Connect with us

ದಕ್ಷಿಣ ಕನ್ನಡ

ಸಹಸ್ರಲಿಂಗೇಶ್ವರ, ಮಹಾಲಿಂಗೇಶ್ವರ ಮತ್ತು ಮಲ್ಲಿಕಾರ್ಜುನ ದೇವಸ್ಥಾನವನ್ನು ಪ್ರಸಾದ್ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಪಡಿಸಲು ಸಲ್ಲಿಸಿದ ಪ್ರಸ್ತಾವನೆಯ ಬಗ್ಗೆ ಮಾಹಿತಿ ಕೇಳಿದ ಕ್ಯಾ|ಚೌಟ; ಲೋಕಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗಮನ ಸೆಳೆದ ದಕ ಸಂಸದ

Published

on



Ad Widget

Ad Widget

Ad Widget

Ad Widget

ಕುಕ್ಕೆ ಸುಬ್ರಹ್ಮಣ್ಯ, ಪುತ್ತೂರಿನ ಮಹಾಲಿಂಗೇಶ್ವರ, ಪೊಳಲಿಯ ಶ್ರೀ ರಾಜರಾಜೇಶ್ವರಿ ಹೀಗೆ ಹಲವು ಐತಿಹ್ಯವಾದ ಪುರಾತನ ಪ್ರಸಿದ್ಧ ದೇವಾಲಯ ಹಾಗೂ ಪಾರಂಪರಿಕ ತಾಣಗಳು ಇಲ್ಲಿವೆ. ಹೀಗಿರುವಾಗ, ಇಲ್ಲಿನ ಪ್ರಸಿದ್ಧ ದೇವಾಲಯ, ಪ್ರೇಕ್ಷಣೀಯ ಸ್ಥಳಗಳನ್ನು ʼಪ್ರಸಾದ್‌ʼ ಹಾಗೂ ʼಸ್ವದೇಶ್‌ ದರ್ಶನ್‌ʼ ಯೋಜನೆ ಪಟ್ಟಿಗೆ ಸೇರಿಸುವ ಮೂಲಕ ಪ್ರವಾಸೋದ್ಯಮ ಸಚಿವಾಲಯದಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget alt="Ad Widget"/>

Ad Widget

ನವದೆಹಲಿ: ದಕ್ಷಿಣ ಕನ್ನಡದ ಪ್ರಸಿದ್ಧ ದೇವಸ್ಥಾನಗಳಾದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ, ತೋಡಿಕಾನದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನಗಳನ್ನು ಕೇಂದ್ರ ಸರ್ಕಾರದ ʼಪ್ರಸಾದ್‌ʼ ಹಾಗೂ ʼಸ್ವದೇಶ್‌ ದರ್ಶನ್‌ʼ ಯೋಜನೆಯಡಿ ಪ್ರವಾಸೋದ್ಯಮದ ಉತ್ತೇಜನಕ್ಕೆ ಪೂರಕವಾದ ಮೂಲಸೌಕರ್ಯ ಅಭಿವೃದ್ಧಿಪಡಿಸುವುದಕ್ಕೆ ಈಗಾಗಲೇ ಸಲ್ಲಿಸಲಾಗಿರುವ ಪ್ರಸ್ತಾವನೆಯ ಕುರಿತು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಲೋಕಸಭೆಯಲ್ಲಿ ಪ್ರವಾಸೋದ್ಯಮ ಸಚಿವರಾದ ಗಜೇಂದ್ರಸಿಂಗ್‌ ಶೇಖಾವತ್‌ಅವರ ಗಮನಸೆಳೆದಿದ್ದಾರೆ.

Ad Widget

Ad Widget <> Ad Widget

ಸದನಲ್ಲಿ ಇಂದು ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಸಚಿವರಿಗೆ ಪೂರಕ ಪ್ರಶ್ನೆಯನ್ನು ಕೇಳಿದ ಸಂಸದ ಕ್ಯಾ. ಚೌಟ ಅವರು, ದಕ್ಷಿಣ ಕನ್ನಡದ ಜಿಲ್ಲೆಗಿರುವ ಪ್ರವಾಸೋದ್ಯಮ ಸಾಮರ್ಥ್ಯ ಹಾಗೂ ಅವಕಾಶಗಳನ್ನು ಎತ್ತಿ ಹಿಡಿದು ಮಾತನಾಡಿದರು. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡವು ಶ್ರೀಮಂತ ಕಲೆ, ಸಂಸ್ಕೃತಿಯನ್ನು ಹೊಂದಿದ್ದು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿಗಳನ್ನು ಆಕರ್ಷಿಸುವ ಪ್ರೇಕ್ಷಣೀಯ ಸ್ಥಳಗಳು, ಭೂತ ಕೋಲ, ಕಂಬಳದಂಥ ಸ್ಥಳೀಯ ಆಚರಣೆಗಳು ವಿಶ್ವದ ಗಮನಸೆಳೆಯುತ್ತಿವೆ.



Ad Widget

ಕುಕ್ಕೆ ಸುಬ್ರಹ್ಮಣ್ಯ, ಪುತ್ತೂರಿನ ಮಹಾಲಿಂಗೇಶ್ವರ, ಪೊಳಲಿಯ ಶ್ರೀ ರಾಜರಾಜೇಶ್ವರಿ ಹೀಗೆ ಹಲವು ಐತಿಹ್ಯವಾದ ಪುರಾತನ ಪ್ರಸಿದ್ಧ ದೇವಾಲಯ ಹಾಗೂ ಪಾರಂಪರಿಕ ತಾಣಗಳು ಇಲ್ಲಿವೆ. ಹೀಗಿರುವಾಗ, ಇಲ್ಲಿನ ಪ್ರಸಿದ್ಧ ದೇವಾಲಯ, ಪ್ರೇಕ್ಷಣೀಯ ಸ್ಥಳಗಳನ್ನು ʼಪ್ರಸಾದ್‌ʼ ಹಾಗೂ ʼಸ್ವದೇಶ್‌ ದರ್ಶನ್‌ʼ ಯೋಜನೆ ಪಟ್ಟಿಗೆ ಸೇರಿಸುವ ಮೂಲಕ ಪ್ರವಾಸೋದ್ಯಮ ಸಚಿವಾಲಯದಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದ್ದಾರೆ.

Ad Widget

Ad Widget

ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಮಂಗಳೂರು ಮತ್ತು ಕರಾವಳಿ ಕರ್ನಾಟಕದ ದೇವಾಲಯಗಳನ್ನು ಪ್ರಸಾದ್ ಮತ್ತು ಸ್ವದೇಶ್ ದರ್ಶನ್ ಯೋಜನೆಗಳ ಅಡಿಯಲ್ಲಿ ಗುರುತಿಸಿ ಸೇರಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ ಹೆಚ್ಚು ಜನಪ್ರಿಯತೆ ಪಡೆಯದ ಪಾರಂಪರಿಕ ಪ್ರವಾಸಿ ತಾಣಗಳನ್ನು ಗುರುತಿಸಿ ಅಭಿವೃದ್ಧಿಪಡಿಸುವುದಕ್ಕೆ ಹಾಗೂ ಈ ಯೋಜನೆಯಡಿ ಆಯ್ಕೆ ಮಾಡುವುದಕ್ಕೆ ಏನಾದರೂ ಮಾರ್ಗಸೂಚಿ ಅಥವಾ ಚೌಕಟ್ಟು ಇದೆಯೇ? ಹಾಗೆಯೇ, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ದೇವಾಲಯಗಳು ಹಾಗೂ ಪ್ರವಾಸಿ ತಾಣಗಳನ್ನು ಡಿಜಿಟಲ್‌ ಕಂಟೆಂಟ್‌ ಮೂಲಕ ಜಾಗತಿಕ ಮಟ್ಟದಲ್ಲಿ ಗಮನಸೆಳೆಯುವುದಕ್ಕೆ ಅಥವಾ ಜನಪ್ರಿಯಗೊಳಿಸುವುದಕ್ಕೆ ಏನಾದರೂ ಯೋಜನೆ ರೂಪಿಸಲಾಗುತ್ತಿದೆಯೇ ಎಂಬ ಬಗ್ಗೆಯೂ ಕ್ಯಾ. ಚೌಟ ಅವರು ಟೂರಿಸಂ ಸಚಿವರನ್ನು ಪ್ರಶ್ನಿಸಿದ್ದಾರೆ.

ಸಚಿವರು ಏನಂದ್ರು ?

ಇದಕ್ಕೆ ಉತ್ತರಿಸಿರುವ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಇನ್‌ಕ್ರೆಡಿಬಲ್‌ ಇಂಡಿಯಾದ ವೆಬ್‌ಸೈಟ್‌ಗೆ ಸಂಪೂರ್ಣವಾಗಿ ಹೊಸ ಸ್ವರೂಪ ನೀಡಲಾಗಿದೆ. ಈ ವೆಬ್‌ಸೈಟ್‌ನಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ ದೃಷ್ಟಿಯಿಂದ ಪ್ರಸಿದ್ಧ ದೇವಾಲಯಗಳ ಹಾಗೂ ಪ್ರವಾಸಿ ತಾಣಗಳಿಗೆ ಸಂಬಂಧಿಸಿದ ಡಿಜಿಟಲ್‌ ಕಂಟೆಂಟ್‌ಗಳನ್ನು ವಿಡಿಯೋ ಅಥವಾ ಫೋಟೊ ರೂಪದಲ್ಲಿ ಕಳುಹಿಸುವಂತೆ ಕೋರಲಾಗಿದೆ. ಆ ಎಲ್ಲ ಡಿಜಿಟಲ್‌ ಕಂಟೆಂಟ್‌ಗಳನ್ನು ವೆಬ್‌ಸೈಟ್‌ನಲ್ಲಿ ಹಾಕುವ ಮೂಲಕ ಅಂಥಹ ಪ್ರವಾಸಿ ತಾಣಗಳನ್ನು ಜಾಗತಿಕ ಮಟ್ಟದಲ್ಲಿ ಗಮನಸೆಳೆಯುವುದಕ್ಕೆ ಕ್ರಮ ಕೈಗೊಳ್ಳಲಾಗುವುದು. ಜತೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂರು ದೇವಾಲಯಗಳನ್ನು ಪ್ರಸಾದ್‌ ಯೋಜನೆ ಪಟ್ಟಿಗೆ ಸೇರಿಸುವ ಬಗ್ಗೆಯೂ ಮುಂದಿನ ದಿನಗಳಲ್ಲಿ ವಾಸ್ತವಾಂಶ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

Ad Widget
Click to comment

Leave a Reply

ಪುತ್ತೂರು

ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

Published

on



Ad Widget

Ad Widget

Ad Widget

Ad Widget

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.

Ad Widget

Ad Widget

Ad Widget

Ad Widget

ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್‌ ಲೈನ್‌ನ ಜಿಒಎಸ್‌ (ಗ್ಯಾಂಗ್‌ ಆಪರೇಟಿಂಗ್‌ ಸ್ವಿಚ್‌) ತೆರೆಯುವ ಸಂದರ್ಭದಲ್ಲಿ ಅರ್ಥ್‌ ಆಗಿ ವಿದ್ಯುತ್‌ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್‌ ಸ್ಪರ್ಶಿಸಿದೆ ಎನ್ನಲಾಗಿದೆ.

Ad Widget

Ad Widget <> Ad Widget

ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.



Ad Widget
Ad Widget
Continue Reading

ಅಪರಾಧ

Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget <> Ad Widget

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.



Ad Widget

ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.

ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.

Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.



Ad Widget

ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.

Ad Widget

Ad Widget

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading