ಕಾರ್ಯಕ್ರಮಗಳು
Bantwal-ಹೊಂಡಾ ದ್ವಿಚಕ್ರ ಮಾರಾಟದಲ್ಲಿ ಕರಾವಳಿಯಲ್ಲೇ ಅಗ್ರಸ್ಥಾನದಲ್ಲಿರುವ ‘ಕಾಂಚಾನ ಹೊಂಡಾ’ದ ಬಂಟ್ವಾಳ ಶೋರೂಮ್ ಗೆ ದಶಕದ ಸಂಭ್ರಮ : ಎಸ್ಪಿ ಯತೀಶ್ ರವರಿಂದ ನೂತನ ದ್ವಿಚಕ್ರ ವಾಹನಗಳು ಮಾರುಕಟ್ಟೆಗೆ : ವಿಟ್ಲ, ಮಾಣಿ ಸೇರಿದಂತೆ ಎಲ್ಲಾ ಶೋರೂಮ್ ನಲ್ಲಿ ಮೆಗಾ ಸೇಲ್ – ಕೇವಲ ರೂ.1ಕ್ಕೆ ವಾಹನ ಖರೀದಿಸಿ ರೂ.10000ದವರೆಗೆ ಉಚಿತ ಉಡುಗೊರೆಗಳು ನಿಮ್ಮದಾಗಿಸಿ
ಹೋಂಡಾ ಕಂಪೆನಿಯು ಅನಾವರಣ ಮಾಡಿದ ನೂತನ 125 ಸಿಸಿಯ ಎಸ್‌ಪಿ125, ಆ್ಯಕ್ಟಿವಾ 125ನ ಜತೆಗೆ ಆ್ಯಕ್ಟಿವಾ, ಡಿಯೊ ಹಾಗೂ ಯೂನಿಕಾರ್ನ್ ದ್ವಿಚಕ್ರ ವಾಹನಗಳನ್ನು ಬಿ.ಸಿ.ರೋಡ್ ಶಾಂತಿಯಂಗಡಿಯಲ್ಲಿರುವ ಕಾಂಚನಾ ಹೋಂಡಾ ಶೋರೂಮ್‌ನಲ್ಲಿ ಶುಕ್ರವಾರ ಮಾರುಕಟ್ಟೆಗೆ ಬಿಡುಗಡೆಗೊಳಿಸುವುದರ ಜೊತೆಗೆ ಶೋರೂಮ್‌ನ ದಶಮಾನೋತ್ಸವವನ್ನು ಆಚರಿಸಲಾಯಿತು.
ಬಂಟ್ವಾಳ: ಹೋಂಡಾ ಕಂಪೆನಿಯು ಅನಾವರಣ ಮಾಡಿದ ನೂತನ 125 ಸಿಸಿಯ ಎಸ್‌ಪಿ125, ಆ್ಯಕ್ಟಿವಾ 125ನ ಜತೆಗೆ ಆ್ಯಕ್ಟಿವಾ, ಡಿಯೊ ಹಾಗೂ ಯೂನಿಕಾರ್ನ್ ದ್ವಿಚಕ್ರ ವಾಹನಗಳನ್ನು ಬಿ.ಸಿ.ರೋಡ್ ಶಾಂತಿಯಂಗಡಿಯಲ್ಲಿರುವ ಕಾಂಚನಾ ಹೋಂಡಾ ಶೋರೂಮ್‌ನಲ್ಲಿ ಶುಕ್ರವಾರ ಮಾರುಕಟ್ಟೆಗೆ ಬಿಡುಗಡೆಗೊಳಿಸುವುದರ ಜೊತೆಗೆ ಶೋರೂಮ್‌ನ ದಶಮಾನೋತ್ಸವವನ್ನು ಆಚರಿಸಲಾಯಿತು.
ದ.ಕ. ಜಿಲ್ಲಾ ಎಸ್ಪಿ ಯತೀಶ್ ಎನ್. ನೂತನ ದ್ವಿಚಕ್ರ ವಾಹನಗಳನ್ನು ಬಿಡುಗಡೆಗೊಳಿಸಿ ಗ್ರಾಹಕರುಗಳಿಗೆ ಕೀ ಹಸ್ತಾಂತರಿಸಿದರು.
ಅಪಘಾತದ ಸಂದರ್ಭ ಗಾಯಾಳುಗಳ ತ್ವರಿತ ಚಿಕಿತ್ಸೆಗೆ ಸಹಕರಿಸಿದ ಆದಂರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾಂಚನಾ ಹೋಂಡಾ ಜನರಲ್ ಮ್ಯಾನೇಜರ್ ಪ್ರತೀಕ್ ಕಾಮತ್, ಎಜಿಎಂ ಸೇಲ್ಸ್ ಹಾಶಿರ್, ಮಾರ್ಕೆಟಿಂಗ್ ಮ್ಯಾನೇಜರ್ ಸುಶಾಂತ್ ಶೆಟ್ಟಿ, ಸೇಲ್ಸ್ ಮ್ಯಾನೇಜರ್ ಶ್ವೇತಾ, ಸರ್ವೀಸ್ ಮ್ಯಾನೇಜರ್ ಸುಧೀರ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಯೂಟ್ಯೂಬರ್ ಅರ್ಪಿತ್ ಕಾರ್ಯಕ್ರಮ ನಿರೂಪಿಸಿದರು.
ದ.ಕ. ಜಿಲ್ಲೆಯಲ್ಲಿರುವ ಕಾಂಚನಾ ಹೋಂಡಾ ಶೋರೂಮ್‌ಗಳಲ್ಲಿ ಬಿಡುಗಡೆಯಾಗಿರುವ ಹೋಂಡಾದ ನೂತನ ದ್ವಿಚಕ್ರ ವಾಹನಗಳಿಗೆ 10 ವರ್ಷಗಳ ವಾರೆಂಟಿ ಸೌಲಭ್ಯ ಸಿಗಲಿದೆ. ಅಲ್ಲದೇ ಈ ವಾಹನಗಳಿಗೆ ಆರು ಸಾವಿರ ಕಿ.ಮೀ.ನಲ್ಲಿ ಇಂಜಿನ್ ಆಯಿಲ್ ಬದಲಾವಣೆ ಮಾಡಿದರೆ ಸಾಕಾಗುತ್ತದೆ. ಅದಲ್ಲದೆ ಹೋಂಡಾದ ಯಾವುದೇ ಹೊಸ ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗೆ 10 ಸಾವಿರ ರೂ. ವರೆಗೆ ಉಳಿತಾಯ ಲಭ್ಯವಾಗಲಿದೆ. ಅತೀ ಕಡಿಮೆ ಮುಂಗಡ ಪಾವತಿ ಮತ್ತು ಅತೀ ಕಡಿಮೆ ಇಎಂಐ ವ್ಯವಸ್ಥೆಯನ್ನೂ ಮಾಡಿಕೊಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.
ಕಾಂಚನ ಹೋಂಡಾದಲ್ಲಿ ಜಬರ್ದರ್ಸ್ತ್ ಬಾರಿಶ್ ಮೆಗಾ ಸೇಲ್…! ಕೇವಲ ರೂ.1 ಮುಂಗಡ ಪಾವತಿಸಿ ಬೈಕ್ ತಮ್ಮದಾಗಿಸುವ ಸದವಕಾಶ
ಕರಾವಳಿಯಾದ್ಯಂತ ಹಲವು ವರ್ಷಗಳಿಂದ ವಾಹನ ಮಾರಾಟ ಹಾಗೂ ಸೇವೆಯಲ್ಲಿ ಅಗ್ರ ಸ್ಥಾನದಲ್ಲಿದ್ದು ಗ್ರಾಹಕರಿಗೆ ತೃಪ್ತಿದಾಯಕ ಸೇವೆಯನ್ನು ನೀಡುತ್ತಿರುವ ಹಾಗೂ ಅಪಾರ ಅನುಭವ ಹೊಂದಿರುವ ಕಾಂಚನ ಮೋಟಾರ್‌ನ ಅಂಗ ಸಂಸ್ಥೆ ಕಾಂಚನ ಹೋಂಡಾವು ದ.ಕ ಜಿಲ್ಲೆಯಲ್ಲಿ ಅತೀ ಹೆಚ್ಚು ದ್ವಿಚಕ್ರ ವಾಹನ ಮಾರಾಟ ಮಾಡುವ ಡೀಲರ್ ಆಗಿದೆ. ಇದೀಗ ಜಬರ್ದರ್ಸ್ತ್ ಬಾರಿಶ್ ಬೊನಾನ್ಝಾ ಎಂಬ ಆಫರನ್ನು ಪರಿಚಯಿಸಿದೆ. ಗ್ರಾಹಕರು ಇದೀಗ ಕೇವಲ ರೂ. 1 ಮುಂಗಡ ಪಾವತಿಸಿ ಹೋಂಡಾ ಬೈಕನ್ನು ತಮ್ಮದಾಗಿಸಬಹುದು. ಪ್ರತೀ ತಿಂಗಳ ಮಾಸಿಕ ಕಂತು ಕೇವಲ ರೂ. 1999ರಿಂದ ಪ್ರಾರಂಭ.
ಗ್ರಾಹಕರು ಯಾವುದೇ ದ್ವಿಚಕ್ರ ವಾಹನವನ್ನು ಖರಿದಿಸುವ ಮುನ್ನ ಕಾಂಚನ ಹೋಂಡಾ ಶೋರೂಂಗೆ ಭೇಟಿ ನೀಡಿ. ಇಲ್ಲಿ ನಗರದಲ್ಲೇ ಅತೀ ಕಡಿಮೆ ಬೆಲೆಯಲ್ಲಿ ದ್ವಿಚಕ್ರ ವಾಹನವನ್ನು ತಮ್ಮದಾಗಿಸುವ ಭರವಸೆಯನ್ನು ಕಾಂಚನ ಹೋಂಡಾ ನೀಡುತ್ತದೆ. ದಕ್ಷಿಣ ಕನ್ನಡದಲ್ಲಿ ನಮ್ಮ ಬೆಲೆ ಅತ್ಯಂತ ಕಡಿಮೆ. ಇದಲ್ಲದೆ ಕೇವಲ 1 ರೂ.ಗಳ ಡೌನ್ ಪೇಮೆಂಟ್ ಸೌಲಭ್ಯ, 0% ಬಡ್ಡಿದರದಲ್ಲಿ ಲೋನ್, ಕನಿಷ್ಠ 1999 ರೂ.ಗಳ ಇಎಂಐ, ಇಷ್ಟೇ ಅಲ್ಲದೆ ಪ್ರತೀ ಖರೀದಿಯ ಮೇಲೆ ಬ್ರ್ಯಾಂಡೆಡ್ ಶರ್ಟ್, ಹೊಂಡಾ ಹೆಲ್ಮೆಟ್, ಬ್ಯಾಗ್ ಪ್ಯಾಕ್, ರೈನ್ ಕೋಟ್ ಸಹಿತ ರೂ. 10000ದ ಖಚಿತ ಉಡುಗೊರೆಗಳ ಬೆನಿಫಿಟ್ ಗ್ರಾಹಕರಿಗೆ ನೀಡಲಾಗುವುದು.
ಗ್ರಾಹಕರು ತಮ್ಮ ಯಾವುದೇ ಹಳೇ ದ್ವಿಚಕ್ರ ವಾಹನವನ್ನು ಹೋಂಡಾ ದ್ವಿಚಕ್ರ ವಾಹನದೊಂದಿಗೆ ವಿನಿಮಯಿಸಿ ತಮ್ಮ ಹಳೇ ದ್ವಿಚಕ್ರ ವಾಹನಕ್ಕೆ ಮಾರುಕಟ್ಟೆಗಿಂತ ಹೆಚ್ಚಿನ ಮೌಲ್ಯವನ್ನು ಪಡೆಯಬಹುದು ಹಾಗೂ ವಿನಿಮಯ ಬೋನಸ್‌ನ್ನೂ ಪಡೆಯಬಹುದಾಗಿದೆ.
ಅತೀ ಕಡಿಮೆ ದಾಖಲಾತಿಗಳೊಂದಿಗೆ ಸ್ಥಳದಲ್ಲೇ ಸಾಲ ಸೌಲಭ್ಯವನ್ನು ಕಲ್ಪಿಸಿ ಕೊಡಲಾಗುವುದು. ಈ ಕೊಡುಗೆಗಳು ಹೋಂಡಾ ಆಕ್ಟಿವಾ 110, ಆಕ್ಟಿವಾ 125, ಡಿಯೋ, ಡಿಯೋ 125, ಹಾರ್ನೆಟ್, ಲಿವೋ, ಸಿಬಿ 200X, ಯುನಿಕಾರ್ನ್, ಶೈನ್ 100, ಶೈನ್125, ಸಿಡಿ110, ಎಸ್‌ಪಿ 125 ಹಾಗೂ ಎಸ್‌ಪಿ 160ಯ ವಿವಿಧ ಮೋಡೆಲ್‌ಗಳಿಗೆ ಲಭ್ಯವಿದೆ.
ಗ್ರಾಹಕರು ಹೋಂಡಾ ದ್ವಿಚಕ್ರ ವಾಹನಗಳ ಆಫರ್ ಹಾಗೂ ಟೆಸ್ಟ್ ರೈಡ್‌ಗಾಗಿ ಇಂದೇ ಜಿಲ್ಲೆಯ ಮಂಗಳೂರು, ಕಾವೂರು, ತೊಕ್ಕೊಟ್ಟು, ಬಿ.ಸಿ. ರೋಡ್, ಸಿದ್ದಕಟ್ಟೆ, ವಿಟ್ಲ, ಮುಡಿಪು ಹಾಗೂ ಮಾಣಿ ಶಾಖೆಗಳನ್ನು ಸಂಪರ್ಕಿಸಬಹುದು ಅಥವಾ ಇಂದೇ 9945564997 ಗೆ ಕರೆಮಾಡಿ.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.
ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.
-
Uncategorized20 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized22 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized8 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
Uncategorized7 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಮಂಗಳೂರು6 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ಅಪರಾಧ7 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ6 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ನಿಧನ ವಾರ್ತೆ6 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು


















