ಅಪರಾಧ
Puttur-ಗರುಡ ಗ್ಯಾಂಗ್ ನಿಂದ ಪುತ್ತೂರಿನ ಟ್ರಾನ್ಸ್‌ಪೋರ್ಟ್ ಮಾಲಕನ ಅಪಹರಣ; ಲಕ್ಷಾಂತರ ರೂ. ದರೋಡೆ
ನಗರದ ಕುಣಿಗಲ್ ಬೈಪಾಸ್ ಸಮೀಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಟ್ರಾನ್ಸ್‌ಪೋರ್ಟ್ ಮಾಲಕನೋರ್ವನನ್ನು ಅಡ್ಡಗಟ್ಟಿದ ಗರುಡ ಗ್ಯಾಂಗ್, ಅವರನ್ನು ಅಪಹರಣ ಮಾಡಿ 29 ಲಕ್ಷ ರೂ.ಗಳಿಗೂ ಹೆಚ್ಚು ಹಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನೆಲಮಂಗಲ, ಜ.30: ನಗರದ ಕುಣಿಗಲ್ ಬೈಪಾಸ್ ಸಮೀಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಟ್ರಾನ್ಸ್‌ಪೋರ್ಟ್ ಮಾಲಕನೋರ್ವನನ್ನು ಅಡ್ಡಗಟ್ಟಿದ ಗರುಡ ಗ್ಯಾಂಗ್, ಅವರನ್ನು ಅಪಹರಣ ಮಾಡಿ 29 ಲಕ್ಷ ರೂ.ಗಳಿಗೂ ಹೆಚ್ಚು ಹಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಕೊಣಾಲು ನಿವಾಸಿ ಇಕ್ಬಾಲ್ (35 ವ) ಅಪಹರಣವಾಗಿದ್ದ ಟ್ರಾನ್ಸ್‌ಪೋರ್ಟ್ ಮಾಲಕ. ಇನ್ಸಾಲ್ ಅವರು ಅಶೋಕ್ ಪೆಟ್ರೋಲಿಯಂ ಸಂಸ್ಥೆಯನ್ನು ಸ್ಥಾಪಿಸಿ ಟ್ರಾನ್ಸ್ ಪೋರ್ಟ್ ನಡೆಸುತ್ತಿದ್ದಾರೆ.
ಜ. 24ರಂದು ಬೆಂಗಳೂರಿಗೆ ಬಂದಿದ್ದ ಇಕ್ಬಾಲ್ ತನ್ನ ವ್ಯವಹಾರ ಮುಗಿಸಿಕೊಂಡು ಹಣ ಸಂಗ್ರಹಿಸಿ ಸ್ನೇಹಿತನ ಮನೆಗೆ ಭೇಟಿ ನೀಡಿ ದಕ್ಷಿಣ ಕನ್ನಡ ಜಿಲ್ಲೆಗೆ ಹಿಂತಿರುಗಲು ನೆಲಮಂಗಲ ಮಾರ್ಗವಾಗಿ ಕಾರಿನಲ್ಲಿ ತೆರಳಿದ್ದರು. ರಾತ್ರಿಯಾಗಿದ್ದ ಹಿನ್ನೆಲೆಯಲ್ಲಿ ಕುಣಿಗಲ್ ಬೈಪಾಸ್‌ನಲ್ಲಿರುವ ಹೊಟೇಲ್ ನಲ್ಲಿ ಊಟ ಮುಗಿಸಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮುಂದೆ ಕಾರಿನಲ್ಲಿ ಚಲಿಸುತ್ತಿದ್ದಾಗ ಕೆಎ 02 ಎಂಎನ್ 8122ನಂಬರಿನ ಟಯೋಟಾ ಇನೋವಾ ಕಾರಿನಲ್ಲಿ ಬಂದ ಕೆಲವರು ಕಾರು ಅಡ್ಡಗಟ್ಟಿ ಆಟ್ಯಾಕ್ ಮಾಡಿ ಗರುಡ ಗ್ಯಾಂಗ್ ಎಂದು ಚಿತ್ರಹಿಂಸೆ ನೀಡಿ ವಿವಿಧ ಖಾತೆಗಳಿಗೆ 15 ಲಕ್ಷ ಹಣವನ್ನು ವರ್ಗಾವಣೆ ಮಾಡಿಕೊಂಡು ಕಾರಿನಲ್ಲಿದ್ದ 1.23 ಲಕ್ಷ ಹಣ ಪಡೆದು ಸಂಕಲೇಶಪುರದ ಕಡೆ ಅಪಹರಣ ಮಾಡಿಕೊಂಡುಹೋಗಿದ್ದಾರೆ.
2 ದಿನದ ಆನಂತರ ಸಕಲೇಶಪುರದ ದೋಣಿಗಲ್ ರೆಸಾರ್ಟ್‌ಗೆ ಹೋಗಿ ಅಲ್ಲಿ ಇಕ್ಬಾಲ್ ಅಣ್ಣನಿಂದ 13 ಲಕ್ಷ ನಗದು ಹಣವನ್ನು ಪಡೆದು ಇಕ್ಬಾಲ್‌ನನ್ನು ಬಿಟ್ಟು ಆತನ ಮೊಬೈಲ್ ಕಾರನ್ನು ತೆಗೆದುಕೊಂಡು ದೂರು ನೀಡಿದರೆ ನಿನ್ನ ಹತ್ಯೆ ಮಾಡಿಬಿಡುತ್ತೇವೆಂದು ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. ಘಟನೆಯಿಂದಾಗಿ ಹೆದರಿದ ಇಕ್ಬಾಲ್ ತಡವಾಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಗರುಡ ಗ್ಯಾಂಗ್ ದೊಡ್ಡ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ.
ಇಕ್ಬಾಲ್ ಅಪಹರಣಕಾರರ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದು ಎಫ್ ಐಆರ್‌ನಲ್ಲಿ ಅನುಮಾನ ವ್ಯಕ್ತಪಡಿಸಿ ದಕ್ಷಿಣ ಕನ್ನಡದ ಇಬ್ರಾಹಿಂ, ಇಸಾಕ್, ರಿಜ್ವಾನ್ ಹಾಗೂ ಇನ್ನಿತರರ ಹೆಸರು ನೀಡಿದ್ದಾರೆ.
ಖದೀಮರ ಗುಂಪಿನಲ್ಲಿದ್ದ ರಿಜ್ವಾನ್ ಅಪಹರಣವಾಗಿದ್ದ ಇಕ್ಬಾಲ್ ವಾಹನದಲ್ಲಿ 5 ವರ್ಷಗಳ ಕಾಲ ಡೈವರ್ ಆಗಿ ಕೆಲಸ ಮಾಡುತ್ತಿರುವ ವಿಚಾರವನ್ನು ಇಕ್ಬಾಲ್ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಅಂತರ ರಾಜ್ಯ
Arrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಕಾಸರಗೋಡು: ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಚೇರ್ತಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸುಲ್ತಾನ್ ಬತ್ತೇರಿ ಮೂಲದ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ ವೇಳೆ ಆತ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ವೈದ್ಯನೆಂದು ನಂಬಿಸಿ ಅತ್ಯಾಚಾರ ಆರೋಪ
ವೈದ್ಯನೆಂದು ಪರಿಚಯಿಸಿಕೊಂಡು ತಳಿಪರಂಬ ಮೂಲದ ಯುವತಿಯೊಬ್ಬಳನ್ನು ಮಂಜೇಶ್ವರದ ಹೊಸಂಗಡಿಯ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಬಿಜು ಆಂಟನಿ ವಿರುದ್ಧವಿದೆ. ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯಿಂದ ಮೂರೂವರೆ ಪವನ್ ಚಿನ್ನಾಭರಣವನ್ನೂ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಮದುವೆಯಾದ ಮೂರೇ ದಿನಕ್ಕೆ ಪರಾರಿ
ಆರೋಪಿ 2020ರಲ್ಲಿ ತನ್ನ ವಂಚನೆಯ ಜಾಲ ಆರಂಭಿಸಿದ್ದ ಎನ್ನಲಾಗಿದೆ. ಚೇರ್ತಲ ಸಮೀಪದ ನಿವಾಸಿ ರಮ್ಯಾ ಎಂಬ ಯುವತಿಯನ್ನು ರಾಜೇಶ್ ಎಂಬ ಹೆಸರಿನಲ್ಲಿ ಮದುವೆಯಾಗಿದ್ದ ಆತ, ಮದುವೆಯಾದ ಮೂರನೇ ದಿನವೇ ₹30 ಸಾವಿರ ನಗದು ಮತ್ತು ಏಳು ಪವನ್ ಚಿನ್ನಾಭರಣ ಪಡೆದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ರಮ್ಯಾ ನೀಡಿದ ದೂರಿನ ಮೇರೆಗೆ ಚೇರ್ತಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಇದೀಗ ಸುಮಾರು ಆರು ವರ್ಷಗಳ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜು ಆಂಟನಿಯನ್ನು ಬಂಧಿಸಲಾಗಿದೆ.
ಬೇರೆ ಬೇರೆ ಹೆಸರುಗಳಲ್ಲಿ ವಂಚನೆ
ವೈದ್ಯನೆಂದು ಹೇಳಿಕೊಂಡು ಮದುವೆ ಜಾಹೀರಾತುಗಳನ್ನು ನೀಡುವ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಚಿನ್ನಾಭರಣ ಹಾಗೂ ಹಣ ಪಡೆದು ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿವಿಧ ಸ್ಥಳಗಳಲ್ಲಿ ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ಮಹಿಳೆಯರಿಗೆ ವಂಚಿಸುತ್ತಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯ ವಿರುದ್ಧದ ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
-
ನಿಧನ ವಾರ್ತೆ10 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು9 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ10 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಮಂಗಳೂರು6 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ10 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ10 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ10 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ11 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















