ಹೆಗ್ಗಡೆಯವರ ಪುರಾತನ ವಸ್ತುಗಳ ಸಂಗ್ರಹಗಳ ಜೊತೆಗೆ ಮೂಡಿಗೆರೆಯ ಎಂ. ಎಲ್. ಅಶೋಕ್ ಅವರು ಸಂಗ್ರಹಿಸಿದ ಪ್ರಾಚೀನ ಕಾಲದ […]" /> ಹೆಗ್ಗಡೆಯವರ ಪುರಾತನ ವಸ್ತುಗಳ ಸಂಗ್ರಹಗಳ ಜೊತೆಗೆ ಮೂಡಿಗೆರೆಯ ಎಂ. ಎಲ್. ಅಶೋಕ್ ಅವರು ಸಂಗ್ರಹಿಸಿದ ಪ್ರಾಚೀನ ಕಾಲದ […]"> Dharmasthala-ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ - Nikhara News | Kannada News Website
Connect with us

ಸ್ಥಳೀಯ

Dharmasthala-ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Published

on

Ad Widget

Ad Widget

Ad Widget

Ad Widget

ಪ್ರಾಚೀನ ಕಾಲದ ನಾಣ್ಯಗಳು ನೋಡಲು ಸಿಗುವುದು ಅಪರೂಪ. ಅಂತಹ ನಾಣ್ಯಗಳನ್ನು ನೋಡುವುದರ ಜೊತೆಗೆ ಅವುಗಳ ಬಗ್ಗೆ ಮಾಹಿತಿ ಪಡೆಯುವ ವ್ಯವಸ್ಥೆಯನ್ನು ಧರ್ಮಸ್ಥಳದ ಮಂಜೂಷಾ ಮ್ಯೂಸಿಯಂನಲ್ಲಿ ಅಚ್ಚುಕಟ್ಟಾಗಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಪ್ರಾಚೀನ ಕಾಲದ ನಾಣ್ಯಗಳು ನೋಡಲು ಸಿಗುವುದು ಅಪರೂಪ. ಅಂತಹ ನಾಣ್ಯಗಳನ್ನು ನೋಡುವುದರ ಜೊತೆಗೆ ಅವುಗಳ ಬಗ್ಗೆ ಮಾಹಿತಿ ಪಡೆಯುವ ವ್ಯವಸ್ಥೆಯನ್ನು ಧರ್ಮಸ್ಥಳದ ಮಂಜೂಷಾ ಮ್ಯೂಸಿಯಂನಲ್ಲಿ ಅಚ್ಚುಕಟ್ಟಾಗಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಹೆಗ್ಗಡೆಯವರ ಪುರಾತನ ವಸ್ತುಗಳ ಸಂಗ್ರಹಗಳ ಜೊತೆಗೆ ಮೂಡಿಗೆರೆಯ ಎಂ. ಎಲ್. ಅಶೋಕ್ ಅವರು ಸಂಗ್ರಹಿಸಿದ ಪ್ರಾಚೀನ ಕಾಲದ ನಾಣ್ಯಗಳ ಪ್ರದರ್ಶನವನ್ನು ಆಯೋಜಿಸಿದ್ದು ಶಾಲಾ ಮಕ್ಕಳಿಗೆ, ಆಸಕ್ತರಿಗೆ ನಾಣ್ಯಗಳ ಮೂಲಕ ಇತಿಹಾಸವನ್ನು ತಿಳಿದುಕೊಳ್ಳಲು ಇರುವ ಅವಕಾಶವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ಹೇಳಿದರು.

Ad Widget

Ad Widget <> Ad Widget

ಅವರು ಧರ್ಮಸ್ಥಳದ ಮಂಜೂಷಾ ಮ್ಯೂಸಿಯಂನಲ್ಲಿ ಫೆ. 17ರಿಂದ ಮಾರ್ಚ್ 1ರವರೆಗೆ ನಡೆಯಲಿರುವ ಪ್ರಾಚೀನ ಕಾಲದ ನಾಣ್ಯ ಹಾಗೂ ಅಂಚೆ ಚೀಟಿಗಳ ವಿಶೇಷ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ನಾಣ್ಯಗಳ ಸಂಗ್ರಹಕಾರರಾದ ಮೂಡಿಗೆರೆಯ ಎಂ. ಎಲ್. ಅಶೋಕ್ ಮಾತನಾಡಿ ನನ್ನ ಪ್ರಾಚೀನ ವಸ್ತುಗಳ ಸಂಗ್ರಹಕ್ಕೆ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಮಂಜೂಷಾ ವಸ್ತು ಸಂಗ್ರಹಾಲಯವೇ ಪ್ರೇರಣೆ. ಅವಕಾಶ ಮಾಡಿಕೊಟ್ಟ ಪೂಜ್ಯರಿಗೆ ಹಾಗೂ ಮಂಜೂಷಾದ ಸಿಬಂದಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ.

Ad Widget

Ad Widget

ಪ್ರಾಚೀನ ಭಾರತದಿಂದ ಆರಂಭಗೊಂಡು ಮೊನ್ನೆ ಮೊನ್ನೆಯಷ್ಟೇ ಬಿಡುಗಡೆಗೊಂಡ ನಾಣ್ಯಗಳವರೆಗೆ ಸಂಗ್ರಹಿಸಲಾದ 1000ಕ್ಕೂ ಹೆಚ್ಚಿನ ನಾಣ್ಯಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ವಿವಿಧ ರಾಜ-ಮಹಾರಾಜರ ಕಾಲ, ಸ್ವಾತಂತ್ರ್ಯ ಪೂರ್ವ, ಸ್ವತಂತ್ರ ಭಾರತದ ಕಾಲದಿಂದ ಹಿಡಿದು ವಿಶೇಷ ಸಂದರ್ಭಗಳಲ್ಲಿ ಸರಕಾರವು ಬಿಡುಗಡೆಗೊಳಿಸಿದ ನಾಣ್ಯಗಳು, ಅಂಚೆ ಚೀಟಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಚಿನ್ನ, ಬೆಳ್ಳಿ, ತಾಮ್ರ ಹೀಗೆ ಹಲವು ರೀತಿಯ ನಾಣ್ಯಗಳನ್ನು ನೋಡಬಹುದು ಎಂದು ಹೇಳಿದರು.

ಧರ್ಮಸ್ಥಳದಲ್ಲಿರುವ ಮಂಜೂಷಾ ಮ್ಯೂಸಿಯಂನಲ್ಲಿ ವೀರೇಂದ್ರ ಹೆಗ್ಗಡೆಯವರ ಸಂಗ್ರಹಗಳ ಪ್ರದರ್ಶನದ ಜೊತೆಗೆ ವಿವಿಧ ಚಟುವಟಿಕೆ, ಕಾರ್ಯಾಗಾರಗಳ ಮೂಲಕ ಶಾಲಾ ಮಕ್ಕಳಿಗೆ, ಆಸಕ್ತರಿಗೆ ಪುರಾತನ ವಸ್ತುಗಳ ಮಾಹಿತಿ ಒದಗಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಸ್ತು ಸಂಗ್ರಹಾಲಯವು  ಜ್ಞಾನ ಹೆಚ್ಚಿಸುವುದರ ಜೊತೆಗೆ ಪ್ರಾಚೀನ ವಸ್ತುಗಳ ಬಗ್ಗೆ ಅರಿವು ಮೂಡಿಸಿ, ಇನ್ನಷ್ಟು ಆಸಕ್ತಿ, ಕುತೂಹಲ ಹೆಚ್ಚಲು ಪ್ರೇರಣೆಯಾಗಿವೆ ಎಂದು  ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ. ವೀರು ಶೆಟ್ಟಿ ಹೇಳಿದರು.

ಈ ಸಂದರ್ಭದಲ್ಲಿ ಮಂಜೂಷಾ ವಸ್ತು ಸಂಗ್ರಹಾಲಯದ ಉಪ ನಿರ್ದೇಶಕ ರಿತೇಶ್ ಶರ್ಮಾ ಎಸ್‌ಡಿಎಂ ಸಂಸ್ಕೃತಿ ಮತ್ತು ಸಂಶೋಧನಾ ಪ್ರತಿಷ್ಠಾನದ ಡಾ. ಪವನ್ ಕುಮಾರ್, ಶ್ರೀಕ್ಷೇತ್ರ ಧರ್ಮಸ್ಥಳ ಐಟಿ ವಿಭಾಗ ಮುಖ್ಯಸ್ಥ ಮಲ್ಲಿನಾಥ್ ಜೈನ್ ಹಾಗೂ ಇತರ ಸಿಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!