ಬಿಗ್ ನ್ಯೂಸ್
Puttur-ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಜಮೀನಿನಲ್ಲಿದ್ದ ಕಟ್ಟಡ ತೆರವು ಕಾರ್ಯಾಚರಣೆ ಕೇವಲ 20 ದಿನದಲ್ಲಿ ಪೂರ್ಣ..! ಹಲವು ವರ್ಷದ ಭಕ್ತರ ಬೇಡಿಕೆ ಅಚ್ಚರಿಯ ರೀತಿಯಲ್ಲಿ ಯಶಸ್ವಿ..! ದೂರದಿಂದಲೇ ದರ್ಶನವಾಗುತ್ತಿದೆ ಪುತ್ತೂರ ಒಡೆಯನ ಆಲಯ – ದೇವಳದ ಜಾಗಕ್ಕೆ ತಡೆಬೇಲಿ ರಚನೆ
ಕೆಲದಿನಗಳಿಂದ ದೇವಳದ ಹಿಂಬದಿಯ ಮುಖ್ಯರಸ್ತೆಯಿಂದ ಬರುವಾಗಲೇ ಪುತ್ತೂರ ಒಡೆಯ ಮಹಾಲಿಂಗೇಶ್ವರ ದೇವಸ್ಥಾನದ ದರ್ಶನ ಭಕ್ತರಿಗೆ ಸಿಗುತ್ತಿದೆ. ಈ ಹಿಂದೆ ದ್ವಾರದ ಬಳಿ ಮಾತ್ರ ಕಾಣುತ್ತಿದ್ದ ದೇವಾಲಯದ ಭಾಗ ಈಗ ಸಂಪೂರ್ಣ ದೇವಾಲಯವೇ ಕಾಣುವಂತಾಗಿದೆ , ಇದರಿಂದ ಭಕ್ತರು ಪುಲಕಿತಗೊಂಡಿದ್ದಾರೆ.
ಪುತ್ತೂರು: ಕೆಲದಿನಗಳಿಂದ ದೇವಳದ ಹಿಂಬದಿಯ ಮುಖ್ಯರಸ್ತೆಯಿಂದ ಬರುವಾಗಲೇ ಪುತ್ತೂರ ಒಡೆಯ ಮಹಾಲಿಂಗೇಶ್ವರ ದೇವಸ್ಥಾನದ ದರ್ಶನ ಭಕ್ತರಿಗೆ ಸಿಗುತ್ತಿದೆ. ಈ ಹಿಂದೆ ದ್ವಾರದ ಬಳಿ ಮಾತ್ರ ಕಾಣುತ್ತಿದ್ದ ದೇವಾಲಯದ ಭಾಗ ಈಗ ಸಂಪೂರ್ಣ ದೇವಾಲಯವೇ ಕಾಣುವಂತಾಗಿದೆ , ಇದರಿಂದ ಭಕ್ತರು ಪುಲಕಿತಗೊಂಡಿದ್ದಾರೆ.

ಕೇವಲ ಇಪ್ಪತ್ತೇ ದಿನದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಮೀನಲ್ಲಿದ್ದ ಬಾಡಿಗೆ ಮನೆಗಳ ತೆರವು ಕಾರ್ಯ ಪೂರ್ಣಗೊಂಡಿದ್ದು, ಮಹಿಳಾ ಠಾಣೆಯ ಕಟ್ಟಡವೊಂದು ಉಳಿದುಕೊಂಡಿದೆ. ಚರಂಡಿ ಕಾಮಗಾರಿ ವೇಗ ಪಡೆದುಕೊಂಡಿದ್ದು, ಕಟ್ಟಡಗಳ ತೆರವಿನಿಂದ ಖಾಲಿಗೊಂಡ ಜಾಗಕ್ಕೆ ಅನ್ಯರು ಪ್ರವೇಶಿಸದಂತೆ ತಡೆ ಬೇಲಿ ಆಳವಡಿಸುವ ಕಾರ್ಯ ಭರದಿಂದ ಸಾಗಿದೆ. ಈ ಮೂಲಕ ಹಲವು ವರ್ಷಗಳ ಬೇಡಿಕೆಯಾದ ದೇವಸ್ಥಾನದ ಅಡಿ ಸ್ಥಳ ಮರಳಿ ಪಡೆಯುವ ಕಾರ್ಯ ಯಶಸ್ವಿಯಾಗಿದೆ.
ಕೊಂಬೆಟ್ಟು ಭಾಗಕ್ಕೆ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗವಾಗಿ ಇರುವ ಸಂಪರ್ಕ ರಸ್ತೆಯಿಂದ ಉತ್ಸವಗಳ ಸಂದರ್ಭ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತದೆ. ಈ ನಿಟ್ಟಿನಲ್ಲಿ ತೋಡಿನ ಬದಿಯಲ್ಲಿ ಪರ್ಯಾಯ ರಸ್ತೆ ನಿರ್ಮಾಣಗೊಳ್ಳಲಿದೆ. ಇದಕ್ಕಾಗಿ ತೋಡಿನ ತಡೆ ಗೋಡೆಯನ್ನು ಸುಮಾರು 2ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ ಕಾರ್ಯ ಪ್ರಾರಂಭವಾಗಿದ್ದು, ಭೂಮಿ ಸರಿಪಡಿಸುವ ಕೆಲಸ ಭರದಿಂದ ಸಾಗಿದೆ.
ದೇವಸ್ಥಾನದ ಜಾಗದಲ್ಲಿ ಉದ್ದೇಶಿತ ಮಾಸ್ಟರ್ ಪ್ಲಾನ್ ರೀತಿಯಲ್ಲಿ ಅಭಿವೃದ್ಧಿಯನ್ನು ನಡೆಸುವ ನಿಟ್ಟಿನಲ್ಲಿ ಜಾಗವನ್ನು ಸಮತಟ್ಟು ಮಾಡಲಾಗುತ್ತಿದೆ. ಇದರ ಜತೆಗೆ ರಸ್ತೆಯ ಬದಿಯಲ್ಲಿ ಖಾಲಿ ಜಾಗ ಕಂಡಾಗ ಅಕ್ರಮವಾಗಿ ನುಗ್ಗುವುದನ್ನು ತಡೆಯುವ ನಿಟ್ಟಿನಲ್ಲಿ ದೇವಸ್ಥಾನದ ಜಾಗಕ್ಕೆ ತಡೆ ಬೇಲಿ ಹಾಕಲಾಗುತ್ತಿದೆ. ಈ ಮೂಲಕ ಅನಧಿಕೃತ ಪ್ರವೇಶ ನಡೆಯದಂತೆ ಕ್ರಮ ವಹಿಸಲಾಗಿದೆ.
ದೇವಾಲಯ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ 2009ರಿಂದ ಕರಸೇವೆ ನಡೆದುಕೊಂಡು ಬಂದಿದೆ. 2023ರಲ್ಲಿ ವರುಣ ಮಂಟಪ ಮರು ನಿರ್ಮಾಣದ ಸಂದರ್ಭದಲ್ಲಿಯೂ ಭಕ್ತರಿಂದ ಕರಸೇವೆ ನಡೆದಿದೆ. ಇತ್ತಿಚೆಗೆ ಮನೆಗಳ ತೆರವು ವಿಚಾರದಲ್ಲಿ ಶಾಸಕ ಅಶೋಕ್ ರೈ ಮತ್ತು ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ನೇತೃತ್ವದಲ್ಲಿ ನಡೆದ ಕರಸೇವೆಯಲ್ಲಿ ಕೇಸರಿ ಶಾಲು ಹಾಕಿಕೊಂಡು ಭಕ್ತರು ಭಾಗವಹಿಸಿದ್ದಾರೆ. ಸುಮಾರು 3ಸಾವಿರ ಮಂದಿಗೆ ಮಾಡಲಾದ ಊಟ ಸಂಪೂರ್ಣ ಖಾಲಿಯಾಗಿದೆ. ಈ ಮೂಲಕ 3ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ ಎನ್ನಲಾಗಿದೆ.
20 ದಿನದಲ್ಲಿ ಜಾಗ ಸ್ವಾಧೀನ..!
ದೇವಸ್ಥಾನದ ಪುಷ್ಕರಣಿಯ ಒಂದು ಭಾಗದಲ್ಲಿ 9ಕ್ಕೂ ಅಧಿಕ ಮನೆಗಳನ್ನು ದೇವಾಲಯದಲ್ಲಿ ಕೆಲಸ ಮಾಡುತ್ತಿದ್ದವರಿಗೆ ವಸತಿಗಾಗಿ ಬಾಡಿಗೆ ಆಧಾರದಲ್ಲಿ ನೀಡಲಾಗಿತ್ತು. ಜ.24ರಂದು ಮೂರು ಮನೆಗಳನ್ನು, ಫೆ.1ರಂದು ಎರಡು ಮನೆಗಳನ್ನು ದೇವಸ್ಥಾನಕ್ಕೆ ಹಿಂದಿರುಗಿಸಿದ್ದರು. ಫೆ. 3ರಂದು ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮತ್ತೊಂದು ಮನೆ ತೆರವಾಗಿತ್ತು. ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಮುಖಂಡನ ಮನೆ ಫೆ.5ರಂದು ಬೆಳಗ್ಗೆ ಕೆಡವಿಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಉಳಿದ ಎರಡು ಮನೆಗಳನ್ನು ಫೆ.11ರಂದು ಕರ ಸೇವೆಯ ಮೂಲಕ ತೆರವು ಮಾಡಲಾಯಿತು.
ಯಾರಿಂದಲೂ ಆಗದ ಕಾರ್ಯ..!
ದೇವಸ್ಥಾನದ ಹಿಂದಿನ ವ್ಯವಸ್ಥಾಪನಾ ಸಮಿತಿಗಳು ದೇವಸ್ಥಾನದ ಜಾಗವನ್ನು ಅನ್ಯ ಉದ್ದೇಶಗಳಿಗೆ ಬಳಸುತ್ತಿದ್ದರೂ ಅದನ್ನು ತಡೆದು ಭೂಮಿಯನ್ನು, ಕಟ್ಟಡವನ್ನು ಮರಳಿ ಪಡೆಯುವ ಕಾರ್ಯಕ್ಕೆ ಪ್ರಯತ್ನ ಪಟ್ಟರೂ ಹಲವು ಅಡಚಣೆಗಳ ಮೂಲಕ ಕಾರ್ಯ ಯಶಸ್ವಿಯಾಗಿರಲಿಲ್ಲ. ಮಾಸ್ಟರ್ ಪ್ಲಾನ್ ಸಿದ್ದವಾದರೂ ಮನೆ ಬಿಟ್ಟುಕೊಡದೆ ನ್ಯಾಯಾಲಯಗಳ ಮೂಲಕ ದೇವಸ್ಥಾನದ ಜಾಗದಲ್ಲಿ ಹಕ್ಕು ಸ್ಥಾಪನೆಗೆ ಕೆಲವು ವ್ಯಕ್ತಿಗಳು ಮುಂದಾಗಿದ್ದರು. ಆದರೆ ಇದೆಲ್ಲವನ್ನು ದೈರ್ಯದಿಂದ ಎದುರಿಸಿದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಜಾಗ ಮರಳಿ ಪಡೆದಿದ್ದಾರೆ.
ಅನೈತಿಕ ಚಟುವಟಿಕೆ ಕೇಂದ್ರ..?
ದೇವಸ್ಥಾನದ ಚಾಕರಿಯವರಿಗೆ ಎಂದು ನೀಡಲಾದ ಮನೆಗಳನ್ನು ಬೇರೆಯವರಿಗೆ ಬಾಡಿಗೆ ನೀಡುವ ಕಾರ್ಯ ನಡೆಯುತ್ತಿತ್ತು. ಕೆಲವು ಸಮಯದಿಂದ ಮನೆಗಳನ್ನು ನಾಯಿ ಸಾಕಣೆ ಸೇರಿ ಬೇರೆ ಬೇರೆ ಉದ್ದೇಶಕ್ಕೆ ಬಳಕೆ ಮಾಡುವ ಕಾರ್ಯವಾಗಿತ್ತು. ಮನೆ ತೆರವಿನ ನಂತರ ಸಿಡಿ, ಮದ್ಯದ ಬಾಟಲು ಸೇರಿ ವಿವಿಧ ವಸ್ತುಗಳು ಸಿಕ್ಕಿರುವುದನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆನ್ನಲಾಗಿದೆ. ಏನೆಲ್ಲ ಸಿಕ್ಕಿದೆ ಎಂಬುದನ್ನು ಹೇಳುವುದಕ್ಕೆ ನಾಚಿಕೆಯಾಗುತ್ತದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳುವ ಮೂಲಕ ಪುಷ್ಠಿನೀಡಿದ್ದಾರೆ.
ಅಭಿವೃದ್ಧಿ ಬಗ್ಗೆ ತಾಂಬೂಲ ಪ್ರಶ್ನೆ:
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ. 16ರಂದು ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ದೇವಳದ ಅಭಿವೃದ್ದಿ ಬಗ್ಗೆ ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ನಡೆಯಲಿದೆ. ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ.ವಿ ಶ್ರೀನಿವಾಸ ವಿನಂತಿಸಿದ್ದಾರೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
ನಿಧನ ವಾರ್ತೆ8 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು6 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ8 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ7 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ7 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ9 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
-
Uncategorized9 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP
-
ಅಂತರ ರಾಜ್ಯ7 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















