ಸ್ಥಳೀಯ
Tulunadu priest-ತುಳುನಾಡಿನ ಪುರೋಹಿತ ಜಗತ್ತಿನ ಅತೀ ಶ್ರೀಮಂತ ದೇವಸ್ಥಾನಕ್ಕೆ ಪ್ರಧಾನ ಅರ್ಚಕರಾಗಿ ನೇಮಕ !
ದೇಶದ ಅತೀ ಶ್ರೀಮಂತ ದೇವಸ್ಥಾನ ಕೇರಳದ ತಿರುವನಂತಪುರ ಅನಂತ ಪದ್ಮನಾಭ ಸ್ವಾಮಿ ದೇಗುಲದ ಪ್ರಧಾನ ಅರ್ಚಕ(ಪೆರಿಯ ನಂಬಿ)ರಾಗಿ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ (45 ವ) ನೇಮಕಗೊಂಡಿದ್ದಾರೆ. ಸತ್ಯನಾರಾಯಣ ಅವರು ಜ.30ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಬೆಳ್ತಂಗಡಿ, ಜ.29: ದೇಶದ ಅತೀ ಶ್ರೀಮಂತ ದೇವಸ್ಥಾನ ಕೇರಳದ ತಿರುವನಂತಪುರ ಅನಂತ ಪದ್ಮನಾಭ ಸ್ವಾಮಿ ದೇಗುಲದ ಪ್ರಧಾನ ಅರ್ಚಕ(ಪೆರಿಯ ನಂಬಿ)ರಾಗಿ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ (45 ವ) ನೇಮಕಗೊಂಡಿದ್ದಾರೆ. ಸತ್ಯನಾರಾಯಣ ಅವರು ಜ.30ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಈ ಹುದ್ದೆಗೇರಿದ ಬಳಿಕ ಗೃಹಸ್ಥಾಶ್ರಮ ತೊರೆದು ಸನ್ಯಾಸಿಯಂತೆ ಇರಬೇಕು. ಜತೆಗೆ ದೇವರ ಯಾವುದೇ ಉತ್ಸವಗಳಿಗೆ ಇವರದೇ ಪ್ರಧಾನ ಪೌರೋಹಿತ್ಯವಾಗಿರುತ್ತದೆ.
ಸತ್ಯನಾರಾಯಣ ತೋಡ್ತಿಲ್ಲಾಯ ಅವರು ದೇವಸ್ಥಾನದಿಂದ ನೀಡಲಾಗುವ ಛತ್ರಿ ಮರ್ಯಾದೆ ಸ್ವೀಕರಿಸುವ ಮಹಾ ಪ್ರಧಾನ ಅರ್ಚಕ ಸ್ಥಾನವನ್ನು ಅಲಂಕರಿಸಲಿದ್ದಾರೆ. ಮಹಾ ಪ್ರಧಾನ ಅರ್ಚಕರೆಂದರೆ ಅವರಿಗೆ ಸಂಸ್ಥಾನದಿಂದ ನೀಡುವ ಕೊಡ (ಛತ್ರಿ) ಮರ್ಯಾದೆ ಇರುವ ವಿಶೇಷ ಸ್ಥಾನ. ಈ ಮಹಾ ಆರ್ಚಕ ಸ್ಥಾನವನ್ನು ಈ ವರೆಗೆ ಪಡೆದವರಲ್ಲಿ ಸತ್ಯನಾರಾಯಣ ತೋಡ್ತಿಲ್ಲಾಯರು ಅತಿ ಕಿರಿಯರು.
ಜೂ.16ರಂದು ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಅವರು ತಿರುವನಂತಪುರದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕಗೊಂಡಿದ್ದರು. ಇದೀಗ ಮುಖ್ಯ ಅರ್ಚಕರಾಗಿ ನಿಯುಕ್ತಿಗೊಂಡ ಆರೇ ತಿಂಗಳಲ್ಲಿ ಮಹತ್ತರ ಸ್ಥಾನ ಪಡೆದ ಅರ್ಚಕ ಇವರಾಗಿದ್ದಾರೆ.
ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದ ಆಯ್ಕೆ ಇದಾಗಿದ್ದು, ಈ ಹುದ್ದೆ ಆಕ್ಕರೆ ದೇಶಿ (ಕೊಕ್ಕಡದ 8 ಮನೆತನ) ಹಾಗೂ ಇಕ್ಕರೆ ದೇಶಿ ಕೇರಳದ 4 ಮನೆತನದ ಒಳಗಾಗಿ ಬರುವಂಥದ್ದು. ಈ ಹಿಂದೆ ಈ ಹುದ್ದೆಯಲ್ಲಿ ರಾಜೇಂದ್ರ ಅರೆಮನೆತ್ತಾಯ (ಅಕ್ಕರೆದೇಶಿ) ಅವರು 1.4 ವರ್ಷ ಸೇವೆ ಸಲ್ಲಿಸಿದ್ದರು.
ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿಯಾಗಿರುವ ಸತ್ಯನಾರಾಯಣ ತೋಡ್ತಿಲ್ಲಾಯ ಅವರು ಬೆಳ್ತಂಗಡಿಯ ಕೊಕ್ಕಡದ ದಿ. ಸುಬ್ರಾಯ ತೋಡ್ತಿಲ್ಲಾಯ ಮತ್ತು ದಿ.ಯಶೋಧ ದಂಪತಿಗಳ ಪುತ್ರ. ಸತ್ಯನಾರಾಯಣ ಅವರ ತಂದೆ ಸುಬ್ರಾಯ ತೋಡ್ತಿಲ್ಲಾಯರು ಕೂಡ 2 ವರ್ಷಗಳ ಕಾಲ ಈ ಶ್ರೀಮಂತ ದೇವಾಲಯದಲ್ಲಿ ಕಾರ್ಯನಿರ್ವಹಿಸಿದ್ದರು. ಇನ್ನು ಇವರ ಅಜ್ಜ ದಿ.ನಾರಾಯಣ ತೋಡ್ತಿಲ್ಲಾಯರು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸನ್ನಿಧಿಯಲ್ಲಿ ಹಲವು ವರ್ಷಗಳ ಕಾಲ ಪೂಜಾ ಸೇವೆಯನ್ನು ಸಲ್ಲಿಸಿದ್ದರು. ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ನಾರಾಯಣ ತೋಡ್ತಿಲ್ಲಾಯರು, ಪಾಲಾಲೆ ದಿ. ಸತೀಶ ಯಡಪಡಿತ್ತಾಯ ಅವರ ಬಳಿ ವೇದ ಅಭ್ಯಾಸವನ್ನು ಮಾಡಿದ್ದಾರೆ.
ಪೂಜಾ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸತ್ಯನಾರಾಯಣ ತೋಡ್ತಿಲ್ಲಾಯರ ಪತ್ನಿ ಸ್ನೇಹ ಹಾಗೂ ಪುತ್ರ ಸೌರಭ್ ಬೆಂಗಳೂರಿನಲ್ಲಿಯೇ ಜೀವನ ನಡೆಸುತ್ತಿದ್ದಾರೆ.
ಪುತ್ತೂರು
ಮುಳಿಯ ಶ್ಯಾಮ್ ಭಟ್ ನಿಧನ : ‘ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ ಅ.6ರಂದು ಮಧ್ಯಾಹ್ನ 2 ಗಂಟೆಯವರೆಗೆ ಶೋರೂಮ್ ಬಂದ್
ಪುತ್ತೂರು, ಅ.5: ಹಿರಿಯ ಚಿನ್ನಾಭರಣ ಉದ್ಯಮಿ ಹಾಗೂ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ್ ಭಟ್ (81) ಅವರ ನಿಧನಕ್ಕೆ ಗೌರವ ಸೂಚಿಸಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಪುತ್ತೂರು ಹಾಗೂ ಸುಳ್ಯ ಶೋರೂಂಗಳನ್ನು ಅ.6ರಂದು ಮಧ್ಯಾಹ್ನದವರೆಗೆ ಬಂದ್ ಇರಿಸಲಾಗುವುದು.

ಚಿನ್ನಾಭರಣ ಉದ್ಯಮ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಗುರುತಿಸಿಕೊಂಡಿದ್ದ ಶ್ಯಾಮ್ ಭಟ್ ಅವರ ಅಗಲಿಕೆಗೆ ಸಂತಾಪ ಸೂಚಿಸುವ ಉದ್ದೇಶದಿಂದ ಶೋರೂಂ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಶ್ಯಾಮ್ ಭಟ್ ಅವರು ಅ.4ರಂದು ನಿಧನರಾಗಿದ್ದು, ಅ.6ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ಅಂತಿಮ ದರ್ಶನಕ್ಕೆ ಅವಕಾಶವಿದೆ. ಬಳಿಕ ಅಂತ್ಯಕ್ರಿಯೆ ನಡೆಯಲಿದೆ.
ಬಿಗ್ ನ್ಯೂಸ್
Puttur Dasara-92ನೇ ವರ್ಷದ ಶಾರದೋತ್ಸವಕ್ಕೆ ಹೊಸ ರೂಪ; ‘ಪುತ್ತೂರು ದಸರಾ’ ನಾಮಾಂಕಿತದಲ್ಲಿ ನವರಾತ್ರಿಯ ವೈಭವದ ಆಚರಣೆ
ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ ನಡೆಯುತ್ತಿದೆ. ಇದೀಗ ಈ ಉತ್ಸವಕ್ಕೆ ಮತ್ತಷ್ಟು ವಿಶಾಲ ರೂಪ ನೀಡುವ ಉದ್ದೇಶದಿಂದ ಈ ವರ್ಷದಿಂದ ಪುತ್ತೂರು ಶಾರದೋತ್ಸವವನ್ನು ‘ಪುತ್ತೂರು ದಸರಾ’ ಎಂಬ ನಾಮಾಂಕಿತದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.
ಪುತ್ತೂರು: ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ ನಡೆಯುತ್ತಿದೆ. ಇದೀಗ ಈ ಉತ್ಸವಕ್ಕೆ ಮತ್ತಷ್ಟು ವಿಶಾಲ ರೂಪ ನೀಡುವ ಉದ್ದೇಶದಿಂದ ಈ ವರ್ಷದಿಂದ ಪುತ್ತೂರು ಶಾರದೋತ್ಸವವನ್ನು ‘ಪುತ್ತೂರು ದಸರಾ’ ಎಂಬ ನಾಮಾಂಕಿತದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ.11ರಿಂದ 21ರವರೆಗೆ 92ನೇ ವರ್ಷದ ನವರಾತ್ರಿ ಪೂಜೆ ಹಾಗೂ ಶ್ರೀ ಶಾರದೋತ್ಸವ ವೈಭವದಿಂದ ನಡೆಯಲಿದೆ.
ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅ.21ರಂದು 20ಕ್ಕೂ ಅಧಿಕ ಕಲಾತಂಡಗಳು, ಸಾವಿರಾರು ಕುಣಿತ ಭಜನಾ ತಂಡಗಳು ಹಾಗೂ ವಿವಿಧ ವಾದ್ಯಘೋಷಗಳೊಂದಿಗೆ ಶ್ರೀ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆ ನಡೆಯಲಿದ್ದು, ಇದರೊಂದಿಗೆ ‘ಪುತ್ತೂರು ದಸರಾ’ ಸಂಪನ್ನಗೊಳ್ಳಲಿದೆ.
ದಸರಾ ಪರಂಪರೆಗೆ ಹೊಸ ರೂಪ
ಶ್ರೀ ಶಾರದಾ ಭಜನಾ ಮಂದಿರದ ಅಧ್ಯಕ್ಷ ಕೆದಂಬಾಡಿಗುತ್ತು ಸೀತಾರಾಮ ರೈ ಮಾತನಾಡಿ, ಹಲವು ಪವಾಡಗಳಿಗೆ ಸಾಕ್ಷಿಯಾಗಿರುವ ಪುತ್ತೂರು ಶಾರದಾ ಭಜನಾ ಮಂದಿರದಲ್ಲಿ ಕಳೆದ ಮೂರು ವರ್ಷಗಳಿಂದ ಶಾರದೋತ್ಸವವನ್ನು ಗತಕಾಲದ ವೈಭವವನ್ನು ಮರುಕಳಿಸುವ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದರು.
ಈ ಬಾರಿ ಶಾರದೋತ್ಸವಕ್ಕೆ ‘ಪುತ್ತೂರು ದಸರಾ’ ಎಂಬ ನಾಮಾಂಕಿತ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಪುತ್ತೂರು ತಾಲೂಕಿನ ದಸರಾ ಮಹೋತ್ಸವವಾಗಿ ರೂಪಿಸುವ ಉದ್ದೇಶವಿದೆ. ಈ ಕುರಿತು ಮೂರು ವರ್ಷಗಳ ಹಿಂದೆಯೇ ಸಮಿತಿಯಲ್ಲಿ ಚಿಂತನೆ ನಡೆದಿತ್ತು ಎಂದು ಅವರು ತಿಳಿಸಿದರು.
ಪುತ್ತೂರಿನಲ್ಲೇ ದಸರಾ ವೈಭವ
ಹಿಂದೆ ದಸರಾ ಮೆರವಣಿಗೆಯ ವೈಭವವನ್ನು ಕಣ್ತುಂಬಿಕೊಳ್ಳಲು ಪುತ್ತೂರಿನ ಜನರು ಮಂಗಳೂರು ಹಾಗೂ ಮಡಿಕೇರಿಗೆ ತೆರಳುತ್ತಿದ್ದರು. ಆದರೆ ಕಳೆದ ಮೂರು ವರ್ಷಗಳಿಂದ ಪುತ್ತೂರು ಶಾರದೆಯ ವೈಭವದ ಶೋಭಾಯಾತ್ರೆ ಜನರ ಗಮನ ಸೆಳೆಯುತ್ತಿದ್ದು, ವರ್ಷದಿಂದ ವರ್ಷಕ್ಕೆ ಹೊಸತನವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಇದಕ್ಕೆ ಸಾರ್ವಜನಿಕರಿಂದಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಸೀತಾರಾಮ ರೈ ಹೇಳಿದರು.
ಪುತ್ತೂರಿನಲ್ಲೇ ಜನರು ದಸರಾ ವೈಭವವನ್ನು ಕಣ್ತುಂಬಿಕೊಳ್ಳುವಂತಾಗಬೇಕು ಎಂಬ ಉದ್ದೇಶದಿಂದ ಶಾರದೋತ್ಸವಕ್ಕೆ ‘ಪುತ್ತೂರು ದಸರಾ’ ಎಂಬ ವಿಶಾಲ ರೂಪ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇದು ಪುತ್ತೂರು ತಾಲೂಕಿನ ಜನತೆಯ ದಸರಾ ಮಹೋತ್ಸವವಾಗಿ ಬೆಳೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಹತ್ತು ದಿನ ಧಾರ್ಮಿಕ-ಸಾಂಸ್ಕೃತಿಕ ಸಂಭ್ರಮ
ಅ.11ರಿಂದ ಆರಂಭವಾಗುವ ಉತ್ಸವದಲ್ಲಿ ನವರಾತ್ರಿ ಪೂಜೆ, ಶ್ರೀ ಶಾರದಾ ಆರಾಧನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಚಂಡಿಕಾ ಹೋಮ ಸೇರಿದಂತೆ ವಿಶೇಷ ಧಾರ್ಮಿಕ ಆಚರಣೆಗಳು ನಡೆಯಲಿದ್ದು, ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರು ಹಾಗೂ ಸಾರ್ವಜನಿಕರನ್ನು ರಂಜಿಸಲಿವೆ.
ಅ.21ರಂದು ನಡೆಯುವ ಸಮಾರೋಪದಂದು 20ಕ್ಕೂ ಅಧಿಕ ಪ್ರಸಿದ್ಧ ಕಲಾತಂಡಗಳು, ಸಾವಿರಾರು ಕುಣಿತ ಭಜನಾ ತಂಡಗಳು ಹಾಗೂ ವಿವಿಧ ವಾದ್ಯಘೋಷಗಳು ಶೋಭಾಯಾತ್ರೆಗೆ ಮೆರುಗು ನೀಡಲಿವೆ. ಶ್ರೀ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯೊಂದಿಗೆ ಈ ಬಾರಿಯ ‘ಪುತ್ತೂರು ದಸರಾ’ ವೈಭವಕ್ಕೆ ತೆರೆ ಬೀಳಲಿದೆ.
ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ದಸರಾ ಸಮಿತಿಯ ಗೌರವ ಮಾರ್ಗದರ್ಶಕ ಡಾ. ಸುರೇಶ್ ಪುತ್ತೂರಾಯ, ಉಪಾಧ್ಯಕ್ಷ ದಯಾನಂದ ಪಿ., ಶಾರದಾ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಕೋಶಾಧಿಕಾರಿ ವಸಂತ್ ಕುಮಾರ್ ಹಾಗೂ ಶೋಭಾಯಾತ್ರೆಯ ಸಂಚಾಲಕರಾದ ಕೃಷ್ಣ ಎಂ. ಅಳಿಕೆ ಮತ್ತು ನವೀನ್ ಕುಲಾಲ್ ಪುತ್ತೂರು ಉಪಸ್ಥಿತರಿದ್ದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕಿಶನ್ ಕೆ ವೈ, ತ್ರಿಶಿಕ್ ಕೆ. ಗೌಡ , ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ, ಅನ್ವಿತ್ ಎಸ್ .ಪಿ, ನಿದೀಶ್ ಶೆಟ್ಟಿ, ಮನ್ವಂತ್ ದ್ವಿತೀಯ ಪಿಯುಸಿ ಪ್ರಣಮ್ ಪಿ ಶೆಟ್ಟಿ ,ಚಿಂತನ್ ಕೆ, ಕೆ ಆರ್ ದಿಶಾಂತ್ ಹಾಗೂ ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿನ್ಯಾ ರೈ, ಸೃಷ್ಟಿ ಎಸ್. ಆರ್. ರೈ, ವೀಕ್ಷಾ ಬಿ. ಆರ್, ಧರಣಿ ಕೆ. ಟಿ, ಶ್ರಾವ್ಯ, ಕೆ. ಸುಶಾನಿ, ಸಿ. ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್, ತನ್ವಿ ದ್ವಿತೀಯ ಪಿಯುಸಿ ಧನ್ವಿ ಎ. ಆರ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
ನಿಧನ ವಾರ್ತೆ12 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್17 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ18 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ17 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ17 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ15 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ17 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ರಾಜಕೀಯ12 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















