ಉದ್ಯೋಗ
ವಿದ್ಯಾಮಾತಾ ತರಬೇತಿ ಸಂಸ್ಥೆಯ ಮಹತ್ವದ ಸಾಧನೆ : ಇಬ್ಬರು ಕೆ-ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ – ಆನ್ ಲೈನ್ ನಲ್ಲೇ ತರಬೇತಿ ಪಡೆದ ಬೆಂಗಳೂರಿನ ಈ ಇಬ್ಬರು ಉಪನ್ಯಾಸಕರು
ಪುತ್ತೂರು : ಸರಕಾರಿ ಹುದ್ದೆಗಳಿಗೆ ಕರಾವಳಿ ಜನತೆ ಪ್ರಯತ್ನವೇ ಮಾಡುವುದಿಲ್ಲ ಎಂಬ ಕೂಗಿನ ಮಧ್ಯೆಯೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪ್ರಾರಂಭಿಸಿ ವಿವಿಧ ನೇಮಕಾತಿಗಳ ಪರೀಕ್ಷೆಗಳಲ್ಲಿ ಭರ್ಜರಿ ಫಲಿತಾಂಶವನ್ನು ದಾಖಲಿಸುವುದರ ಮೂಲಕ ಕ್ರಾಂತಿಯನ್ನು ಉಂಟು ಮಾಡುತ್ತಿರುವ ಹೆಸರಾಂತ ವಿದ್ಯಾಮಾತಾ ಅಕಾಡೆಮಿಯು 2024 -25ರ ಸಾಲಿನಲ್ಲಿ ಕೆ- ಸೆಟ್ ಪರೀಕ್ಷೆಗೂ ತರಬೇತಿಯನ್ನು ಆನ್ಲೈನ್ನಲ್ಲಿ ಪ್ರಾರಂಭಿಸಿ ಇಬ್ಬರು ಅಭ್ಯರ್ಥಿಗಳು ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗುವುದರ ಮೂಲಕ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.
ಕಳೆದ ಸಾಲಿನಲ್ಲಿ ಮೂರು ಅಭ್ಯರ್ಥಿಗಳು ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದರು.
ಮೂಲತಃ ಪುತ್ತೂರಿನ ಪಾಂಗಲಾಯಿ ನಿವಾಸಿ , ಪ್ರಸ್ತುತ ಬೆಂಗಳೂರಿನಲ್ಲಿ ಗಿರಿನಗರದಲ್ಲಿ ನೆಲೆಸಿರುವ ಸತ್ಯನಾರಾಯಣ ಬಿ. ಎಸ್ ಇವರ ಪತ್ನಿ , ಬೆಂಗಳೂರಿನ ಚನ್ನಸಂದ್ರ ಆರ್. ಎನ್.ಎಸ್ – ಪಿಯು ಕಾಲೇಜಿನ ಬಯೋಲಾಜಿ ಉಪನ್ಯಾಸಕಿ ಯಾಗಿರುವ ಪ್ರೇಮಲತಾ ಕೆ, ಹಾಗೂ ಮೂಲತಃ ಕಡಬ ತಾಲೂಕಿನ ನೂಜಿ ಬಾಳ್ತಿಲ ಗ್ರಾಮದ ಸಂತ್ಯಾಡ್ಕ ಜಾಲು ನಿವಾಸಿ ರೋಹಿತ್ ಎಸ್.ಎಂ ಇವರ ಪತ್ನಿ ಪ್ರಸ್ತುತ ಬೆಂಗಳೂರಿನ ಸೈಂಟ್ ವಿನ್ಸೆಂಟ್ ಪಲ್ಲೊಟ್ಟಿ ಪಿಯು ಕಾಲೇಜಿನ ಕೆಮಿಸ್ಟ್ರಿ ಉಪನ್ಯಾಸಕಿಯಾಗಿರುವ ರಶ್ಮಿತಾ ಎಂ ಇವರು ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರ ಸಾಧನೆಗೆ ಆಡಳಿತ ಮಂಡಳಿ ಮತ್ತು ಬೋಧಕ ವೃಂದ ಅಭಿನಂದನೆ ಸಲ್ಲಿಸಿದೆ.
ತರಬೇತಿಯ ಅವಶ್ಯಕತೆ ಇರುವವರು 9620468869 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.
ಕೆ – ಸೆಟ್ ನಿಂದ ಆಗುವ ಪ್ರಯೋಜನಗಳು :
ಕೆ-ಸೆಟ್ ಪಾಸಾದರೆ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಲು ಅವಕಾಶ ಇರುತ್ತದೆ. ಪಿ.ಹೆಚ್.ಡಿ ರಿಸರ್ಚ್ ಅಪ್ಲೈ ಮಾಡಿದಾಗ ಲಿಖಿತ ಪರೀಕ್ಷೆ ಇರದೇ ಮೌಖಿಕ ಪರೀಕ್ಷೆ ಮಾತ್ರ ಇರುತ್ತದೆ. ಕೆ -ಸೆಟ್ ಉತ್ತೀರ್ಣರಾದವರು ನೆಟ್ ಎಕ್ಸಾಮ್ ಉತ್ತೀರ್ಣರಾದರೆ ಆಲ್ ಓವರ್ ಇಂಡಿಯಾ ಅಸಿಸ್ಟೆಂಟ್ ಪ್ರೊಫೆಸರ್ ಗೆ ಅಪ್ಲೈ ಮಾಡಬಹುದು. ಏಡೆಡ್ ಅಥವಾ ಅನ್ ಏಡೆಡ್ ಸರಕಾರಿ ಸಾಮ್ಯದಲ್ಲಿರುವ ವಿಶ್ವವಿದ್ಯಾನಿಲಯದಲ್ಲಿ ಡೈಲಿ ವೆಜೆಸ್, ಪಾರ್ಟ್ ಟೈಮ್ ಗೆ ಮೊದಲ ಆದ್ಯತೆ ಪಡೆಯಬಹುದು.
ಕೆ -ಸೆಟ್ ಪಾಸಾದವರು NET+JRF(ಜೂನಿಯರ್ ರಿಸರ್ಚ್ ಫೆಲೋಶಿಪ್) ಪರೀಕ್ಷೆ ಕೂಡ ಉತ್ತೀರ್ಣರಾದರೆ ಪಿ.ಹೆಚ್.ಡಿ ಗೆ ಖಾಲಿ ಇರುವ ಯೂನಿವರ್ಸಿಟಿಗಳನ್ನು ಆಯ್ಕೆ ಮಾಡಿಕೊಳ್ಳಬಹುದು , ಪಿ.ಎಚ್.ಡಿ ಮಾಡುತ್ತಿರುವಾಗಲೇ ನಾಲ್ಕು ವರ್ಷದ ಅವಧಿಯಲ್ಲಿ ಪ್ರತಿ ತಿಂಗಳು 45, 000 ರಿಂದ 50,000 ರಿಸರ್ಚ್ ಸಬ್ಮಿಟ್ ಆಗುವವರೆಗೂ ಫೆಲೋಶಿಪ್ ಬರುತ್ತದೆ.
K-SET/NET ಪರೀಕ್ಷೆಗೆ ತರಬೇತಿಯನ್ನು ಸಾಮಾನ್ಯವಾಗಿ ಸದ್ಯ ಉಪನ್ಯಾಸಕ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವ ಇರುವವರೇ ಪಡೆದುಕೊಳ್ಳುತ್ತಾರೆ. ಅಂತಹ ವೃತ್ತಿಪರ ಶಿಕ್ಷಕ/ ಉಪನ್ಯಾಸಕರಿಗೆ ತರಬೇತಿ ನೀಡುವ ಸವಾಲನ್ನು ಸಮರ್ಥವಾಗಿ ನಾವು ನಿಭಾಯಿಸುತ್ತಿರುವುದರಿಂದ ನಮ್ಮಲ್ಲಿ K- SET/NET/CTET/TET ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶವನ್ನು ಪ್ರತಿ ವರ್ಷ ದಾಖಲಿಸುತ್ತಿದ್ದೇವೆ. 5 ವರ್ಷದ ವಿದ್ಯಾರ್ಥಿಗಳಿಂದ 50 ವರ್ಷದವರೆಗಿನ ವಿವಿಧ ನೇಮಕಾತಿಗಳಿಗೆ /ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿರುವುದೇ ನಮ್ಮ ಸಂಸ್ಥೆಯ ವಿಶೇಷತೆ. ಈ ನಿಟ್ಟಿನಲ್ಲಿ ಕೆ- ಸೆಟ್ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಇಬ್ಬರು ಉತ್ತೀರ್ಣರಾಗಿರುವುದು ಅತ್ಯಂತ ಖುಷಿಯ ವಿಚಾರವಾಗಿದೆ.
ಭಾಗ್ಯೇಶ್ ರೈ
ಆಡಳಿತ ನಿರ್ದೇಶಕರು ವಿದ್ಯಾಮಾತಾ ಅಕಾಡೆಮಿ
ನಾನು ಮೂಲತಃ ಪಾಂಗಲಾಯಿ ಪುತ್ತೂರು ನಿವಾಸಿಯಾಗಿದ್ದು ಸದ್ಯ ಬೆಂಗಳೂರಿನಲ್ಲಿ ಉಪನ್ಯಾಸಕಿ ಆಗಿರುತ್ತೇನೆ. ನಮ್ಮ ಊರಿನ ವಿದ್ಯಾಮಾತಾ ಅಕಾಡೆಮಿಯು ಆನ್ಲೈನ್ ಮೂಲಕ ತರಬೇತಿಯನ್ನು ಕೊಡುತ್ತಿರುವ ವಿಷಯ ತಿಳಿದು, ನಾನು ಸಂಸ್ಥೆಯಲ್ಲಿ ತರಬೇತಿ ಯನ್ನು ಪಡೆದು ಮೊದಲ ಪ್ರಯತ್ನದಲ್ಲಿ ಉತ್ತೀರ್ಣರಾಗಿದ್ದೇನೆ .ನಮ್ಮ ಊರಿನ ಸಂಸ್ಥೆ ಇಂತಹ ಅತ್ಯುತ್ತಮ ತರಬೇತಿ ನೀಡುತ್ತಿರುವುದು ನಾವೆಲ್ಲರೂ ಖುಷಿ ಪಡುವ ವಿಚಾರವಾಗಿದೆ .ವಿದ್ಯಾಮಾತಾ ಅಕಾಡೆಮಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ.
ಪ್ರೇಮಲತಾ ಕೆ
ಬಯೋಲಜಿ ಉಪನ್ಯಾಸಕರು
ಆರ್.ಎನ್.ಎಸ್ ಪಿಯು ಕಾಲೇಜ್ ಚನ್ನಸಂದ್ರ ಬೆಂಗಳೂರು.
ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವೇ ಇಲ್ಲದ ನಮ್ಮ ಕರಾವಳಿ ಭಾಗದಲ್ಲಿ ವಿದ್ಯಾಮಾತಾ ಅಕಾಡೆಮಿಯ ಪ್ರಯುತ್ನ ನಿಜಕ್ಕೂ ಮೆಚ್ಚುವಂತದ್ದು, ನಮ್ಮಂತಹ ಉಪನ್ಯಾಸಕರಿಗೆ ತರಬೇತಿಯ ವಿಷಯದಲ್ಲಿ ತುಂಬಾ ನಿರೀಕ್ಷೇಗಳು ಇರುವುದು ಸಹಜ ಅದನ್ನು ವಿದ್ಯಾಮಾತಾ ಅಕಾಡೆಮಿಯ ತರಬೇತುದಾರರ ತಂಡ ಸಮರ್ಥವಾಗಿ ನಿಭಾಯಿಸುತ್ತಿದೆ, ಇದರಿಂದ ಪ್ರಾಮಾಣಿಕವಾಗಿ ಪ್ರಯತ್ನ ಮಾಡುವ ಯಾವುದೇ ಅಭ್ಯರ್ಥಿಯು ನೇಮಕಾತಿ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶವನ್ನು ಖಂಡಿತಾ ವಿದ್ಯಾ ಮಾತಾ ಅಕಾಡೆಮಿಯ ತರಬೇತಿಯ ಮೂಲಕ ಸಾಧಿಸಬಹುದು ಎನ್ನುವುದಕ್ಕೆ ನಾನೇ ಸಾಕ್ಷಿಯಾಗಿರುತ್ತೇನೆ.
ರಶ್ಮಿತಾ ಎಂ
ಕೆಮಿಸ್ಟ್ರಿ ಉಪನ್ಯಾಸಕರು
ಸೈಂಟ್ ವಿನ್ಸೆಂಟ್ ಪಲ್ಲೋಟ್ಟಿ ಪಿಯು ಕಾಲೇಜ್ ಬೆಂಗಳೂರು
ಸುಳ್ಯ
Puttur-ಸುಳ್ಯ ಮತ್ತು ಪುತ್ತೂರಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಸಂಸ್ಥೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಶಿಕ್ಷಕಿ ಹಾಗೂ ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಈ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.
ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಕಂಪ್ಯೂಟರ್ ಶಿಕ್ಷಕಿಯ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಅಗತ್ಯವಿದೆ. ಅದೇ ರೀತಿ, ಪುತ್ತೂರು ಹಾಗೂ ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಕಾರ್ಯನಿರ್ವಹಿಸಲು ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ (Business Development Officer) ಹುದ್ದೆಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ತಮ್ಮ ವೃತ್ತಿಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಬಯಸುವ ಹಾಗೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಇದು ಸೂಕ್ತ ವೇದಿಕೆಯಾಗಿದೆ.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇರ ಸಂದರ್ಶನವು ದಿನಾಂಕ 26-10-2026 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.
ಉದ್ಯೋಗ
Puttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ
ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್‌ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್‌ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ
ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್‌ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್‌ಚಾರ್ಜ್, ಅಕ್ಸಿಡೆಂಟ್ ಸೂಪರ್‌ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್‌ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ
ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.
PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!
ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.
ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.
📞 ಸಂಪರ್ಕ: +91 82965 79206
📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.
ಉದ್ಯೋಗ
Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.
ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.
ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
-
Uncategorized15 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಸ್ಥಳೀಯ24 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಬಿಗ್ ನ್ಯೂಸ್24 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ನಿಧನ ವಾರ್ತೆ20 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ20 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ಅಂತರ ರಾಜ್ಯ24 hours agoTrisha-ವಿಜಯ್ ಸಿಎಂ ಬೆನ್ನಲ್ಲೇ ತ್ರಿಷಾ ರಾಜಕೀಯ ಎಂಟ್ರಿಗೆ ಸಿದ್ಧತೆ? ‘ಜಯಲಲಿತಾ ಉತ್ತರಾಧಿಕಾರಿ’ ಎಂದ ಅಭಿಮಾನಿಗಳು..!
-
ರಾಜಕೀಯ20 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ20 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು















