ಸ್ಥಳೀಯ
KV Prabhakar-ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ; Fact news ಹೋಗಿ Fact check ಬರುವಂತಾಗಿದೆ-ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್
ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಫೇಕ್ ನ್ಯೂಸ್ ಗಳ ಕಾರಣಕ್ಕೆ ಈಗ ಫ್ಯಾಕ್ಟ್ ಚೆಕ್ ಆರಂಭಿಸುವ ಸ್ಥಿತಿ ಬಂದಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.
ಕೋಲಾರ, ಫೆ 13: ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಫೇಕ್ ನ್ಯೂಸ್ ಗಳ ಕಾರಣಕ್ಕೆ ಈಗ ಫ್ಯಾಕ್ಟ್ ಚೆಕ್ ಆರಂಭಿಸುವ ಸ್ಥಿತಿ ಬಂದಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.
ಮಾಧ್ಯಮ ಅಕಾಡೆಮಿ ಆಯೋಜಿಸಿದ್ದ “ಪತ್ರಿಕೋದ್ಯಮ ಇಂದು-ಮುಂದು” ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತರಲ್ಲಿ ಅಧ್ಯಯನಶೀಲತೆ ಕಡಿಮೆ ಆಗುತ್ತಿದೆ. ಕೈಯಲ್ಲಿ ಲೋಗೋ ಹಿಡಿದು ಪ್ರಶ್ನೆ ಕೇಳುವ ಪತ್ರಕರ್ತರಿಗೆ ವಾಪಾಸ್ ಅದೇ ವಿಚಾರದ ಬಗ್ಗೆ ನಾವೇ ಒಂದು ಪ್ರಶ್ನೆ ಕೇಳಿದರೆ ಅವರಲ್ಲಿ ಉತ್ತರ ಇರುವುದಿಲ್ಲ. ಇದಕ್ಕೆ ಅಧ್ಯಯನಶೀಲತೆಯ ಕೊರತೆಯೇ ಕಾರಣ ಎಂದರು.
ಮತ್ತೊಂದು ಊಹಾ ಪತ್ರಿಕೋದ್ಯಮ ಅತಿಯಾಗುತ್ತಿದೆ. ನಡೆಯದ ಸಂಗತಿಗಳನ್ನು ಅವರಿಗೆ ಅವರೇ ಊಹೆ ಮಾಡಿಕೊಂಡು ಬ್ರೇಕಿಂಗ್ ಸುದ್ದಿ ಕೊಡುವ ಹಾವಳಿ ಹೆಚ್ಚಾಗಿದೆ ಎಂದರು.
ಮಾಧ್ಯಮ ಅಕಾಡೆಮಿ ಇಂದು ಆಯೋಜಿಸಿರುವ ʻʻಪತ್ರಿಕೋದ್ಯಮ: ಇಂದು-ಮುಂದು” ವಿಷಯ ಕುರಿತ ಒಂದು ದಿನದ ಕಾರ್ಯಾಗಾರ ಅತ್ಯಂತ ಅರ್ಥಪೂರ್ಣ ಮತ್ತು ಅಗತ್ಯವಾದದ್ದು
ಪತ್ರಿಕಾ ವೃತ್ತಿಗೆ, ಮಾಧ್ಯಮ ಕ್ಷೇತ್ರಕ್ಕೆ ಬಂದೊದಗಬಹುದಾದ ಸವಾಲುಗಳನ್ನು ಮೊದಲೇ ಗ್ರಹಿಸಿ ಆ ಸವಾಲುಗಳನ್ನು ಗೆಲ್ಲಲು ಅಗತ್ಯವಾದ ಬೌದ್ಧಿಕ ಕಸರತ್ತು ನಡೆಸುವುದು ಅತ್ಯಗತ್ಯ ಎಂದರು.
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಪತ್ರಿಕೋದ್ಯಮವನ್ನು ಸಮಾಜದ ಪ್ರಾಣವಾಯು ಅಂತ ಕರೆದಿದ್ದಾರೆ. ಆದರೆ ಈ ಮಾತು ಈಗ ಪತ್ರಿಕೋದ್ಯಮದಲ್ಲಿ ಉಳಿದಿದೆಯಾ ಎಂದು ನಾವೇ ಪ್ರಶ್ನಿಸಿಕೊಳ್ಳಬೇಕು ಎಂದರು.
ಇವತ್ತಿನ ಈ ಕಾರ್ಯಾಗಾರಕ್ಕೆ ಎರಡು ಕಾರಣಗಳು ಇರಬಹುದು ಎಂದು ನಾನು ಭಾವಿಸುತ್ತೇನೆ…
1) AI (ಕೃತಕ ಬುದ್ದಿ ಮತ್ತೆ) ಹಾಗೂ ಇತರೆ ತಂತ್ರಜ್ಞಾನ ತಂದೊಡ್ಡುವ ಸವಾಲು.
2) ತಂತ್ರಜ್ಞಾನದ ಜೊತೆಗೆ Fake News ವೇಗವೂ ಹೆಚ್ಚಾಗುತ್ತಿರುವ ಸವಾಲು.
ಇವೆರಡೂ ಸವಾಲುಗಳಿಂದ ಮಾದ್ಯಮ ಕ್ಷೇತ್ರ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಏನಿದ್ದರೂ ಇವೆರಡನ್ನೂ ಮುಖಾಮುಖಿಯಾಗಿ ನಾವು ಎದುರಿಸಲೇಬೇಕು ಮತ್ತು ಜೀರ್ಣಿಸಿಕೊಳ್ಳಲೇಬೇಕಿದೆ ಎಂದರು.
ನಮ್ಮ ಮಾಧ್ಯಮ ಕ್ಷೇತ್ರಕ್ಕೆ ಜೀರ್ಣಿಸಿಕೊಳ್ಳುವ ಶಕ್ತಿ ಇದೆ. ಇಂತಹ ಹಲವಾರು ಸವಾಲುಗಳನ್ನು ಜೀರ್ಣಿಸಿಕೊಂಡಿರುವ ಉದಾಹರಣೆ ಕೂಡ ನಮ್ಮ ಮುಂದಿದೆ. ಇದಕ್ಕೆ ಉತ್ತಮ ಉದಾಹರಣೆ ಎಂದರೆ ಕೋವಿಡ್.
ಕೋವಿಡ್ ಬಂದಾಗ ಮಾಧ್ಯಮಗಳು ಅದರಲ್ಲೂ ಮುದ್ರಣ ಮಾಧ್ಯಮದ ಭವಿಷ್ಯವೇ ಮುಗಿದುಹೋಯ್ತು ಎನ್ನುವ ಆತಂಕ ಮನೆ ಮಾಡಿತ್ತು.
ಆದರೆ, FICCI (Federation of Indian Chambers of Commerce and Industry) ಸಂಸ್ಥೆ 2023 ರಲ್ಲಿ ಮುದ್ರಣ ಮಾಧ್ಯಮಗಳ ಸ್ಥಿತಿ ಗತಿಯ ವರದಿ ಬಿಡುಗಡೆ ಮಾಡಿದೆ. ಈ ವರದಿ ಬಹಳ ಭರವಸೆ ಮೂಡಿಸುವಂತಿದೆ.
ಕೋವಿಡ್ ಸಂದರ್ಭದಲ್ಲಿ ಅಪಾರವಾಗಿ ನೆಲಕಚ್ಚಿದ್ದ ಮುದ್ರಣ ಮಾಧ್ಯಮ 2023 ರಲ್ಲಿ ಬಹಳ ಚೇತರಿಸಿಕೊಂಡಿದೆ.
ದೇಶದ ಮುದ್ರಣ ಮಾಧ್ಯಮದ ಆದಾಯ 4% ಹೆಚ್ಚಾಗಿ ವಾರ್ಷಿಕ 260 ಬಿಲಿಯನ್ ರೂಪಾಯಿಗೆ ತಲುಪಿದೆ. 2027ಕ್ಕೆ ಈ ಬೆಳವಣಿಗೆ ದರ ಇನ್ನೂ ಹೆಚ್ಚಾಗಿ 295.7 ಬಿಲಿಯನ್ ಗೆ ಏರಿಕೆ ಆಗಲಿದೆ ಎನ್ನುವ ಆಶಾ ಭಾವನೆ ವ್ಯಕ್ತವಾಗಿದೆ. ಇದರಲ್ಲಿ…
ಜಾಹಿರಾತು ಆದಾಯ 4% ಹೆಚ್ಚಾಗಿದೆ
ಪತ್ರಿಕೆಗಳ ಪ್ರಸಾರದಿಂದ ಬರುವ ಆದಾಯ 3% ಹೆಚ್ಚಾಗಿದೆ.
ದಿನಪತ್ರಿಕೆಗಳಲ್ಲದ ಮ್ಯಾಗ್ಸೀನ್ ಗಳ ಆದಾಯ 3% ಹೆಚ್ಚಾಗಿದೆ.
ಜಾಹಿರಾತು insertion ಗಳ ಪ್ರಮಾಣ 4% ಹೆಚ್ಚಾಗಿದೆ. ( ಪತ್ರಿಕೆಗಳ ಒಳಗೆ ಜಾಹಿರಾತು ಕರಪತ್ರಗಳನ್ನು ಹಾಕಿ ಕಳುಹಿಸುವುದು).
ಇಂಗ್ಲಿಷ್ ಪತ್ರಿಕೆಗಳ circulation ಆದಾಯ 10% ಹೆಚ್ಚಾಗಿದ್ದರೆ, ಕನ್ನಡ ಮತ್ತು ಇತರೆ ರಾಜ್ಯ ಭಾಷಿಕ ಪತ್ರಿಕೆಗಳ circulation ಆದಾಯ 2% ಹೆಚ್ಚಾಗಿದೆ.
ಸರ್ಕಾರಗಳ ಜಾಹಿರಾತು ಪ್ರಮಾಣ ಕೂಡ ಹೆಚ್ಚಾಗಿದೆ.
ಎಲ್ಲಕ್ಕಿಂತ ಮುಖ್ಯವಾಗಿ, ಜಾಹಿರಾತುದಾರರ ವಿಶ್ವಾಸಾರ್ಹತೆಯನ್ನು ಮುದ್ರಣ ಮಾಧ್ಯಮಗಳು ಉಳಿಸಿಕೊಂಡಿವೆ ಎಂದು FICCI ಹೇಳಿದೆ.
150000 ಜಾಹಿರಾತುದಾರರು, 185000 ಬ್ರಾಂಡ್ ಗಳು ಮುದ್ರಣ ಮಾಧ್ಯಮಗಳ ಮೇಲೆ ಅಪಾರ ಭರವಸೆ ವ್ಯಕ್ತಪಡಿಸಿವೆ :
ಹೀಗಾಗಿ ಆದಾಯ, ಗಳಿಕೆಯ ಸವಾಲನ್ನು ಮುದ್ರಣ ಮಾಧ್ಯಮ ನಿರಂತರವಾಗಿ ಗೆಲ್ಲುತ್ತಲೇ ಇದೆ ಎಂದು ವಿಶ್ಲೇಷಿಸಿದರು.
ಅಚ್ಚುಮೊಳೆ ಕಾಲದಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಹಲವಾರು ತಂತ್ರಜ್ಞಾನದ ಸವಾಲುಗಳನ್ನು ಮಾಧ್ಯಮ ಲೋಕ ಜೀರ್ಣಿಸಿಕೊಳ್ಳುತ್ತಲೇ ಬೆಳೆದಿದೆ ಎಂದರು.
ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಪತ್ರಿಕೋದ್ಯಮ ತಂತ್ರಜ್ಞಾನದಲ್ಲಿ ಎಷ್ಟೇ ಉನ್ನತ ಮಟ್ಟಕ್ಕೇರಿದರೂ, ಅದರ ನೈತಿಕ ಗುಣಮಟ್ಟ ಪಾತಾಳ ಸೇರದಂತೆ ಕಾಪಾಡಿಕೊಳ್ಳುವ ನೈತಿಕ ಮತ್ತು ಸಾಮಾಜಿಕ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು.
ಸುಳ್ಳುಸುದ್ದಿಗಳನ್ನು ತಡೆಯುವ ಸವಾಲು ಮತ್ತು ನಿಖರತೆ ಹಾಗೂ ವಾಸ್ತವಾಂಶಗಳ ಪರಿಶೀಲನೆಯ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಇದಕ್ಕಾಗಿ fact check ಆರಂಭಿಸಲಾಗಿದೆ ಎಂದರು.
ದಕ್ಷಿಣ ಕನ್ನಡ
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ

ಪುತ್ತೂರು: ಪುತ್ತೂರಿನಲ್ಲಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಆರಂಭಿಸುವ ಕನಸು ನನಸಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದ್ದು, 2027-28ನೇ ಶೈಕ್ಷಣಿಕ ಸಾಲಿನಲ್ಲಿ ಮೊದಲ ಹಂತವಾಗಿ 50 ವಿದ್ಯಾರ್ಥಿಗಳ ಪ್ರವೇಶಕ್ಕೆ ಅಗತ್ಯ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈ ನಿಟ್ಟಿನಲ್ಲಿ ಕಾಲೇಜಿನ ಮೂಲಸೌಕರ್ಯ, ಬೋಧನಾ ವ್ಯವಸ್ಥೆ, ಆಸ್ಪತ್ರೆಯ ಸೌಲಭ್ಯಗಳು ಹಾಗೂ ಅಗತ್ಯ ದಾಖಲೆಗಳ ಪರಿಶೀಲನೆಗಾಗಿ ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ತಜ್ಞರ ತಪಾಸಣಾ ಸಮಿತಿ ಶನಿವಾರ ಪುತ್ತೂರಿಗೆ ಆಗಮಿಸಿ ಪರಿಶೀಲನೆ ನಡೆಸಿತು. ಪುತ್ತೂರಿನಲ್ಲಿರುವ ಹಳೇಯ ಕೋರ್ಟ್ ಕಟ್ಟಡ ಹಾಗೂ ಪುತ್ತೂರು ಸರಕಾರಿ ಆಸ್ಫತ್ರೆಗೆ ತಂಡವು ತೆರಳಿ ಪರಿಶೀಲಿಸಿತ್ತು
ಶಾಸಕ ಅಶೋಕ್ ಕುಮಾರ್ ರೈ ಅವರ ನಿರಂತರ ಪ್ರಯತ್ನ ಮತ್ತು ಕಾಲೇಜು ಸ್ಥಾಪನೆಯ ನಿಟ್ಟಿನಲ್ಲಿನ ಚಟುವಟಿಕೆಗಳ ನಡುವೆ ನಡೆದಿರುವ ಈ ಪರಿಶೀಲನೆ, ಪುತ್ತೂರು ಮೆಡಿಕಲ್ ಕಾಲೇಜಿನ ಆರಂಭದ ಪ್ರಕ್ರಿಯೆಯಲ್ಲಿ ನಿರ್ಣಾಯಕ ಹಂತವೆಂದು ಪರಿಗಣಿಸಲಾಗಿದೆ. ನಿಯೋಗವು ಹಳೇಯ ಕೋರ್ಟ್ ಕಟ್ಟಡಕ್ಕೆ ಭೇಟಿ ನೀಡಿದ ವೇಳೆ ಶಾಸಕ ಅಶೋಕ್ ರೈಯವರು ಅಲ್ಲಿಗೆ ಆಗಮಿಸಿ ನಿಯೋಗಕ್ಕೆ ಅಗತ್ಯ ಮಾಹಿತಿ ನೀಡಿದರು.
ಮೂರು ಮಂದಿ ತಜ್ಞರಿಂದ ಸಮಗ್ರ ಪರಿಶೀಲನೆ
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳ ಆದೇಶದಂತೆ ಆಗಮಿಸಿದ ಮೂರು ಮಂದಿ ತಜ್ಞರ ತಂಡ ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸಿತು. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡಾ. ಸುರೇಶ್ ಎಸ್. ಕನಕಣ್ಣವರ್ ತಂಡದ ಅಧ್ಯಕ್ಷರಾಗಿದ್ದು, ಶಿವಮೊಗ್ಗದ ಸುಬ್ಬಯ್ಯ ದಂತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ. ಮಿಥುನ್ ಕೆ.ಎಂ. ಹಾಗೂ ಶಿವಮೊಗ್ಗದ ಎಸ್.ಐ.ಎಂ.ಎಸ್.ನ ಡಾ. ರಮೇಶ್ ಬಾಬು ಸದಸ್ಯರಾಗಿದ್ದರು.
ಕಾಲೇಜಿನ ಬೋಧನಾ ವಿಭಾಗಗಳಿಗೆ ಅಗತ್ಯವಿರುವ ಕೊಠಡಿಗಳು, ಪ್ರಯೋಗಾಲಯಗಳು, ಆಸ್ಪತ್ರೆಯ ಹಾಸಿಗೆ ಸಾಮರ್ಥ್ಯ, ವೈದ್ಯಕೀಯ ಉಪಕರಣಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳ ವಸತಿ ವ್ಯವಸ್ಥೆ ಸೇರಿದಂತೆ ವೈದ್ಯಕೀಯ ಶಿಕ್ಷಣ ಆರಂಭಿಸಲು ಅಗತ್ಯವಿರುವ ಮೂಲಸೌಕರ್ಯಗಳನ್ನು ತಂಡ ಪರಿಶೀಲಿಸಿತು.
ನವೆಂಬರ್ 21ರೊಳಗೆ ಪರಿಶೀಲನೆ ಪೂರ್ಣಗೊಳಿಸಿ, ಸಮಗ್ರ ವರದಿಯನ್ನು 24 ಗಂಟೆಗಳ ಒಳಗೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಸಲ್ಲಿಸುವಂತೆ ಕುಲಪತಿಗಳು ಸೂಚನೆ ನೀಡಿದ್ದಾರೆ.

6 ಮೃತದೇಹಗಳ ವ್ಯವಸ್ಥೆ; ಮಾನವ ಅಂಗಾಂಗಗಳ ಆಗಮನ
ಮೆಡಿಕಲ್ ಕಾಲೇಜಿನ ಆರಂಭಿಕ ಸಿದ್ಧತೆಗಳ ಭಾಗವಾಗಿ ಅಗತ್ಯ ವೈದ್ಯಕೀಯ ಪರಿಕರಗಳು ಮತ್ತು ಉಪಕರಣಗಳನ್ನು ಪುತ್ತೂರಿಗೆ ತರಿಸಲಾಗುತ್ತಿದೆ. ಶಿವಮೊಗ್ಗ, ಹಾಸನ ಹಾಗೂ ಮಡಿಕೇರಿ ವೈದ್ಯಕೀಯ ಕಾಲೇಜುಗಳಿಂದ ಒಟ್ಟು ಆರು ಮೃತದೇಹಗಳನ್ನು ವ್ಯವಸ್ಥೆ ಮಾಡಲಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳ ಅಂಗರಚನಾ ಶಾಸ್ತ್ರದ ಅಧ್ಯಯನಕ್ಕೆ ಅಗತ್ಯವಿರುವ ಮಾನವ ದೇಹದ ವಿವಿಧ ಅಂಗಾಂಗಗಳೂ ಪುತ್ತೂರಿಗೆ ಆಗಮಿಸಿದ್ದು, ಅವುಗಳನ್ನು ವೈಜ್ಞಾನಿಕವಾಗಿ ಸಂರಕ್ಷಿಸಿಡುವ ವ್ಯವಸ್ಥೆ ಮಾಡಲಾಗುತ್ತಿದೆ.
ವಿವಿಧ ವಿಭಾಗಗಳಿಗೆ ಕೊಠಡಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಅಗತ್ಯವಿರುವ ಆಸನ ವ್ಯವಸ್ಥೆಯನ್ನೂ ಸಿದ್ಧಪಡಿಸಲಾಗಿದೆ. ಈಗಾಗಲೇ ಆಗಮಿಸಿರುವ ವೈದ್ಯಕೀಯ ಉಪಕರಣಗಳ ಜೋಡಣೆ ಕಾರ್ಯ ಪ್ರಗತಿಯಲ್ಲಿದ್ದು, ಇನ್ನಷ್ಟು ಉಪಕರಣಗಳು ಹಂತ ಹಂತವಾಗಿ ಬರಲಿವೆ.
92 ವೈದ್ಯರು, 175 ಸಿಬ್ಬಂದಿ ನೇಮಕಕ್ಕೆ ಪ್ರಕ್ರಿಯೆ
ಮೆಡಿಕಲ್ ಕಾಲೇಜಿನ ಜೊತೆಗೆ ಆಸ್ಪತ್ರೆಯ ಸಾಮರ್ಥ್ಯವನ್ನೂ ಹೆಚ್ಚಿಸುವ ಉದ್ದೇಶದಿಂದ ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ ಮಾಡಲಾಗುತ್ತಿದೆ. ಕಾಲೇಜು ಮತ್ತು ಆಸ್ಪತ್ರೆಯ ಕಾರ್ಯನಿರ್ವಹಣೆಗೆ 92 ವೈದ್ಯರು, 175 ಸಿಬ್ಬಂದಿ ಹಾಗೂ 80 ನರ್ಸಿಂಗ್ ಸಿಬ್ಬಂದಿ ಸೇರಿದಂತೆ ಅಗತ್ಯ ಮಾನವ ಸಂಪನ್ಮೂಲ ನೇಮಕಾತಿಗೆ ಸರ್ಕಾರದ ಮಟ್ಟದಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ.
ವಿದ್ಯಾರ್ಥಿಗಳ ಹಾಸ್ಟೆಲ್ ವ್ಯವಸ್ಥೆಗಾಗಿ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣ ಕಾರ್ಯವೂ ನಡೆಯುತ್ತಿದೆ. ಸೇಡಿಯಾಪು ನಿವೇಶನದಲ್ಲಿ ಕಟ್ಟಡಗಳು ಸಿದ್ಧಗೊಂಡ ಬಳಿಕ ಕಾಲೇಜಿನ ವಿವಿಧ ಚಟುವಟಿಕೆಗಳನ್ನು ಅಲ್ಲಿಗೆ ಸ್ಥಳಾಂತರಿಸುವ ಯೋಜನೆಯಿದೆ.
ಇದರಿಂದ ಪುತ್ತೂರು ಮಾತ್ರವಲ್ಲದೆ ವಿಟ್ಲ, ಕಡಬ, ಬೆಳ್ತಂಗಡಿ ಸೇರಿದಂತೆ ಸುತ್ತಮುತ್ತಲಿನ ತಾಲೂಕುಗಳ ಜನರಿಗೆ ಸುಧಾರಿತ ವೈದ್ಯಕೀಯ ಸೇವೆ ಹಾಗೂ ವೈದ್ಯಕೀಯ ಶಿಕ್ಷಣದ ಅವಕಾಶಗಳು ಲಭ್ಯವಾಗುವ ನಿರೀಕ್ಷೆಯಿದೆ.
ಎಲ್ಲವೂ ಸರಾಗವಾಗಿ ನಡೆದರೆ ಸೆಪ್ಟೆಂಬರ್ 2027ರಲ್ಲಿ ದಾಖಲಾತಿ
ಪರಿಶೀಲನೆ ಬಳಿಕ ಮಾತನಾಡಿದ ತಪಾಸಣಾ ತಂಡದ ಅಧ್ಯಕ್ಷ ಡಾ. ಸುರೇಶ್ ಎಸ್. ಕನಕಣ್ಣವರ್, “ಪುತ್ತೂರಿಗೆ ಮೆಡಿಕಲ್ ಕಾಲೇಜು ಬರಬೇಕೆಂಬ ನಿಟ್ಟಿನಲ್ಲಿ ಶಾಸಕ ಅಶೋಕ್ ಕುಮಾರ್ ರೈ ಸಾಕಷ್ಟು ಪ್ರಯತ್ನ ಮತ್ತು ಹೋರಾಟ ನಡೆಸಿದ್ದಾರೆ. ಅದರ ಫಲವಾಗಿ ಇಂದು ತಪಾಸಣಾ ಪ್ರಕ್ರಿಯೆ ನಡೆಯುತ್ತಿದೆ. ವೈದ್ಯಕೀಯ ಶಿಕ್ಷಣಕ್ಕೆ ಅಗತ್ಯವಿರುವ ಬೋಧನಾ ವ್ಯವಸ್ಥೆ, ಆಸ್ಪತ್ರೆಯ ಸೌಕರ್ಯ, ವಿದ್ಯಾರ್ಥಿಗಳ ವಸತಿ, ಬೋಧಕರ ವಸತಿ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳು ಲಭ್ಯವಿದೆಯೇ ಎಂಬುದನ್ನು ಪರಿಶೀಲಿಸಿ ವರದಿ ಸಿದ್ಧಪಡಿಸಲಾಗುತ್ತದೆ.
ಎಲ್ಲವೂ ಸರಾಗವಾಗಿ ನಡೆದರೆ 2027ರ ಸೆಪ್ಟೆಂಬರ್‌ನಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಯಿದೆ. ಸೋಮವಾರ ಸಿಂಡಿಕೇಟ್ ಸಭೆ ನಿಗದಿಯಾಗಿದ್ದು, ಅನುಮೋದನೆಗೆ ಸಂಬಂಧಿಸಿದಂತೆ ಆಂತರಿಕ ಸಮಿತಿಯೂ ಇದೆ. ಪ್ರಸ್ತುತ 75 ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸ್ಥಳಾವಕಾಶವಿದೆ” ಎಂದು ತಿಳಿಸಿದರು.
ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
ಪುತ್ತೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ವಿಶೇಷ ಅಧಿಕಾರಿ ಡಾ. ಲೋಹಿತ್ ಕುಮಾರ್ ಮಾತನಾಡಿ, “ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಅಕ್ಟೋಬರ್ 8ರಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಇದೀಗ ತಜ್ಞರ ತಂಡ ಮೂಲಸೌಕರ್ಯಗಳ ಪರಿಶೀಲನೆ ನಡೆಸುತ್ತಿದೆ. ತಂಡದ ವರದಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯ ಮುಂದೆ ಮಂಡನೆಯಾಗಲಿದೆ.
ಸಿಂಡಿಕೇಟ್‌ನಿಂದ ಸಮ್ಮತಿ ಪತ್ರ ದೊರೆತ ಬಳಿಕ ಕೇಂದ್ರ ಸರ್ಕಾರಕ್ಕೆ ಅನುಮತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ನವೆಂಬರ್ 30ರೊಳಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗಿದೆ. ನಂತರ ಫಾರ್ಮ್ ಬಿ ಪ್ರಕಾರ ಸಿಬ್ಬಂದಿ ಹಾಗೂ ಕ್ಲಿನಿಕಲ್ ಮೆಟೀರಿಯಲ್‌ಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಂತ ಹಂತವಾಗಿ ಭರ್ತಿ ಮಾಡಬೇಕಿದೆ. ಸುಮಾರು 63 ದಾಖಲೆಗಳನ್ನು ಡಿಸೆಂಬರ್ 30ರೊಳಗೆ ಸಲ್ಲಿಸಬೇಕಾಗುತ್ತದೆ. ಜನವರಿ ಮೊದಲ ವಾರದಿಂದ ಕೇಂದ್ರ ಸರ್ಕಾರದ ಪರಿಶೀಲನಾ ತಂಡ ಆಗಮಿಸುವ ನಿರೀಕ್ಷೆಯಿದೆ” ಎಂದು ವಿವರಿಸಿದರು.
ಪುತ್ತೂರಿನ ವೈದ್ಯಕೀಯ ಶಿಕ್ಷಣದ ಕನಸಿಗೆ ಹೊಸ ವೇಗ
ಪುತ್ತೂರಿನಲ್ಲಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಾದರೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಹೊಸ ಅವಕಾಶ ಸಿಗಲಿದೆ. ಅದೇ ರೀತಿ ಪುತ್ತೂರು ಹಾಗೂ ಸುತ್ತಮುತ್ತಲಿನ ತಾಲೂಕುಗಳ ಜನರಿಗೆ ಸುಧಾರಿತ ವೈದ್ಯಕೀಯ ಸೇವೆ ಸ್ಥಳೀಯವಾಗಿಯೇ ಲಭ್ಯವಾಗುವ ನಿರೀಕ್ಷೆಯಿದೆ.
ಸದ್ಯ ವಿಶ್ವವಿದ್ಯಾಲಯದ ತಪಾಸಣೆ ಪೂರ್ಣಗೊಂಡು ವರದಿ ಸಲ್ಲಿಕೆ, ಸಿಂಡಿಕೇಟ್ ಅನುಮೋದನೆ, ಕೇಂದ್ರ ಸರ್ಕಾರದ ಅನುಮತಿ ಹಾಗೂ ಅಂತಿಮ ಪರಿಶೀಲನೆಗಳ ಹಂತಗಳು ಬಾಕಿಯಿವೆ. ಈ ಎಲ್ಲ ಪ್ರಕ್ರಿಯೆಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಂಡರೆ 2027ರ ಶೈಕ್ಷಣಿಕ ವರ್ಷದಲ್ಲಿ ಪುತ್ತೂರು ಮೆಡಿಕಲ್ ಕಾಲೇಜಿನ ಮೊದಲ ಬ್ಯಾಚ್ ಆರಂಭವಾಗುವ ನಿರೀಕ್ಷೆ ಗರಿಗೆದರಲಿದೆ.
ಶಾಸಕ ಅಶೋಕ್ ಕುಮಾರ್ ರೈ, ವಿಶೇಷ ಅಧಿಕಾರಿ ಡಾ. ಲೋಹಿತ್ ಕುಮಾರ್, ಡಾ. ಶಶಾಂಕ್, ಪುತ್ತೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಯದು ರಾಜ್, ಶಾಸಕರ ಆಪ್ತ ಕಾರ್ಯದರ್ಶಿ ಪ್ರದೀಪ್, ರಂಜಿತ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
-
ಮಂಗಳೂರು14 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್21 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ19 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ20 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ19 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ಅಂತರ ರಾಜ್ಯ13 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ20 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ19 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















