Connect with us

ರಾಜಕೀಯ

Dr K Sudhakar-ವಿಜಯೇಂದ್ರ ಇದ್ದರೆ ಬಿಜೆಪಿಗೆ ಭವಿಷ್ಯವಿಲ್ಲ : ಜೀ ಹುಜೂರ್ ಅನ್ನೋರೇ ಅವರ ಜೊತೆಗಿದ್ದಾರೆ – ಸಿದ್ದರಾಮಯ್ಯ ಮಾತನ್ನು ನಾನು ಕೇಳಬೇಕಿತ್ತು : ಮಾಜಿ ಸಚಿವ ಡಾ.ಕೆ ಸುಧಾಕರ್

Published

on



Ad Widget

Ad Widget

Ad Widget

Ad Widget

ವಿಜಯೇಂದ್ರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದು, ʻಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲʼ ಎಂದು ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಸದ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರ ಬದಲಾವಣೆ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

Ad Widget

Ad Widget

Ad Widget

Ad Widget

ಬೆಂಗಳೂರು: ವಿಜಯೇಂದ್ರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದು, ʻಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲʼ ಎಂದು ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ತಮ್ಮ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಸದ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರ ಬದಲಾವಣೆ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ವಿಜಯೇಂದ್ರ ನನ್ನ ಬಳಿ ಚರ್ಚೆ ಮಾಡದೇ ನನ್ನ ಜಿಲ್ಲೆಯ ಅಧ್ಯಕ್ಷರ ಬದಲಾವಣೆ ಮಾಡಿದ್ದಾರೆ. ಅಹಂಕಾರ, ದರ್ಪದಿಂದ ಏಕಪಕ್ಷೀಯ ತೀರ್ಮಾನ ಕೈಗೊಂಡಿದ್ದಾರೆ. ಅವರ ವಿರುದ್ಧ ಹೈಕಮಾಂಡ್ ನಾಯಕರಿಗೆ ದೂರು ಕೊಡುವುದಾಗಿ ಡಾ.ಕೆ. ಸುಧಾಕರ್‌ ಎಚ್ಚರಿಕೆ ನೀಡಿದ್ದಾರೆ.



Ad Widget

ವಿಜಯೇಂದ್ರ ಚಿಕ್ಕಬಳ್ಳಾಪುರದಲ್ಲಿ ನನ್ನ ರಾಜಕೀಯ ಸಮಾಧಿ ಮಾಡಲು ಮುಂದಾಗಿದ್ದಾರೆ. ಚಿಕ್ಕಬಳ್ಳಾಪುರ ಬಿಜೆಪಿ ಮರುಭೂಮಿಯಂತಿತ್ತು. ಅಲ್ಲಿ ತಳಹಂತದಿಂದ ಪಕ್ಷ ಕಟ್ಟಿದವನು ನಾನು. ವಿಜಯೇಂದ್ರ ಯಾರನ್ನೂ ವಿಶ್ವಾಸಕ್ಕೆ ಪಡೆಯದೇ ಜಿಲ್ಲೆಗಳಲ್ಲಿ ಅವರಿಗೆ ಜೀ ಹುಜೂರ್ ಅನ್ನೋರನ್ನೇ ನೇಮಿಸಿದ್ದಾರೆ. ಅವರ ಅಹಂಕಾರ, ದರ್ಪಕ್ಕೆ ನನ್ನ ಧಿಕ್ಕಾರ. ವಿಜಯೇಂದ್ರ ಬಿಜೆಪಿ ಮುಗಿಸ್ತಾರೆ. ತಾಕತ್ ಇದ್ರೆ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ವಿಜಯೇಂದ್ರ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದಾರೆ.

Ad Widget

Ad Widget

ವಿಜಯೇಂದ್ರಗೆ ತಂದೆಯ ಗುಣಗಳಾವುದು ಬಂದಿಲ್ಲ. ಅವರದ್ದು ಹಠ, ದ್ವೇಷದ ರಾಜಕಾರಣ. ನನ್ನ ತಾಳ್ಮೆ ಮುಗೀತು ಇನ್ನೇನಿದ್ರೂ ಯುದ್ಧವಷ್ಟೇ. ವರಿಷ್ಠರ ಅಪಾಯಿಂಟ್ಮೆಂಟ್ ಕೇಳಿದ್ದು, ದೆಹಲಿಗೆ ಹೋಗಿ ದೂರು ಕೊಡುತ್ತೇನೆ. ಪಕ್ಷದಲ್ಲಿ ಯಾವುದೂ ಸರಿಯಾಗದಿದ್ದರೆ ಜಿಲ್ಲೆಯ ಮುಖಂಡರ ಬಳಿ ಚರ್ಚಿಸಿ ಮುಂದಿನ ರಾಜಕೀಯ ತೀರ್ಮಾನ ಕೈಗೊಳ್ಳುತ್ತೇನೆ. ಕೋರ್ ಕಮಿಟಿ ಸಭೆಯಲ್ಲಿ ಚಿಕ್ಕಬಳ್ಳಾಪುರ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಮಾಡಲೇ ಇಲ್ಲ. ಇವತ್ತು ಏಕಾಏಕಿ ಪ್ರಕಟ ಮಾಡಿದ್ದೀರಿ. ಇವರ ವ್ಯವಹಾರ, ರಾಜಕಾರಣ ಎಲ್ಲವನ್ನೂ ನಾಯಕರಿಗೆ ಹೇಳುತ್ತೇನೆ ಎಂದಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿ, ಹಾವೇರಿಯಲ್ಲಿ ಬೊಮ್ಮಾಯಿಯವರನ್ನೂ ವಿಜಯೇಂದ್ರ ಗಣನೆಗೆ ತಗೊಂಡಿಲ್ಲ. ಡಿವಿಎಸ್, ಅಶೋಕ್, ಅಶ್ವಥನಾರಾಯಣರನ್ನು ಗಣನೆಗೆ ತಗೊಳ್ಳದೇ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ವಿಜಯೇಂದ್ರ ಪರ 80% ಶಾಸಕರು ಇದ್ದಾರೆ ಎಂದು ಹೇಳುತ್ತಾರೆ. ಹಾಗಾದ್ರೆ ಆಂತರಿಕ ಪ್ರಜಾಪ್ರಭುತ್ವದಂತೆ ಯಾಕೆ ತೀರ್ಮಾನ ಆಗಿಲ್ಲ? ಮೋದಿಯವರೇ ಮೂರನೇ ಸಲ ಪ್ರಧಾನಿ ಆದ್ರು ಎಷ್ಟು ಸೌಜನ್ಯದಿಂದ ವರ್ತಿಸ್ತಾರೆ. ಸಣ್ಣ ಕಾರ್ಯಕರ್ತನ ಜತೆಗೂ ಮೋದಿಯವರು ಸೌಜನ್ಯದಿಂದ ಮಾತಾಡ್ತಾರೆ. ವಿಜಯೇಂದ್ರಗೆ ಆ ಸೌಜನ್ಯ ಇಲ್ಲವೇ ಇಲ್ಲ ಎಂದು ಕಿಡಿಕಾರಿದ್ದಾರೆ.

ಸಿಎಂ ನನಗೆ ಆಪ್ತರು, ನಿನ್ನ ಉಪಯೋಗಿಸಿ ನಡುನೀರಲ್ಲಿ ಬಿಡ್ತಾರೆ ಕಣಯ್ಯ ಅಂದಿದ್ರು ಎಂದು ಇದೇ ವೇಳೆ ಹಿಂದೆ ಸಿದ್ದರಾಮಯ್ಯ ಹೇಳಿದ್ದ ಮಾತನ್ನು ನೆನಪಿಸಿಕೊಂಡಿದ್ದಾರೆ.

Ad Widget
Click to comment

Leave a Reply

ಸ್ಥಳೀಯ

Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ

Published

on



Ad Widget

Ad Widget

Ad Widget

Ad Widget

ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.

Ad Widget

Ad Widget <> Ad Widget

ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.



Ad Widget

ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Ad Widget

Ad Widget

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ವಿವಿಧ ಭಾಗಗಳಿಂದ ಕಂಬಳ ಕೋಣಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

Ad Widget
Continue Reading

ರಾಜಕೀಯ

U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್

Published

on



Ad Widget

Ad Widget

Ad Widget

Ad Widget

ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್‌ ಬಿಚ್ಚಿಟ್ಟಿದ್ದಾರೆ

Ad Widget

Ad Widget <> Ad Widget

ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.



Ad Widget

ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

Ad Widget

Ad Widget

ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ

ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548

Ad Widget
Continue Reading

ಅಂತರ ರಾಜ್ಯ

Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್

Published

on



Ad Widget

Ad Widget

Ad Widget

Ad Widget

ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.



Ad Widget

ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.

Ad Widget

Ad Widget

ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.

ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.

ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.

ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್‌ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.

ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.

ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading