ಸ್ಥಳೀಯ
Arrested-ಕುಖ್ಯಾತ ಹಂತಕ ಭಾಗಪ್ಪ ಹರಿಜನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಜಯಪುರ ನಗರದ ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಾ ನಗರದಲ್ಲಿ ನಡೆದ ಭೀಮಾತೀರದ ಕುಖ್ಯಾತ ಹಂತಕ ಭಾಗಪ್ಪ ಹರಿಜನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಜಯಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಜಯಪುರ : ಫೆ. 11ರ ರಾತ್ರಿ ನಗರದ ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಾ ನಗರದಲ್ಲಿ ನಡೆದ ಭೀಮಾತೀರದ ಕುಖ್ಯಾತ ಹಂತಕ ಭಾಗಪ್ಪ ಹರಿಜನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಜಯಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಾಗಪ್ಪ ಕೊಲೆ ಪ್ರಕರಣ ಸಂಬಂಧ ಇಂಡಿ ತಾಲ್ಲೂಕಿನ ಅಗರಖೇಡದ ಪಿಂಟು ಮೇಲಿನಕೇರಿ (26), ಸುದೀಪ ಕಾಂಬಳೆ (20), ಹೊರ್ತಿ ಗ್ರಾಮದ ರಾಹುಲ ತಳಕೇರಿ (20), ಬೈಲಹೊಂಗಲದ ಗದಿಗೆಪ್ಪ ಬೆನಕೊಪ್ಪ (27) ಎಂಬ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ತನಿಖೆ ಮುಂದುವರೆಸಿದ್ದಾರೆ.
ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಮೃತ ಬಾಗಪ್ಪ ಹರಿಜನ ಮೇಲೆ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಅಫಜಲಪೂರ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ ಸೇರಿದಂತೆ ಒಟ್ಟು 6 ಕೊಲೆ ಪ್ರಕರಣಗಳು ದಾಖಲಾಗಿದ್ದವು. ಬಾಗಪ್ಪ ಮದಿನಾ ನಗರದ ತನ್ನ ಬಾಡಿಗೆ ಮನೆಯಲ್ಲಿ ಊಟ ಮಾಡಿ ವಾಯುವಿಹಾರಕ್ಕೆ ತೆರಳಿದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಗುಂಡು ಹಾರಿಸಿ ಬಾಗಪ್ಪನ ಹತ್ಯೆಗೈದಿದ್ದರು.
ಇತ್ತೀಚೆಗೆ ರವಿ ಮೇಲಿನಕೇರಿ ಎಂಬವನನ್ನು ತುಳಸಿರಾಮ ಹರಿಜನ ಹಾಗೂ ಆತನ ಸಹಚರರಾದ ಅಲೇಕ್ಸ್ ಗೊಲ್ಲರ, ಶಣ್ಮುಖ ನಡುವಿನಕೇರಿ, ಪ್ರಕಾಶ ಗೊಲ್ಲರ, ಮುರುಗೇಶ ಉಳ್ಳಾಗಡ್ಡಿ, ರಾಜೇಸಾಬ ರುದ್ರವಾಡಿ ಇವರು ಸೇರಿಕೊಂಡು ಕೊಲೆ ಮಾಡಿ ಬಂಧನದಲ್ಲಿದ್ದರು. ಬಾಗಪ್ಪ ಹರಿಜನ ಹಾಗೂ ರವಿ ಮೇಲಿನಕೇರಿ ಇವರು ಸಂಬಂಧಿಕರಾಗಿದ್ದರು. ಇವರಿಬ್ಬರ ನಡುವೆ ಕೆಲವು ವರ್ಷಗಳಿಂದ ಹಣಕಾಸಿನ ವ್ಯವಹಾರವಿದ್ದು, ಇಬ್ಬರೂ ಸೇರಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು.
ರವಿ ಮೇಲಿನಕೇರಿ ಮೃತಪಟ್ಟ ನಂತರ ಬಾಗಪ್ಪ, ರವಿ ಮೇಲಿನಕೇರಿ ತಮ್ಮ ಪ್ರಕಾಶ ಮೇಲಿನಕೇರಿಗೆ ನಿಮ್ಮ ಅಣ್ಣ ನನ್ನ ಹೆಸರು ಹೇಳಿ ಮಾಡಿರುವ ಹಣ, ಆಸ್ತಿ ಮತ್ತು ವಾಹನ ನನಗೆ ಬಿಟ್ಟು ಕೊಡಬೇಕು. ಇಲ್ಲದಿದ್ದರೆ 10 ಕೋಟಿ ಹಣ ಕೊಡಬೇಕು. ಅದೂ ಆಗದಿದ್ದರೆ ನಿಮ್ಮ ಅಣ್ಣನ ಹೆಂಡತಿಯನ್ನು ನನ್ನ ಹತ್ತಿರ ಕಳುಹಿಸು ಎಂದು ಅಣ್ಣನ ಹೆಂಡತಿಯ ಕುರಿತಾಗಿ ಅವಾಚ್ಯ ಪದ ಬಳಕೆ ಮಾಡಿ ಮಾತನಾಡಿ ಬೆದರಿಕೆ ಹಾಕಿದ್ದ. ಅಲ್ಲದೇ ನಿಮ್ಮ ಅಣ್ಣನಿಗೆ ಹೊಡೆದಂತೆ ನಿನಗೂ ಹೊಡೆಯುತ್ತೇನೆ ಎಂದು ಒತ್ತಡ, ಬೆದರಿಕೆ ಹಾಕಿದ್ದ.
ಈ ಹಿನ್ನೆಲೆಯಲ್ಲಿ ಬಾಗಪ್ಪನನ್ನು ಮುಗಿಸಿ ಬಿಡಬೇಕು ಎಂದು ಪ್ರಕಾಶ ಮೇಲಿನಕೇರಿ ತನ್ನ ಸಂಬಂಧಿಕ ಹಾಗೂ ಸ್ನೇಹಿತರೊಂದಿಗೆ ಸಂಚು ರೂಪಿಸಿ ಫೆ.11ರ ರಾತ್ರಿ ಬಾಗಪ್ಪ ಹರಿಜನ ಮದಿನಾ ನಗರದ ತನ್ನ ಮನೆಯ ಹೊರಗಡೆ ವಾಕಿಂಗ್ ಮಾಡುವಾಗ ಆರೋಪಿಗಳು ಆಟೋ ಹಾಗೂ ಬೈಕ್‌ನಲ್ಲಿ ಬಂದು ಪಿಸ್ತೂಲ್‌ನಿಂದ ಗುಂಡು ಹಾರಿಸಿ, ಕೊಡಲಿ, ಮಚ್ಚು ಹಾಗೂ ಜಂಬೆಯಿಂದ ಹೊಡೆದು ಕೊಲೆ ಮಾಡಿರುತ್ತಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು. ಈ ವೇಳೆ ಅಡಿಷನಲ್ ಎಸ್ಪಿಗಳಾದ ಶಂಕರ ಮಾರಿಹಾಳ, ರಾಮನಗೌಡ ಹಟ್ಟಿ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಸ್ಥಳೀಯ
Uppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ ಕಾರ್ಯಾರಂಭಿಸಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ಉಪ್ಪಿನಂಗಡಿ: ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ ಕಾರ್ಯಾರಂಭಿಸಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ವಳಾಲು ಟೋಲ್ ಪ್ಲಾಝಾದಲ್ಲಿ ಈಗಾಗಲೇ ಪರೀಕ್ಷಾರ್ಥ ಕಾರ್ಯಾಚರಣೆ ನಡೆಸಲಾಗಿದ್ದು, ಇದೀಗ ಅಧಿಕೃತವಾಗಿ ಶುಲ್ಕ ವಸೂಲಿ ಆರಂಭವಾಗಲಿದೆ. ಶುಲ್ಕ ಸಂಗ್ರಹದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಂಗಳೂರಿನ ಕೋರಲ್ ಸಂಸ್ಥೆ ನಿರ್ವಹಣೆಯ ಗುತ್ತಿಗೆ ಪಡೆದುಕೊಂಡಿದೆ. ವಾಹನಗಳಿಗೆ ನಿಗದಿಪಡಿಸಿರುವ ಶುಲ್ಕದ ವಿವರಗಳ ಫಲಕಗಳನ್ನೂ ಹೆದ್ದಾರಿ ಪ್ರಾಧಿಕಾರ ಅಳವಡಿಸಿದೆ.
ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿ ಸುಮಾರು ಶೇ. 95ರಷ್ಟು ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ವಳಾಲಿನಲ್ಲಿ ಟೋಲ್ ಪ್ಲಾಝಾ ನಿರ್ಮಾಣವನ್ನು ಹೆದ್ದಾರಿ ಗುತ್ತಿಗೆ ಸಂಸ್ಥೆ ಕೆಎನ್‌ಆರ್ ಕನ್ಸ್ಟ್ರಕ್ಷನ್ ನಿರ್ವಹಿಸಿದೆ. ಹೆದ್ದಾರಿಯಲ್ಲಿ ಎರಡೂ ದಿಕ್ಕುಗಳಿಗೆ ತಲಾ ನಾಲ್ಕು ಲೇನ್‌ಗಳಿದ್ದು, ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸಂಚಾರಕ್ಕೆ ಪ್ರತ್ಯೇಕ ಲೇನ್‌ಗಳನ್ನು ವ್ಯವಸ್ಥೆಗೊಳಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು–ಮಂಗಳೂರು ಮಾರ್ಗದಲ್ಲಿ ನೆಲಮಂಗಲದಿಂದ ಸಕಲೇಶಪುರದವರೆಗೆ ಈಗಾಗಲೇ ಐದು ಟೋಲ್ ಪ್ಲಾಝಾಗಳಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ವಳಾಲು ಟೋಲ್ ಕೂಡ ಸೇರ್ಪಡೆಯಾಗಿದೆ.
ಟೋಲ್ ಶುಲ್ಕ ಎಷ್ಟು?
ಕಾರು, ಜೀಪು, ವ್ಯಾನ್ ಹಾಗೂ ಲಘು ಮೋಟಾರು ವಾಹನಗಳಿಗೆ ಏಕಮುಖ ಪ್ರಯಾಣಕ್ಕೆ 140 ರೂ. ಹಾಗೂ ಅದೇ ದಿನದೊಳಗೆ ಹಿಂದಿರುಗುವ ಪ್ರಯಾಣಕ್ಕೆ 205 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಟೋಲ್ ಪ್ಲಾಝಾದ ಒಟ್ಟು ಎಂಟು ಲೇನ್‌ಗಳ ಪೈಕಿ ಆರು ಲೇನ್‌ಗಳನ್ನು (3+3) ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳಿಗಾಗಿ ಮೀಸಲಿಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೋಂದಣಿ ಹೊಂದಿರುವ ವಾಹನಗಳಿಗೆ ಶೇ. 50ರಷ್ಟು ರಿಯಾಯಿತಿ ನೀಡಲಾಗಿದ್ದು, ಟೋಲ್ ಕೇಂದ್ರದ 20 ಕಿ.ಮೀ. ವ್ಯಾಪ್ತಿಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಇರಲಿದೆ ಎಂದು ಸಂಸ್ಥೆ ತಿಳಿಸಿದೆ.
ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು
ಇದೇ ವೇಳೆ, ದಶಕಗಳಿಂದ ಕಾರ್ಯಾಚರಿಸುತ್ತಿರುವ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿ ಟೋಲ್ ಗೇಟ್ ಶೀಘ್ರದಲ್ಲೇ ಬಂದ್ ಆಗುವ ಸಾಧ್ಯತೆ ಇದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗಿನ ಸಮಿತಿ ಸಭೆಯಲ್ಲಿ ಟೋಲ್ ತೆರವಿಗೆ ಅನುಮತಿ ದೊರೆತಿದ್ದು, ಅಧಿಕೃತ ಆದೇಶ ಪ್ರಕಟವಾಗುವುದಷ್ಟೇ ಬಾಕಿ ಇದೆ.
ಬಿ.ಸಿ. ರೋಡ್‌ನಿಂದ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ಹಾಗೂ ಪುಂಜಾಲಕಟ್ಟೆಯಿಂದ ಚಾರ್ಮಾಡಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 73ರ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಬ್ರಹ್ಮರಕೂಟ್ಲು ಟೋಲ್ ತೆರವುಗೊಳ್ಳಲಿದೆ. ರಾಷ್ಟ್ರೀಯ ಹೆದ್ದಾರಿ 73ರ ಮಡಂತ್ಯಾರು ಸಮೀಪದ ಪಣಕಜೆ ಬಳಿ ಹೊಸ ಟೋಲ್ ಗೇಟ್ ನಿರ್ಮಾಣವಾಗಲಿದ್ದು, ಅದರೊಂದಿಗೆ ಬ್ರಹ್ಮರಕೂಟ್ಲು ಟೋಲ್ ವಿಲೀನಗೊಳ್ಳಲಿದೆ.
ಸುರತ್ಕಲ್ ಟೋಲ್ ಗೇಟ್ ತೆರವಿನ ಬಳಿಕ ಇದೀಗ ಬ್ರಹ್ಮರಕೂಟ್ಲು ಟೋಲ್ ಕೂಡ ತೆರವುಗೊಳ್ಳುವ ನಿರೀಕ್ಷೆ ಮೂಡಿದ್ದು, ಈ ಭಾಗದ ಪ್ರಯಾಣಿಕರಿಗೆ ದೊಡ್ಡ ನಿರಾಳತೆ ಸಿಗಲಿದೆ.
ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಮಿತಿಯು ಈ ವಿಚಾರವಾಗಿ ಕಳೆದ ನಾಲ್ಕು ತಿಂಗಳಲ್ಲಿ ಮೂರು ಸಭೆಗಳನ್ನು ನಡೆಸಿದ್ದು, ಅಂತಿಮವಾಗಿ ಟೋಲ್ ತೆರವಿಗೆ ಅನುಮತಿ ದೊರೆತಿದೆ. ಅಧಿಕೃತ ಆದೇಶದ ಪ್ರತಿ ಕೈ ಸೇರಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೆದ್ ಅಝ್ಮಿ ತಿಳಿಸಿದ್ದಾರೆ.
13 ವರ್ಷಗಳಿಂದ ಕಾರ್ಯಾಚರಣೆ
2013ರಲ್ಲಿ ಆರಂಭಗೊಂಡ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ ಕಳೆದ 13 ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಮಂಗಳೂರು ಬಂದರು ಸಂಪರ್ಕ ಯೋಜನೆಯ ರಸ್ತೆಯ ನಿರ್ವಹಣೆಯ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಟೋಲ್ ಕೇಂದ್ರವನ್ನು ಆರಂಭಿಸಿತ್ತು. ಇದಕ್ಕೂ ಮೊದಲು ಪಾಣೆಮಂಗಳೂರಿನ ನೇತ್ರಾವತಿ ಸೇತುವೆ ಬಳಿ ಟೋಲ್ ಶುಲ್ಕ ಸಂಗ್ರಹಿಸಲಾಗುತ್ತಿತ್ತು.
ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ಅಂತರದ ಮಾನದಂಡ ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ಸ್ಥಳಾಂತರಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದೇನೆ. ಸಚಿವಾಲಯವು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲೇ ಆದೇಶ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಅಪರಾಧ
Gym protein powder-ಸ್ಟೆರಾಯ್ಡ್, ಹಾನಿಕಾರಕ ರಾಸಾಯನಿಕ ಬೆರೆಸಿರುವ ಶಂಕೆ; ಜಿಮ್ ಪ್ರೊಟೀನ್ ಪೌಡರ್ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಸಿದ್ಧತೆ
ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು, ನ.25: ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಿಮ್‌ಗೆ ಹೋಗುವವರು ಸೇವಿಸುವ ಪ್ರೊಟೀನ್ ಉತ್ಪನ್ನಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಪ್ರೊಟೀನ್ ಉತ್ಪನ್ನಗಳು ಗುಣಮಟ್ಟದಿಂದ ಕೂಡಿದ್ದರೆ, ಇನ್ನು ಕೆಲವು ಉತ್ಪನ್ನಗಳು ಎಲ್ಲಿಂದ ಪೂರೈಕೆಯಾಗುತ್ತವೆ ಎಂಬುದೇ ಸ್ಪಷ್ಟವಾಗಿಲ್ಲ. ಹೀಗಾಗಿ ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಪ್ರೊಟೀನ್ ಪೌಡರ್ ಮತ್ತು ಸಪ್ಲಿಮೆಂಟ್‌ಗಳನ್ನು ಪರೀಕ್ಷಿಸಲು ನಿರ್ಧರಿಸಲಾಗಿದೆ. ಮೆಡಿಕಲ್ ಸ್ಟೋರ್‌ಗಳು, ಜಿಮ್ ಕೇಂದ್ರಗಳು ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ಯಾಕೆ ಈ ಪರೀಕ್ಷೆ?
ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ಮಾರಾಟವಾಗುವ ಕೆಲವು ಪ್ರೊಟೀನ್ ಪೌಡರ್‌ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪ್ರೊಟೀನ್ ಅಂಶವಿರುವುದು ಹಾಗೂ ಅವುಗಳಿಗೆ ಸ್ಟೆರಾಯ್ಡ್‌ಗಳು ಮತ್ತು ಹಾನಿಕಾರಕ ರಾಸಾಯನಿಕಗಳನ್ನು ಬೆರೆಸುವ ಸಾಧ್ಯತೆಗಳ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಈ ಹಿಂದೆಯೇ ಕಳವಳ ವ್ಯಕ್ತಪಡಿಸಿತ್ತು.
ಅಲ್ಲದೆ, ಅಗತ್ಯ ಪರವಾನಗಿ ಇಲ್ಲದೆ ಜಿಮ್‌ಗಳಲ್ಲಿ ನೇರವಾಗಿ ಸಪ್ಲಿಮೆಂಟ್‌ಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾಗಿದೆ. ಹಲವು ಪ್ರೊಟೀನ್ ಸಪ್ಲಿಮೆಂಟ್‌ಗಳ ಪ್ಯಾಕೆಟ್‌ಗಳ ಮೇಲೆ ನಮೂದಿಸಿರುವ ಪ್ರೊಟೀನ್ ಪ್ರಮಾಣಕ್ಕೂ, ಉತ್ಪನ್ನದಲ್ಲಿರುವ ನೈಜ ಪ್ರಮಾಣಕ್ಕೂ ವ್ಯತ್ಯಾಸವಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಉತ್ಪನ್ನಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ.
-
ಮಂಗಳೂರು23 hours agoSoujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
-
ಬಿಗ್ ನ್ಯೂಸ್8 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ದಕ್ಷಿಣ ಕನ್ನಡ21 hours ago
ಡಿ. 8ರ ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು: ಕಾರ್ಯಾಲಯ ಉದ್ಘಾಟನೆ -ಅದ್ದೂರಿ ದೀಪೋತ್ಸವಕ್ಕೆ ಭಕ್ತರ ಸಹಕಾರ ಅಗತ್ಯ: ಎಸ್. ರವೀಂದ್ರ ಶೆಟ್ಟಿ
-
ಅಪರಾಧ7 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ನಿಧನ ವಾರ್ತೆ6 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ನಿಧನ ವಾರ್ತೆ7 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
-
ಸ್ಥಳೀಯ7 hours agoDharmasthala-ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನ ಸಂಭ್ರಮ; ಧರ್ಮಸ್ಥಳದ ಮ್ಯೂಸಿಯಂಗೆ ಕಲಾಂ ಕಾರು, ಸಚಿತ್ರ ಅಂಚೆಚೀಟಿಗಳು, ಬಗ್ಗಿ ವಾಹನ ಕೊಡುಗೆ
-
ಅಂತರ ರಾಜ್ಯ5 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?















