ದಿವ್ಯಾ (27 ವ.) ಮೃತ ಮಹಿಳೆ. ಈಕೆಯ ಪತಿ ಗಿರೀಶ್, ವೈಭವ ಹೆಸರಿನ ಜಿಮ್ ನಡೆಸುತ್ತಿದ್ದ. […]" /> ದಿವ್ಯಾ (27 ವ.) ಮೃತ ಮಹಿಳೆ. ಈಕೆಯ ಪತಿ ಗಿರೀಶ್, ವೈಭವ ಹೆಸರಿನ ಜಿಮ್ ನಡೆಸುತ್ತಿದ್ದ. […]"> Mandya-ಮಂಡ್ಯ: ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತ್ನಿ ಆತ್ಮ*ಹತ್ಯೆ - Nikhara News | Kannada News Website
Connect with us

ನಿಧನ ವಾರ್ತೆ

Mandya-ಮಂಡ್ಯ: ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತ್ನಿ ಆತ್ಮ*ಹತ್ಯೆ

Published

on

Ad Widget

Ad Widget

Ad Widget

Ad Widget

ಗಂಡನ ಅನೈತಿಕ ಸಂಬಂಧದಿಂದ ಬೇಸತ್ತ ಪತ್ನಿ, ಆತ ನಡೆಸುತ್ತಿದ್ದ ಜಿಮ್‌ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಮಂಡ್ಯ: ಗಂಡನ ಅನೈತಿಕ ಸಂಬಂಧದಿಂದ ಬೇಸತ್ತ ಪತ್ನಿ, ಆತ ನಡೆಸುತ್ತಿದ್ದ ಜಿಮ್‌ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ದಿವ್ಯಾ (27 ವ.) ಮೃತ ಮಹಿಳೆ. ಈಕೆಯ ಪತಿ ಗಿರೀಶ್, ವೈಭವ ಹೆಸರಿನ ಜಿಮ್ ನಡೆಸುತ್ತಿದ್ದ. ಆದರೆ ಆತನಿಗೆ ಬೇರೊಬ್ಬರ ಜತೆ ಅನೈತಿಕ ಸಂಬಂಧ ಹೊಂದಿದ್ದ ಶಂಕೆ ಪತ್ನಿಗೆ ಇತ್ತು. ಇದರಿಂದ ಮನನೊಂದು ದಿವ್ಯಾ ಫೆ.10ರಂದು ಪತಿಯ ಜಿಮ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Ad Widget

Ad Widget <> Ad Widget

ಆದರೆ, ಮಗಳನ್ನು ಅಳಿಯನೇ ಹೊಡೆದು ಕೊಂದಿರುವುದಾಗಿ ದಿವ್ಯಾ ಕುಟುಂಬಸ್ಥರು ಆರೋಪಿಸಿದ್ದು, ಜಿಮ್ ನಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಸಂಬಂಧಿಕರನ್ನು ಸಮಾಧಾನಪಡಿಸಿ ಹೊರಗೆ ಕಳುಹಿಸಿದ್ದಾರೆ. ಈ ವೇಳೆ ದಿವ್ಯಾಳ ಪತಿ ಗಿರೀಶ್, ಗಿರೀಶ್ ತಾಯಿ ವಿರುದ್ಧ ಗೃಹಿಣಿಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಕಳೆದ ಮೂರು ತಿಂಗಳಿಂದ ಅಳಿಯ ಕಿರುಕುಳ ನೀಡುತ್ತಿದ್ದ. ಆತನ ಕಿರುಕುಳದಿಂದಲೇ ಮಗಳು ಮೃತಪಟ್ಟಿದ್ದಾಳೆ. ಹೀಗಾಗಿ ಆತನನ್ನು ಬಂಧಿಸುವಂತೆ ಮೃತ ದಿವ್ಯಾಳ ಪೋಷಕರು ಆಗ್ರಹಿಸಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Accident-ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ

Published

on

Ad Widget

Ad Widget

Ad Widget

Ad Widget

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮಂಡ್ಯದ ಗುತ್ತಲು ಬಡಾವಣೆಯ ಮಹದೇವು ಹಾಗೂ ತೈಲೂರು ಗ್ರಾಮದ ಎಂಟು ವರ್ಷದ ಬಾಲಕಿ ರಿತ್ವಿಕಾ ಮೃತಪಟ್ಟವರು. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

Ad Widget

Ad Widget <> Ad Widget

ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಸರಕು ಸಾಗಣೆ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

ಕುಟುಂಬದ ಸದಸ್ಯರು ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ, ದೇವರ ದರ್ಶನ ಪಡೆದು ಮನೆಗೆ ಮರಳುತ್ತಿದ್ದ ಕುಟುಂಬದ ಪ್ರಯಾಣ ಕೆಲವೇ ಸಮಯದಲ್ಲಿ ಭೀಕರ ದುರಂತದಲ್ಲಿ ಅಂತ್ಯಗೊಂಡಿರುವುದು ಸಂಬಂಧಿಕರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖವನ್ನುಂಟುಮಾಡಿದೆ.

Ad Widget
Continue Reading

ನಿಧನ ವಾರ್ತೆ

Babu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಮೃತರು ಪತ್ನಿ ಶಾರದಾ, ಮಕ್ಕಳಾದ ಕುಸುಮಾವತಿ ಗೌಡ, ಯಶೋಧ ಗೌಡ, ಪ್ರೇಮಾ ಗೌಡ, ಪುಷ್ಪ ಗೌಡ, ವಿಠಲ ಗೌಡ ಹಾಗೂ ಪುರಂದರ ಗೌಡ ಸೇರಿದಂತೆ ಬಂಧುಮಿತ್ರರನ್ನು ಅಗಲಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ನಿಧನ ವಾರ್ತೆ

One-sided love-ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಮೇಲಿನ ಒನ್‌ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು

Published

on

Ad Widget

Ad Widget

Ad Widget

Ad Widget

ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget alt="Ad Widget"/>

Ad Widget

ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.

Ad Widget

Ad Widget <> Ad Widget

ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್‌ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್‌ಐಆರ್‌ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.

ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್‌ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.

ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.

ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!