Connect with us

ರಾಜಕೀಯ

Covid Scandal | 2023 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರದಿರಲು ‘ಕೋವಿಡ್ ಹಗರಣ’ ಗಳೇ ಕಾರಣ..! ಸಂಸದ ಡಾ. ಕೆ ಸುಧಾಕರ್ ವಿರುದ್ಧ ಏಕವಚನದಲ್ಲೇ ಯದ್ವತದ್ವ ವಾಗ್ದಾಳಿ ನಡೆಸಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

Published

on

Ad Widget

Ad Widget

Ad Widget

Ad Widget

ಬೆಂಗಳೂರು: 2023 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರದಿರಲು ಕೋವಿಡ್ ಹಗರಣಗಳೇ (Covid Scandal) ಕಾರಣ ಎಂದು ಸಂಸದ ಡಾ. ಕೆ ಸುಧಾಕರ್ ವಿರುದ್ಧ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಜ.30 ರಂದು ಮಾತನಾಡಿದ ಎಸ್‌.ಆರ್ ವಿಶ್ವನಾಥ್‌, ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕಾತಿ ಕುರಿತು ಸಂಸದ ಡಾ. ಸುಧಾಕರ್ ಅಸಮಾಧಾನ ವಿಚಾರಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕಿಲ್ಲ ಎಂದು ಹೇಳಿದರು. ಸುಧಾಕರ್ ರಾಜ್ಯಾಧ್ಯಕ್ಷ ವಿಜಯೇಂದ್ರ‌ ಬಗ್ಗೆ ಬಹಳ ಕೇವಲವಾಗಿ ಮಾತಾಡಿದ್ದಾರೆ. ಅವರು ಮಾತಾಡಿರುವುದು ನಮಗೆ ಹಿಡಿಸಿಲ್ಲ.‌ ಏನೇ ಇದ್ದರೂ ರಾಜ್ಯಾಧ್ಯಕ್ಷರ ಜೊತೆ ಮಾತಾಡಬಹುದಿತ್ತು ಎಂದು ಎಸ್‌.ಆರ್.‌ ವಿಶ್ವನಾಥ್‌ ಅಸಮಾಧಾನ ವ್ಯಕ್ತಪಡಿಸಿದರು.

Ad Widget

Ad Widget

Ad Widget

Ad Widget

ಪರೋಕ್ಷವಾಗಿ ನನ್ನ ಕ್ಷೇತ್ರದ ಬಗ್ಗೆಯೂ ಸುಧಾಕರ್ ಮಾತಾಡಿದ್ದಾರೆ.‌ ನಾನೇನು ದಡ್ಡ ಅಲ್ಲ. ಸುಧಾಕರ್ ನನ್ನಿಂದಲೇ ಸರ್ಕಾರ ರಚನೆ ಆಯಿತು ಅಂತಾ ಹೇಳಿದ್ದಾರೆ. 17 ಶಾಸಕರು ಬಂದಾಗ ಕೊನೆಯದಾಗಿ ಮೆಜಾರಿಟಿ ಆದ ಬಳಿಕ ಬಂದವರು ಸುಧಾಕರ್. ವಿಧಾನಸೌಧದಲ್ಲಿ ಸುಧಾಕರ್ ಮೇಲೆ ಹಲ್ಲೆ ಆದಾಗ ರಕ್ಷಣೆ ಮಾಡಿ ಮನೆಗೆ ಕರೆದುಕೊಂಡು ಹೋಗಿ ಬಿಟ್ಟವನು ನಾನು ಎಂದು ತಿರುಗೇಟು ನೀಡಿದರು.

Ad Widget

Ad Widget alt="Ad Widget"/>

Ad Widget

ಸಮರ್ಥ ಸಚಿವರಾಗಿದ್ದೂ ಸಾಕಷ್ಟು ಅನುದಾನ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಹಾಕಿದರೂ ಯಾಕೆ ನೀವು ಸೋತಿರಿ? ನಿಮಗೆ ಅಸಮಾಧಾನ ಇರಬಹುದು, ಆದರೆ ವಿಜಯೇಂದ್ರ‌ ಬಗ್ಗೆ ಬಹಿರಂಗವಾಗಿ ಮಾತಾಡಿದ್ರಿ? ನನಗೂ ವಿಜಯೇಂದ್ರ‌ ಬಗ್ಗೆ ಸಣ್ಣ ಪುಟ್ಟ ಅಸಮಾಧಾನ ಇದ್ದರೂ ನಾನು ಎಲ್ಲೂ ಹೊರಗೆ ಮಾತಾಡಿಲ್ಲ ಎಂದು ಹೇಳಿದರು.

Ad Widget

Ad Widget <> Ad Widget

ಲೋಕಸಭಾ ಚುನಾವಣೆ ವೇಳೆ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೆಸ್ ‌ನಿಂದ ನಿಲ್ಲುವ ಬಗ್ಗೆ ಮಾತಾಡಿದ್ದು ಸುಳ್ಳಾ? ಎಲ್ಲಿ ಪ್ರಮಾಣ ಮಾಡಬೇಕು ಹೇಳಿ ಬನ್ನಿ, ನಾನು ಬರುತ್ತೇನೆ. ಆಗ ಎಲ್ಲಿ ಹೋಗಿತ್ತು ನಿಮ್ಮ ಪಕ್ಷ ನಿಷ್ಠೆ ಎಂದು ಸುಧಾಕರ್ ಗೆ ಪ್ರಶ್ನೆ ಮಾಡಿದರು.

ಹೌದು, ಆಗ ನಾವು ವಿರೋಧ ಮಾಡಿದ್ದು ನಿಜ, ಆಗ ನಾನು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನನ್ನ ಮಗನ ಹೆಸರು ಹೇಳಿದ್ದೆ ಅಷ್ಟೇ. ಆದರೆ ನೀನು ಎಷ್ಟು ಲೀಡ್ ತಗೊಂಡೆ? ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಯಾಕೆ ಸೋತೆ ನೀನು? ಬಾಗೇಪಲ್ಲಿಯಲ್ಲಿ ಯಾಕೆ ಸೋತೆ? ಎಂದು ಪ್ರಶ್ನಿಸಿದರು.

Ad Widget

Ad Widget

ಯಲಹಂಕ ಕ್ಷೇತ್ರದ ಕಾರ್ಯಕರ್ತರ ಬಗ್ಗೆ ನಿನ್ನೆ ಮಾತಾಡಿದ್ದೀರಿ. ಅಮಿತ್ ಷಾ ಕರೆದು ಮಾತಾಡಿದ ಮೇಲೆ ನಾನು ಚುನಾವಣೆಗೆ ಕೆಲಸ ಮಾಡಿದ್ದೇನೆ. ನಾನು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದು ಸಾಬೀತು ಮಾಡಿದರೆ ರಾಜಕೀಯ ಬಿಟ್ಟು ಬಿಡುತ್ತೇನೆ. ನಾನು ಯಲಹಂಕ ಕ್ಷೇತ್ರಕ್ಕೆ ಸುಧಾಕರ್ ಕರೆಸಿದ್ದು ಮೂರೇ ದಿನ. ನೀನು ಮಂತ್ರಿ ಆಗಿದ್ದಾಗ ದುರಂಹಕಾರಿ ಆಗಿರಲಿಲ್ವಾ? ಶಾಸಕರ, ಮಂತ್ರಿಗಳ ಫೋನ್ ತೆಗೆಯುತ್ತಿದ್ಯಾ ನೀನು?ಯಲಹಂಕ ಕಾರ್ಯಕರ್ತರು ಹೋದರೆ ನೀನು ಮನೆಗೆ ಸೇರಿಸುತ್ತಿದ್ಯಾ? ಎಂದು ಕಿಡಿಕಾರಿದರು.

ನಿನಗೆ ತಾಕತ್ ಇದ್ದರೆ ಬೇರೆ ಪಕ್ಷದಿಂದ ಚುನಾವಣೆಗೆ ನಿಂತುಕೋ. ಯಲಹಂಕದಲ್ಲಿ ನೀನು ಒಂದು ವೋಟ್ ಲೀಡ್ ತೆಗೆದುಕೋ. ಕೋವಿಡ್‌ನಲ್ಲಿ ಸತ್ತ ಆತ್ಮಗಳ ಆಶೀರ್ವಾದ ನಿನಗೆ ಚೆನ್ನಾಗಿ ಇರಬೇಕು. ಪಕ್ಷದ ಸಿಸ್ಟಂ ನಿನಗೆ ಗೊತ್ತಿರಲಿ ಸುಧಾಕರ್, ನನ್ನ ಕ್ಷೇತ್ರದಲ್ಲಿ ಬಂದು ನನ್ನ ವಿರುದ್ಧವೇ ಎತ್ತಿ ಕಟ್ಟುವ ಕೆಲಸ ಮಾಡಿದೆ. ನಮ್ಮಲ್ಲಿ ಅದೆಲ್ಲಾ ನಡೆಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇವಲ ಒಂದು ಜಿಲ್ಲಾಧ್ಯಕ್ಷರ ವಿಚಾರಕ್ಕೆ ಬಹಿರಂಗವಾಗಿ ಹೇಳಿದ್ದು ತಪ್ಪಲ್ವಾ? ಏನು ವರಿಷ್ಠರ ಜೊತೆ ಮಾತಾಡಿ ನೀನು ತೀರ್ಮಾನ ತೆಗೆದುಕೊಳ್ಳುವುದು? ಏನು ಪಕ್ಷ ಬಿಟ್ಟು ಹೋಗ್ತಿಯಾ? ನಿನ್ನ ದುಡ್ಡು, ಪ್ರಭಾವ ಎಲ್ಲಾ ನಡೆಯಲ್ಲ ಎಂದು ಕಿಡಿಕಾರಿದರು.

ಗೌರಿಬಿದನೂರಿನಲ್ಲಿ ಪಕ್ಷೇತರ ಅಭ್ಯರ್ಥಿಗೆ ಸಪೋರ್ಟ್ ‌ಮಾಡಿದ್ದು ಊರಿಗೆ ಗೊತ್ತಿಲ್ವಾ? ಇಷ್ಟ ಇದ್ದರೆ ಇರು, ನಿನ್ನಂತಹವರು ಲಕ್ಷಾಂತರ ಜನ ಪಕ್ಷದಲ್ಲಿ ಇದ್ದಾರೆ. ನಲ್ವತ್ತು ವರ್ಷ ರಾಜಕೀಯ ಮಾಡಿ ನಾವೇ ಬಾಯಿ ಮುಚ್ಚಿಕೊಂಡು ಇದ್ದೇವೆ. ನಾವು ಚುನಾವಣೆಯಲ್ಲಿ ಅಧಿಕಾರಕ್ಕೆ ಬರದೇ ಇರಲು ನೀವು ಮಾಡಿದ ಕೋವಿಡ್ ಹಗರಣಗಳೇ ಕಾರಣ ಎಂದು ಕಿಡಿಕಾರಿದರು.

ನನಗೆ ರಾಜ್ಯಾಧ್ಯಕ್ಷರು ಜವಾಬ್ದಾರಿ ಕೊಡಲಿ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಸಂಘಟನೆ ಮಾಡಿ ತೋರಿಸುತ್ತೇನೆ, ಚಾಲೆಂಜ್ ಇದು. ನನ್ನ ಸಹವಾಸ ಗೊತ್ತಿಲ್ಲ ಇನ್ನೂ ಕೂಡಾ. ನಾನು‌ ಸ್ನೇಹಕ್ಕೂ ಸಿದ್ಧ, ಸಮರಕ್ಕೂ ಸಿದ್ಧ. ನೂರಕ್ಕೆ ನೂರು ನೀನು ಪಕ್ಷದಲ್ಲಿ ಇರಲ್ಲ. ಒಂದು ಕಾಲು ಹೊರಗೆ ಇಟ್ಟೇ ರಾಜಕೀಯ ‌ಮಾಡುತ್ತಿದ್ದಾರೆ. ಎಲ್ಲಿ ಅಧಿಕಾರ ಇರುತ್ತದೋ ಅಲ್ಲಿ ಹೋಗುತ್ತಾರೆ ಎಂದು ಆರೋಪಿಸಿದರು.

ಬಂದು ಅಧಿಕಾರ ಅನುಭವಿಸಿದವನು‌ ನೀನು. ನೀವು ಬರಲಿಲ್ಲ ಅಂದರೆ ನಾವು ಇಂದು ಪೂರ್ಣ ಬಹುಮತದಲ್ಲಿ ಸರ್ಕಾರ ಮಾಡುತ್ತಿದ್ದೆವು. ಚಿಕ್ಕಬಳ್ಳಾಪುರದಲ್ಲಿ ನೀನು ಗೆದ್ದಿದ್ದು ನಿನ್ನ ಹೆಸರಿನಿಂದ ಅಲ್ಲ ನೆನಪಿರಲಿ. ಸಂಘಟನೆಯಲ್ಲಿ ಜಿಲ್ಲೆ ನನ್ನದು ಬೆಂಗಳೂರು ಉತ್ತರ, ಲೋಕಸಭಾ ಕ್ಷೇತ್ರ ಮಾತ್ರ ಚಿಕ್ಕಬಳ್ಳಾಪುರ. ಸಂದೀಪ್ ರೆಡ್ಡಿ ನನ್ನ ಶಿಷ್ಯ ಅಂತಾ ಹೇಳುತ್ತಿದ್ದೀರಿ. ಜಿಲ್ಲಾಧ್ಯಕ್ಷರ ವಿಚಾರದಲ್ಲಿ ನನ್ನದು ಏನೂ ಅಸಮಾಧಾನ ಇಲ್ಲ ಎಂದರು.

ಅನಾವಶ್ಯಕವಾಗಿ ನನ್ನ ಬಗ್ಗೆ, ಕ್ಷೇತ್ರದ ಬಗ್ಗೆ ಮಾತಾಡಿದರೆ ನಾನು ಸುಮ್ಮನೆ ಇರಲ್ಲ, ನಾನು ಬೇರೆಯ ರೀತಿಯಲ್ಲಿ ಪ್ರತಿಕ್ರಿಯೆ ಕೊಡಬೇಕಾಗುತ್ತದೆ. ಯತ್ನಾಳ್ ಕೂಡಾ ಬಹಿರಂಗವಾಗಿ ಮಾತಾಡುತ್ತಿದ್ದಾರೆ. ದಯವಿಟ್ಟು ನೀವು ಯಾಕೆ ಮಾಧ್ಯಮಕ್ಕೆ ಯಾಕೆ ಹೋಗುತ್ತೀರಿ. ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಿಕೊಂಡು ಬರುತ್ತೇನೆ ಅಂತಾರೆ. ಬದಲಿಸಿಕೊಂಡು ಬನ್ನಿ, ಬೇಡ ಅಂದವರಾರು? ಎಂದು ತಿರುಗೇಟು ನೀಡಿದರು.

ಸುಧಾಕರ್, ಯತ್ನಾಳ್ ಹೋಗಿ ಸ್ವತಂತ್ರವಾಗಿ ನಿಂತು ಗೆದ್ದು ಬನ್ನಿ. ಆಗ ನಿಮ್ಮ ಜನಪ್ರಿಯತೆ ಒಪ್ಪಿಕೊಳ್ಳೋಣ. ಬಿಜೆಪಿಯಲ್ಲಿ ಒಂದು ಶಾಪ ಇದೆ. ಬಿಜೆಪಿಗೆ ಬಂದು ವಾಪಸ್ ಹೋದರೆ ಮತ್ತೆ ಉದ್ದಾರ ಆಗಿದ್ದು ಇಲ್ಲ. ಯಡಿಯೂರಪ್ಪನವರಿಗೂ ಇದು ಅನ್ನಿಸಿದೆ. ಅವರು ವಾಪಸ್ ಬಿಜೆಪಿಗೆ ಬಂದೇ ಸಿಎಂ ಆಗಿದ್ದು ಎಂದು ಎಸ್‌.ಆರ್.‌ ವಿಶ್ವನಾಥ್‌ ಹೇಳಿದರು.

ಸುಧಾಕರ್ ಅವರೇ ನೀವು ನಾಳೆ ಸಿಎಂ ಆಗಬಹುದೇನೋ. ನೀವು ಪಕ್ಷದಲ್ಲಿ ಇರಿ ಅಂತಾ ನಾವಂತೂ ಹೇಳಲ್ಲ. ಹೋದರೆ ದೊಡ್ಡ ಸನ್ಮಾನ ಮಾಡಿ ಕಳುಹಿಸಿಕೊಟ್ಟು ಸಂಘಟನೆ ಮಾಡುತ್ತೇನೆ.‌ ಮುಂದಿನ ಚುನಾವಣೆಗೆ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ನಾನೇ ಪ್ರವಾಸ ಮಾಡುತ್ತೇನೆ ಎಂದು ಎಸ್‌.ಆರ್.‌ ವಿಶ್ವನಾಥ್ ವಾಗ್ದಾಳಿ ನಡೆಸಿದರು.

Ad Widget
Click to comment

Leave a Reply

ರಾಜಕೀಯ

BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ

Published

on

Ad Widget

Ad Widget

Ad Widget

Ad Widget

ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

Ad Widget

Ad Widget <> Ad Widget

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.

Continue Reading

ಮಂಗಳೂರು

Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ

Published

on

Ad Widget

Ad Widget

Ad Widget

Ad Widget

ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget

Ad Widget

Ad Widget

ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

​ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

Ad Widget

Ad Widget <> Ad Widget

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.

Ad Widget

Ad Widget

“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

​ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:

ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.

ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.

ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ‌ಮತ್ತು ಪ್ರವಾಸೋದ್ಯಮ‌ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget
Continue Reading

ರಾಜಕೀಯ

Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ

Published

on

Ad Widget

Ad Widget

Ad Widget

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.

Ad Widget

Ad Widget alt="Ad Widget"/>

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.

Ad Widget

Ad Widget

ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ

ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.

ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.

ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!