ಮಂಗಳೂರು
KDP meeting-ಕೆಡಿಪಿ ಸಭೆಯಲ್ಲಿ ಅಕ್ರಮ ಮರಳುಗಾರಿಕೆ ವಿಚಾರ ಬಿಸಿ ಬಿಸಿ ಚರ್ಚೆ: ಡಿಸಿ, ಪೊಲೀಸ್ ಆಯುಕ್ತ ಹಾಗೂ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳ ಮಧ್ಯೆ ಪರಸ್ಪರ ವಾಗ್ವಾದ; ಅಧಿಕಾರಿಗಳ ಆರೋಪ ಪ್ರತ್ಯಾರೋಪ ಕಂಡು ಪೆಚ್ಚಾದ ಸಚಿವ ಗುಂಡೂರಾವ್
ದ.ಕ. ಜಿಲ್ಲೆಯಾದ್ಯಂತ ಅವ್ಯಾಹತವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಅದನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವುದಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತರಾಟೆಗೈದ ಘಟನೆ ಸೋಮವಾರ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ನಡೆಯಿತು.
ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಅವ್ಯಾಹತವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಅದನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವುದಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತರಾಟೆಗೈದ ಘಟನೆ ಸೋಮವಾರ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ನಡೆಯಿತು.
ಸೋಮವಾರ ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿನಡೆದ ಕೆಡಿಪಿ ತ್ರೈಮಾಸಿಕ ಮುಂದುವರಿದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಯಿಂದಾಗಿ ಸೇತುವೆಗಳ ಪಿಲ್ಲರ್‌ಗಳು ದುರ್ಬಲವಾಗುತ್ತಿವೆ. ಪೊಲೀಸರ ಮಾಹಿತಿಯಡಿಯಲ್ಲೇ ಈ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿದರು.
ಉಸ್ತುವಾರಿ ಸಚಿವರು ಈ ಬಗ್ಗೆ ಅಧಿಕಾರಿಗಳಿಂದ ವಿವರಣೆ ಕೇಳಿದಾಗ, ಪ್ರತಿಕ್ರಿಯಿಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ, ಪೊಲೀಸ್ ಇಲಾಖೆಯಿಂದ ಸರಿಯಾದ ಸಹಕಾರ ಸಿಗುತ್ತಿಲ್ಲ. ಕಾಲ್ ಮಾಡಿದ್ರೆ ರಿಸೀವ್ ಮಾಡಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮೇಲೆ ಆರೋಪ ಹೊರಿಸಿದ್ದಲ್ಲದೇ, ಸಿಬ್ಬಂದಿ ಕೊರತೆಯೂ ಇದೆ ಎಂದಾಗ ಅಸಮಾಧಾನಗೊಂಡ ಸಚಿವ ದಿನೇಶ್ ಗುಂಡೂರಾವ್, ನಿಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಬೇಡಿ. ಸಿಆರ್‌ಝಡ್ ಪ್ರದೇಶದ ಮರಳು ಬೇಕಾಬಿಟ್ಟಿಯಾಗಿ ತೆಯಗೆಯಲಾಗುತ್ತಿದ್ದು, ಅದನ್ನು ನಿಯಂತ್ರಿಸಲು ವಿಫಲರಾಗಿದ್ದೀರಿ. ಹಾಗಾಗಿಯೇ ನಾನ್ ಸಿಆರ್‌ಝಡ್ ಪ್ರದೇಶ ಮರಳಿಗೆ ಬೇಡಿಕೆ ಇಲ್ಲವಾಗಿದೆ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಹಿಂದೆ ನಡೆದ ಸಭೆಯ ನಡವಳಿಗೆ ಸಹಿ ಕೂಡಾ ಹಾಕಿಲ್ಲ ಎಂದು ಸಚಿವರು ಆಕ್ಷೇಪಿಸಿದರು.
ಈ ಕುರಿತು ಅಧಿಕಾರಿಗಳ ನಡುವೆ ಪರಸ್ಪರ ವಾಗ್ವಾದ ನಡೆದಾಗ ಪ್ರತಿಕ್ರಿಯಿಸಿದ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಅಕ್ರಮ ಮರಳುಗಾರಿಕೆ ನಿಯಂತ್ರಣ ತಡೆಯುವ ಕಾರ್ಯ ನಡೆಸಬೇಕಾಗಿರುವುದು ಗಣಿ ಮತ್ತು ಭೂವಿಜ್ಞಾನ ಇಲಾಖೆ. ಅವರು ಬಂದಿಲ್ಲ, ಇವರು ಮಾಡಿಲ್ಲ ಎಂದು ದೂರು ನೀಡುವ ಬದಲು ಮೊದಲು ಅಕ್ರಮ ಮರಳುಗಾರಿಕೆ ನಿಯಂತ್ರಣದ ಜವಾಬ್ದಾರಿ ಹೊಂದಿರುವ ಇಲಾಖೆಯ ಅಧಿಕಾರಿಯಾಗಿ ಜಿಲ್ಲಾಧಿಕಾರಿ ಸಭೆಯ ನಡಾವಳಿಗೆ ಸಹಿ ಹಾಕುವಂತೆ ತಾಕೀತು ಮಾಡಿದರು.
ಪೊಲೀಸರು ಕೂಡಾ ಅಕ್ರಮ ಮರಳುಗಾರಿಕೆ ಬಗ್ಗೆ ಸಕ್ರಿಯವಾಗಿ ಕಠಿಣ ಕ್ರಮ ವಹಿಸಬೇಕು ಎಂದು ಉಸ್ತುವಾರಿ ಸಚಿವರು ಸೂಚಿಸಿದಾಗ, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಪ್ರತಿಕ್ರಿಯಿಸಿ, ನನ್ನ ಮೊಬೈಲ್ ನೋಡಿ, ಒಂದೇ ಕಾಲ್ ಬಂದಿಲ್ಲ,ಪರ್ಸನಲ್ ನಂಬರ್ ಕೊಟ್ಟಿದ್ದೇನೆ ಎಂದು ಕಮೀಷನರ್, ಕೃಷ್ಣವೇಣಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಇಲಾಖೆಗೆ ಸಂಬಂಧಪಟ್ಟವರು ಸೂಕ್ತ ಮಾಹಿತಿ ನೀಡಿದರೆ, ಸಹಯೋಗ ನೀಡಲು ನಾವು ಸಿದ್ಧ ಎಂದರು. ಮರಳು ಸಾಗಾಟದ ವಾಹನ ವಶಪಡಿಸಿಕೊಂಡರೂ ಲೋಕ ಅದಾಲತ್‌ಗಳಲ್ಲಿ ಐದು ಸಾವಿರದಿಂದ 10 ಸಾವಿರ ದಂಡ ವಿಧಿಸಿ ಬಿಡಲಾಗುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಅಧಿಕಾರಿಗಳ ಆರೋಪ ಪ್ರತ್ಯಾರೋಪ ಕಂಡು ಪೆಚ್ಚಾದ ಸಚಿವ ಗುಂಡೂರಾವ್ ಅವರು ಕೃಷ್ಣವೇಣಿ ಮತ್ತು ಅನುಪಮ್ ಅಗರ್ವಾಲ್ ಅವರಿಗೆ ಎಲ್ಲವನ್ನೂ ಸರಿ ಮಾಡಿಕೊಂಡು ಹೋಗಿ ಎಂದು ಸಚಿವ ಗುಂಡೂರಾವ್ ತಿಳಿಸಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪುಂಜಾ ಪ್ರತಿಕ್ರಿಯಿಸಿ, ನಾನ್‌ಸಿಆರ್‌ಝಡ್ ವ್ಯಾಪ್ತಿಯ ಮರಳು ಬ್ಲಾಕ್ ಬ್ಲಾಕ್‌ಗಳ ವಿಲೇಯನ್ನು ಗ್ರಾ.ಪಂ.ಗಳಿಗೆ ಹಸ್ತಾಂತರಿಸಬೇಕು. ಇದರಿಂದ ಗ್ರಾಪಂಗೆ ಆದಾಯವೂ ಬರಲಿದೆ ಎಂದರು.
ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರನ್ನು ಸಹ ಈ ಸಂದರ್ಭದಲ್ಲಿ ಕೃಷ್ಣವೇಣಿ ಅವರು ದೂರಿದ್ದು ಕೃಷರ್,ಬಿಲ್ಡರ್, ಲಾರಿ ಮಾಲಕರ ಸಭೆ ಕರೆಯೋಣ ಅಂದ್ರೂ ಡಿಸಿ ಕೇಳಿಲ್ಲ. ಕಾರಣ ಇಲ್ಲದೇ ಸಭೆಗಳನ್ನು ಡಿಸಿ ಮುಂದೂಡಿದ್ದಾರೆ ಎಂದು ದೂರಿದ ಕೃಷ್ಣವೇಣಿ ವಿರುದ್ಧ ಡಿಸಿ ಗರಂ ಆಗಿ ಚೀಪ್ ಆಗಿ ಮಾತನಾಡಬೇಡಿ,ಈ ಸಭೆಯಲ್ಲಿ ಚರ್ಚೆ ಮಾಡಲು ಇಷ್ಟ ಇಲ್ಲ ಎಂದು ತಿಳಿಸಿದರು.
ರಾಷ್ಟ್ರೀಯ ಹಸಿರು ಪೀಠ (ಎನ್‌ಜಿಟಿ) ನಿರ್ದೇಶನದ ಮೇರೆಗೆ ಕಳೆದ ನಾಲ್ಕು ವರ್ಷಗಳಿಂದ ಸಿಆರ್‌ಝಡ್ ಪ್ರದೇಶಗಳಿಂದ ಮರಳು ತೆಗೆಯಲು ಸಾಧ್ಯವಾಗುತಿಲ್ಲ. ಸಾಂಪ್ರದಾಯಿಕ ವಿಧಾನ ಬಳಸಿ ಸಿಆರ್‌ಝಡ್‌ನ ಮರಳು ಬ್ಲಾಕ್‌ಗಳನ್ನು ತೆರವುಗೊಳಿಸಲು ಅನುಮತಿ ಕೋರಿ ರಾಜ್ಯ ಸಮಿತಿ ಈಗಾಗಲೇ ಸಿಆರ್‌ಝಡ್ ನಿಯಮಗಳನ್ನು ಕೇಂದ್ರಕ್ಕೆ ಕಳುಹಿಸಿದೆ. ಕೇಂದ್ರ ಸರಕಾರ ಸಿಆರ್‌ಝಡ್ ನಿಯಮಗಳ ಅಧಿಸೂಚನೆ ಹೊರಡಿಸಿದರೆ, ಮರಳು ತೆಗೆಯುವ ನಿರ್ಬಂಧ ಬಗೆಹರಿಯಲಿದೆ. ಕೇಂದ್ರದ ಅಧಿಸೂಚನೆಗೆ ಎದುರು ನೋಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿದರು.
ಬೇರೆ ರಾಜ್ಯಗಳಲ್ಲಿ ಸಿಆರ್‌ಝಡ್‌ನಲ್ಲಿ ಮರಳುಗಾರಿಕೆಗೆ ಅನುಮತಿಸಲಾಗಿದೆ. ಇಲ್ಲಿಗೆ ಯಾಕೆ ಸಾಧ್ಯವಾಗಿಲ್ಲ ಎಂದು ತಿಳಿದುಕೊಳ್ಳಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.
ನಾನ್ ಸಿಆರ್‌ಝಡ್‌ನಡಿ 27 ಮರಳು ಬ್ಲಾಕ್‌ಗಳಿದ್ದು ಒಂಬತ್ತು ಬ್ಲಾಕ್‌ಗಳ ಗುತ್ತಿಗೆ ಅವಧಿ ಮುಗಿದಿದೆ. ಅಕ್ರಮ ಮರಳುಗಾರಿಕೆ ತಡೆಗೆ ಸಂಬಂಧಿಸಿ 60 ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಗೆ ಸಂಬಂಧಿಸಿ 107 ಪ್ರಕರಣ ದಾಖಲಿಸಿದ್ದು, 98 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಅಪರಾಧ
Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್ ಅಧಿಕಾರಿ ಸಂದೀಪ್ ರಾವ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್ ಗೋಯಲ್ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.
ಬಳಿಕ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ವಾಟ್ಸ್‌ಆ್ಯಪ್ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್ ಪವಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್ ಸೀಕ್ರೆಸಿ ಆ್ಯಕ್ಟ್’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.
ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.
ಸೈಬರ್ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
-
Uncategorized20 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್14 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು18 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ18 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
Uncategorized19 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ19 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ18 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್19 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















