ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಈ ಹಿಂದೆ ನಿರಂತರ ಕಳ್ಳತನ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರವನ್ನು ಅಳವಡಿಸಿತ್ತು. ಕಳ್ಳತನ ಮತ್ತೆ ಇದೀಗ ಪುನರಾವರ್ತನೆಗೊಂಡಿದ್ದು ಈ ಬಾರಿ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್‌ ಆಗಿದೆ. ಕಡಬ ಪೊಲೀಸ್‌ ಠಾಣೆಯಲ್ಲಿ ಕಳ್ಳತನ ಕುರಿತಂತೆ […]" /> ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಈ ಹಿಂದೆ ನಿರಂತರ ಕಳ್ಳತನ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರವನ್ನು ಅಳವಡಿಸಿತ್ತು. ಕಳ್ಳತನ ಮತ್ತೆ ಇದೀಗ ಪುನರಾವರ್ತನೆಗೊಂಡಿದ್ದು ಈ ಬಾರಿ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್‌ ಆಗಿದೆ. ಕಡಬ ಪೊಲೀಸ್‌ ಠಾಣೆಯಲ್ಲಿ ಕಳ್ಳತನ ಕುರಿತಂತೆ […]"> Kadaba-ಕಡಬ: ಕೋಡಿಂಬಾಳ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ಸೆರೆ - Nikhara News | Kannada News Website
Connect with us

ಸ್ಥಳೀಯ

Kadaba-ಕಡಬ: ಕೋಡಿಂಬಾಳ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ಸೆರೆ

Published

on

Ad Widget

Ad Widget

Ad Widget

Ad Widget

ಕಡಬ: ಕಡಬದಲ್ಲಿನ ಕೋಡಿಂಬಾಳ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಮತ್ತೊಂದು ಕಳ್ಳತನವಾಗಿದೆ. ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Ad Widget

Ad Widget

Ad Widget

Ad Widget

ಕಡಬ: ಕಡಬದಲ್ಲಿನ ಕೋಡಿಂಬಾಳ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಮತ್ತೊಂದು ಕಳ್ಳತನವಾಗಿದೆ. ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Ad Widget

Ad Widget alt="Ad Widget"/>

Ad Widget

ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಈ ಹಿಂದೆ ನಿರಂತರ ಕಳ್ಳತನ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರವನ್ನು ಅಳವಡಿಸಿತ್ತು.

Ad Widget

Ad Widget <> Ad Widget

ಕಳ್ಳತನ ಮತ್ತೆ ಇದೀಗ ಪುನರಾವರ್ತನೆಗೊಂಡಿದ್ದು ಈ ಬಾರಿ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್‌ ಆಗಿದೆ.

ಕಡಬ ಪೊಲೀಸ್‌ ಠಾಣೆಯಲ್ಲಿ ಕಳ್ಳತನ ಕುರಿತಂತೆ ಪ್ರಕರಣ ದಾಖಲಾಗಿದೆ.

Click to comment

Leave a Reply

ಸ್ಥಳೀಯ

Rakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ

Published

on

Ad Widget

Ad Widget

Ad Widget

Ad Widget

ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಕ್ಷಿತ್ ಶಿವರಾಂ, ವಳಾಲು ಟೋಲ್ ಗೇಟ್‌ನಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಹೊಸ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಸಂದರ್ಭದಲ್ಲೇ ರಸ್ತೆ ತೆರಿಗೆ ಪಾವತಿಸಲಾಗುತ್ತಿದ್ದರೂ, ರಸ್ತೆ ಬಳಕೆಯ ಹೆಸರಿನಲ್ಲಿ ಮತ್ತೆ ಮತ್ತೆ ಟೋಲ್ ಶುಲ್ಕ ಹೆಚ್ಚಿಸುತ್ತಿರುವುದು ಎಷ್ಟು ಸಮಂಜಸ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಎರಡು ಟೋಲ್ ಪ್ಲಾಜಾಗಳ ನಡುವೆ ನಿಗದಿತ ಅಂತರ ಇರಬೇಕು. ಆದರೆ, ಬ್ರಹ್ಮರಕೊಟ್ಟು ಟೋಲ್ ಗೇಟ್‌ನಿಂದ 35 ಕಿ.ಮೀ.ಗಿಂತ ಕಡಿಮೆ, ಕೇವಲ 32 ಕಿ.ಮೀ. ಅಂತರದಲ್ಲೇ ವಳಾಲು ಟೋಲ್ ಆರಂಭಿಸಿ ಎರಡು ಕಡೆ ಶುಲ್ಕ ವಸೂಲಿ ಮಾಡುತ್ತಿರುವುದು ನಿಯಮಬಾಹಿರ ಎಂದು ರಕ್ಷಿತ್ ಶಿವರಾಂ ದೂರಿದ್ದಾರೆ.

Ad Widget

Ad Widget

ವಳಾಲು ಭಾಗದ ಸ್ಥಳೀಯರು ಬ್ಯಾಂಕ್, ಸಹಕಾರಿ ಹಾಲು ಡಿಪೋ, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ತೆರಳುವಂತಹ ದೈನಂದಿನ ಚಟುವಟಿಕೆಗಳಿಗೂ ಪ್ರತಿನಿತ್ಯ ₹250 ವರೆಗೆ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜನವಿರೋಧಿ ಟೋಲ್ ದರ ಏರಿಕೆ ವಿರುದ್ಧ ಧ್ವನಿ ಎತ್ತದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.

ವಾಹನ ಸವಾರರಿಗೆ ಹೊರೆಯಾಗುವ ರೀತಿಯಲ್ಲಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಶ್ನಿಸುವ ಧೈರ್ಯ ಶಾಸಕರಿಗಿದೆಯೇ ಎಂದು ರಕ್ಷಿತ್ ಶಿವರಾಂ ಸವಾಲು ಹಾಕಿದ್ದಾರೆ.

ವಳಾಲು ಟೋಲ್ ದರ ಏರಿಕೆಯನ್ನು ತಕ್ಷಣ ಮರುಪರಿಶೀಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಟೋಲ್ ದರ ನಿಗದಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳೀಯರಿಗೆ ವಿನಾಯಿತಿ ನೀಡಬೇಕು. ಬ್ರಹ್ಮರಕೊಟ್ಟು ಟೋಲ್ ಗೇಟ್ ತೆರವುಗೊಳಿಸಬೇಕು ಹಾಗೂ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಉದ್ದೇಶಿತ ಟೋಲ್ ಗೇಟ್ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮವರ್ಷದ ವಿದ್ಯಾರ್ಥಿಗಳ ಹೆತ್ತವರ ಮತ್ತು ಪೋಷಕರ ಸಭೆ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ ಮತ್ತು ಪೇರೆಂಟ್ ರಿಲೇಶನ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಸಾವರ್ಕರ್ ಸಭಾಭವನದಲ್ಲಿ ನಡೆದ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ವರ್ಷದ ವಿದ್ಯಾರ್ಥಿಗಳ ಹೆತ್ತವರ ಮತ್ತು ಪೋಷಕರ ಸಮಾಲೋಚನ ಸಭೆಯಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ ಡಿ. ಕಲ್ಲಾಜೆ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಕಾಲೇಜಿನ ಅತ್ಯುತ್ತಮ ಶೈಕ್ಷಣಿಕ ವಾತಾವರಣ, ಉಪನ್ಯಾಸಕರ ನಿರಂತರ ಮಾರ್ಗದರ್ಶನದ ಹೊರತಾಗಿ, ಹೆತ್ತವರೂ ಕೂಡಾ ತಮ್ಮ ಮಕ್ಕಳ ಓದುವ ಹವ್ಯಾಸವನ್ನು ಮತ್ತು ಶೈಕ್ಷಣಿಕ ಅಭಿವೃದ್ದಿಯನ್ನು ಹೆಚ್ಚಿಸಲು ಅವರನ್ನು ಸೂಕ್ತ ರೀತಿಯಲ್ಲಿ ಪ್ರೇರೇಪಿಸಬೇಕು ಎಂದು ಪುತ್ತೂರಿನ
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ ಡಿ. ಕಲ್ಲಾಜೆ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ ಮತ್ತು ಪೇರೆಂಟ್ ರಿಲೇಶನ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಸಾವರ್ಕರ್
ಸಭಾಭವನದಲ್ಲಿ ನಡೆದ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ವರ್ಷದ ವಿದ್ಯಾರ್ಥಿಗಳ ಹೆತ್ತವರ ಮತ್ತು
ಪೋಷಕರ ಸಮಾಲೋಚನ ಸಭೆಯಲ್ಲಿ ಮಾತನಾಡಿದರು.

Ad Widget

Ad Widget <> Ad Widget

ವಿದ್ಯಾರ್ಥಿಗಳು ತಮ್ಮ ನವೀನ ಅಲೋಚನೆಗಳನ್ನು ಹಂಚಿಕೊಂಡಾಗ ಅದಕ್ಕೆ ಸೂಕ್ತ ಪ್ರೋತ್ಸಾಹವನ್ನು ನೀಡಿ, ಪ್ರಾಯೋಗಿಕ ಯೋಜನೆಗಳನ್ನು ಕೈಗೊಳ್ಳಲು ಅವರಿಗೆ ಸಹಕಾರವನ್ನು ನೀಡಬೇಕು ಇದರಿಂದಾಗಿ ಸಾಮಾಜಿಕವಾಗಿ ಉಪಯೋಗವಾಗುವಂತಹ ಹೊಸ ತಂತ್ರಜ್ಞಾನದ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು.

ವಿದ್ಯಾರ್ಥಿಗಳ ಉತ್ತಮ ಶಿಸ್ತು ಮತ್ತು ನಡವಳಿಕೆಯ ಬಗ್ಗೆ ಹರ್ಷವ್ಯಕ್ತಪಡಿಸಿದ ಅವರು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ತಮ್ಮ ಮಕ್ಕಳ ಶೈಕ್ಷಣಿಕ ಹಾಗೂ ಸರ್ವತೋಮುಖ ಏಳಿಗೆಗೆ ಕಾಲೇಜಿನ ಜತೆಗೆ ಪೋಷಕರೂ ಸಹಕರಿಸಬೇಕು ಎಂದರು.

Ad Widget

Ad Widget

ಕಾಲೇಜಿನ ದಾಖಲಾತಿ ಮತ್ತು ವಿದ್ಯಾರ್ಥಿಗಳ ನೇಮಕಾತಿಗೆ ಎಲ್ಲರೂ ಸಹಕಾರವನ್ನು ನೀಡುವುದರೊಂದಿಗೆ ಸಂಸ್ಥೆಯ ಬೆಳವಣಿಗೆಯಲ್ಲಿ ಪಾಲುದಾರರಾಗಬೇಕೆಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ತಿಳಿದುಕೊಳ್ಳುವುದಕ್ಕೆ ಪೋಷಕರು ನಿರಂತರ ಕಾಲೇಜಿನ
ಸಂಪರ್ಕದಲ್ಲಿರಬೇಕು ಎಂದರು.

ಸಂಸ್ಥೆಯ ನೇಮಕಾತಿಯಲ್ಲಿನ ಅಂಕಿ ಅಂಶಗಳು, ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ನೀಡಲಾಗುವ ಸಹಕಾರ ಮತ್ತು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ನಮ್ಮ ವಿದ್ಯಾರ್ಥಿಗಳ ಸಾಧನೆಯ
ಬಗ್ಗೆ ಅವರು ಮಾಹಿತಿ ನೀಡಿದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜು ತೆಗೆದುಕೊಳ್ಳುವ ನಿರ್ಧಾರಗಳಿಗೆ ಹೆತ್ತವರ ಸಹಕಾರ ಅಗತ್ಯ ಎಂದರು.

ವಿದ್ಯಾರ್ಥಿಗಳ ಹೆತ್ತವರು ಮತ್ತು ಪೋಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು ಮತ್ತು ತಮಗಿದ್ದ
ಸಂಶಯಗಳನ್ನು ನಿವಾರಿಸಿಕೊಂಡರು. ಸಭಾ ಕಾರ್ಯಕ್ರಮದ ಬಳಿಕ ತಮ್ಮ ಮಕ್ಕಳಿಗೆ ಕಲಿಸುವ ಎಲ್ಲಾ
ಪ್ರಾಧ್ಯಾಪಕರ ಜತೆ ಪೋಷಕರು ಸಂವಹನವನ್ನು ನಡೆಸಿದರು.

ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ್, ಸುಜಿತ್ ಕುಮಾರ್, ಕೆ.ಸುಬ್ರಮಣ್ಯ ಭಟ್, ಮೂಲ ವಿಜ್ಞಾನ ವಿಭಾಗದ ಸಂಯೋಜಕಿಯರಾದ ಡಾ.ಶ್ವೇತಾಂಬಿಕಾ.ಪಿ ಹಾಗೂ ಪ್ರೊ.ತೇಜಸ್ವಿನಿ.ಎಲ್.ಪಿ ಮತ್ತು ಪೇರೆಂಟ್ ರಿಲೇಶನ್ ಸೆಲ್‌ನ ಮುಖ್ಯ
ಸಂಯೋಜಕಿ ಶ್ರೀಶರಣ್ಯ.ಯು.ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಾ.ಶ್ವೇತಾಂಬಿಕಾ.ಪಿ ಸ್ವಾಗತಿಸಿದರು. ಪ್ರೊ. ಶ್ರೀಶರಣ್ಯ ಯು.ಆರ್ ಪ್ರಸ್ತಾವನೆಗೈದರು. ಪ್ರೊ. ತೇಜಸ್ವಿನಿ.ಎಲ್.ಪಿ ವಂದನಾರ್ಪಣೆಗೈದರು. ಪ್ರೊ.ಹರ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Philomena-ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆ ಹಾಗೂ 10 ದಿನಗಳ ಪುಸ್ತಕ ಪ್ರದರ್ಶನವು ಸೋಮವಾರ, ನವೆಂಬರ್ 23, 2026 ರಂದು ನಡೆದ ಸಮಾರೋಪ ಸಮಾರಂಭದೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು.

Ad Widget

Ad Widget

Ad Widget

Ad Widget

ಪುತ್ತೂರು, ನ.23: ಇಲ್ಲಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆ ಹಾಗೂ 10 ದಿನಗಳ ಪುಸ್ತಕ ಪ್ರದರ್ಶನವು ಸೋಮವಾರ, ನವೆಂಬರ್ 23, 2026 ರಂದು ನಡೆದ ಸಮಾರೋಪ ಸಮಾರಂಭದೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು.

Ad Widget

Ad Widget alt="Ad Widget"/>

Ad Widget

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಅವರು ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು, ಹತ್ತು ದಿನಗಳ ಪರಿಣಾಮಕಾರಿ ಪುಸ್ತಕ ಪ್ರದರ್ಶನವನ್ನು ಆಯೋಜಿಸಿದ ಮತ್ತು ಕ್ಯಾಂಪಸ್‌ನಲ್ಲಿ ಉತ್ತಮ ಓದುವ ಸಂಸ್ಕೃತಿಯನ್ನು ಬೆಳೆಸಿದ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರವನ್ನು ಅಭಿನಂದಿಸಿದರು.
ಗ್ರಂಥಾಲಯಗಳು ಶೈಕ್ಷಣಿಕ ಸಂಸ್ಥೆಯ ನಿಜವಾದ ಹೃದಯಭಾಗವಿದ್ದಂತೆ ಎಂದು ಒತ್ತಿಹೇಳಿದ ಅವರು, ವಿದ್ಯಾರ್ಥಿಗಳು ತಮ್ಮ ನಿಗದಿತ ಪಠ್ಯಕ್ರಮವನ್ನು ಮೀರಿ ಜೀವನಪರ್ಯಂತ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಡಿಜಿಟಲ್ ಪರದೆಗಳು ನೀಡಲಾಗದ ಆಳವಾದ ಜ್ಞಾನ, ವಿಮರ್ಶಾತ್ಮಕ ಚಿಂತನೆ ಮತ್ತು ವ್ಯಕ್ತಿತ್ವ ನಿರ್ಮಾಣವನ್ನು ಪುಸ್ತಕಗಳು ಮಾಡುತ್ತವೆ ಎಂದು ತಿಳಿಸಿದ
ಅವರು, ತಮ್ಮ ಸಮಗ್ರ ಅಭಿವೃದ್ಧಿ ಮತ್ತು ಸ್ಪರ್ಧಾತ್ಮಕ ಯಶಸ್ಸಿಗಾಗಿ ಕಾಲೇಜಿನ ಶ್ರೀಮಂತ ಗ್ರಂಥಾಲಯ ಸಂಪನ್ಮೂಲಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

Ad Widget

Ad Widget <> Ad Widget

ನವೆಂಬರ್ 14ರಂದು ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಎಂ. ಅವರಿಂದ ಉದ್ಘಾಟನೆಗೊಂಡಿದ್ದ ವಿಸ್ತೃತ (ಸ್ನಾತಕೋತ್ತರ) ಗ್ರಂಥಾಲಯದಲ್ಲಿ ನಡೆದ ಹತ್ತು ದಿನಗಳ ಪುಸ್ತಕ ಪ್ರದರ್ಶನಕ್ಕೆ ಈ ಸಮಾರಂಭದ ಮೂಲಕ ಯಶಸ್ವಿ ತೆರೆ ಬಿದ್ದಿತು. ಪ್ರದರ್ಶನದ ಉದ್ದಕ್ಕೂ ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ಜೀವನಚರಿತ್ರೆ, ವ್ಯಕ್ತಿತ್ವ ವಿಕಸನ ಮತ್ತು ಕೆಎಎಸ್ (KAS) ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದ ಪ್ರಸಿದ್ಧ ಲೇಖಕರ 750ಕ್ಕೂ ಹೆಚ್ಚು ಪುಸ್ತಕಗಳನ್ನು ವೀಕ್ಷಿಸಿದರು.

ಡಿಜಿಟಲ್ ವ್ಯಾಮೋಹದಿಂದ ದೂರವಿದ್ದು ಓದುವ ಮತ್ತು ಬರೆಯುವ ಹವ್ಯಾಸವನ್ನು ಬೆಳೆಸುವ ನಿಟ್ಟಿನಲ್ಲಿ ಕಾಲೇಜಿನ ‘ಗ್ರಂಥಾಲಯ ಮಾಸ’ (Library Month) ಉಪಕ್ರಮ ಮತ್ತು ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಭಾಗವಾಗಿ ಈ ಹಿಂದೆ ಸಾಹಿತ್ಯಿಕ ಸ್ಪರ್ಧೆಗಳನ್ನೂ ಆಯೋಜಿಸಲಾಗಿತ್ತು. ಸಪ್ತಾಹದ ಪೂರ್ವಭಾವಿಯಾಗಿ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರವು ಪದವಿ ಮತ್ತು ಸ್ನಾತಕೋತ್ತರ
ವಿದ್ಯಾರ್ಥಿಗಳಿಗಾಗಿ ಎರಡು ಭಾಷಣ ಸ್ಪರ್ಧೆಗಳನ್ನು ಆಯೋಜಿಸಿತ್ತು. ಅಕ್ಟೋಬರ್ 5ರಂದು ಪ್ರದರ್ಶನ ಕಲೆಗಳ ಸಂಘದ ಸಹಯೋಗದೊಂದಿಗೆ ಇಂಗ್ಲಿಷ್ ಭಾಷಣ ಸ್ಪರ್ಧೆಯನ್ನು ಮತ್ತು ಅಕ್ಟೋಬರ್ 22ರಂದು ಹಿಂದಿ ವಿಭಾಗದ ಸಹಯೋಗದೊಂದಿಗೆ ಹಿಂದಿ ಭಾಷಣ ಸ್ಪರ್ಧೆಯನ್ನು ನಡೆಸಲಾಗಿತ್ತು.
ಅಭಿಪ್ರಾಯ ಹಂಚಿಕೆ ಅವಧಿಯಲ್ಲಿ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ಡಿಂಪಲ್ ಜೆ. ಫೆರ್ನಾಂಡಿಸ್, ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುಜಿತ್, ದ್ವಿತೀಯ ಎಂ.ಎಸ್ಸಿ. ಗಣಿತಶಾಸ್ತ್ರ ವಿದ್ಯಾರ್ಥಿನಿ ಶ್ರೀದೇವಿ ಎನ್. ಮತ್ತು ದ್ವಿತೀಯ ಎಂ.ಕಾಂ. ವಿದ್ಯಾರ್ಥಿ ವಿಷ್ಣುಜಿತ್ ಎಂ.ಎ. ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

Ad Widget

Ad Widget

ಈ ಸಂದರ್ಭದಲ್ಲಿ ಪರೀಕ್ಷಾಂಗ ಕುಲಸಚಿವ ಡಾ. ವಿನಯಚಂದ್ರ, ಐಕ್ಯೂಎಸಿ ಸಂಯೋಜಕ ಹಾಗೂ ಹಣಕಾಸು ಅಧಿಕಾರಿ ಡಾ. ಎಡ್ವಿನ್ ಎಸ್. ಡಿ’ಸೋಜಾ, ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್. ರೈ, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಕಾಶ್ ಡಿ’ಸೋಜಾ, ಪ್ರಾಧ್ಯಾಪಕರು ಹಾಗೂ ಗ್ರಂಥಾಲಯ ಸಲಹಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ವ್ಯವಹಾರ ಆಡಳಿತ ಮತ್ತು ವೃತ್ತಿಪರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರಶಾಂತ್ ರೈ ಕಾರ್ಯಕ್ರಮ ನಿರೂಪಿಸಿದರು. ಆಯ್ಕೆ ಶ್ರೇಣಿ ಗ್ರಂಥಪಾಲಕ ಅಬ್ದುಲ್ ರಹಮಾನ್ ಜಿ. ಅವರು ಸಮಾರಂಭಕ್ಕೆ ಆಗಮಿಸಿದ ಮತ್ತು ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆಗೆ
ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ ವಂದಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!