ಕಾರ್ಯಕ್ರಮಗಳು
Puttur-ಪುತ್ತೂರು: ವರ್ಗಾವಣೆಗೊಂಡ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರಿಗೆ ಇಲಾಖೆಗಳ ವತಿಯಿಂದ ಬೀಳ್ಕೊಡುಗೆ ಸಮಾರಂಭ
ದಕ ಜಿಲ್ಲೆಯಲ್ಲಿ ಕೆಲಸ ಮಾಡುವುದು ಉತ್ತಮವಾದ ಅನುಭವ. ತನ್ನ ಮೊದಲ ಅವಕಾಶವನ್ನು ಪುತ್ತೂರು ಉಪವಿಭಾಗದಲ್ಲಿ ಪಡೆದುಕೊಂಡ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರು ತನ್ನ ವೃತ್ತಿಗೆ ನ್ಯಾಯ ಸಲ್ಲಿಸಿದ್ದಾರೆ.
ಪುತ್ತೂರು: ದಕ ಜಿಲ್ಲೆಯಲ್ಲಿ ಕೆಲಸ ಮಾಡುವುದು ಉತ್ತಮವಾದ ಅನುಭವ. ತನ್ನ ಮೊದಲ ಅವಕಾಶವನ್ನು ಪುತ್ತೂರು ಉಪವಿಭಾಗದಲ್ಲಿ ಪಡೆದುಕೊಂಡ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರು ತನ್ನ ವೃತ್ತಿಗೆ ನ್ಯಾಯ ಸಲ್ಲಿಸಿದ್ದಾರೆ.
ಜುಬಿನ್ ಮೊಹಾಪಾತ್ರ ಅವರು ಬಡಜನರ ಮೇಲೆ ಹಾಗೂ ಸಮಾಜದ ಬಗ್ಗೆ ಕಾಳಜಿ ಇರುವ ವ್ಯಕ್ತಿ. ಸುಬ್ರಹ್ಮಣ್ಯ ದೇವಳದ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ಮಾಡುವ ಮೂಲಕ ಭಕ್ತಾಧಿಗಳ ಶ್ಲಾಘನೆಗೂ ಪಾತ್ರವಾಗಿದ್ದಾರೆ. ಪುತ್ತೂರು ಕೆಲಸ ಮಾಡಲು ಅತ್ಯುತ್ತಮವಾದ ಸ್ಥಳ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಭಿಪ್ರಾಯಪಟ್ಟರು.
ರಾಯಚೂರು ಮಹಾನಗರ ಪಾಲಿಕೆಯ ಕಮಿಷನರ್ ಆಗಿ ವರ್ಗಾವಣೆಗೊಂಡ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರಿಗೆ ಇಲಾಖೆಗಳ ವತಿಯಿಂದ ಶುಕ್ರವಾರ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸದಾ ನೆನಪಿರುತ್ತದೆ ಪುತ್ತೂರು
ಪುತ್ತೂರು ನನ್ನ ಮೊದಲ ಕೆಲಸದ ಸ್ಥಳ. ಇಲ್ಲಿನ ನೆನಪು ಸದಾ ಕಾಲ ನೆನಪಿರುತ್ತದೆ. ಇಲ್ಲಿ ಹಲವು ಸವಾಲುಗಳನ್ನು ಎದುರಿಸಿದ್ದೇವೆ. ತುಂಬಾ ಜನರಿಗೆ ಅನುಕೂಲ ಮಾಡಲು ಅವಕಾಶ ಇಲಾಖೆ ಇದಾಗಿದೆ. ಸಾಧ್ಯವಾದಷ್ಟು ಇಲ್ಲಿ ಕಾರ್ಯಗತ ಮಾಡಲು ಪ್ರಯತ್ನಿಸಿದ್ದೇನೆ. ಇಲ್ಲಿಯದ್ದು ಅತ್ಯುತ್ತಮ ಅನುಭವ ಎಂದರು.
ಪತ್ರಕರ್ತರಿಗೆ ಶ್ಲಾಘನೆ
ಪುತ್ತೂರಿನಲ್ಲಿನ ಅಧಿಕಾರಿ ವರ್ಗದ ಬೆಂಬಲ ನನಗೆ ಸಿಕ್ಕಿತು. ಕೆಲವೊಮ್ಮೆ ನಿಗಧಿತ ಸಮಯಕ್ಕಿಂತ ಹೆಚ್ಚು ಕಾಲ ಕೆಲಸ ಮಾಡಿಸುತ್ತಿದ್ದೆ. ಇದರಿಂದ ಅದಿಕಾರಿಗಳಿಗೆ ಸಿಬಂದಿಗಳಿಗೆ ಬೇಸರವಾಗಿರಬಹುದು. ಆದರೆ ಅದರ ಪರಿಣಾಮ ತುಂಬಾ ಜನರಿಗೆ ಸಹಾಯವಾಗಿದೆ. ಪುತ್ತೂರಿನ ಪತ್ರಕರ್ತರು ತುಂಬಾ ಸಹಕಾರ ನೀಡಿದ್ದಾರೆ. ಸಾಮಾಜಿಕ ವಿಚಾರಗಳ ಕುರಿತು ತುಂಬಾ ಚರ್ಚೆ ಮಾಡುತ್ತಿದ್ದರು. ನನ್ನ ಕೆಲಸದ ಮೇಲೂ ಈ ಚರ್ಚೆಗಳೂ ಪರಿಣಾಮ ಬೀರಿವೆ ಎಂದರು.
ಕಾರ್ಯಕ್ರಮದಲ್ಲಿ ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿದರು. ವೇದಿಕೆಯಲ್ಲಿ ಜುಬಿನ್ ಅವರ ಸಹಪಾಠಿ ಕೇರಳದ ಪ್ರೊಬೆಷನರಿ ಐ.ಎ.ಎಸ್. ಅಧಿಕಾರಿ ಸಾಯಿಕೃಷ್ಣ, ಪುತ್ತೂರು ಪ್ರೊಬೆಷನರಿ ಉಪವಿಭಾಗಾಧಿಕಾರಿ ಶ್ರವಣ್ ಕುಮಾರ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕ್, ಕಡಬ ತಹಶೀಲ್ದಾರ್ ಪ್ರಭಾಕರ ಖುಜೂರೆ, ಸುಳ್ಯ ತಹಶೀಲ್ದಾರ್ ಮಂಜುಳಾ, ಭೂಮಾಪನಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ಉಪಸ್ಥಿತರಿದ್ದರು.
ಪುತ್ತೂರು ಕಂದಾಯ ಇಲಾಖೆಯ ಅಧಿಕಾರಿಗಳಾದ ಚಂದ್ರಶೇಖರ್, ಚಂದ್ರ ನಾಯ್ಕ್, ನರಿಯಪ್ಪ, ಸುಲೋಚನಾ ಮೊದಲಾದವರು ಅನುಭವ ಹಂಚಿಕೊಂಡರು. ಉಪವಿಭಾಗದ ಅಧಿಕಾರಿಗಳು, ಸಿಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಂದಾಯ ನಿರೀಕ್ಷಕ ಗೋಪಾಲ್ ವಂದಿಸಿದರು. ಶಿಕ್ಷಕ ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರ್ವಹಿಸಿದರು.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.
ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.
ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು
ಸ್ಥಳೀಯ
Savanoor-ಸವಣೂರು ಆದರ್ಶ ಸಹಕಾರ ಸಂಘದ ರಜತ ಮಹೋತ್ಸವ ಸಂಭ್ರಮ: ‘ಸಹಕಾರ ರಶ್ಮಿ’ ನೂತನ ಕಟ್ಟಡ ಉದ್ಘಾಟನೆ
ಸಹಕಾರರತ್ನ ಸವಣೂರು ಕೆ. ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.
ಪುತ್ತೂರು: ಸಹಕಾರರತ್ನ ಸವಣೂರು ಕೆ.ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.

ಆದರ್ಶ ರಜತ ಪ್ರಶಸ್ತಿ ಪ್ರದಾನ
ಹಿರಿಯ ಸಹಕಾರಿ, ಸಹಕಾರ ರತ್ನ ಜಾಕೆ ಮಾಧವ ಗೌಡ ಅವರಿಗೆ ಆದರ್ಶ ರಜತ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಅವರು ಪ್ರಶಸ್ತಿ ಪತ್ರ ವಾಚಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ:
ಬೆಳಗ್ಗೆ ಯಜೇಶ್ ಆಚಾರ್ ಮತ್ತು ಬಳಗ ಸುಬ್ರಹ್ಮಣ್ಯ ಇವರಿಂದ ಭಕ್ತಿ ಗಾನಾಮೃತ, ಉಮೇಶ್ ದೇವಾಡಿಗ ಪುತ್ತೂರು ಬಳಗದವರಿಂದ ರಾಗ್‌ರಂಗ್ ಸಂಗೀತ ಕಾರ್ಯಕ್ರಮ, ಅಪರಾಹ್ನಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ಚೆಲ್ಯಡ್ಕ ಮತ್ತು ಬಳಗದವರಿಂದ ಯಕ್ಷನೃತ್ಯ ರೂಪಕ ನಡೆಯಿತು. ಸಮಾರಂಭದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.

ಸನ್ಮಾನ:
ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರನ್ನು ಅವರ ಶಿಷ್ಯ ವೃಂದದವರು ಸನ್ಮಾನಿಸಿ ಗೌರವಿಸಿದರು. ಸಂಘದ ಆಡಳಿತ ಮಂಡಳಿಯಲ್ಲಿ ಆರಂಭದಿಂದಲೇ ನಿರ್ದೇಶಕರಾಗಿರುವ ಎನ್.ಸುಂದರ ರೈ ಸವಣೂರು, ಎಸ್.ಎಮ್. ಬಾಪು ಸಾಹೇಬ್ ಸುಳ್ಯ, ಬಿ.ಮಹಾಬಲ ರೈ ಬೋಳಂತೂರು, ಪೂರ್ಣಿಮ ಎಸ್. ಆಳ್ವ ಮಂಗಳೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದಲ್ಲಿ ಆರಂಭದಿಂದಲೇ ಸೇವೆ ಸಲ್ಲಿಸುತ್ತಿರುವ ಪ್ರಸ್ತುತ ಮಹಾಪ್ರಬಂಧಕರಾಗಿರುವ ವಸಂತ್ ಜಾಲಾಡಿ, ನಿವೃತ್ತರಾದ ಸಿಬ್ಬಂದಿಗಳಾದ ಮೋನಪ್ಪ ಗೌಡ ವಿಟ್ಲ, ಶ್ರೀನಿವಾಸ ತಂತ್ರಿ ಉಜಿರೆ, ಮನೋಜ್‌ಕುಮಾರ್ ಸುಳ್ಯ, ಸುರೇಖಾ ಬೆಳ್ತಂಗಡಿ, ನಿತ್ಯ ನಿಧಿ ಸಂಗ್ರಾಹಕರಾಗಿ ಸೇವೆ ಸಲ್ಲಿಸುತ್ತಿರುವ ಪುತ್ತೂರು ಶಾಖೆಯ ಕೃಷ್ಣಪ್ಪ, ಸುಬ್ರಹ್ಮಣ್ಯ ಶಾಖೆಯ ಶ್ರೀನಿವಾಸ ಡಿ., ಉಜಿರೆ ಶಾಖೆಯ ಮಂಜುನಾಥ ಶೆಟ್ಟಿ, ಸಂಘದ ಗುತ್ತಿಗೆದಾರ ಎಂ.ಎನ್.ಪ್ರಭಾಕರ್( ಡೆಕ್ಕನ್ ಡೀಲ್ ಪುತ್ತೂರು), ಕಟ್ಟಡದ ಇಂಜಿನಿಯರ್ ಸಚ್ಚಿದಾನಂದ (ನಿರ್ಮಾಣ್ ಅಸೋಸಿಯೇಟ್ಸ್ ಪುತ್ತೂರು) ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮ ನಿರೂಪಿಸಿದ ರಾಕೇಶ್ ರೈ ಕೆಡೆಂಜಿಯವರಿಗೆ ಗೌರವಾರ್ಪಣೆ ಮಾಡಲಾಯಿತು.

ದಕ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್., ಸವಣೂರು ಗ್ರಾ.ಪಂ.ಆಡಳಿತಾಧಿಕಾರಿ ಹರೀಶ್ ಕೆ., ಸಂಘದ ಉಪಾಧ್ಯಕ್ಷ ಎನ್.ಸುಂದರ ರೈ ಸವಣೂರು, ಮಹಾಪ್ರಬಂಧಕ ವಸಂತ್ ಜಾಲಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೀತಾರಾಮ ರೈ ಅವರು ಎಡನೀರು ಮತ್ತು ಒಡಿಯೂರು ಶ್ರೀಗಳಿಗೆ ತುಳಸಿ ಹಾರ, ಫಲಪುಷ್ಪ ನೀಡಿ ಗೌರವಿಸಿದರು. ನಿರ್ದೇಶಕರಾದ ಎನ್.ಜಯಪ್ರಕಾಶ್ ರೈ ಸುಳ್ಯ, ಮಹಾಬಲ ರೈ ಬೋಳಂತೂರು, ಎಸ್.ಎಮ್.ಬಾಪೂ ಸಾಹೇಬ್, ಪೂರ್ಣಿಮಾ ಎಸ್.ಆಳ್ವ, ವಿ.ವಿ.ನಾರಾಯಣ ಭಟ್, ರಾಮಯ್ಯ ರೈ ತಿಂಗಳಾಡಿ, ಅಶ್ವಿನ್ ಎಲ್.ಶೆಟ್ಟಿ ಸವಣೂರು, ಸೀತಾರಾಮ ಶೆಟ್ಟಿ ಮಂಗಳೂರು, ಮಹಾದೇವ ಮಂಗಳೂರು, ಯಮುನಾ ಎಸ್ ರೈ ಗುತ್ತುಪಾಲ್, ಅರಿಯಡ್ಕ ಚಿಕ್ಕಪ್ಪ ನ್ಯಾಕ್, ರಶ್ಮಿ ಎಸ್.ರೈ ಸವಣೂರು ಅತಿಥಿಗಳನ್ನು ಗೌರವಿಸಿದರು.

ಸಂಘದ ನಿರ್ದೇಶಕ ಜೈರಾಜ್ ಭಂಡಾರಿ ನೊಣಾಲು ವಂದಿಸಿದರು. ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ವಿದುಷಿ ಪವಿತ್ರಾ ರೂಪೇಶ್ ಪುತ್ತೂರು ಪ್ರಾರ್ಥನೆಗೈದರು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಮತ್ತು ಸಿಬ್ಬಂದಿಗಳು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಬೆಳಗ್ಗೆ – ಉಪಹಾರ, ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
-
ಬಿಗ್ ನ್ಯೂಸ್16 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್8 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ14 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು17 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized15 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್17 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ15 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್15 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















