Connect with us

ಬಿಗ್ ನ್ಯೂಸ್

Bantwal-ಬಂಟ್ವಾಳ : ಚರಂಡಿಗೆ ಬಿದ್ದ ರಿಕ್ಷಾ- ಚಾಲಕ ಸ್ಥಳದಲ್ಲೇ ಸಾವು – ಮೂವರು ಮಕ್ಕಳಿಗೆ ಗಾಯ

Published

on



Ad Widget

Ad Widget

Ad Widget

Ad Widget

ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದ ಚಾಲಕ ಸ್ಥಳದಲ್ಲಿಯೇ ಮೃತಪಟ್ಟರೆ ಪ್ರಯಾಣಿಕ ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಅಮ್ಮುಂಜೆಯಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದ ಚಾಲಕ ಸ್ಥಳದಲ್ಲಿಯೇ ಮೃತಪಟ್ಟರೆ ಪ್ರಯಾಣಿಕ ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಅಮ್ಮುಂಜೆಯಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಗಾಣೆಮಾರ್ ಎಂಬಲ್ಲಿ ಅಪಘಾತ ನಡೆದಿದ್ದು, ರಿಕ್ಷಾ ಚಾಲಕ ಅಮ್ಮುಂಜೆ ನಿವಾಸಿ ಮಹಾಬಲ ಪೂಜಾರಿ ( 37) ಮೃತಪಟ್ಟ ಅವಿವಾಹಿತ ಯುವಕನಾಗಿದ್ದಾನೆ.
ಈತನ ಸಂಬಂಧಿ ಮಕ್ಕಳಾದ ತುಷಾರ್,ಭವಿತ್ ಮತ್ತು ಪ್ರದೀಪ್ ಅವರನ್ನು ಮೂಡಬಿದರೆಯ ಮಿಜಾರು ಎಂಬಲ್ಲಿಗೆ ಜಾತ್ರೆಗೆ ಹೋಗಿ ವಾಪಸು ಮನೆಗೆ ಬರುವ ವೇಳೆ ಘಟನೆ ನಡೆದಿದೆ.

Ad Widget

Ad Widget <> Ad Widget

ಮನೆಗೆ ಸುಮಾರು 500 ಮೀ ದೂರದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಚಾಲಕನ ನಿಯಂತ್ರಣ ‌ಕಳೆದ ರಿಕ್ಷಾ ತಲೆಕೆಳಗಾದ ಸ್ಥಿತಿಯಲ್ಲಿ ಚರಂಡಿಗೆ ಬಿದ್ದಿದೆ. ಚಾಲಕ ರಿಕ್ಷಾ ದ ಅಡಿಯಲ್ಲಿ ಸಿಲುಕಿ ಸ್ಥಳದಲ್ಲಿಯೇ ‌ಮೃತಪಟ್ಟರೆ ಉಳಿದಂತೆ ರಿಕ್ಷಾದಲ್ಲಿ ಪ್ರಯಾಣಿಕರಾದ ಮೂವರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.



Ad Widget

ಪಾಣೆಮಂಗಳೂರು ಟ್ರಾಫಿಕ್ ಪೋಲಿಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Click to comment

Leave a Reply

ಬಿಗ್ ನ್ಯೂಸ್

ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್‌ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.

Ad Widget

Ad Widget <> Ad Widget

ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.



Ad Widget

ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.

Continue Reading

ಸ್ಥಳೀಯ

Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು

Published

on



Ad Widget

Ad Widget

Ad Widget

Ad Widget

ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.

Ad Widget

Ad Widget <> Ad Widget

ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.



Ad Widget

ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Ad Widget

Ad Widget

ಈ ಸಂದರ್ಭದಲ್ಲಿ ಅಶ್ರಫ್ ಚಾರ್ಮಾಡಿ, ಫಾರೂಕ್ ಕಕ್ಕಿಂಜೆ ಗಾಂಧಿನಗರ, ನೌಫಲ್ ಕಕ್ಕಿಂಜೆ ಗಾಂಧಿನಗರ ಹಾಗೂ ಬಸ್ ನಿರ್ವಾಹಕ ಸಂತೋಷ್ ಸಂಗಪ್ಪ ಗೌಡ ಅವರು ಸಹಕರಿಸಿದರು. ಚಾಲಕ ಕಿರಣ್ ಅವರ ಸಮಯಪ್ರಜ್ಞೆ ಹಾಗೂ ಸಹಪ್ರಯಾಣಿಕರ ಮಾನವೀಯ ನೆರವಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Ad Widget
Continue Reading

ಅಂತರ ರಾಜ್ಯ

ಕಾಸರಗೋಡು: ಆರ್‌ಎಸ್‌ಎಸ್‌ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ

Published

on



Ad Widget

Ad Widget

Ad Widget

Ad Widget

ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Ad Widget

Ad Widget <> Ad Widget

ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.



Ad Widget

ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Ad Widget

Ad Widget

ಇನ್ನು ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಗಣ್ಯರು ಮಧ್ಯಾಹ್ನ ಕಾರ್ಯಕ್ರಮದ ಸ್ಥಳದಿಂದ ಹೊರಬರುವಾಗಲೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿ ಘೋಷಣೆಗಳನ್ನು ಕೂಗಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading