Connect with us

ಕಾರ್ಯಕ್ರಮಗಳು

Lighting ceremony-ಪುತ್ತೂರು: ನರೇಂದ್ರ ಪ.ಪೂ.ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ದೀಪ ಪ್ರದಾನ ಕಾರ್ಯಕ್ರಮದಲ್ಲಿ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಇದರ ಪ್ರಾಂಶುಪಾಲರಾದ ಡಾ. ಗುರುರಾಜ ಎಮ್. ಪಿ. ಮಾತನಾಡಿದರು.

Ad Widget

Ad Widget

Ad Widget

Ad Widget

“ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳ ಪರಿಶ್ರಮವೇ ಅವರ ಮುಂದಿನ ಗುರಿಗೆ ಉತ್ತಮ ಮಾರ್ಗ ಕಲ್ಪಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಯಶಸ್ಸು ಪಡೆಯಲು ಮುನ್ನಡೆಯಬೇಕಿದೆ. ಸಾಧನೆಯ ಯಶಸ್ಸು ಪಡೆಯಲು ಮಾರ್ಗ ಸರಳವಾಗಿಲ್ಲ, ಆದರೆ ಸತತ ಪರಿಶ್ರಮದಿಂದ ಯಶಸ್ಸಿನ ಹಾದಿಯತ್ತ ಸಾಗಲು ಸಾಧ್ಯ. ಜ್ಞಾನ ಶಕ್ತಿ, ಇಚ್ಛಾಶಕ್ತಿ, ಕ್ರಿಯಾ ಶಕ್ತಿಯೆಂಬ ಅಂಶ ಅಳವಡಿಸಿಕೊಂಡರೆ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಜೀವನವನ್ನು ಉತ್ತಮವಾಗಿ ಮಾಡಲು ಸಾಧ್ಯ. ಜೊತೆಗೆ ವಿದ್ಯಾರ್ಥಿಗಳು ಸಿಕ್ಕ ಅವಕಾಶದಲ್ಲಿ ಅದರ ಸದುಪಯೋಗ ಪಡೆದುಕೊಳ್ಳಲು ಯತ್ನಿಸಬೇಕು.ವಿದ್ಯಾರ್ಥಿಗಳಲ್ಲಿನ ಕಿಚ್ಚು ಯಾವತ್ತು ಸಕ್ರಿಯವಾಗಿದ್ದರೆ ಗುರಿ ಸಾಧನೆಗೆ ಸಹಕಾರಿಯಾಗಲಿದೆ.ʼʼ ಎಂದು ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಇದರ ಪ್ರಾಂಶುಪಾಲರಾದ ಡಾ. ಗುರುರಾಜ ಎಮ್. ಪಿ. ಹೇಳಿದರು.

Ad Widget

Ad Widget alt="Ad Widget"/>

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ದೀಪ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಉಮೇಶ್ ನಾಯಕ್ ರವರು ಮಾತನಾಡಿ, ಬದುಕಿಗೊಂದು ದಿಕ್ಕು ಮತ್ತು ಆ ದಿಕ್ಕಿನಲ್ಲಿ ಸಾಗಬೇಕಾದ ದಾರಿಯ ಅರಿವನ್ನು ಇಂದಿನ ಯುವಪೀಳಿಗೆಯಲ್ಲಿ ಮೂಡಿಸುವ ಕೆಲಸವನ್ನು ನಮ್ಮ ಸಂಸ್ಥೆಗಳು ಮಾಡುತ್ತಿದೆ.ಅದಕ್ಕೆ ಪೂರಕವಾದ ಎಲ್ಲಾ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಜೀವನದಲಿ ಅಳವಡಿಸಿ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಮಾತನಾಡಿ ,ಸಮಾಜದಲ್ಲಿ ಬದುಕುವ ಕಲೆಯನ್ನು ಕರಗತ ಮಾಡಿಕೊಳ್ಳಿ. ದಿನನಿತ್ಯ ಅಧ್ಯಯನ ಮತ್ತು ಚಿಂತನೆಯೊಂದಿಗೆ, ಭವಿಷ್ಯದಲ್ಲಿ ಬರುವ ಸವಾಲನ್ನು ಎದುರಿಸಲು ಧೈರ್ಯದಿಂದ ಸಾಗಬೇಕು. ವಿದ್ಯಾರ್ಥಿಗಳ ಸಾಧನೆಗೆ ಶ್ರಮ, ತಾಳ್ಮೆ, ಶ್ರದ್ಧೆ ಎಂಬ ನಿರ್ದಿಷ್ಟ ಮಾರ್ಗವಿದ್ದು , ಸಾಧಿಸುತ್ತೇನೆ ಎಂಬ ದೃಢ, ಅಚಲವಾದ ನಿರ್ಧಾರ ತಳೆದಾಗ ಮಾತ್ರ ಯಶಸ್ಸು ಸಾಧ್ಯವಾಗಲಿದೆ.ಎಂದು ಹೇಳಿದರು.

Ad Widget

Ad Widget

ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ದೀಪಾ ನಾಯಕ್ ಮಾತನಾಡಿ, ಇಂದಿನ ಯುವ ಜನತೆ ಜೀವನದಲ್ಲಿ ಸ್ಪಷ್ಟ ಗುರಿಯೆಡೆಗೆ ಶಿಸ್ತಿನಿಂದ ಸಾಗಿದರೆ ಉತ್ತುಂಗ ಸ್ಥಾನಕ್ಕೆ ಏರಬಹುದು. ಜೊತೆಗೆ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ರೂಪುಗೊಳ್ಳಬಹುದು. ಸತತ ಪ್ರಯತ್ನ , ಸಮಯ ಪಾಲನೆ ಮತ್ತು ಪ್ರಾಮಾಣಿಕತೆಯನ್ನು ರೂಢಿಸಿಕೊಳ್ಳುವುದರ ಮೂಲಕ ಯಶಸ್ಸಿನ ಕಡೆಗೆ ಸಾಗಬಹುದು.ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಉತ್ತಮಜೀವನ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಜೀವನದಲ್ಲಿ ನೆಮ್ಮದಿಯನ್ನು ಪಡೆಯಲು ಸಾಧ್ಯವಿದೆ. ಎಂದು ಹೇಳಿದರು.

ಉಪನ್ಯಾಸಕರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ , ಅವರ ಮುಂದಿನ ಭವಿಷ್ಯ ಬೆಳಗಲಿ ಎನ್ನುದರ ಸಂಕೇತವಾಗಿ ದೀಪವನ್ನು ಉರಿಸಿ ವಿದ್ಯಾರ್ಥಿಗಳಿಗೆ ಹಂಚಿದರು. ಆ ವಿದ್ಯಾರ್ಥಿಗಳು ದೀಪಗಳಿಂದ ಅಖಂಡ ಭಾರತವನ್ನು ಬೆಳಗಿದರು.

ವಿದ್ಯೆಯೊಂದಿಗೆ ಸಮಗ್ರ ಚಟುವಟಿಕೆಗಳು ಸದಾಕಾಲವೂ ವಿದ್ಯಾಸಂಸ್ಥೆಯನ್ನು ಬೆಳಗುತ್ತಿರಲಿ ಎನ್ನುವ ಸಂಕೇತವಾಗಿ ದೀಪವನ್ನು ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ಹಸ್ತಾಂತರಗೊಳಿಸಿದರು.

ಉಪನ್ಯಾಸಕರು ತಮ್ಮ ಹಿತನುಡಿಗಳ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

ಐಟಿ ಕ್ಲಬ್ ವತಿಯಿಂದ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ನಡೆಸಿದ “ಡಿಜಿಟಲ್ ಕ್ಲಾಸ್”- ಕಂಪ್ಯೂಟರ್ ಬೇಸಿಕ್ ಟ್ರೈನಿಂಗ್ ಪ್ರೋಗ್ರಾಮ್ ನಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕೋರ್ಸ್ನ ಸರ್ಟಿಫಿಕೇಟ್ ಗಳನ್ನು ನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಕು. ಶಾಲ್ಮಲಿ ಆರ್.ಎಸ್. ಸ್ವಾಗತಿಸಿ, ಕು. ಸಿಂಧು ಸರಳಾಯ ವಂದಿಸಿದರು. ಕರ‍್ಯಕ್ರಮದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಅರ್ಚನಾ ನಿರೂಪಿಸಿದರು.

ಸಭಾಕಾರ್ಯಕ್ರಮದ ಬಳಿಕ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳಿಗಾಗಿ ಆಕರ್ಷಕ ಮೋಜಿನ ಆಟಗಳನ್ನು ಆಯೋಜಿಸಿದರು.

Ad Widget
Click to comment

Leave a Reply

ಸ್ಥಳೀಯ

Wedding-ಕ್ಯಾಸೆಟ್‌ಗಳ ಅಬ್ಬರವಿಲ್ಲ, ಡ್ಯಾನ್ಸ್‌ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!

Published

on

Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.

Ad Widget

Ad Widget

Ad Widget

Ad Widget

ಉಜಿರೆ: ಕ್ಯಾಸೆಟ್‌ಗಳ ಅಬ್ಬರ, ಮೈಕಾಸುರನ ಹಾವಳಿಯಿಂದ ಶಬ್ದ ಮಾಲಿನ್ಯವಿಲ್ಲ. ಸಿನೆಮಾ ಹಾಡು, ಬ್ರೇಕ್‌ಡ್ಯಾನ್ಸ್ ಉಪಟಳವಿಲ್ಲ. ಅತ್ಯಂತ ಸರಳವಾಗಿ, ಶಿಸ್ತುಬದ್ಧವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.

Ad Widget

Ad Widget alt="Ad Widget"/>

Ad Widget

ಮದುಮಗ ಕೆ.ಜೆ. ಸುದರ್ಶನ್ ತಾಯಿ-ತಂದೆ ಬಗ್ಯೆ ಅಪಾರ ಗೌರವ, ಪ್ರೀತಿ-ವಿಶ್ವಾಸವನ್ನು ವ್ಯಕ್ತಪಡಿಸಿ ಅವರೇ ತನಗೆ ಪ್ರತ್ಯಕ್ಷ ದೇವರು ಎಂದು ಗೌರವ ಸಲ್ಲಿಸಿದರು.

Ad Widget

Ad Widget <> Ad Widget

ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ಭಾವುಕರಾಗಿ ಆನಂದಭಾಷ್ಪ ಸುರಿಸಿದರು. ಇಂತಹ ಮಗನನ್ನು ಪಡೆದ ತಾವೇ ಭಾಗ್ಯವಂತರು ಎಂದು ಸಂತಸವ್ಯಕ್ತಪಡಿಸಿದರು.

ಉಷಾಜನಾರ್ಧನ ಗಣೇಶನ ಸ್ತುತಿಯನ್ನು ಸುಶ್ರಾವ್ಯವಾಗಿ ಹಾಡಿದರು. ಸೊಸೆಯನ್ನು ಕೂಡಾ ಮಗಳಂತೆ ಪ್ರೀತಿಯಿಂದ ನೋಡಿಕೊಳ್ಳುವುದಾಗಿ ತಿಳಿಸಿದರು.

Ad Widget

Ad Widget

ಹಿರಿಯ ದಂಪತಿ ಮತ್ತು ನವದಂಪತಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿ, ಗೌರವಿಸಿದರು. ಎಲ್ಲರಿಗೂ ಸರಳ, ಶುದ್ಧ ಹಾಗೂ ಶುಚಿ-ರುಚಿಯಾದ ಶಾಕಾಹಾರ ಭೋಜನ ನೀಡಿದರು.
ಉಜಿರೆ ಜನಾರ್ದನಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೇಟ್ನಾಯ, ಶಾಸಕ ಕೆ. ಹರೀಶ್‌ ಪೂಂಜ, ಮಾಜಿ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮೂಡಬಿದ್ರೆಯ ಎಕ್ಸಲೆಂಟ್‌ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್‌ ಜೈನ್‌ ಮತ್ತು ರಶ್ಮಿತಾ ಜೈನ್‌ ನಾರಾವಿ ಸೇರಿದಂತೆ ಅನೇಕ ಗಣ್ಯರು, ಹಿರಿಯರು ಆಗಮಿಸಿ ನೂತನ ದಂಪತಿಗೆ ಶುಭ ಹಾರೈಸಿದರು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ

Published

on

Ad Widget

Ad Widget

Ad Widget

Ad Widget

ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.

Ad Widget

Ad Widget <> Ad Widget

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Ad Widget

Ad Widget

ವೇದಿಕೆಯಲ್ಲಿ ಉದ್ಯಮಿ ಜಯಕುಮಾರ್ ನಾಯರ್, ಸ್ವರ್ಣೋದ್ಯಮಿ ಈಶ್ವರ ಮುರಳಿ ಹಾಗೂ ದೀಪೋತ್ಸವ ಸಮಿತಿ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಂದಿಸಿದರು. ಸಂಚಾಲಕ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!