ನಕಲಿ ದಾಖಲೆ ನೀಡಿ ಕೋಟ್ಯಾಂತರ ರೂಪಾಯಿ ಸಾಲ […]" /> ನಕಲಿ ದಾಖಲೆ ನೀಡಿ ಕೋಟ್ಯಾಂತರ ರೂಪಾಯಿ ಸಾಲ […]"> Krishnaiah Shetty-ಬ್ಯಾಂಕ್ ವಂಚನೆ ಪ್ರಕರಣ: ಮಾಜಿ ಸಚಿವ ಮಾಲೂರು ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು ಶಿಕ್ಷೆ - Nikhara News | Kannada News Website
Connect with us

ಅಪರಾಧ

Krishnaiah Shetty-ಬ್ಯಾಂಕ್ ವಂಚನೆ ಪ್ರಕರಣ: ಮಾಜಿ ಸಚಿವ ಮಾಲೂರು ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು ಶಿಕ್ಷೆ

Published

on

Ad Widget

Ad Widget

Ad Widget

Ad Widget

ಮಾಜಿ ಸಚಿವ, ಬಿಜೆಪಿ ನಾಯಕ ಮಾಲೂರು ಕೃಷ್ಣಯ್ಯ ಶೆಟ್ಟಿ ಅವರಿಗೆ 7.17 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯವು ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಮಾಲೂರು ಕೃಷ್ಣಯ್ಯ ಶೆಟ್ಟಿ ಅವರಿಗೆ 7.17 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯವು ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget alt="Ad Widget"/>

Ad Widget

ನಕಲಿ ದಾಖಲೆ ನೀಡಿ ಕೋಟ್ಯಾಂತರ ರೂಪಾಯಿ ಸಾಲ ಪಡೆದು ವಂಚಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ಡಿ, ಶ್ರೀನಿವಾಸ್ ಹಾಗೂ ಮುನಿರಾಜು ನಾಲ್ವರೂ ತಪ್ಪಿತಸ್ಥರು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಬೆಳಗ್ಗೆ ತೀರ್ಪು ನೀಡಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಸಂಜೆಗೆ ಕಾಯ್ದಿರಿಸಿತ್ತು.

Ad Widget

Ad Widget <> Ad Widget

ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಿದ ಕೋರ್ಟ್, 120ಬಿ, 420, 467, 471 ಸೆಕ್ಷನ್ಗಳಡಿಯಲ್ಲಿ ಎಂಟಿವಿ ರೆಡ್ಡಿ, ಕೃಷ್ಣಯ್ಯ ಶೆಟ್ಟಿ, ಮುನಿರಾಜು, ಕೆ.ಶ್ರೀನಿವಾಸಗೆ ತಲಾ 1 ಲಕ್ಷ ರೂ. ದಂಡದ ಜೊತೆಗೆ 3 ವರ್ಷ ಶಿಕ್ಷೆ ವಿಧಿಸಿದೆ.

ಆದರೆ ಕೋರ್ಟ್, ಕೃಷ್ಣಯ್ಯ ಶೆಟ್ಟಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದ್ದು, ವಿಧಿಸಲಾಗಿರುವ ಶಿಕ್ಷೆಯನ್ನು ಒಂದು ತಿಂಗಳ ಕಾಲ ಅಮಾನತ್ತಿನಲ್ಲಿಟ್ಟಿದೆ.

Ad Widget

Ad Widget

ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೃಷ್ಣಯ್ಯ ಶೆಟ್ಟಿ ಪರ ವಕೀಲ ನಾಗೇಂದ್ರ ನಾಯಕ್ ಅವರು ಕೋರ್ಟ್ಗೆ ಮನವಿ ಮಾಡಿದರು. ಈ ಮನವಿಯನ್ನು ಪುರಸ್ಕರಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಒಂದು ತಿಂಗಳ ಕಾಲ ಶಿಕ್ಷೆ ಅಮಾನತ್ತಿನಲ್ಲಿಟ್ಟಿದ್ದು, 5 ಲಕ್ಷ ರೂ. ಬಾಂಡ್, ಒಬ್ಬರ ಶ್ಯೂರಿಟಿ ಒದಗಿಸಲು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಸೂಚನೆ ನೀಡಿದ್ದಾರೆ.

ಆರೋಪಿಗಳು 2012 ರಲ್ಲಿ ಖಾಸಗಿ ಬ್ಯಾಂಕ್‌ಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಿತ್ತು. ನಕಲಿ ದಾಖಲೆ ನೀಡಿ ಕೋಟ್ಯಂತರ ರೂಪಾಯಿ ಸಾಲವನ್ನು ಕೃಷ್ಣಯ್ಯ ಶೆಟ್ಟಿ ಪಡೆದುಕೊಂಡಿದ್ದರು.

ಮಾಲೂಕು ಕ್ಷೇತ್ರದ ಬಿಜೆಪಿ ಶಾಸಕರೂ ಆಗಿದ್ದ, ಬಾಲಾಜಿಕೃಪಾ ಎಂಟರ್‌ಪ್ರೈಸಸ್‌ನ ಮಾಲೀಕ ಕೃಷ್ಣಯ್ಯ ಶೆಟ್ಟಿ 1993ರಲ್ಲಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ, ಹಲವು ನೌಕರರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ 7.17 ಕೋಟಿ ರೂ. ಬ್ಯಾಂಕ್ ಸಾಲ ಪಡೆದಿದ್ದರು. ಇದರಲ್ಲಿ 3.53 ಕೋಟಿ ಸಾಲ ತೀರಿಸಿಲ್ಲ ಎಂದು ಆರೋಪಿಸಲಾಗಿತ್ತು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ, ಚಾರ್ಜ್‌ಶೀಟ್‌ ಸಲ್ಲಿಸಿತ್ತು.

ಕೃಷ್ಣಯ್ಯ ಶೆಟ್ಟಿ, ಕೆ.ವಿ.ಹನುಮಪ್ಪ ರೆಡ್ಡಿ, ಜಿ.ಎಂ.ರಮೇಶ್ ಹಾಗೂ ಇತರ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 120ಬಿ, 409, 419, 420, 467, 471 ಹಾಗೂ ಸಿಆರ್‌ಪಿಸಿ ಸೆಕ್ಷನ್ 13(1)ಡಿ, 13(2)ರಡಿ ಸಿಬಿಐ ಕೇಸ್ ದಾಖಲಿಸಿತ್ತು.

Ad Widget

ಅಪರಾಧ

Cyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ

Published

on

Ad Widget

Ad Widget

Ad Widget

Ad Widget

ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್‌ಲೈನ್ ಆಫರ್‌ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್‌ಲೈನ್ ಆಫರ್‌ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಂಗಳೂರು, ನ.25: ಅ.31ರಂದು ವೈದ್ಯರು ತಮ್ಮ ಮೊಬೈಲ್‌ನಲ್ಲಿ ‘INDIA STORES FOR YOU’ ಎಂಬ ಆನ್‌ಲೈನ್ ಜಾಹೀರಾತನ್ನು ಗಮನಿಸಿದ್ದರು. ಒಂದು ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆಯಾಗಿ ನೀಡುವುದಾಗಿ ಜಾಹೀರಾತಿನಲ್ಲಿ ತಿಳಿಸಲಾಗಿತ್ತು. ಇದನ್ನು ನಂಬಿದ ಅವರು 734 ರೂ. ಪಾವತಿಸಿ ಆನ್‌ಲೈನ್ ಮೂಲಕ ಟೀ ಶರ್ಟ್ ಬುಕ್ ಮಾಡಿದ್ದರು.

Ad Widget

Ad Widget <> Ad Widget

ಅದೇ ದಿನ ಮಧ್ಯಾಹ್ನ ಸುಮಾರು 2.30 ಗಂಟೆಗೆ ಅಪರಿಚಿತ ವ್ಯಕ್ತಿಯೊಬ್ಬರು ವೈದ್ಯರಿಗೆ ಕರೆ ಮಾಡಿ, ಟೀ ಶರ್ಟ್ ಜೊತೆಗೆ ಐ-ಫೋನ್ ಕೂಡ ರವಾನೆಯಾಗಲಿದೆ ಎಂದು ತಿಳಿಸಿದ್ದರು. ಐ-ಫೋನ್‌ಗೆ ಇನ್ಶೂರೆನ್ಸ್ ಹಣ ಪಾವತಿಸಬೇಕಿದ್ದು, ಬಳಿಕ ಆ ಹಣವನ್ನು ಅವರ ಖಾತೆಗೆ ಮರಳಿ ಜಮೆ ಮಾಡಲಾಗುತ್ತದೆ ಎಂದು ನಂಬಿಸಿದ್ದರು.

ವಂಚಕರ ಮಾತು ನಂಬಿದ ವೈದ್ಯರು, ‘Gurdit Singh Bhasin And Sons’ ಹಾಗೂ ‘Rinki Urf Gopal’ ಎಂಬ ಪೇಮೆಂಟ್ ಐಡಿಗಳಿಗೆ ಫೋನ್ ಪೇ ಮೂಲಕ ಹಂತ ಹಂತವಾಗಿ 72,640 ರೂ. ವರ್ಗಾಯಿಸಿದ್ದರು.

Ad Widget

Ad Widget

ಇಷ್ಟಕ್ಕೆ ನಿಲ್ಲದ ವಂಚಕರು ನ.22ರಂದು ಮತ್ತೆ ಕರೆ ಮಾಡಿ, ಇನ್ನೂ 71,906 ರೂ. ಪಾವತಿಸುವಂತೆ ಸೂಚಿಸಿದ್ದರು. ಈ ಹಣವನ್ನೂ ಬಳಿಕ ಮರಳಿ ಜಮೆ ಮಾಡುವುದಾಗಿ ಭರವಸೆ ನೀಡಿದ್ದರಿಂದ ವೈದ್ಯರು ಅದನ್ನು ವರ್ಗಾಯಿಸಿದ್ದರು. ಬಳಿಕ ಹಣವನ್ನು IMPS ಮೂಲಕ ಮರಳಿ ಕಳುಹಿಸಲು ಕಮಿಷನ್ ಶುಲ್ಕವೆಂದು ಹೇಳಿ ಮತ್ತೆ 20,856 ರೂ. ಪಾವತಿಸಿಕೊಂಡಿದ್ದಾರೆ.

ಆದರೆ, ಈವರೆಗೆ ಯಾವುದೇ ಹಣ ವೈದ್ಯರ ಖಾತೆಗೆ ಮರಳಿಲ್ಲ. ವಂಚಕರಿಗೆ ಕರೆ ಮಾಡಿದಾಗ ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ತಾನು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ವೈದ್ಯರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ.

Ad Widget
Continue Reading

ಅಪರಾಧ

Renukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ

Published

on

Ad Widget

Ad Widget

Ad Widget

Ad Widget

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್‌ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್‌ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget alt="Ad Widget"/>

Ad Widget

ಪಟ್ಟಣಗೆರೆಯ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜನ್ ಮತ್ತು ವಿಜಯ್ ಕುಮಾರ್ ಅವರು ಈ ಹಿಂದೆ ಪೊಲೀಸರಿಗೆ ಹಾಗೂ ನ್ಯಾಯಾಲಯದಲ್ಲಿ ಘಟನೆಯ ಕುರಿತು ಮಾಹಿತಿ ನೀಡಿದ್ದರು. ಘಟನೆ ನಡೆದ ದಿನ ಇಬ್ಬರೂ ಶೆಡ್‌ನಲ್ಲಿ ಹಾಜರಿದ್ದರು ಎನ್ನಲಾಗಿದೆ.

Ad Widget

Ad Widget <> Ad Widget

ಆದರೆ, ಮಂಗಳವಾರ ನಡೆದ ವಿಚಾರಣೆಯ ವೇಳೆ ಇಬ್ಬರೂ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನೀಡಿದ್ದಾರೆ.

‘ನಾವು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದೆವು. ಬಳಿಕ ಮನೆಗೆ ತೆರಳುತ್ತಿದ್ದೆವು. ಅಂದು ಶೆಡ್‌ನಲ್ಲಿ ಇದ್ದರೂ ಕಾರಿನಲ್ಲಿ ಯಾರೆಲ್ಲ ಬಂದಿದ್ದರು ಎಂಬುದು ನಮಗೆ ತಿಳಿದಿಲ್ಲ. ಶೆಡ್‌ನಲ್ಲಿ ನಡೆದ ಘಟನೆಗಳನ್ನು ನಾವು ಕಣ್ಣಾರೆ ನೋಡಿಲ್ಲ’ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.

Ad Widget

Ad Widget

ಈಗಾಗಲೇ ಪಟ್ಟಣಗೆರೆ ಶೆಡ್‌ನ ಕಾವಲುಗಾರ ನರೇಂದ್ರ ಸಿಂಗ್ ಹಾಗೂ ಸಿಬ್ಬಂದಿ ಕಿರಣ್ ಕೂಡ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದರು.

ಧನ್ವಿರ್‌ಗೆ ನ.30ರಂದು ಸಿಸಿಬಿ ಮುಂದೆ ಹಾಜರಾಗಲು ಹೈಕೋರ್ಟ್ ಸೂಚನೆ
ಇನ್ನೊಂದೆಡೆ, ಪರಪ್ಪನ ಅಗ್ರಹಾರ ಜೈಲಿನ ವಿಡಿಯೊ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವಿರ್ ಅವರು ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.

ತಮ್ಮನ್ನು ಆರೋಪಿಯನ್ನಾಗಿ ಹೆಸರಿಸಿರುವ ಪ್ರಕರಣದಲ್ಲಿ ಬೆಂಗಳೂರಿನ ಒಂದನೇ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನವೆಂಬರ್ 18ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಧನ್ವಿರ್ ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ನಡೆಸಿತು.

ವಿಚಾರಣೆ ವೇಳೆ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಅನೂಪ್ ಕುಮಾರ್ ಅವರು, ಅರ್ಜಿದಾರರ ವಿರುದ್ಧದ ವಾರಂಟ್‌ಗೆ ಹೈಕೋರ್ಟ್ ತಡೆ ನೀಡಿದ್ದರೂ ಅವರು ತನಿಖೆಗೆ ಸಹಕರಿಸುತ್ತಿಲ್ಲ. ಆದ್ದರಿಂದ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆಗೆ ಸಹಕರಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಧನ್ವಿರ್‌ಗೆ ಸೂಚಿಸಿ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸುತ್ತಿದ್ದ ದೃಶ್ಯಗಳು ಬಹಿರಂಗಗೊಂಡ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವಿಡಿಯೊ ಹರಿದಾಡಲು ನಟ ಧನ್ವಿರ್ ಅವರ ಮೊಬೈಲ್ ಬಳಕೆಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ತನಿಖೆಗೆ ಒಳಪಡಿಸಲಾಗಿದೆ.

Ad Widget
Continue Reading

ಅಪರಾಧ

Excise raid-ಬಾಳ್ತಿಲ, ಮೆಲ್ಕಾರ್‌ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್‌ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್‌ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.

Ad Widget

Ad Widget alt="Ad Widget"/>

Ad Widget

ಮೊದಲ ಪ್ರಕರಣದಲ್ಲಿ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಪೂರ್ಲಿಪಾಡಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 1,261 ಲೀಟರ್ ಗೋವಾ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜಪ್ತಿಯಾದ ಮದ್ಯದ ಮೌಲ್ಯ ಸುಮಾರು ₹7.72 ಲಕ್ಷ ಎಂದು ಅಂದಾಜಿಸಲಾಗಿದೆ.

Ad Widget

Ad Widget <> Ad Widget

ಇನ್ನೊಂದು ಪ್ರಕರಣದಲ್ಲಿ ಮೆಲ್ಕಾರ್ ಸಮೀಪ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 188.9 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಮದ್ಯ ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಕಾರುಗಳನ್ನೂ ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಈ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಒಟ್ಟು ₹20.37 ಲಕ್ಷ ಮೌಲ್ಯದ ಮದ್ಯ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಜಮಾಡಿ ಟೋಲ್ ಬಳಿ ನಡೆದ ಕಾರ್ಯಾಚರಣೆಯ ಬೆನ್ನಲ್ಲೇ ಅಬಕಾರಿ ಇಲಾಖೆ ಮತ್ತೊಂದು ಮಹತ್ವದ ಯಶಸ್ಸು ಸಾಧಿಸಿದೆ.

Ad Widget

Ad Widget

ಜಿಲ್ಲೆಯಲ್ಲಿ ಅಕ್ರಮ ಮದ್ಯ ದಾಸ್ತಾನು ಹಾಗೂ ಸಾಗಾಟದ ವಿರುದ್ಧ ಕಾರ್ಯಾಚರಣೆ ಮುಂದುವರಿಯಲಿದ್ದು, ಇಂತಹ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಇಲಾಖೆ ಎಚ್ಚರಿಕೆ ನೀಡಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!