Connect with us

ಅಪರಾಧ

ಪುತ್ತೂರು ಜಾತ್ರೋತ್ಸವ : ಎ. 11:  ದೇಶ – ವಿದೇಶಗಳಲ್ಲಿ 3 ಸಾವಿರಕ್ಕೂ ಮಿಕ್ಕಿ ಕಾರ್ಯಕ್ರಮಗಳನ್ನು ನೀಡಿರುವ ತಂಡದಿಂದ  ದೇಶಭಕ್ತಿಯನ್ನು ಉದ್ದೀಪನಗೊಳಿಸುವ ಚಲನಚಿತ್ರಗೀತೆಗಳ ರಸಸಂಜೆ “ ಜಾಗೋ ಹಿಂದುಸ್ಥಾನಿ”

Published

on

Ad Widget

Ad Widget

Ad Widget

Ad Widget

ಪುತ್ತೂರು ಪುರದೊಡೆಯ ಶ್ರೀ ಮಹಾಲೀಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು ಎ. 10 ರಂದು  ಧ್ವಜಾರೋಹಣ ನಡೆಯಲಿದೆ. ಈ ಬಾರಿಯ ಜಾತ್ರೋತ್ಸವವನ್ನು ಇನ್ನಷ್ಟು ಅಕರ್ಷಣಿಯವಾಗಿಸಲು ದೇವಸ್ಥಾನದ ವ್ಯವಸ್ಥಾಪನ ಮಂಡಳಿ ನಿರ್ಧರಿಸಿದ್ದು, ಇದರ ಅಂಗವಾಗಿ ಎ.11 ರಂದು ಸಂಜೆ 6.30 ಕ್ಕೆ  “ಜಾಗೋ ಹಿಂದುಸ್ಥಾನಿ” ಎಂಬ ರಾಷ್ಟ್ರಪ್ರೇಮವನ್ನು ಉದ್ದೀಪನಗೊಳಿಸುವ ಮನರಂಜನೆ ಹಾಗೂ ದೇಶಭಕ್ತಿ ಸಮ್ಮಿಲನವಾಗಿರುವ ಸಾಂಸ್ಖೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ

Ad Widget

Ad Widget

Ad Widget

Ad Widget

ಸಂಸ್ಕಾರ ಭಾರತಿ ಪುತ್ತೂರು ಇದರ ಸಂಯೋಜನೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹ ಸಂಸ್ಥೆಯಾಗಿರುವ ರೇಡಿಯೋ ಪಾಂಚಜನ್ಯ ಸಹಕಾರದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ಜಾತ್ರೋತ್ಸವದ ಸಂದರ್ಭದಲ್ಲಿ ಜಾತ್ರೆ ಗದ್ದೆಯಲ್ಲಿ ಈ ಕಾರ್ಯಕ್ರಮ ಸಾಕಾರಗೊಳ್ಳಲಿದೆ

Ad Widget

Ad Widget alt="Ad Widget"/>

Ad Widget

ಏನಿದು “ಜಾಗೋ ಹಿಂದುಸ್ಥಾನಿ”?

ತಾಯಿ ಭಾರತಿ ಎಲ್ಲರಿಗೂ ತಾಯಿ. ಗಾಳಿ, ನೀರು, ಮಣ್ಣು ಇವುಗಳಲ್ಲಿ ಬೇಧವಿಲ್ಲದೆ, ಭೇದ ಮಾಡದೆ ನಮ್ಮಲ್ಲೆರನ್ನು ಏಕದೃಷ್ಟಿಯಿಂದ ಸಲಹುವ ಮಹಾಮಾತೆ. ಇಂಥ ಮಾತೆಯನ್ನು ಅಂತಃಕರಣಪೂರ್ವಕವಾಗಿ ವಂದಿಸುವುದು, ಪೂಜಿಸುವುದು ನಮ್ಮ ಧರ್ಮವಾಗಿದೆ. ತಾಯಿ ಭಾರತಿಯ ಗುಣಗಾನವನ್ನು ಕೇಳಿಸುವ ಮೂಲಕ ನಮ್ಮಲ್ಲಿ ಮಾತೃಶಕ್ತಿಯ ಪ್ರೀತಿಯನ್ನು ಉದ್ದೀಪನಗೊಳಿಸಲಿದೆ “ಜಾಗೋ ಹಿಂದುಸ್ಥಾನಿ”.

Ad Widget

Ad Widget <> Ad Widget

ಇದೊಂದು ಅವಿಸ್ಮರಣೀಯ ರಸಸಂಜೆ. ನಿದ್ರಿಸುತ್ತಿರುವ, ಜಡಮನಸ್ಸಿನ ಆಳದಲ್ಲಿರುವ ಜೀವಚೈತನ್ಯವನ್ನು ಬಡಿದೆಬ್ಬಿಸುವ ಕ್ಷಣವಾಗಲಿದೆ. ಹಾಡಿನ ಒಂದೊಂದು ಅಕ್ಷರವೂ ರಕ್ತದ ಕಣಕಣವನ್ನು ತಟ್ಟಿ “ದೇಶ ಪ್ರೇಮ”ದ ಮಾತೃಭಕ್ತಿಯನ್ನು ಜಾಗೃತವಾಗಿಸಲಿದೆ. ಇದು ದೇಶ ವಿದೇಶ ಗಡಿನಾಡುಗಳನ್ನು ಮೀರಿ ದೇಶಪ್ರೀತಿಯ ದಿವ್ಯಾನುಭವಗಳ ರಸದೌತಣವನ್ನು ತಮ್ಮ ಕಂಠ ಮಾಧುರ್ಯದಿಂದ ಹರಿಸಲಿರುವ ಮಂಜುಳನಾದದ ಲೋಕವನ್ನು ಪರಿಚಯಿಸಲಿರುವ ತಂಡ “ಜಾಗೋ ಹಿಂದುಸ್ಥಾನಿ”.

  ಬಹುವಿಧ ಸಂಸ್ಕøತಿ, ಆಹಾರ, ಭಾಷೆ ಮೊದಲಾದ ವಿಶೇಷಗಳನ್ನು ತನ್ನದಾಗಿಸಿಕೊಂಡ ಭಾರತದಲ್ಲಿ ಪರಸ್ಪರ ವಿಶ್ವಾಸ, ಸಹೋದರತ್ವ, ಮಾನವ ಪ್ರೀತಿ, ಸಹೃದಯತೆ ಬಡವಾಗುತ್ತಿರುವುದರ ಕುರಿತು ಚಿಂತಿಸಿ , ಅದನ್ನು  ಭಾರತೀಯರ ಮನದಲ್ಲಿ  ಬಡಿದೆಬ್ಬಿಸಲು ಸೃಷ್ಟಿಯಾದ ಸಹೃದಯರ ತಂಡವೇ   “ಜಾಗೋ ಹಿಂದುಸ್ಥಾನಿ.  ಸಂಗೀತದ ಮೂಲಕ ಮನದ ಆಳದಲ್ಲಿ ಸದ್ವಿಚಾರವನ್ನು ಬಿತ್ತಬಹುದು, ದೇಶಭಕ್ತಿಯ ಸಿಂಚನಗೈಯಬಹುದು, ಆ ಮೂಲಕ ಭಾರತೀಯರ ಮನದಲ್ಲಿ ರಾಷ್ಟ್ರಪ್ರೇಮದ    ಚಿಂತನೆಯನ್ನು ಸಾಕಾರಗೊಳಿಸಬಹುದು ಎಂದು ಆಲೋಚಿಸಿದ ಮಹಾರಾಷ್ಟ್ರದ ಕೊಲ್ಲಾಪುರದ 15 ಮಂದಿ ಹಾಡುಗಾರರ ತಂಡ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಹಿಂದಿ ಚಲನಚಿತ್ರದಲ್ಲಿರುವ ದೇಶಭಕ್ತಿಯ ಅತ್ಯುತ್ತಮ ಚಲನಚಿತ್ರಗೀತೆಗಳ ರಸಸಂಜೆಯೇ “ಜಾಗೋ ಹಿಂದುಸ್ಥಾನಿ”. ಮನರಂಜನೆ ಹಾಗೂ ದೇಶಭಕ್ತಿ ಇವುಗಳ ಸಮ್ಮಿಲನವಾಗಿರುವ ಈ ಪ್ರಯೋಗ ದೇಶದಲ್ಲೇ ಅದ್ವಿತೀಯವೆನಿಸಿದೆ.

Ad Widget

Ad Widget

ಮಹಾರಾಷ್ಟ್ರ, ಕರ್ನಾಟಕ, ಗೋವಾ, ಪಶ್ಚಿಮ ಬಂಗಾಲ, ಬಿಹಾರ, ತಮಿಳುನಾಡು, ಆಂದ್ರಪ್ರದೇಶ, ಮದ್ಯಪ್ರದೇಶ ಹಾಗೂ ಗುಜರಾತ್ ಮುಂತಾದ ದೇಶದಾದ್ಯಂತ 3200, ಅಮೇರಿಕದಲ್ಲಿ 27ಕ್ಕಿಂತ ಹೆಚ್ಚು ಕಾರ್ಯಕ್ರಮಗಳನ್ನು ಸಾದರಪಡಿಸಿರುವ ಅದ್ಭುತ ವಾದ್ಯವೃಂದಗಳನ್ನೊಳಗೊಂಡ ಅಮೋಘ ಕಾರ್ಯಕ್ರಮ. ಮುಂಬಯಿ, ಕೋಲ್ಕತ್ತಾ, ಪುಣೆ, ಹೈದರಾಬಾದ್, ಚೆನ್ನೈ, ಬೆಂಗಳೂರು, ಮಂಗಳೂರು, ಪಣಜಿ, ರಾಜ್‍ಕೋಟ್, ನಾಸಿಕ್, ನಾಗ್‍ಪುರ, ಅಮರಾವತಿ, ಸೋಲಾಪುರ ಮುಂತಾದ ಪಟ್ಟಣಗಳಲ್ಲಿ ಪ್ರಚಂಡ ಪ್ರಶಂಸೆಗೆ ಪಾತ್ರವಾಗಿ ಜನಮನದಲ್ಲಿ ದೇಶಭಕ್ತಿಯು ಸದಾ ಅನುರಣನವಾಗುವಂತೆ ಮಾಡಿದ ಕಾರ್ಯಕ್ರಮ. ನಮ್ಮಲ್ಲಿರುವ ಯಾವುದೇ ಅಂತರವನ್ನು ದೂರಗೊಳಿಸೋಣ, ಅಂತರ್ಯದ ನೈಜ ಪ್ರೀತಿಯಿಂದ ದೇಶಪ್ರೇಮಿಗಳಾಗೋಣ ಎನ್ನುವಂತೆ ಹುರಿದುಂಬಿಸಿ, ರೋಮಾಂಚನಗೊಳಿಸುವ ಸ್ವರದ ಮೂಲಕ, ಶೀತಲಗೊಂಡ ರಕ್ತದಲ್ಲಿಯ ಜ್ವಾಲೆಯನ್ನು ಪ್ರಜ್ವಲಿತಗೊಳಿಸುವ ದೇಶಭಕ್ತಿಯ ಪ್ರೇರಣೆ ನೀಡುವ ಶಕ್ತಿ ಹೊಂದಿದ ಕಾರ್ಯಕ್ರಮ ಇದಾಗಿದೆ.

ಭವ್ಯವಾದ ವೇದಿಕೆಯಲ್ಲಿ ವೈವಿಧ್ಯಮಯ ಶೃಂಗಾರ, ಬೆಳಕಿನ ಚಿತ್ತಾರ, ಆಧುನಿಕ ಧ್ವನಿ ವ್ಯವಸ್ಥೆ, ನುರಿತ ಕಲಾವಿದರ ಹೃದಯದಿಂದ ಬರುವ ವಿಶೇಷ ಸ್ವರಾನುಭಾವದಲ್ಲಿ ರಾಷ್ಟ್ರೀಯ ಸಂದೇಶ ಬಿತ್ತರಗೊಳ್ಳಲಿದ್ದು, ಇದರಲ್ಲಿ ಶ್ರೀ ದೇವೆ ಎಲ್ಲ ಭಕ್ತರು ಭಾಗವಿಸಬೇಕೆಂದು ಸಂಸ್ಕಾರ ಭಾರತಿಯ ದ. ಕ. ಜಿಲ್ಲೆಯ ಉಪಾಧ್ಯಕ್ಷರಾದ ರೂಪಲೇಖ ಪಾಣಾಜೆ ಹಾಗೂ ಸಂಸ್ಕಾರ ಭಾರತಿ ಸದಸ್ಯೆ ಹಾಗೂ ರೇಡಿಯೋ ಪಾಂಚಜನ್ಯ ಅಧ್ಯಕ್ಷೆ ಶ್ರೀಮತಿ ಕೃಷ್ಣವೇಣಿ ಪ್ರಸಾದ್ ಮುಳಿಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ                

Ad Widget
Click to comment

Leave a Reply

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಅಪರಾಧ

Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ

Published

on

Ad Widget

Ad Widget

Ad Widget

Ad Widget

ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.

Ad Widget

Ad Widget <> Ad Widget

ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2), MMDR ಕಾಯ್ದೆ 1957ರ ಕಲಂ 4(1), 21 ಹಾಗೂ ಕರ್ನಾಟಕ ಕಿರು ಖನಿಜ ನಿಯಮಾವಳಿ 1994ರ ಕಲಂ 3, 44ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!