Connect with us

ಅಪರಾಧ

Mysuru-ಮೈಸೂರು: ಧರ್ಮಗುರುಗಳ ಬಗ್ಗೆ ಅವಹೇಳನಕಾರಿ ಪೋಸ್ಟ್‌..! ಉದ್ರಿಕ್ತರ ಗುಂಪಿನಿಂದ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ, ಪ್ರತಿಭಟನಾನಿರತರನ್ನು ಚದುರಿಸಲು ಅಶ್ರುವಾಯು ಪ್ರಯೋಗ : ಯುವಕನ ವಶಕ್ಕೆ ಪಡೆಯುತ್ತಿದ್ದಂತೆ ಮತ್ತೊಂದು ಕಡೆಯಿಂದಲೂ ಸೇರಿದ ಜನ..!

Published

on

Ad Widget

Ad Widget

Ad Widget

Ad Widget

ಮುಸ್ಲಿಂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು, ಸಾಮಾಜಿಕ ಜಾಲತಾಣದಲ್ಲಿ ಧರ್ಮಗುರುಗಳ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿರುವುದನ್ನು ವಿರೋಧಿಸಿ ಸೋಮವಾರ ರಾತ್ರಿ ಉದಯಗಿರಿ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪೊಲೀಸ್ ಠಾಣೆ ಮೇಲೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

Ad Widget

Ad Widget

Ad Widget

Ad Widget

ಮೈಸೂರು: ಮುಸ್ಲಿಂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು, ಸಾಮಾಜಿಕ ಜಾಲತಾಣದಲ್ಲಿ ಧರ್ಮಗುರುಗಳ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿರುವುದನ್ನು ವಿರೋಧಿಸಿ ಸೋಮವಾರ ರಾತ್ರಿ ಉದಯಗಿರಿ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪೊಲೀಸ್ ಠಾಣೆ ಮೇಲೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

Ad Widget

Ad Widget alt="Ad Widget"/>

Ad Widget

ಉದಯಗಿರಿ ಠಾಣಾ ವ್ಯಾಪ್ತಿಗೆ ಸೇರಿದ ಜೆಎಸ್‌ಎಸ್‌ ಬಡಾವಣೆಯ ಯುವಕನೊಬ್ಬ, ‘ಹೊಸದಿಲ್ಲಿ ಚುನಾವಣೆ ಫಲಿತಾಂಶದ ಬಳಿಕ ರಾಹುಲ್‌ ಗಾಂಧಿ, ಅರವಿಂದ ಕೇಜ್ರಿವಾಲ್, ಅಖಿಲೇಶ್‌ ಯಾದವ್‌ ಮಾದರಿಯ ಅರೆನಗ್ನ ಫೋಟೊ ಸೃಷ್ಟಿಸಿ, ಮೈತುಂಬಾ ನಾನಾ ಬರಹಗಳನ್ನು ಬರೆದಿದ್ದು ಅಲ್ಲದೆ, ಧರ್ಮಗುರುಗಳ ಬಗ್ಗೆ ಕೆಟ್ಟದಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ,’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಪೊಲೀಸ್‌ ಠಾಣೆ ಎದುರು ತಡರಾತ್ರಿಯಲ್ಲೂ ಸಾವಿರಾರು ಮಂದಿ ಜಮಾಯಿಸಿ ಅವಹೇಳನ ಮಾಡಿದ ವ್ಯಕ್ತಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಕೂಡಲೇ ಆತನನ್ನು ಬಂಧಿಸಬೇಕು ಎಂದು ಪಟ್ಟು ಹಿಡಿದರು. ಅಲ್ಲದೆ ಶಾಂತಿನಗರ, ಮಹದೇವಪುರ ರಸ್ತೆ ಬಂದ್‌ ಮಾಡಿದರು. ಮಧ್ಯರಾತ್ರಿಯಾದರೂ ಸನ್ನಿವೇಶ ನಿಯಂತ್ರಣಕ್ಕೆ ಬಂದಿರಲಿಲ್ಲ.

ಪೊಲೀಸರು, ಕೆಲ ಧಾರ್ಮಿಕ ಮುಖಂಡರು ಹಾಗೂ ರಾಜಕೀಯ ಮುಖಂಡರು ಠಾಣೆ ಮುಂದೆ ಪ್ರತಿಭಟಿಸುತ್ತಿದ್ದ ಯುವಕರಿಗೆ ಪರಿಸ್ಥಿತಿ ಮನವರಿಕೆ ಮಾಡಲು ಪ್ರಯತ್ನಿಸಿದರು. ಆದರೆ ಅಲ್ಲಿದ್ದ ಪ್ರತಿಭಟನಾಕಾರರು ಮಾತು ಕೇಳಲು ತಯಾರಿರಲಿಲ್ಲ.

Ad Widget

Ad Widget

ಆಕ್ರೋಶಿತರು ಘೋಷಣೆ ಕೂಗುತ್ತಾ ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಅಶ್ರುವಾಯು ಸಿಡಿಸಿದರು. ತಕ್ಷಣ ಗುಂಪು ಚೆಲ್ಲಾಪಿಲ್ಲಿಯಾಗಿ ಓಡಿ ಹೋಯಿತು.

ಘಟನೆಗೆ ಸಂಬಂಧಿಸಿದಂತೆ ಜೆಎಸ್‌ಎಸ್‌ ಬಡಾವಣೆಯ ವ್ಯಕ್ತಿಯೊಬ್ಬನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ. ಅಷ್ಟರಲ್ಲಾಗಲೇ ಆ ಪೋಸ್ಟ್ ಒಂದು ಸಮುದಾಯದ ಯುವಕರನ್ನು ರೊಚ್ಚಿಗೆಬ್ಬಿಸಿತ್ತು. ತಕ್ಷಣ ಅವರೆಲ್ಲ ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಹೆಚ್ಚಿನ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕಾರ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.

ಬಿಗಿ ಬಂದೋಬಸ್ತ್
ರಾತ್ರಿಯಿಡೀ ಗಲಾಟೆ ನಡೆದಿದ್ದು, ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದೆ. ಆಕ್ರೋಶಿತರನ್ನು ತಡೆಯಲು ಪೊಲೀಸರ ಹರಸಾಹಸಪಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರ ಬಿಗಿ ಬಂದೋಬಸ್ತ್ ಮಾಡಿದ್ದಾರೆ.

Ad Widget
Click to comment

Leave a Reply

ಅಪರಾಧ

FIR-‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್, ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಎಫ್‌ಐಆರ್

Published

on

Ad Widget

Ad Widget

Ad Widget

Ad Widget

ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Ad Widget

Ad Widget alt="Ad Widget"/>

Ad Widget

ಕಲ್ಯಾಣದ ಭಂಡಾರಿಯಾಗಿದ್ದ ಬಸವಣ್ಣನವರ ಮೇಲೆ ಜಾತಿವಾದಿಗಳು ಮಾಡಿದ್ದ ಸುಳ್ಳು ಆರೋಪಗಳನ್ನು ‘ಕಳ್ಳತನ’ ಎಂದು ವ್ಯಾಖ್ಯಾನಿಸಿರುವುದು ಹಾಗೂ ಕಲ್ಯಾಣ ಕ್ರಾಂತಿಯ ಐತಿಹಾಸಿಕ ಸಂಘರ್ಷಗಳನ್ನು ತಿರುಚಿ ಬಸವಣ್ಣನವರ ಮೇಲೆ ಆರೋಪ ಹೊರಿಸಿರುವುದು ಇತಿಹಾಸಕ್ಕೆ ಮಾಡಿದ ಅಪಚಾರ ಎಂದು ಬಸವ ಸಮಿತಿ ದೂರಿನಲ್ಲಿ ಆಕ್ಷೇಪಿಸಿದೆ.

Ad Widget

Ad Widget <> Ad Widget

ರವಿ ಹಂಜ್ ಅವರು ಇಂತಹ ಪೂರ್ವಾಗ್ರಹಪೀಡಿತ ಬರಹಗಳಿಗೆ ಸಂಶೋಧನೆಯ ಮುಖವಾಡ ತೊಡಿಸಿ ಸಮಾಜದಲ್ಲಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದರೆ, ಪ್ರಕಾಶಕ ವಿಶ್ವೇಶ್ವರ ಭಟ್ ಅವರು ಕೃತಿಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ.

ಇಂತಹ ವಿವಾದಾತ್ಮಕ ಕೃತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಸವ ಸಮಿತಿ ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿತ್ತು.

Ad Widget

Ad Widget

ಈ ದೂರಿನ ಆಧಾರದ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Ad Widget
Continue Reading

ಅಪರಾಧ

Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು

Published

on

Ad Widget

Ad Widget

Ad Widget

Ad Widget

ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Ad Widget
Continue Reading

ಸ್ಥಳೀಯ

Baindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ

Published

on

Ad Widget

Ad Widget

Ad Widget

Ad Widget

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೊಬೈಲ್ ಫೋನ್ ಕಳವು ಮಾಡಿ, ಅದರಲ್ಲಿದ್ದ UPI ಆ್ಯಪ್ ಬಳಸಿ ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಸ್ತಾನ ಐರೋಡಿ ಗ್ರಾಮದ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (32) ಬಂಧಿತ ಆರೋಪಿ.

Ad Widget

Ad Widget

Ad Widget

Ad Widget

ಬೈಂದೂರು, ನ.19: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೊಬೈಲ್ ಫೋನ್ ಕಳವು ಮಾಡಿ, ಅದರಲ್ಲಿದ್ದ UPI ಆ್ಯಪ್ ಬಳಸಿ ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಸಾಸ್ತಾನ ಐರೋಡಿ ಗ್ರಾಮದ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (32) ಬಂಧಿತ ಆರೋಪಿ.

Ad Widget

Ad Widget <> Ad Widget

ಕಳೆದ ಆಗಸ್ಟ್ 2ರಂದು ರೊಬಿನ್ ಫೆರ್ನಾಂಡಿಸ್ ಅವರು ಮಂಗಳೂರಿನಿಂದ ಮಡಗಾಂವ್‌ಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಬೆಳಗಿನ ಜಾವ ಸುಮಾರು 2 ಗಂಟೆಗೆ ರೈಲು ಬೈಂದೂರು ನಿಲ್ದಾಣದ ಬಳಿ ತಲುಪಿದ ಸಂದರ್ಭದಲ್ಲಿ ಅವರ 17 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್ ಕಳವಾಗಿತ್ತು. ಬಳಿಕ ಕಳವು ಮಾಡಿದ ಮೊಬೈಲ್‌ನಲ್ಲಿದ್ದ UPI ಆ್ಯಪ್ ಮೂಲಕ ಆರೋಪಿಯು 19,847 ರೂ. ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ವಿಚಾರಣೆ ವೇಳೆ ಪ್ರಹ್ಲಾದ್, ತನ್ನ ಸಹಚರ ಜೋಶಿ ನಾರಾಯಣ ನಾಯಕ್ ಜೊತೆ ಸೇರಿ ಬೈಂದೂರು ಸಮೀಪ ಆಗಸ್ಟ್ 2, ಅಕ್ಟೋಬರ್ 13 ಹಾಗೂ ಮಾರ್ಚ್ 6ರಂದು ರೈಲು ಪ್ರಯಾಣಿಕರ ಮೊಬೈಲ್ ಫೋನ್‌ಗಳನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಬಂಧಿತ ಪ್ರಹ್ಲಾದ್ ವಿರುದ್ಧ ಕಾರವಾರ ಗ್ರಾಮೀಣ, ಬಂಟ್ವಾಳ ನಗರ, ಉಡುಪಿ ನಗರ, ಬ್ರಹ್ಮಾವರ, ಕೋಟ ಹಾಗೂ ಕುಂದಾಪುರ ನಗರ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ವಿವಿಧ ಅಪರಾಧ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!