ಕಾರ್ಯಕ್ರಮಗಳು
Kallega-ಪುತ್ತೂರಿನ ಎರಡನೇ ಜಾತ್ರೆ ಎಂದೇ ಪ್ರಖ್ಯಾತಗೊಂಡ ಕಲ್ಲೇಗ ಶ್ರೀಕಲ್ಕುಡ-ಕಲ್ಲುರ್ಟಿ ದೈವದ ವಾರ್ಷಿಕ ಜಾತ್ರೋತ್ಸವ ಫೆ.11ಕ್ಕೆ : ಕುದಿಯಿಟ್ಟ ದಿನದಿಂದ ಈ ಊರಿನಲ್ಲಿ ನಡೆಯುವುದಿಲ್ಲ ಶುಭಕಾರ್ಯ ಮತ್ತು ಪ್ರಾಣಿಬಲಿ : ಈ ಬಾರಿ ಮಹಾಮ್ಮಾಯಿ – ಕಲ್ಲುರ್ಟಿ ಗುಡಿಯ ಮೇಲ್ಚಾವಣಿಗೆ ತಾಮ್ರದ ಹೊದಿಕೆ
ಪುತ್ತೂರು ನಗರದ ಕಲ್ಲೇಗದ ವರ್ಷಂಪ್ರತಿ ಜರಗುವ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮವು ಫೆ.11 ಮಂಗಳವಾರದಂದು ನಡೆಯಲಿರುವುದು.
ಪುತ್ತೂರು: ಪುತ್ತೂರು ನಗರದ ಕಲ್ಲೇಗದ ವರ್ಷಂಪ್ರತಿ ಜರಗುವ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮವು ಫೆ.11 ಮಂಗಳವಾರದಂದು ನಡೆಯಲಿರುವುದು.
ಫೆ.11ರಂದು ಬೆಳಗ್ಗೆ ಗಂಟೆ 9.00ಕ್ಕೆ ಕಾರ್ಜಾಲು ಗುತ್ತಿನಲ್ಲಿ ಸ್ಥಳ ಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ ಜರಗಲಿರುವುದು. 11-30 ಕ್ಕೆ ಶ್ರೀ ದೈವಸ್ಥಾನದಲ್ಲಿ ಗಣಹೋಮ ಹಾಗೂ ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ, ಮಧ್ಯಾಹ್ನ ಗಂಟೆ 12.30 ರಿಂದ ಕಲ್ಲೇಗ ದೈವಸ್ಥಾನದಲ್ಲಿ ಅನ್ನಸಂತರ್ಪಣಾ ಕಾರ್ಯಕ್ರಮ ನೆರವೇರಲಿರುವುದು.
ರಾತ್ರಿ ಗಂಟೆ 7.30ಕ್ಕೆ ಸರಿಯಾಗಿ ಶ್ರೀದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಡಲಿದ್ದು, ರಾತ್ರಿ ಗಂಟೆ 9:30ಕ್ಕೆ ಗೊಂದೊಳು ಪೂಜೆ, ರಾತ್ರಿ 12 ಗಂಟೆಗೆ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ಜರಗಲಿರುವುದು.
ಫೆ.10 ಸೋಮವಾರ ಸಂಜೆ ಗಂಟೆ 4ಕ್ಕೆ ಕಲ್ಲೇಗ ಮತ್ತು ಪೋಳ್ಯ ಬೈಲಿನವರಿಂದ ಹೊರೆ ಕಾಣಿಕೆ ಸಮರ್ಪಣೆಯಾಗಲಿದೆ.
ಹಿಂದಿನಿಂದ ನಡೆದುಕೊಂಡು ಬಂದ ಸಂಪ್ರದಾಯಗಳು:
ಶ್ರೀ ದೈವಗಳ ಕಾಲಾವಧಿ ಜಾತ್ರೆ ನೇಮಗಳಿಗೆ ಆಗಿನದ ಕುದಿಯಿಟ್ಟ ದಿನದಿಂದ ನೇಮಗಳು ಜರಗುವ ದಿನಗಳ ವರೆಗೆ ಗ್ರಾಮದಲ್ಲಿ ಯಾವುದೇ ಶುಭ ಕಾರ್ಯಗಳಾಗಲಿ, ಕೋಳಿ ಅಂಕವೇ ಮೊದಲಾದ ಪ್ರಾಣಿ ಹಿಂಸೆಯ ಕಾರ್ಯಗಳು ಜರಗುವುದಿಲ್ಲ. ಗ್ರಾಮದಲ್ಲಿ ನಡೆಯುವ ಯಾವುದೇ ಮದುವೆ, ಗೃಹಪ್ರವೇಶ, ದೈವಗಳ ನೇಮ ಮೊದಲಾದ ಶುಭಕಾರ್ಯಗಳಲ್ಲಿ ಶ್ರೀ ದೈವಗಳ ಭಂಡಾರಕ್ಕೆ ಕಾಣಿಕೆ ಅರ್ಪಿಸಿ ನಡೆಯುವ ಶುಭಕಾರ್ಯ ನಿರ್ವಿಘ್ನವಾಗಿ ನಡೆಯುವಂತೆ ದೈವಗಳಲ್ಲಿ ಬೇಡಿಕೊಳ್ಳುವ ಸಂಪ್ರದಾಯವಿರುತ್ತದೆ.
ಮಹಾಮ್ಮಾಯಿ – ಕಲ್ಲುರ್ಟಿ ಗುಡಿಗೆ ತಾಮ್ರದ ಹೊದಿಕೆ:
ಶ್ರೀ ಕಲ್ಕುಡ ದೈವಸ್ಥಾನದ ಎರಡನೇ ಹಂತದ ಜೀರ್ಣೋದ್ದಾರದ ಹಾಗೂ ಅಭಿವೃದ್ಧಿ ಕೆಲಸ ಕಾರ್ಯಗಳು ಯಶಸ್ವಿಯಾಗಿ ನೆರವೇರಿದ್ದು, ಮೂರನೇಯ ಹಂತದ ಕಾರ್ಯಯೋಜನೆಯನ್ನು 2024ರಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಭಕ್ತಾಭಿಮಾನಿಗಳ ಅಪೇಕ್ಷೆಯಂತೆ ಅಂದಾಜು 20 ಲಕ್ಷದ ವೆಚ್ಚದಲ್ಲಿ ಶ್ರೀ ಮಹಾಮಾಯಿ ದೈವದ ಗುಡಿ ಮತ್ತು ಶ್ರೀ ಕಲ್ಲುರ್ಟಿ ದೈವದ ಗುಡಿ ಮೇಲ್ಛಾವಣಿಗೆ ತಾಮ್ರದ ಹೊದಿಕೆ ಮಾಡುವ ಹಾಗೂ ಇತರ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಭಕ್ತಾದಿಗಳು ತನು-ಮನ ಧನಗಳಿಂದ ಸಹಕರಿಸಬೇಕೆಂದು ವಿನಂತಿಸಲಾಗಿದೆ.
ದೇಣಿಗೆ ನೀಡಿ ಸಹಕರಿಸುವವರು ಈ ನಂಬರನ್ನು 9448983915 | 7090339082 ಸಂಪರ್ಕಿಸಬಹುದು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್ಹಾಲ್ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್ಹಾಲ್ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
-
Uncategorized16 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್10 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು13 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized14 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ14 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ15 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ14 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್15 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















