ಬಿಗ್ ನ್ಯೂಸ್
Dwarka Foundation-ದ್ವಾರಕಾ ಪ್ರತಿಷ್ಠಾನದ ವತಿಯಿಂದ ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ಕಂಪ್ಯೂಟರ್ ಹಸ್ತಾಂತರ
ದ್ವಾರಕಾ ಕಾರ್ಪೋರೇಶನ್ ಪ್ರೈ ಲಿ ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ಉಚಿತ ಕಂಪ್ಯೂಟರ್ ನ್ನು ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್ ರವರು ಠಾಣೆಯ ಉಪನಿರೀಕ್ಷಕರಾದ ಉದಯರವಿ ಎಂ ವೈಯವರಿಗೆ ಫೆ.4ರಂದು ಹಸ್ತಾಂತರಿಸಿದರು.
ಪುತ್ತೂರು: ದ್ವಾರಕಾ ಕಾರ್ಪೋರೇಶನ್ ಪ್ರೈ ಲಿ ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ಉಚಿತ ಕಂಪ್ಯೂಟರ್ ನ್ನು ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್ ರವರು ಠಾಣೆಯ ಉಪನಿರೀಕ್ಷಕರಾದ ಉದಯರವಿ ಎಂ ವೈಯವರಿಗೆ ಫೆ.4ರಂದು ಹಸ್ತಾಂತರಿಸಿದರು.
ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಪ್ರತಿನಿತ್ಯದ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಕಂಪ್ಯೂಟರ್ ನ ಅವಶ್ಯಕತೆಯಿದ್ದು, ಕಂಪ್ಯೂಟರ್ ನ್ನು ಒದಗಿಸಿಕೊಡಬೇಕಾಗಿ ದ್ವಾರಕಾ ಪ್ರತಿಷ್ಠಾನಕ್ಕೆ ನೀಡಿದ ಮನವಿಯ ಪ್ರಕಾರ ಕಂಪ್ಯೂಟರನ್ನು ನೀಡಲಾಯಿತು.
ಈ ಸಂಧರ್ಭದಲ್ಲಿ ಸಮಾಜದ ಮುನ್ನೆಲೆಗೆ ಇನ್ನೂ ಬಾರದ ಸಹಾಯ ಹಸ್ತಕ್ಕೆ ಅರ್ಹರಾದ ಅದೆಷ್ಟೋ ವ್ಯಕ್ತಿಗಳು, ಕುಟುಂಬಗಳು ಹಾಗೂ ಪ್ರದೇಶಗಳು ಇದ್ದು ಅವರಿಗೆ ಅನೂಕೂಲವಾಗುವಂತಹ ಸಹಾಯ ಕಾರ್ಯಗಳು ನಡೆಯಬೇಕೆಂದು ಚರ್ಚಿಸಲಾಯಿತು.
ಸಂಚಾರ ಠಾಣೆಯ ಪರವಾಗಿ ಉಪನಿರ್ದೇಶಕರಾದ ಉದಯರವಿ ಎಂ ವೈ ಇವರು ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್ ರವರಿಗೆ ಕೃತಜ್ಞತಾ ಪೂರ್ವಕವಾಗಿ ಸನ್ಮಾನಿಸಿದರು. ಈ ಸಂಧರ್ಭದಲ್ಲಿ ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಅಮೃತಕೃಷ್ಣ, ಸಂಸ್ಥೆಯ ಸಿಬ್ಬಂದಿಗಳು ಹಾಗೂ ಠಾಣೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಬಿಗ್ ನ್ಯೂಸ್
Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
-
Uncategorized16 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized18 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು21 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ20 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ22 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್21 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ21 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್22 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ




















