ನಿಧನ ವಾರ್ತೆ
Suicide-ಪತಿಯ ಚುಚ್ಚುಮಾತಿಗೆ ನೊಂದ ಪತ್ನಿ ಆತ್ಮ*ಹತ್ಯೆ; ಪತಿಯ ಕರಾಳ ಮುಖ ಬಿಚ್ಚಿಟ್ಟ ಸೋದರ ಮಾವ
ಎರಡು ವರ್ಷಗಳ ಹಿಂದೆ ಮದುವೆಯಾಗಿ ಪತಿಯ ಮನೆಗೆ ಹೋದ ಯುವತಿ ಪತಿ ಆಡಿದ ಕಟುಮಾತುಗಳಿಂದ ನೊಂದು ಇಂದು ಅದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಕುಟುಂಬಸ್ಥರನ್ನು ಶೋಕಸಾಗರದಲ್ಲಿ ಮುಳುಗುವಂತೆ ಮಾಡಿದೆ.
ಎರಡು ವರ್ಷಗಳ ಹಿಂದೆ ಮದುವೆಯಾಗಿ ಪತಿಯ ಮನೆಗೆ ಹೋದ ಯುವತಿ ಪತಿ ಆಡಿದ ಕಟುಮಾತುಗಳಿಂದ ನೊಂದು ಇಂದು ಅದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಕುಟುಂಬಸ್ಥರನ್ನು ಶೋಕಸಾಗರದಲ್ಲಿ ಮುಳುಗುವಂತೆ ಮಾಡಿದೆ.
ವಿಷ್ಣುಜಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಆಕೆಯ ಪತಿ ಪ್ರಬಿನ್ ಆಡಿದ ಕಟು ಮಾತುಗಳಿಂದ ನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪಗಳು ಕುಟುಂಬಸ್ಥರಿಂದ ಕೇಳಿಬಂದಿವೆ. ಮೇ 2023ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಷ್ಣುಜಾ ಈಗ ಆತ್ಮಹತ್ಯೆಗೆ ಶರಣಾಗುವ ಮೂಲಕ ದುರಂತ ಅಂತ್ಯ ಕಂಡಿದ್ದಾಳೆ.
ವಿಷ್ಣುಜಾ ತೆಳ್ಳಗಿದ್ದು, ಸುಂದರವಾಗಿಲ್ಲ ಮತ್ತು ಉದ್ಯೋಗದಲ್ಲಿಲ್ಲ ಎಂಬ ಕಾರಣಕ್ಕಾಗಿ ಆಕೆಯನ್ನು ಪತಿ ನಿರ್ಲಕ್ಷಿಸಿದ್ದ. ಆಗಾಗ್ಗೆ ಇದೇ ವಿಷಯಕ್ಕೆ ವಿಷ್ಣುಜಾ ಜತೆಗೆ ಜಗಳವಾಡುತ್ತಿದ್ದ ಎಂದು ಸಂಬಂಧಿಕರು ಪತಿ ಪ್ರಬಿನ್ ವಿರುದ್ಧ ಗಂಭೀರ ಆರೋಪ ಹೊರಿಸಿದ್ದಾರೆ.
ಗಂಡನ ಕಟು, ಚುಚ್ಚು ಮಾತಿನ ಬಗ್ಗೆ ಯುವತಿ ತನ್ನ ಕುಟುಂಬಕ್ಕೆ ಹೇಳಿಕೊಂಡಿರುವುದಾಗಿಯೂ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸ್ವತಃ ವಿಷ್ಣುಜಾಳೇ ಇದನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗದೆ ತನ್ನ ಪತಿಯೊಂದಿಗೆ ರಾಜಿ ಮಾಡಿಕೊಳ್ಳಲು ಮುಂದಾದರು. ಆದರೆ, ಆತ ಮಾತ್ರ ದಯಪಾಲಿಸಿಲ್ಲ ಎಂದು ಮೃತ ಯುವತಿಯ ಸೋದರ ಮಾವ ಶ್ರೀಕಾಂತ್ ದೂರಿದ್ದಾರೆ.
ವಿಷ್ಣುಜಾ ಸಾಯುವಂತ ವ್ಯಕ್ತಿಯಲ್ಲ. ಆಕೆ ಮನನೊಂದಿದ್ದಳು ನಿಜ. ಆದ್ರೆ, ಸಾವಿಗೆ ಶರಣಾಗುವ ಮನಸ್ಥಿತಿಯವಳಲ್ಲ. ಜೀವನವನ್ನು ಕೊನೆಗೊಳಿಸಲು ಅವಳಿಗೆ ಕಾಡಿದ ಸಮಸ್ಯೆಯೇನು?” ಎಂಬುದನ್ನು ಪೊಲೀಸರು ತನಿಖೆಯಿಂದ ಕಂಡುಹಿಡಿಯಬೇಕು. ಕೆಲಸ ಇಲ್ಲ ಎಂಬ ಕಾರಣಕ್ಕೆ ಅವಳಿಗೆ ಅವಮಾನ ಹೆಚ್ಚಾಗಿತ್ತು ಎಂದು ಶ್ರೀಕಾಂತ್ ಹೇಳಿದ್ದಾರೆ.
ವಿಷ್ಣುಜಾ ಬ್ಯಾಂಕಿಂಗ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು, ಅವಳು ಹಾಸ್ಟೆಲ್ನಲ್ಲಿದ್ದಾಗ ಅಧ್ಯಯನ ಮಾಡುತ್ತಿದ್ದಳು. ಆದರೆ, ಇದನ್ನೆಲ್ಲ ಮೀರಿ ಆಕೆ ಅವನನ್ನೇ ಮದುವೆಯಾಗಲು ಮುಂದಾದಳು. ಆದರೆ, ಮದುವೆ ಆದ ನಂತರ ಈತ ಅವಳು ತೆಳ್ಳಗಿದ್ದಾಳೆ ಎಂದು ಟೀಕಿಸುತ್ತಲೇ ಇದ್ದ ಎಂಬ ಆರೋಪಗಳು ಕುಟುಂಬದವರಿಂದ ಕೇಳಿಬಂದಿವೆ.
ಎಲ್ಲಾ ಮಹಿಳೆಯರಂತೆ ತಾನು ಸುಂದರವಾಗಿ ಕಾಣಲು ಸಾಧ್ಯವಾಗದ ಹಿನ್ನೆಲೆ ವಿಷ್ಣುಜಾ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಂಬಲಾಗಿದೆ. ಪತಿಯ ಹಿಂಸೆಯ ಬಗ್ಗೆ ವಿಷ್ಣುಜಾ ತನ್ನ ಸ್ನೇಹಿತರಿಗೆ ಹಾಗೂ ಕುಟುಂಬಸ್ಥರಿಗೆ ದೂರಿದ್ದಳು ಎಂದು ಯುವತಿಯ ಸೋದರ ಮಾವ ಶ್ರೀಕಾಂತ್ ಆರೋಪಿಸಿದ್ದಾರೆ.
ಸಾವನ್ನಪ್ಪಿದ ದಿನದಂದು ಇಬ್ಬರ ನಡುವೆ ಏನೋ ಗಂಭೀರ ಸಮಸ್ಯೆ ನಡೆದಿದೆ ಎಂದು ಸಂಬಂಧಿಕರು ಶಂಕಿಸಿದ್ದಾರೆ. ಯುವತಿಯ ಸಾವಿನ ಸುದ್ದಿಯನ್ನು ಮೊದಲು ಕೇರಳದ ಅರೀಕೋಡ್ನ ಪೂವತ್ತಿಕ್ಕಲ್ನಲ್ಲಿರುವ ವಿಷ್ಣುಜಾ ಅವರ ಸಹೋದರಿಯ ಮನೆಗೆ ಕರೆ ಮಾಡಿ ತಿಳಿಸಲಾಯಿತು. ರೂಮ್ ಬಾಗಿಲು ತೆರೆದಿಲ್ಲ ಎಂದು ನೆರೆಹೊರೆಯವರು ತಿಳಿಸಿದಾಗ, ಬಾಗಿಲನ್ನು ಬಲವಂತವಾಗಿ ಓಪನ್ ಮಾಡಲಾಯಿತು. ಅಲ್ಲಿ ವಿಷ್ಣುಜಾ ಮೃತಪಟ್ಟಿರುವುದು ಕಂಡುಬಂದಿದೆ. ಪತಿ ಪ್ರಬಿನ್ ಅವರ ಕುಟುಂಬಕ್ಕೆ ಈ ದೌರ್ಜನ್ಯದ ಬಗ್ಗೆ ತಿಳಿದಿತ್ತು ಎಂದು ಯುವತಿ ಸಂಬಂಧಿಕರು ಆರೋಪಿಸಿದ್ದಾರೆ.
“ಪ್ರಬಿನ್ ಆಸ್ಪತ್ರೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವ ವ್ಯಕ್ತಿಯಾಗಿ ಕಂಡಿದ್ದೇ ಆದರೂ ಆತ ಮನೆಯೊಳಗೆ ಒಂದು ಪಾತ್ರ ಮತ್ತು ಹೊರಗೆ ಇನ್ನೊಂದೇ ಪಾತ್ರ ನಿಭಾಯಿಸುತ್ತಿದ್ದನು” ಎಂದು ಶ್ರೀಕಾಂತ್ ಆರೋಪಿಸಿದ್ದಾರೆ. ಪೊಲೀಸ್ ವರದಿ ಬಂದ ತಕ್ಷಣವೇ ಪ್ರಬಿನ್ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದಾರೆ.
ನಿಧನ ವಾರ್ತೆ
Accident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
ಯುನೈಟೆಡ್ ಅರಬ್ ಎಮಿರೇಟ್ಸ್ನ (ಯುಎಇ) ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡು ಜಿಲ್ಲೆಯ ಅಟ್ಟೆಂಗಾನ ನಿವಾಸಿ ಅಶ್ರಫ್ (53) ಕೂಡ ಸೇರಿದ್ದಾರೆ. ಅಲ್ಲದೇ ಕಣ್ಣೂರು ಜಿಲ್ಲೆಯ ಮಟ್ಟನ್ನೂರು ನಿವಾಸಿ ಹೇಮಂತ್ ಪುದಿಯಕಾವಿಲ್ (29), ತಲಕ್ಕೇರಿ ನಿವಾಸಿ ಸಂಕೀರ್ತಾ ಸುರೇಶ್ (26) ಹಾಗೂ ಪಾಲಕ್ಕಾಡ್ ನಿವಾಸಿ ಮುಹಮ್ಮದ್ ಆಶಿಕ್ (29) ಕೂಡ ಮೃತಪಟ್ಟಿದ್ದಾರೆ.
ಕಾಸರಗೋಡು: ಯುನೈಟೆಡ್ ಅರಬ್ ಎಮಿರೇಟ್ಸ್ನ (ಯುಎಇ) ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡು ಜಿಲ್ಲೆಯ ಅಟ್ಟೆಂಗಾನ ನಿವಾಸಿ ಅಶ್ರಫ್ (53) ಕೂಡ ಸೇರಿದ್ದಾರೆ.
ನ. 24ರಂದು ಮುಂಜಾನೆ ರಾಸ್ ಅಲ್ ಖೈಮಾದ ಅಲ್ ವತನ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಓಮನ್ಗೆ ವೀಸಾ ನವೀಕರಣಕ್ಕಾಗಿ ತೆರಳಿ ವಾಪಸಾಗುತ್ತಿದ್ದ 41 ಪ್ರಯಾಣಿಕರಿದ್ದ ಬಸ್, ತಾಂತ್ರಿಕ ದೋಷದಿಂದ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಒಟ್ಟು 13 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ 11 ಮಂದಿ ಭಾರತೀಯರು ಎಂದು ವರದಿಯಾಗಿದೆ.
ಅಶ್ರಫ್ ಅವರೊಂದಿಗೆ ಕಣ್ಣೂರು ಜಿಲ್ಲೆಯ ಮಟ್ಟನ್ನೂರು ನಿವಾಸಿ ಹೇಮಂತ್ ಪುದಿಯಕಾವಿಲ್ (29), ತಲಕ್ಕೇರಿ ನಿವಾಸಿ ಸಂಕೀರ್ತಾ ಸುರೇಶ್ (26) ಹಾಗೂ ಪಾಲಕ್ಕಾಡ್ ನಿವಾಸಿ ಮುಹಮ್ಮದ್ ಆಶಿಕ್ (29) ಕೂಡ ಮೃತಪಟ್ಟಿದ್ದಾರೆ
ನಿಧನ ವಾರ್ತೆ
ಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನ. 14ರಂದು ಬೆಳಗ್ಗೆ ಜ್ಯೋತಿ ಹಾಗೂ ಅವರ ಸಂಬಂಧಿ ನಂದಿನಿ (19) ಗೋರಿಗುಡ್ಡ ಬಳಿ ರಸ್ತೆ ವಿಭಜಕ ದಾಟಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ನಂತೂರು ಕಡೆಗೆ ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದು, ಬೈಕ್ನಲ್ಲಿದ್ದವರಿಗೂ ಗಾಯಗಳಾಗಿದ್ದವು. ಗಂಭೀರ ಗಾಯಗೊಂಡಿದ್ದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜ್ಯೋತಿ ನಗರದ ಖಾಸಗಿ ಕಾಲೇಜೊಂದರಲ್ಲಿ ಜಿಎನ್ಎಂ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.
ಮೂಲತಃ ಚಿಕ್ಕಮಗಳೂರಿನ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯಕ್ಕೆ ಸೇರಿದ ಜ್ಯೋತಿಯ ಕುಟುಂಬ ಹಲವು ವರ್ಷಗಳಿಂದ ಮಂಗಳೂರಿನ ಕಣ್ಣೂರಿನಲ್ಲಿ ವಾಸವಾಗಿತ್ತು. ನೇತ್ರಾವತಿ ನದಿಯಲ್ಲಿ ತೆಪ್ಪದ ಮೂಲಕ ಮೀನು ಹಿಡಿಯುವ ವೃತ್ತಿಯನ್ನು ಕುಟುಂಬ ನಡೆಸುತ್ತಿತ್ತು. ಕುಟುಂಬದ ಹಿರಿಯ ಮಗಳಾಗಿದ್ದ ಜ್ಯೋತಿ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ನಿಧನ ವಾರ್ತೆ
Accident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.
ಮಂಡ್ಯದ ಗುತ್ತಲು ಬಡಾವಣೆಯ ಮಹದೇವು ಹಾಗೂ ತೈಲೂರು ಗ್ರಾಮದ ಎಂಟು ವರ್ಷದ ಬಾಲಕಿ ರಿತ್ವಿಕಾ ಮೃತಪಟ್ಟವರು. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಸರಕು ಸಾಗಣೆ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
-
ಸ್ಥಳೀಯ20 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಅಪರಾಧ21 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಅಂತರ ರಾಜ್ಯ21 hours agoSabarimala-ಶಬರಿಮಲೆ: ದೇವಸ್ಥಾನ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಅಂಗಡಿಗಳಿಗೆ ₹1 ಲಕ್ಷ ದಂಡ
-
ಅಪರಾಧ21 hours agoCyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
-
ಮಂಗಳೂರು19 hours agoSoujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
-
ಬಿಗ್ ನ್ಯೂಸ್22 hours agoChetan Prakash-ಧನ್ವಂತರಿ ಕ್ಲಿನಿಕಲ್ ಲ್ಯಾಬೋರೆಟರಿಯ ಚೇತನ್ ಪ್ರಕಾಶ್ ಕಜೆ ಯವರಿಗೆ ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026’ ಪ್ರಶಸ್ತಿ ಪ್ರಧಾನ
-
ಬಿಗ್ ನ್ಯೂಸ್21 hours agoHeavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!
-
ಅಂತರ ರಾಜ್ಯ21 hours agoRBI-ಡಿಜಿಟಲ್ ವಂಚನೆಗೆ ಆರ್ಬಿಐ ಬ್ರೇಕ್: ಖಾತೆಯ ಹಣ ವರ್ಗಾವಣೆ ತಕ್ಷಣವೇ ಸ್ಥಗಿತಗೊಳಿಸುವ ‘ಸ್ಟಾಪ್ ಸ್ವಿಚ್’ ಪ್ರಸ್ತಾಪ..!















