ಎಚ್‌ಡಿಕೆ ಹಾಗೂ ಅವರ ಕುಟುಂಬದವರು ಜಮೀನು ಹೊಂದಿದ್ದು, ಈ ಜಮೀನಿನ ಜತೆಗೆ ಅಕ್ಕಪಕ್ಕ ಇದ್ದ ಸರ್ಕಾರಿ ಜಮೀನು […]" /> ಎಚ್‌ಡಿಕೆ ಹಾಗೂ ಅವರ ಕುಟುಂಬದವರು ಜಮೀನು ಹೊಂದಿದ್ದು, ಈ ಜಮೀನಿನ ಜತೆಗೆ ಅಕ್ಕಪಕ್ಕ ಇದ್ದ ಸರ್ಕಾರಿ ಜಮೀನು […]"> HD Kumaraswamy-ಕೇಂದ್ರ ಸಚಿವ ಕುಮಾರಸ್ವಾಮಿಗೆ ಸಂಕಷ್ಟ : ಹೈಕೋರ್ಟ್ ಚಾಟಿ ಬೆನ್ನಲ್ಲೇ ಭೂ ಅತಿಕ್ರಮಣ ಆರೋಪದ ಕೇತಗಾನಹಳ್ಳಿ ಜಮೀನು ಸರ್ವೆಗೆ ಚಾಲನೆ - Nikhara News | Kannada News Website
Connect with us

ಸ್ಥಳೀಯ

HD Kumaraswamy-ಕೇಂದ್ರ ಸಚಿವ ಕುಮಾರಸ್ವಾಮಿಗೆ ಸಂಕಷ್ಟ : ಹೈಕೋರ್ಟ್ ಚಾಟಿ ಬೆನ್ನಲ್ಲೇ ಭೂ ಅತಿಕ್ರಮಣ ಆರೋಪದ ಕೇತಗಾನಹಳ್ಳಿ ಜಮೀನು ಸರ್ವೆಗೆ ಚಾಲನೆ

Published

on

Ad Widget

Ad Widget

Ad Widget

Ad Widget

ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆ ಅಧಿಕಾರಿಗಳು ಕೇತಗಾನಹಳ್ಳಿಯಲ್ಲಿರುವ ಅವರ ಜಮೀನಿನಲ್ಲಿ ಸರ್ವೆ ಮಾಡಲು ಮುಂದಾಗಿದ್ದಾರೆ.

Ad Widget

Ad Widget

Ad Widget

Ad Widget

ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆ ಅಧಿಕಾರಿಗಳು ಕೇತಗಾನಹಳ್ಳಿಯಲ್ಲಿರುವ ಅವರ ಜಮೀನಿನಲ್ಲಿ ಸರ್ವೆ ಮಾಡಲು ಮುಂದಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಎಚ್‌ಡಿಕೆ ಹಾಗೂ ಅವರ ಕುಟುಂಬದವರು ಜಮೀನು ಹೊಂದಿದ್ದು, ಈ ಜಮೀನಿನ ಜತೆಗೆ ಅಕ್ಕಪಕ್ಕ ಇದ್ದ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ಸಂಬಂಧ ಹೈಕೋರ್ಟ್, ತ್ವರಿತವಾಗಿ ಸರ್ವೆ ಮಾಡಿ ವರದಿ ಸಲ್ಲಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿತ್ತು.

Ad Widget

Ad Widget <> Ad Widget

ಈ ಹಿನ್ನೆಲೆ ಸೋಮವಾರ ಕಂದಾಯ ಇಲಾಖೆಯ ಅಧಿಕಾರಿಗಳು, ಸರ್ವೆ ಇಲಾಖೆ ಅಧಿಕಾರಿಗಳು ಹಾಗೂ ಎಸ್‌ಐಟಿ ಅಧಿಕಾರಿಗಳ ತಂಡ ಗ್ರಾಮಕ್ಕೆ ತೆರಳಿ ಸರ್ವೆ ಮಾಡಲು ಮುಂದಾಗಿದೆ.

ಆಧುನಿಕ ಅಳತೆ ಸಾಧನಗಳೊಂದಿಗೆ 10ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಸರ್ವೆ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಮೊದಲಿಗೆ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಅವರಿಗೆ ಸೇರಿದ ಭೂಮಿಯ ಸರ್ವೆ ಆರಂಭಿಸಿದ್ದಾರೆ. ನಂತರ ಕುಮಾರಸ್ವಾಮಿ ಸೇರಿ ಇನ್ನಿತರ ಜಮೀನುಗಳ ಸರ್ವೇ ನಡೆಸಲಿದ್ದಾರೆ.

Ad Widget

Ad Widget

ಎಚ್ಚೆತ್ತ ರಾಜ್ಯ ಸರ್ಕಾರ:
ಹೈಕೋರ್ಟ್‌ನಿಂದ ಸ್ಪಷ್ಟ ನಿರ್ದೇಶನ ಬಂದಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಫೆಬ್ರವರಿಯಲ್ಲಿ ಬೆಂಗಳೂರು ವಿಭಾಗ ಪ್ರಾದೇಶಿಕ ಆಯುಕ್ತ ಅಮ್ಹಾನ್ ಆದಿತ್ಯ ಬಿಸ್ವಾಸ್‌ ಅಧ್ಯಕ್ಷತೆಯಲ್ಲಿ ನಾಲ್ವರು ಸದಸ್ಯರ ಎಸ್‌ಐಟಿ ರಚನೆ ಮಾಡಿತ್ತು. ಈ ತಂಡ ಸೋಮವಾರ ಕೇತುಗಾನಹಳ್ಳಿಗೆ ತೆರಳಿ ಸರ್ವೇ ಕೆಲಸದಲ್ಲಿ ತೊಡಗಿದೆ.

14 ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಚಿಕ್ಕಮ್ಮ ಸಾವಿತ್ರಮ್ಮ, ಸಂಬಂಧಿಕರಾದ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಮತ್ತಿತರರು ಕೇತಗಾನಹಳ್ಳಿಯಲ್ಲಿ ಜಮೀನು ಹೊಂದಿದ್ದಾರೆ. ಇದರ ಸುತ್ತಮುತ್ತವಿರುವ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸರ್ವೆ ಮಾಡುವಂತೆ ಹೈಕೋರ್ಟ್ ಆದೇಶ
ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಅವರ ಜಮೀನುಗಳ ಅಕ್ಕಪಕ್ಕ ಇದ್ದ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕಂದಾಯ ಇಲಾಖೆಗೆ ಸಾಮಾಜಿಕ ಹೋರಾಟಗಾರ ಎಸ್. ಆರ್. ಹಿರೇಮಠ ದೂರು ನೀಡಿದ್ದರು. ಆದರೆ, ಅಧಿಕಾರಿಗಳು ಯಾವುದೇ ಕ್ರಮ ವಹಿಸಿರಲಿಲ್ಲ. ಹಾಗಾಗಿ ಹಿರೇಮಠ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣದ ತನಿಖೆ ನಡೆಸಿದ ನ್ಯಾಯಪೀಠವು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಕೂಡಲೇ ಸರ್ವೇ ಮಾಡಿ ಒತ್ತುವರಿ ತೆರವು ಮಾಡಲು ಜನವರಿಯಲ್ಲಿ ಆದೇಶಿಸಿ ಎರಡು ವಾರ ಗಡುವು ನೀಡಿತ್ತು.

Ad Widget
Click to comment

Leave a Reply

ಬಿಗ್ ನ್ಯೂಸ್

High Court notice-ಜಾರಿಯಾಗದ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Published

on

Ad Widget

Ad Widget

Ad Widget

Ad Widget

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಧನಕೀರ್ತಿ ಅರಿಗ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

Ad Widget

Ad Widget <> Ad Widget

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎನ್. ವಿನಯ್ ವಾದ ಮಂಡಿಸಿ, ಪ್ರಕರಣದ 10ನೇ ಪ್ರತಿವಾದಿಯಾಗಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಈಗಾಗಲೇ ಗಡೀಪಾರು ಆದೇಶ ಹೊರಡಿಸಲಾಗಿದೆ. ಆದರೆ, ಈ ಆದೇಶವನ್ನು ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾಗಿದ್ದರೂ ಅದನ್ನು ಇನ್ನೂ ಜಾರಿಗೊಳಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು, ಪ್ರಕರಣದ 1ರಿಂದ 9ನೇ ಪ್ರತಿವಾದಿಗಳಾಗಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಎಡಿಜಿಪಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಡಿವೈಎಸ್ಪಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.

Ad Widget

Ad Widget

ಪ್ರತಿವಾದಿಗಳ ಪರವಾಗಿ ಸರಕಾರಿ ವಕೀಲರು ನೋಟಿಸ್ ಸ್ವೀಕರಿಸಿದರು. ಇನ್ನು ಮೂರು ದಿನಗಳೊಳಗೆ ನೋಟಿಸ್ ಜಾರಿಗೆ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಿತು.

ನೋಟಿಸ್‌ಗೆ ಉತ್ತರ ಸಲ್ಲಿಸಲು ಡಿಸೆಂಬರ್ 16ರವರೆಗೆ ಕಾಲಾವಕಾಶ ನೀಡಿರುವ ನ್ಯಾಯಾಲಯ, ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ.16ಕ್ಕೆ ನಿಗದಿಪಡಿಸಿದೆ.

Ad Widget
Continue Reading

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ನಾಳೆ ದೇವಸ್ಥಾನ ವಠಾರದಲ್ಲಿ ಕಾರ್ಯಾಲಯ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಕಟೀಲ್ ಲಾಜಿಸ್ಟಿಕ್ಸ್ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಅವರು ಕಾರ್ಯಾಲಯವನ್ನು ಉದ್ಘಾಟಿಸಲಿದ್ದು, ಉದ್ಯಮಿಗಳಾದ ರಾಧಾಸ್‌ನ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲುಗುತ್ತು ಹಾಗೂ ದರ್ಬೆ ಕಾರ್ತಿಕ್ ಮೆಡಿಕಲ್ಸ್‌ನ ವೇಣುಗೋಪಾಲ್ ಪಿ.ಎಲ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Ad Widget

Ad Widget <> Ad Widget

ವಿಜಯ ಬ್ಯಾಂಕ್‌ನ ನಿವೃತ್ತ ಎ.ಜಿ.ಎಂ. ಜಗಜೀವನದಾಸ್ ರೈ, ವಿಜಯ ಬ್ಯಾಂಕ್‌ನ ನಿವೃತ್ತ ಪ್ರಬಂಧಕ ಜೈರಾಜ್ ಭಂಡಾರಿ ನೋಣಾಲು ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಗೌರವ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸುವಂತೆ ಪುತ್ತೂರು ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಿನಂತಿಸಿದ್ದಾರೆ.

Continue Reading

ಮಂಗಳೂರು

Mangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ

Published

on

Ad Widget

Ad Widget

Ad Widget

Ad Widget

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಟೀ ಸ್ಟಾಲ್‌ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು, ನ.23: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಟೀ ಸ್ಟಾಲ್‌ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಆದೇಶದ ಪ್ರಕಾರ, ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ವ್ಯಾಪಾರಿಕ ಸಂಸ್ಥೆಗಳು ಪ್ರತಿದಿನ ರಾತ್ರಿ 11:45ರಿಂದ ಮಾರನೇ ದಿನ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟು ನಡೆಸುವಂತಿಲ್ಲ. ಈ ನಿರ್ಬಂಧವು ಸಿಎಲ್-4, ಸಿಎಲ್-6(ಎ) ಹಾಗೂ ಸಿಎಲ್-7 ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ. ಅಂತಹ ಸಂಸ್ಥೆಗಳು ತಮ್ಮ ಪರವಾನಗಿಯಲ್ಲಿ ನಿಗದಿಪಡಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Ad Widget

Ad Widget <> Ad Widget

ಆಸ್ಪತ್ರೆಗಳು, ಔಷಧ ಅಂಗಡಿಗಳು, ತುರ್ತು ಸೇವೆಗಳು, ಅಗತ್ಯ ಸಾರ್ವಜನಿಕ ಉಪಯೋಗಿತಾ ಸೇವೆಗಳು ಹಾಗೂ ಸರಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರಗಳಿಂದ ವಿಶೇಷ ಅನುಮತಿ ಪಡೆದ ಸಂಸ್ಥೆಗಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ನಿರ್ಬಂಧಕ್ಕೆ ಕಾರಣವೇನು?
ಮಂಗಳೂರು ನಗರವು ಕರಾವಳಿ ಕರ್ನಾಟಕದ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಹಾಗೂ ಬಂದರು ನಗರವಾಗಿದ್ದು, ವಿವಿಧ ಧರ್ಮ, ಜಾತಿ ಮತ್ತು ಸಮುದಾಯಗಳ ಜನರು ಸಹಬಾಳ್ವೆಯಿಂದ ನೆಲೆಸಿರುವ ಕೋಮು ಸೂಕ್ಷ್ಮ ಪ್ರದೇಶವಾಗಿದೆ. ನಗರದ ಹಲವು ಭಾಗಗಳಲ್ಲಿ ತಡರಾತ್ರಿಯವರೆಗೂ, ಕೆಲವೆಡೆ ಬೆಳಗಿನ ಜಾವದವರೆಗೂ ವ್ಯಾಪಾರ ವಹಿವಾಟು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಮಾದಕ ವ್ಯಸನ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವುದು ಮತ್ತು ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Ad Widget

Ad Widget

ರಾತ್ರಿ ವೇಳೆ ಅನಗತ್ಯವಾಗಿ ಜನರು ಗುಂಪುಗೂಡುವುದು, ಓಡಾಟ ನಡೆಸುವುದು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಹರಡುವ ವದಂತಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ವ್ಯಾಪಾರ ಕೇಂದ್ರಗಳು ರಾತ್ರಿ ಪೂರ್ತಿ ತೆರೆದಿರುವುದರಿಂದ ಜನಸಂದಣಿ ಹೆಚ್ಚಾಗಿ ಅಹಿತಕರ ಘಟನೆಗಳಿಗೆ ಕಾರಣವಾಗುವ ಅಪಾಯವೂ ಇದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ರಾತ್ರಿ ವೇಳೆ ಅಂಗಡಿಗಳು, ಹೋಟೆಲ್‌ಗಳು ಹಾಗೂ ಇತರ ವ್ಯಾಪಾರ ಕೇಂದ್ರಗಳ ಸುತ್ತಮುತ್ತ ಮಾದಕ ವ್ಯಸನಿಗಳು, ಸಮಾಜಘಾತಕ ವ್ಯಕ್ತಿಗಳು ಮತ್ತು ಅನುಮಾನಾಸ್ಪದ ವ್ಯಕ್ತಿಗಳು ಅನಗತ್ಯವಾಗಿ ಓಡಾಡುವುದು, ಕಾಲಹರಣ ಮಾಡುವುದು ಕಂಡುಬರುತ್ತಿದ್ದು, ಇಂತಹ ಪರಿಸ್ಥಿತಿಗಳು ಅಪರಾಧ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ವ್ಯಾಪಾರ ಕೇಂದ್ರಗಳ ಸುತ್ತ ವಾಹನಗಳ ನಿಲುಗಡೆ, ಜೋರಾದ ಶಬ್ದ, ರಸ್ತೆಗಳಲ್ಲಿ ಅನಗತ್ಯ ಗುಂಪುಗೂಡುವಿಕೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ವಿಶೇಷವಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ವಸತಿ ಪ್ರದೇಶಗಳ ನಿವಾಸಿಗಳ ನೆಮ್ಮದಿ ಮತ್ತು ಶಾಂತಿಗೆ ಭಂಗ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!