯಾತ ಸ್ಲಮ್ ಧಾರಾವಿಗೆ. ಅಲ್ಲಿನ ಖಬರಿಗಳು ಪೊಲೀಸರಿಗೆ ಕೆಲವು ಟಿಪ್ಟ್ ನೀಡಿದ್ದು , ಇದನ್ನು ಬಳಸಿ ಪೊಲೀಸರು ತನಿಖೆಯ ಇನ್ನಷ್ಟು ಆಳಕ್ಕೆ ಇಳಿದಾಗ , ಪ್ರಕರಣಕ್ಕೆ ತಮಿಳುನಾಡು ನಂಟು ಇರುವುದು ಗೊತ್ತಾಗಿದೆ.
ಮುರುಗಂಡಿ ಆ ಕಾರು ಬಳಸುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಧಾರಾವಿಯಲ್ಲಿ ಸಿಕ್ಕಿದೆ. ಆತನ ಗ್ಯಾಂಗಿನ ಇತರ ಸದಸ್ಯರನ್ನು ತೀವ್ರ ತನಿಖೆಗೆ ಒಳಪಡಿಸಿದ್ದಾರೆ. ಕೆಲವು ಸದಸ್ಯರಿಗೆ ದರೋಡೆಯಲ್ಲಿ ತಮ್ಮನ್ನು ಆತ ಸೇರಿಸಿಕೊಳ್ಳದ ಕೋಪವು ಇತ್ತು. ಹೀಗಾಗಿ ಅವರು ದರೋಡೆಯ ಕುರಿತಾಗಿ ತಮಗಿದ್ದ ಎಲ್ಲ ಮಾಹಿತಿಯನ್ನು ಪೊಲೀಸರಿಗೆ ಅರುಹಿದ್ದಾರೆ.
ಈ ವೇಳೆ ದರೋಡೆಯ ಪಾಲು ಪಡೆಯಲು ರೈಲಿನಲ್ಲಿ ಮಹಾರಾಷ್ಟ್ರದಿಂದ ತಮಿಳು ನಾಡಿಗೆ ತೆರಳಿರುವ ಕಣ್ಣನ್ ಮಣಿಯ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಆತನನ್ನು ತಿರುನಲ್ವೇಲಿ ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ಲಾಕ್ ಮಾಡಿದ್ದಾರೆ. ಬಳಿಕ ಆತನನ್ನು ಬಾಯ್ಬಿಡಿಸಿದ ಪೊಲೀಸರು ಇತರ ಆರೋಪಿಗಳನ್ನು ಖೆಡ್ಡಾಕ್ಕೆ ಕೆಡವಿದ್ದಾರೆ.
ಪತ್ತೆಯಾದ ಸ್ವತ್ತಿನ ವಿವರ :
ಕಳವಾಗಿದ್ದ ಸುಮಾರು 18.67 ಕೆಜಿ ಚಿನ್ನಾಭರಣಗಳ ಪೈಕಿ 18.314 ಕೆಜಿ ಚಿನ್ನಾಭರಣ ಹಾಗೂ 11,67,044ರೂ ನಗದು ಪೈಕಿ 3,80,500ರೂ.ಗಳನ್ನು ಪೋಲಿಸರು ವಶ ಪಡಿಸಿಕೊಂಡಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂದಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದು ಬ್ಯಾಂಕಿನ ಕುರಿತು ಮಾಹಿತಿ ಮತ್ತು ಸಹಕಾರ ನೀಡಿದ ಸ್ಥಳೀಯ ವ್ಯಕ್ತಿ ಸೇರಿದಂತೆ ಇನ್ನೂ ನಾಲ್ವರು ಆರೋಪಿಗಳ ಪತ್ತೆಗೆ ಪೋಲಿಸರು ಬಲೆಬೀಸಿದ್ದಾರೆ. ದರೋಡೆ ನಡೆದ ಮೂರೇ ದಿನಗಳಲ್ಲಿ ಆರೋಪಿಗಳಾದ ತಮಿಳುನಾಡಿನ ಅಮ್ಮನ್ ಕೋವಿಲ್ ನಿವಾಸಿ ಮುರುಗಂಡಿ ಥೇವರ್ (36), ಮುಂಬೈ ಡೊಂಬಿವಿಲಿಯ ಯೊಸುವಾ ರಾಜೇಂದ್ರನ್ (35), ಮುಂಬೈ ತಿಲಕನಗರದ ಕಣ್ಣನ್ ಮಣಿ (36) ಎಂಬವರನ್ನು ಪೊಲೀಸರು ಬಂಧಿಸುವಲ್ಲಿ ಯಶ್ವಸ್ವಿಯಾಗಿದ್ದು ವಿಚಾರಣೆ ತೀವ್ರಗೊಳಿಸಲಾಗಿದೆ.
6 ತಿಂಗಳ ಹಿಂದೆಯೇ ಸ್ಕೆಚ್
ಕೋಟೆಕಾರ್ ಬ್ಯಾಂಕ್ ದರೋಡೆಗೆ ಆರು ತಿಂಗಳ ಮೊದಲೇ ಸ್ಕೆಚ್ ಮಾಡಲಾತ್ತು ಮತ್ತು ಪ್ರಕರಣದಲ್ಲಿ ಭಾಗಿಯಾಗಿ ತಪ್ಪಿಸಿಕೊಂಡಿರುವ, ಮುಂಬೈನಲ್ಲಿ ನೆಲೆಸಿರುವ ಮಂಗಳೂರು ಮೂಲದವ ಎನ್ನಲಾಗಿರುವ ಶಶಿ ಥೇವರ್ ಎಂಬಾತ ಕೋಟೆಕಾರ್ ವ್ಯವಸಾಯ ಸಹಕಾರಿ ಬ್ಯಾಂಕ್ನಲ್ಲಿ ಭದ್ರತಾ ಸಿಬ್ಬಂದಿ ಕೊರತೆಯಿರುವ ಬಗ್ಗೆ ಆರೋಪಿಗಳಿಗೆ ಮಾಹಿತಿ ನೀಡಿದ್ದು, ಸ್ಥಳ ಪರಿಶೀಲನೆ ಕೂಡಾ ನಡೆಸಿದ್ದ ಎಂಬುದು ತಿಳಿದು ಬಂದಿದೆ. ಅದರಂತೆ ಶುಕ್ರವಾರ ಮಧ್ಯಾಹ್ನ ನಮಾಜ್ ಸಮಯದಲ್ಲೇ ದರೋಡೆ ಮಾಡಬೇಕೆಂದು ಆರೋಪಿಗಳು ಸ್ಕೆಚ್ ಮಾಡಿದ್ದರು.
ದರೋಡೆ ನಡೆದ ದಿನ ಮಧ್ಯಾಹ್ನ 12.20ರ ವೇಳೆಗೆ ಆಗಮಿಸಿದ್ದ ಆರೋಪಿಗಳು ಅಲ್ಲಿರುವ ಶಾಲೆಯ ಬಳಿ ಸ್ವಲ್ಪ ಹೊತ್ತು ಕಾದು 1.10ರ ವೇಳೆಗೆ ಬ್ಯಾಂಕ್ಗೆ ನುಗ್ಗಿ ಕೃತ್ಯ ಎಸಗಿ, ಮೂವರು ಆರೋಪಿಗಳು ಫಿಯೆಟ್ ಕಾರಿನಲ್ಲಿ ಪರಾರಿಯಾದರೇ ಉಳಿದ ಮೂವರು ರೈಲು, ಬಸ್ಸಿನಲ್ಲಿ ಮುಂಬೈಗೆ ಹೋಗಿ ಅಲ್ಲಿಂದ ತಮಿಳುನಾಡಿಗೆ ತೆರಳಿದ್ದರು.
ಬ್ಯಾಂಕ್ ದರೋಡೆಯ ಕಿಂಗ್ ಪಿನ್ ಶಶಿ ಥೇವರ್ʼನ ಬೆನ್ನ ಹಿಂದೆ ಇನ್ನೊಬ್ಬ ಆರೋಪಿಯಿದ್ದು ಆತನೇ ಪ್ರಕರಣದ ಸಂಚುಕೋರ ಎಂಬ ಬಗ್ಗೆ ಬಾತ್ಮೀದಾರರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಈ ಇಬ್ಬರು ಆರೋಪಿಗಳ ಬೆನ್ನು ಬಿದ್ದಿದ್ದು ವಿವಿಧ ಮೂಲಗಳಿಂದ ಅವರ ಕುರಿತು ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.
ಬಂಧಿತರ ನೀಡಿದ ಮಾಹಿತಿಯನ್ನ ಆಧರಿಸಿ ಶಶಿ ಥೇವರ್ ರೇಖಾಚಿತ್ರವನ್ನು ಪೊಲೀಸರು ಆರ್ಟಿಸ್ಟ್ʼಗಳ ನೆರವಿನಿಂದ ರಚಿಸಿದ್ದು, ತಂತ್ರಜ್ಙಾನದ ನೆರವಿನಿಂದಲೂ ಆತನ ಚಹರೆಯ ಚಿತ್ರವನ್ನು ರಚಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೇ ಇದೇ ವೇಳೆ ಶಶಿಗೆ ಸಹಾಯ ಮಾಡಿದ ಲೋಕಲ್ ವ್ಯಕ್ತಿಯ ಕುರಿತಾಗಿ ಅವರು ಎಲ್ಲೂ ಏನೂ ಹೇಳದಿರುವುದು ಕುತೂಹಲ ಮೂಡಿಸಿದೆ.
ಇದಲ್ಲದೇ ಈ ದರೋಡೆಯ ಕುರಿತು ಇನ್ನೂ ಒಂದು ಥಿಯೋರಿ ಹೊರಬಿದ್ದಿದೆ. ಈ ಹಿಂದೆ ಉಳ್ಳಾಲದ ದರೋಡೆಯಲ್ಲಿ ಭಾಗಿಯಾದ ಕುಖ್ಯಾತ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ಗೂ ಶಶಿ ಥೇವರ್ ಹಿಂದಿರುವ ವ್ಯಕ್ತಿಗೂ ಪರಸ್ಪರ ಸಂಬಂಧವಿದೆ. ಶಶಿ ಥೇವರ್ ಗೆ ಯೋಜನೆ ರೂಪಿಸಲು ಇದೆ ಗ್ಯಾಂಗ್ ಮಾಹಿತಿ ನೀಡಿರಬೇಕೆಂಬ ಶಂಕೆಯೂ ಗುಪ್ತಚಾರ ಪೊಲೀಸರಲ್ಲಿದೆ ಎಂದು ಮೂಲಗಳು ತಿಳಿಸಿವೆ.
ಈ ರಹಸ್ಯ ವ್ಯಕ್ತಿ ಮೂಲತ : ದಕ್ಷಿಣ ಕನ್ನಡದವನಾದರೂ ಒಂದೇ ಕಡೆ ನೆಲೆ ನಿಲ್ಲುವುದಿಲ್ಲ. ಗುಜರಾತ್, ಮುಂಬಯಿ, ಪುಣೆ, ಸೂರತ್, ಮಧ್ಯ ಪ್ರದೇಶ, ತ್ರಿಶೂರ್, ಪಂಜಾಬ್ ಹೀಗೆ ಹತ್ತಾರು ನಗರಗಳಲ್ಲಿ ನಡೆದ ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಜತೆಗೆ ಬೇರೆ ಬೇರೆ ಗ್ಯಾಂಗ್ಗಳಲ್ಲಿ ಬೇರೆ ಬೇರೆ ಹೆಸರಿನೊಂದಿಗೆ ಗುರುತಿಸಿಕೊಳ್ಳುತ್ತಾನೆ ಎಂಬ ವಂದತಿಯೂ ಇದೆ. ಇದೇ ಗ್ಯಾಂಗಿನ ಒಬ್ಬ ಶಶಿ ಥೇವರ್ ಗೆ ಯೋಜನೆ ರೂಪಿಸಲು ಸಹಾಯ ಮಾಡಿರಬಹುದೆಂದು ಮಾಹಿತಿ ಇದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
ಮಂಗಳೂರು
Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ
ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ
ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.
ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?
ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.
ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.
ಅಪರಾಧ
Mangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅ.8ರಂದು ರಾತ್ರಿ ಸುಮಾರು 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಸಮೀಪ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳು:
ಅಬ್ದುಲ್ ಹಾಪೀಲ್ (25) ಮಂಗಳಪಾಡಿ, ಕಾಸರಗೋಡು
ಜಿಯಾವುಲ್ ಹಕ್ (30) ಕಸಬಾ ಬೆಂಗ್ರೆ, ಕೂಳೂರು, ಮಂಗಳೂರು
ಅಲ್ತಾಫ್ (28) ಪಾಂಡೇಶ್ವರ, ಮಂಗಳೂರು
ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಬಚ್ಚಿಟ್ಟು ಸಾಗಾಟಕ್ಕೆ ಸಂಚು
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್‌ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹಿಸುವ ಭಾಗದಲ್ಲಿ ಭದ್ರವಾಗಿ ಬಚ್ಚಿಡುತ್ತಿದ್ದರು. ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ಇಲ್ಲಿಂದ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಿರುದ್ಧ ಈ ಹಿಂದೆಯೂ ಪ್ರಕರಣ
ಬಂಧಿತ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಜಿಯಾವುಲ್ ಹಕ್ ದುಬೈನ ರಾಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಅಲ್ತಾಫ್ ವಿರುದ್ಧವೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
-
ಮಂಗಳೂರು7 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ10 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ12 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್12 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ12 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಸಿನೆಮಾ11 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಅಪರಾಧ7 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಬಿಗ್ ನ್ಯೂಸ್11 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ


















