Connect with us

ಬಿಗ್ ನ್ಯೂಸ್

Matsyagandha Express-ಅತ್ಯಾಧುನಿಕ ಜರ್ಮನ್ ತಂತ್ರಜ್ಞಾನದೊಂದಿಗೆ ಫೆ.17ರಂದು ಪ್ರಥಮ ಪ್ರಯಾಣ ಬೆಳೆಸಲಿರುವ ʻಮತ್ಸ್ಯಗಂಧ ಎಕ್ಸ್ಪ್ರೆಸ್ʼ; ಕೋಟರವರ ಮನವಿಗೆ ಸ್ಪಂದಿಸಿದ ಕೇಂದ್ರ ರೈಲ್ವೆ ಇಲಾಖೆಯ ಸಚಿವರುಗಳು

Published

on



Ad Widget

Ad Widget

Ad Widget

Ad Widget

ಕರಾವಳಿ ಕರ್ನಾಟಕ ಹಾಗೂ ಮುಂಬೈ ನಡುವೆ ಸಂಪರ್ಕ ಕಲ್ಪಿಸುತ್ತಿದ್ದ “ಮತ್ಸ್ಯಗಂಧ ಎಕ್ಸ್ಪ್ರೆಸ್” ರೈಲಿನ ಸಂಪೂರ್ಣ ಕೋಚ್ಗಳನ್ನು ಬದಲಾಯಿಸಿ ಅತ್ಯಾಧುನಿಕ ಜರ್ಮನ್ ತಂತ್ರಜ್ಞಾನದ ಎಲ್ಹೆಚ್ಬಿ ಕೋಚ್ ಅಳವಡಿಸಲಾಗಿದ್ದು ಫೆ.17 ರಂದು ಮೊದಲ ಪ್ರಯಾಣವನ್ನು ಬೆಳೆಸಲಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಮನವಿಯ ಮೇರೆಗೆ ಕೇಂದ್ರ ರೈಲ್ವೆ ಇಲಾಖೆಯ ಸಚಿವರುಗಳಾದ ಅಶ್ವಿನಿ ವೈಷ್ಣವ್ ಹಾಗೂ ವಿ.ಸೋಮಣ್ಣ ರವರ ಸೂಚನೆಯ ಮೇರೆಗೆ ರೈಲ್ವೇ ಅಧಿಕಾರಿಗಳು ನೂತನ ಕೋಚ್ ಅಳವಡಿಸಿದ್ದಾರೆ.

Ad Widget

Ad Widget

Ad Widget

Ad Widget

ಕರಾವಳಿ ಕರ್ನಾಟಕ ಹಾಗೂ ಮುಂಬೈ ನಡುವೆ ಸಂಪರ್ಕ ಕಲ್ಪಿಸುತ್ತಿದ್ದ “ಮತ್ಸ್ಯಗಂಧ ಎಕ್ಸ್ಪ್ರೆಸ್” ರೈಲಿನ ಸಂಪೂರ್ಣ ಕೋಚ್ಗಳನ್ನು ಬದಲಾಯಿಸಿ ಅತ್ಯಾಧುನಿಕ ಜರ್ಮನ್ ತಂತ್ರಜ್ಞಾನದ ಎಲ್ಹೆಚ್ಬಿ ಕೋಚ್ ಅಳವಡಿಸಲಾಗಿದ್ದು ಫೆ.17 ರಂದು ಮೊದಲ ಪ್ರಯಾಣವನ್ನು ಬೆಳೆಸಲಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಮನವಿಯ ಮೇರೆಗೆ ಕೇಂದ್ರ ರೈಲ್ವೆ ಇಲಾಖೆಯ ಸಚಿವರುಗಳಾದ ಅಶ್ವಿನಿ ವೈಷ್ಣವ್ ಹಾಗೂ ವಿ.ಸೋಮಣ್ಣ ರವರ ಸೂಚನೆಯ ಮೇರೆಗೆ ರೈಲ್ವೇ ಅಧಿಕಾರಿಗಳು ನೂತನ ಕೋಚ್ ಅಳವಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮತ್ಸ್ಯಗಂಧ ಎಕ್ಸ್ಪ್ರೆಸ್ ಕರಾವಳಿ ಭಾಗ ರೈಲ್ವೆ ಪ್ರಯಾಣಿಕರಲ್ಲಿ ಭಾವನಾತ್ಮಕ ಸಂಬಂಧವನ್ನು ಹೊಂದಿದ್ದು, ಅತಿಹೆಚ್ಚು ಪ್ರಯಾಣಿಕರನ್ನು ಒಯ್ಯುವ ಈ ರೈಲು ಶಿಥಿಲಾವಸ್ಥೆಗೆ ಬಂದಿದ್ದ ಹಿನ್ನೆಲೆಯಲ್ಲಿ ಅನೇಕ ಪ್ರಯಾಣಿಕರು ಈ ಕುರಿತು ಕೋಟ ಶ್ರೀನಿವಾಸ ಅವರಲ್ಲಿ ಮನವಿ ಮಾಡಿ, ವೀಡಿಯೋ ಮೂಲಕ ಈ ವ್ಯವಸ್ಥೆಯನ್ನು ಸರಿಪಡಿಸುವ ಸಲಹೆ ನೀಡಿದ್ದರು. ಎಲ್ಲರ ಸಲಹೆ ಹಾಗೂ ಮನವಿಯನ್ನು ಪುರಸ್ಕರಿಸಿದ ಕೋಟ ಅವರು ಕೇಂದ್ರ ರೈಲ್ವೆ ಇಲಾಖೆಯ ಸಚಿವರುಗಳಾದ ಅಶ್ವಿನಿ ವೈಷ್ಣವ್ ಹಾಗೂ ವಿ.ಸೋಮಣ್ಣ ರವರ ಗಮನಕ್ಕೆ ಈ ವಿಷಯವನ್ನು ತಂದಿದ್ದು ಸಂಪೂರ್ಣ ವರದಿಯನ್ನು ಅವರ ಮುಂದಿಟ್ಟಿದ್ದರು.

Ad Widget

Ad Widget <> Ad Widget

ಕೋಟಾ ಅವರ ಮನವಿಯನ್ನು ಪುರಸ್ಕರಿಸಿದ ಸಚಿವರುಗಳು ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲಿನ ಸಂಪೂರ್ಣ ಕೋಚ್ಗಳನ್ನು ಬದಲಾಯಿಸಿ ಅತ್ಯಾಧುನಿಕ ಜರ್ಮನ್ ತಂತ್ರಜ್ಞಾನದ ಎಲ್ಹೆಚ್ಬಿ ಕೋಚ್ ಅಳವಡಿಸಲು ಅಧಿಕಾರಿಗಳಿಗೆ ಆದೇಶ ನೀಡಿದ್ದು, ಇದೀಗ ನೂತನ ಕೋಚ್ಗಳು ಸಿದ್ಧವಾಗಿದ್ದು ಫೆ.17 ರಂದು ಮೊದಲ ಪ್ರಯಾಣವನ್ನು ಬೆಳೆಸಲಿದೆ.



Ad Widget

ಸ್ವಾತಂತ್ರ್ಯದ ಸುವರ್ಣ ಮಹೋತ್ಸವದ ಸಂದರ್ಭ ಅಂದಿನ ಕೇಂದ್ರ ಸಚಿವರಾದ ದಿ.ಜಾರ್ಜ್ ಫರ್ನಾಂಡೀಸ್ ರವರ ವಿಶೇಷ ಪರಿಶ್ರಮದಿಂದ ಅಂದಿನ ಪ್ರಧಾನಮಂತ್ರಿ ದಿ.ಅಟಲ್ ಬಿಹಾರಿ ವಾಜಪೇಯಿಯವರ ವಿಶೇಷ ಕಾಳಜಿಯಿಂದ 1998ರ ಮೇ 01ರಂದು ಈ ರೈಲು ಉದ್ಘಾಟನೆಗೊಂಡಿತು. ಅಲ್ಲಿಂದ ಇಂದಿನವರೆಗೂ ಸುಧೀರ್ಘ ಕಾಲ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕರಾವಳಿ ಜನರನ್ನು ಭಾವನಾತ್ಮಕವಾಗಿ ಈ ರೈಲು ಬೆಸೆದಿದೆ. ಈಗ ಆಧುನಿಕ ಭಾರತದ ದ್ಯೋತಕವಾಗಿ ಈ ರೈಲು ಹೊಸ ತಂತ್ರಜ್ಞಾನದ ಮೂಲಕ ಕಂಗೊಳಿಸಲಿದ್ದು ಪ್ರಯಾಣಿಕರಿಗೆ ವಿಶೇಷ ಸೇವೆಯನ್ನು ನೀಡಲಿದೆ.

Ad Widget

Ad Widget

ಆಧುನಿಕ ತಂತ್ರಜ್ಞಾನದ ಕೋಚ್ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಜನರು ಸುರಕ್ಷಿತವಾಗಿರುತ್ತಾರೆ. ಯಾವುದೇ ಅಪಘಾತ ಸಂಭವಿಸಿದರೂ ಕೋಚ್ಗಳು ಪಲ್ಟಿ ಆಗದೆ ZIGZAG ರೀತಿಯಲ್ಲಿ ವರ್ಗೀಕರಿಸಿ ನಿಂತುಬಿಡುತ್ತದೆ. ಈ ಹೊಸ ಕೋಚ್ನ ರೈಲಲ್ಲಿ ಶಬ್ದದ ಸಮಸ್ಯೆ ಕಡಿಮೆ ಇದ್ದು ಶೌಚಾಲಯ ವ್ಯವಸ್ಥೆಯೂ ಸಂಪೂರ್ಣವಾಗಿ ಬದಲಾಗಿದ್ದು ಆಧುನಿಕ ಶೈಲಿಯನ್ನು ಅಳವಡಿಸಲಾಗಿದೆ.

ಫೆ.17ರಂದು ಈ ಹೊಸ ಕೋಚ್ಗಳುಳ್ಳ ರೈಲು ಪ್ರಥಮ ಪ್ರಯಾಣ ನಡೆಸಲಿದ್ದು ಉಡುಪಿಗೆ ಆಗಮಿಸುವ ಸಂದರ್ಭದಲ್ಲಿ ರೈಲನ್ನು ಸ್ವಾಗತಿಸುವ ಕಾರ್ಯಕ್ರಮ ಹಾಗೂ ರೈಲ್ವೆ ಯೋಜನೆಗಳ ಕುರಿತು ಚರ್ಚಾ ಕಾರ್ಯಕ್ರಮ ಕೂಡಾ ನಡೆಯಲಿರುವುದು. ಈ ಸಂದರ್ಭದಲ್ಲಿ ರೈಲ್ವೆ ಅಧಿಕಾರಿಗಳು ಕೂಡ ಭಾಗವಹಿಸಲಿದ್ದು ರೈಲ್ವೆ ಪ್ರಯಾಣಿಕರು ಯಾವುದೇ ಕುಂದು ಕೊರತೆಗಳನ್ನು ಚರ್ಚಿಸಲು ಅವಕಾಶವಿದೆ ಎಂದು ಕೋಟ ಅವರು ತಿಳಿಸಿದ್ದಾರೆ.

ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲಿನ ಬೆನ್ನಲ್ಲೇ ಮಹಾರಾಷ್ಟ್ರಕ್ಕೆ ತೆರಳುವ ಮಂಗಳೂರು ಎಕ್ಸ್ಪ್ರೆಸ್ ರೈಲು ಮಾ.1 ರಿಂದ ನೂತನ ಎಲ್ಹೆಚ್ಬಿ ಕೋಚ್ಗಳನ್ನೊಳಗೊಂಡು ಪ್ರಯಾಣ ಬೆಳೆಸಲಿದೆ.

ಈ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ವೇಗ ಕೊಟ್ಟು ಸಹಕರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಮನವಿಗಳಿಗೆ ಬೆಂಬಲ ನೀಡಿ ಸಹಕರಿಸಿದ ಸಚಿವರಾದ ವಿ.ಸೋಮಣ್ಣ, ಕಾಲಕಾಲಕ್ಕೆ ರೈಲ್ವೆ ಅಭಿವೃದ್ಧಿ ಯೋಜನೆಗಳ ಕುರಿತಾಗಿ ಅಮೂಲ್ಯ ಸಲಹೆಗಳನ್ನು ನೀಡುತ್ತಿರುವ ರೈಲ್ವೆ ಬಳಕೆದಾರರ ಸಮಿತಿಯ ಪ್ರಮುಖರಿಗೆ ಕೋಟರವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Ad Widget

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಅಂತರ ರಾಜ್ಯ

Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ

Published

on



Ad Widget

Ad Widget

Ad Widget

Ad Widget

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.

Ad Widget

Ad Widget <> Ad Widget

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.



Ad Widget

ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.

Ad Widget

Ad Widget

ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.

ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.

ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.

ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading