Connect with us

ಮಂಗಳೂರು

Dr. M.N. Rajendra Kumar-ಮಂಗಳೂರು: ಡಾ. ಎಂ.ಎನ್. ರಾಜೇಂದ್ರ ಕುಮಾ‌ರ್ 76ನೇ ಜನ್ಮದಿನ ಸಂಭ್ರಮ; ಫೆ. 24: ಅಭಿವಂದನಾ ಕಾರ್ಯಕ್ರಮ, 76 ಮಂದಿಗೆ ಸವಲತ್ತು ವಿತರಣೆ

Published

on



Ad Widget

Ad Widget

Ad Widget

Ad Widget

ನಾಡಿನ ಖ್ಯಾತ ಸಹಕಾರಿ ಧುರೀಣರಾಗಿ ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಶ್ರಮಿಸುತ್ತಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಜನ್ಮದಿನದ ಅಂಗವಾಗಿ ಫೆ. 24ರಂದು ಅಭಿವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅಭಿನಂದನ ಸಮಿತಿ ಅಧ್ಯಕ್ಷ ಐಕಳಬಾವ ದೇವಿಪ್ರಸಾದ ಶೆಟ್ಟಿ ಬೆಳವು ತಿಳಿಸಿದರು.

Ad Widget

Ad Widget

Ad Widget

Ad Widget

ಮಂಗಳೂರು, ಫೆ.18: ನಾಡಿನ ಖ್ಯಾತ ಸಹಕಾರಿ ಧುರೀಣರಾಗಿ ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಶ್ರಮಿಸುತ್ತಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಜನ್ಮದಿನದ ಅಂಗವಾಗಿ ಫೆ. 24ರಂದು ಅಭಿವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅಭಿನಂದನ ಸಮಿತಿ ಅಧ್ಯಕ್ಷ ಐಕಳಬಾವ ದೇವಿಪ್ರಸಾದ ಶೆಟ್ಟಿ ಬೆಳವು ತಿಳಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಫೆ. 24ರಂದು ಬೆಳಗ್ಗೆ 10.30ಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಭಿನಂದನ ಕಾರ್ಯಕ್ರಮ ಜತೆಗೆ ಸವಲತ್ತುಗಳ ವಿತರಣೆ ನಡೆಯಲಿದೆ. ನಾವು 76ನೇ ಹುಟ್ಟುಹಬ್ಬವನ್ನು ವೈಭವದಿಂದ ನೆಹರೂ ಮೈದಾನದಲ್ಲಿ ಆಚರಿಸುವ ಉದ್ದೇಶ ಹೊಂದಿದ್ದೆವು. ಆದರೆ ಡಾ. ಎಂಎನ್ ಆರ್ ಅವರು ಸರಳವಾಗಿ ಹುಟ್ಟುಹಬ್ಬ ಆಚರಿಸಲು ಹೇಳಿರುವುದರಿಂದ ಬ್ಯಾಂಕ್ ಸಭಾಂಗಣದಲ್ಲೇ ಅರ್ಥಪೂರ್ಣವಾಗಿ ಏರ್ಪಡಿಸಲಾಗಿದೆ ಎಂದರು.

Ad Widget

Ad Widget <> Ad Widget

ಸಹಕಾರಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ ಅವಿಭಜಿತ ದಕ.
ಜಿಲ್ಲೆಯಲ್ಲಿ ಹೊಸ ಕ್ರಾಂತಿ ಸೃಷ್ಟಿಸಿರುವ ಡಾ.ಎಂಎನ್ ಆರ್ ಅವರು ಸಹಕಾರಿ ಗಳೆಲ್ಲರಿಗೂ ಆದರ್ಶ ಪ್ರಾಯರು, ಅವರ ಹುಟ್ಟುಹಬ್ಬದ ನಿಮಿತ್ತ 76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ನಡೆಯಲಿದೆ ಎಂದರು.



Ad Widget

ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಮಸ್ತ ಸಹಕಾರಿಗಳ ಪರವಾಗಿ ಡಾ. ಎಂಎನ್ಆರ್ ಅಭಿವಂದನೆ ಸ್ವೀಕರಿಸಲಿದ್ದು ನಿಟ್ಟೆ ಸಂಸ್ಥೆಗಳ ಅಧ್ಯಕ್ಷ ಎನ್.ವಿನಯ ಹೆಗ್ಡೆ ಅಭಿವಂದಿಸುವರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿವಂದನ ಭಾಷಣ ಮಾಡಲಿದ್ದಾರೆ.

Ad Widget

Ad Widget

ಸಂಸದ ಕ್ಯಾ. ಬ್ರಿಜೇಶ್ ಚೌಟ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಿದ್ದರೆ ಶಾಸಕ ವೇದವ್ಯಾಸ ಕಾಮತ್‌ ಅಧ್ಯಕ್ಷತೆ ವಹಿಸಲಿರುವರು.

ಎಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇ ಶಕರಾದ ಭಾಸ್ಕರ ಎಸ್.ಕೋಟ್ಯಾನ್, ಜಯರಾಜ್ ರೈ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾ‌ರ್ ರೈ ಬಾಲ್ಗೊಟ್ಟು ಉಡುಪಿ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಎಸ್‌ ಸಿಡಿಸಿಸಿ ಬ್ಯಾಂಕ್ ಸಿಇಒ ಗೋಪಿನಾಥ ಭಟ್ ಉಪಸ್ಥಿತರಿದ್ದರು.

25 ವರ್ಷ ಪೂರೈಸಿದ ನವೋದಯ ಸಂಘ
ಸತತ 31 ವರ್ಷಗಳಿಂದ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಡಾ. ಎಂಎನ್ ಆರ್ ಅವರು ಗ್ರಾಮೀಣ ಮಹಿಳೆಯರನ್ನು ಸಶಕ್ತರನ್ನಾಗಿ ಮಾಡುವ ಉದ್ದೇಶದಿಂದ ನವೋದಯ ಸ್ವಸಹಾಯ ಸಂಘಗಳನ್ನು ಸ್ಥಾಪನೆ ಮಾಡಿದರು.

8 ಜಿಲ್ಲೆಗಳಿಗೆ ಇದನ್ನು ವಿಸ್ತರಿಸಲಾಗಿದ್ದು 35 ಸಾವಿರ ಸಂಘಗಳಿವೆ, 3.5 ಲಕ್ಷ ಸದಸ್ಯರಿದ್ದಾರೆ. ಈ ಮೂಲಕ ಮುಖ್ಯವಾಗಿ ಮಹಿಳೆಯರಿಗೆ ಸ್ವಾವಲಂಬಿ ಜೀವನ ಸಾಧ್ಯವಾಗಿದೆ. ಈಗ ನವೋದಯ ಸಂಘಗಳ ಸ್ಥಾಪನೆಯ 25ನೇ ವರ್ಷವೂ ಆಗಿದೆ ಎಂದು ಬೆಳವು ದೇವಿಪ್ರಸಾದ್ ಶೆಟ್ಟಿ ವಿವರಿಸಿದರು.

Ad Widget
Click to comment

Leave a Reply

ನಿಧನ ವಾರ್ತೆ

Dead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ

Published

on



Ad Widget

Ad Widget

Ad Widget

Ad Widget

ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್‌ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್‌ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಳ್ತಂಗಡಿ ತಾಲೂಕಿನ ರಂಕದಗುತ್ತು, ಕಸಬಾ ಗ್ರಾಮದ ಮೂಲದ ಶ್ರೇಯಸ್‌ ಅ.4ರಂದು ದಸರಾ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿಗೆ ತೆರಳಿದ್ದರು. ನಾಲ್ವರು ಅಪ್ರಾಪ್ತ ಸ್ನೇಹಿತರೊಂದಿಗೆ ಬೆಳಗ್ಗೆ ಸುಮಾರು 10 ಗಂಟೆಗೆ ಮಂಗಳೂರಿಗೆ ಬಂದು ಹುಲಿ ವೇಷದ ತರಬೇತಿಯಲ್ಲಿ ಭಾಗವಹಿಸಿದ್ದರು.

Ad Widget

Ad Widget <> Ad Widget

ತರಬೇತಿ ಮುಗಿದ ಬಳಿಕ ಶ್ರೇಯಸ್‌ ಹಾಗೂ ಸ್ನೇಹಿತರು ಸ್ಟೇಟ್‌ ಬ್ಯಾಂಕ್‌ನಿಂದ ಪಣಂಬೂರು ಬೀಚ್‌ಗೆ ತೆರಳಿದ್ದರು. ಸಂಜೆ ಸುಮಾರು 4.30ರಿಂದ 5 ಗಂಟೆಯ ವೇಳೆಗೆ ಕೂರಿಕಟ್ಟ ಸಮುದ್ರ ಕಿನಾರೆಗೆ ತೆರಳಿದ್ದು, ಸುಮಾರು 6 ಗಂಟೆಗೆ ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ಶ್ರೇಯಸ್‌ ನೀರಿನಲ್ಲಿ ಮುಳುಗಿದ್ದಾರೆ. ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು.



Ad Widget

ಶ್ರೇಯಸ್‌ ನೀರು ಪಾಲಾದ ವಿಚಾರವನ್ನು ಆತನ ಅಪ್ರಾಪ್ತ ಸ್ನೇಹಿತರು ಭಯಗೊಂಡು ಮನೆಯವರಿಗೆ ತಿಳಿಸಿರಲಿಲ್ಲ. ಅ.5ರಂದು ಬೆಳಗ್ಗೆ ಈ ವಿಚಾರ ಶ್ರೇಯಸ್‌ ಕುಟುಂಬಸ್ಥರಿಗೆ ತಿಳಿದುಬಂದಿದೆ.

Ad Widget

Ad Widget

ಬಾಲಕನ ತಂದೆ ಶೇಷಪ್ಪ ನೀಡಿದ ದೂರಿನ ಆಧಾರದಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಬಾಲಕನ ಪತ್ತೆಗಾಗಿ ಕೋಸ್ಟ್‌ ಗಾರ್ಡ್‌, ಕರಾವಳಿ ಕಾವಲು ಪಡೆ ಹಾಗೂ ಸಮುದ್ರ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿತ್ತು. ಲೈಫ್‌ಗಾರ್ಡ್‌ಗಳು, ಮುಳುಗು ತಜ್ಞರು ಹಾಗೂ ಸ್ಥಳೀಯ ಮೀನುಗಾರರ ಸಹಕಾರದಿಂದ ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.

Ad Widget
Continue Reading

ಮಂಗಳೂರು

Satyajit-ಎಂಆರ್‌ಪಿಎಲ್ ಸುರಕ್ಷತೆಯಲ್ಲಿ ರಾಜಿ ಬೇಡ: ಸುರಕ್ಷತಾ ಲೋಪದ ಸಮಗ್ರ ತನಿಖೆಗೆ ಸತ್ಯಜಿತ್ ಸುರತ್ಕಲ್ ಆಗ್ರಹ

Published

on



Ad Widget

Ad Widget

Ad Widget

Ad Widget

ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇವಲ ಪರಿಹಾರ ಮತ್ತು ಉದ್ಯೋಗದ ವಿಚಾರಕ್ಕೆ ಸೀಮಿತಗೊಳಿಸದೆ, ಅವಘಡಕ್ಕೆ ಕಾರಣವಾದ ಸುರಕ್ಷತಾ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಎಂಆರ್‌ಪಿಎಲ್ ಮಜ್ದೂರ್ ಸಂಘದ ಗೌರವಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದರು.

Ad Widget

Ad Widget

Ad Widget

Ad Widget

ಮಂಗಳೂರು, ಅ.6: ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇವಲ ಪರಿಹಾರ ಮತ್ತು ಉದ್ಯೋಗದ ವಿಚಾರಕ್ಕೆ ಸೀಮಿತಗೊಳಿಸದೆ, ಅವಘಡಕ್ಕೆ ಕಾರಣವಾದ ಸುರಕ್ಷತಾ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಎಂಆರ್‌ಪಿಎಲ್ ಮಜ್ದೂರ್ ಸಂಘದ ಗೌರವಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಆರ್‌ಪಿಎಲ್‌ನಂತಹ ಬೃಹತ್ ಕೈಗಾರಿಕಾ ಘಟಕಗಳಲ್ಲಿ ಕಾರ್ಮಿಕರು ಮಾತ್ರವಲ್ಲದೆ ಸುತ್ತಮುತ್ತಲಿನ ಜನರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಈ ಹಿನ್ನೆಲೆಯಲ್ಲಿ ಸಂಸ್ಥೆಯಲ್ಲಿ ಈ ಹಿಂದೆ ನಡೆದಿರುವ ಅವಘಡಗಳನ್ನೂ ಪರಿಗಣಿಸಿ ಸಮಗ್ರ ತನಿಖೆ ನಡೆಸಿ, ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Ad Widget

Ad Widget <> Ad Widget

ಅವಘಡದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಅವರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ನೀಡಿರುವುದನ್ನು ಸ್ವಾಗತಿಸಿದ ಅವರು, ಕುಟುಂಬಕ್ಕೆ ಅಗತ್ಯ ನೆರವು ಮುಂದುವರಿಸುವುದರ ಜತೆಗೆ ಉದ್ಯೋಗ ಕಲ್ಪಿಸುವ ಕ್ರಮ ಕೈಗೊಳ್ಳಬೇಕು ಎಂದರು.



Ad Widget

ಗುತ್ತಿಗೆ ಕಾರ್ಮಿಕರಿಗೆ ವಿಮೆ

Ad Widget

Ad Widget

ಎಂಆರ್‌ಪಿಎಲ್‌ನ ಗುತ್ತಿಗೆ ಕಾರ್ಮಿಕರು ಹಾಗೂ ಅವರ ಕುಟುಂಬಗಳ ಹಿತದೃಷ್ಟಿಯಿಂದ ಕನಿಷ್ಠ ₹10 ಲಕ್ಷದ ಆರೋಗ್ಯ ವಿಮೆ ಒದಗಿಸಬೇಕು. ಅಪಘಾತದಲ್ಲಿ ಕಾರ್ಮಿಕ ಮೃತಪಟ್ಟ ಸಂದರ್ಭದಲ್ಲಿ ₹25 ಲಕ್ಷದ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ಸತ್ಯಜಿತ್ ಸುರತ್ಕಲ್ ಆಗ್ರಹಿಸಿದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗುವ ಕಾರ್ಮಿಕರನ್ನು ಉದ್ಯೋಗದಿಂದ ವಜಾಗೊಳಿಸಲಾಗುತ್ತಿದೆ ಎಂಬ ಆರೋಪಗಳ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಅನಿಲ ಸೋರಿಕೆ ಪತ್ತೆಗೆ ಪರಿಣಾಮಕಾರಿ ವ್ಯವಸ್ಥೆ ಅಗತ್ಯ

ಎಂಆರ್‌ಪಿಎಲ್‌ನಲ್ಲಿ ಅನಿಲ ಸೋರಿಕೆ ಸೇರಿದಂತೆ ಅಪಾಯಕಾರಿ ಪರಿಸ್ಥಿತಿಗಳನ್ನು ಮುಂಚಿತವಾಗಿಯೇ ಪತ್ತೆಹಚ್ಚುವ ಡಿಟೆಕ್ಷನ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸಬೇಕು. ಅಪಾಯದ ಸಂದರ್ಭದಲ್ಲಿ ಕಾರ್ಮಿಕರು ಹಾಗೂ ಸುತ್ತಮುತ್ತಲಿನ ಜನರಿಗೆ ತಕ್ಷಣ ಎಚ್ಚರಿಕೆ ನೀಡಲು ಸೈರನ್ ವ್ಯವಸ್ಥೆ ಮತ್ತು ತುರ್ತು ಸ್ಥಳಾಂತರ ವ್ಯವಸ್ಥೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದರು.

ಸುರಕ್ಷತಾ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು. ಕೈಗಾರಿಕಾ ಸುರಕ್ಷತೆಯ ವಿಚಾರದಲ್ಲಿ ಲೋಪ ಕಂಡುಬಂದರೆ ಅದರ ಮೂಲ ಕಾರಣ ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲೆಯ ಹಿತಾಸಕ್ತಿಯ ವಿಚಾರ

ಎಂಆರ್‌ಪಿಎಲ್ ಅವಘಡವನ್ನು ಕೇವಲ ಕಾರ್ಮಿಕರ ಸಮಸ್ಯೆಯಾಗಿ ಪರಿಗಣಿಸದೆ, ಜಿಲ್ಲೆಯ ಜನರ ಸುರಕ್ಷತೆ ಹಾಗೂ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರವಾಗಿ ನೋಡಬೇಕು. ಈ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳನ್ನು ಒಗ್ಗೂಡಿಸಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಸತ್ಯಜಿತ್ ಸುರತ್ಕಲ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎತ್ತಿನಹೊಳೆ ಹೋರಾಟ ಸಮಿತಿ ಸಂಚಾಲಕ ಶಶಿರಾಜ್ ಶೆಟ್ಟಿ ಕೊಳಂಬೆ, ಕೆಪಿಟಿಎಂಎಸ್ ಜಿಲ್ಲಾಧ್ಯಕ್ಷ ಯಶ್‌ಪಾಲ್ ಸುವರ್ಣ, ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ತುಷಾರ್ ಕದ್ರಿ, ತುಳುನಾಡು ರಕ್ಷಣಾ ವೇದಿಕೆ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಹಾಗೂ ಪ್ರಮುಖರಾದ ಅಮರ್ ಉಪಸ್ಥಿತರಿದ್ದರು.

Ad Widget
Continue Reading

ಮಂಗಳೂರು

Mangalore-ಮಂಗಳೂರು–ಸುಬ್ರಹ್ಮಣ್ಯ ರೈಲು ಮಾರ್ಗದಲ್ಲಿ ದಾಖಲೆ ಸಂಚಾರ: 20 ತಿಂಗಳಲ್ಲಿ 16.38 ಲಕ್ಷ ಪ್ರಯಾಣಿಕರು, ₹31.31 ಕೋಟಿ ಆದಾಯ..!

Published

on



Ad Widget

Ad Widget

Ad Widget

Ad Widget

ಮಂಗಳೂರು–ಸುಬ್ರಹ್ಮಣ್ಯ ರೋಡ್ ರೈಲ್ವೆ ವಿಭಾಗದಲ್ಲಿ ಪ್ರಯಾಣಿಕರ ಸಂಚಾರ ಗಣನೀಯವಾಗಿ ಹೆಚ್ಚಿದ್ದು, 2025ರ ಜನವರಿಯಿಂದ 2026ರ ಆಗಸ್ಟ್‌ವರೆಗಿನ 20 ತಿಂಗಳಲ್ಲಿ ಸುಮಾರು 16.38 ಲಕ್ಷ ಪ್ರಯಾಣಿಕರು ಈ ಮಾರ್ಗದ ವಿವಿಧ ನಿಲ್ದಾಣಗಳ ಮೂಲಕ ಸಂಚರಿಸಿದ್ದಾರೆ. ಇದೇ ಅವಧಿಯಲ್ಲಿ ರೈಲ್ವೆಗೆ ಸುಮಾರು ₹31.31 ಕೋಟಿ ಪ್ರಯಾಣಿಕ ವರಮಾನ ಸಂಗ್ರಹವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರು–ಸುಬ್ರಹ್ಮಣ್ಯ ರೋಡ್ ರೈಲ್ವೆ ವಿಭಾಗದಲ್ಲಿ ಪ್ರಯಾಣಿಕರ ಸಂಚಾರ ಗಣನೀಯವಾಗಿ ಹೆಚ್ಚಿದ್ದು, 2025ರ ಜನವರಿಯಿಂದ 2026ರ ಆಗಸ್ಟ್‌ವರೆಗಿನ 20 ತಿಂಗಳಲ್ಲಿ ಸುಮಾರು 16.38 ಲಕ್ಷ ಪ್ರಯಾಣಿಕರು ಈ ಮಾರ್ಗದ ವಿವಿಧ ನಿಲ್ದಾಣಗಳ ಮೂಲಕ ಸಂಚರಿಸಿದ್ದಾರೆ. ಇದೇ ಅವಧಿಯಲ್ಲಿ ರೈಲ್ವೆಗೆ ಸುಮಾರು ₹31.31 ಕೋಟಿ ಪ್ರಯಾಣಿಕ ವರಮಾನ ಸಂಗ್ರಹವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರು–ಸುಬ್ರಹ್ಮಣ್ಯ ರೋಡ್ ನಡುವಿನ ಬಂಟ್ವಾಳ, ನೇರಳಕಟ್ಟೆ, ಕಬಕ ಪುತ್ತೂರು, ನರಿಮೊಗರು, ಕಾಣಿಯೂರು, ಎಡಮಂಗಲ, ಕೋಡಿಂಬಾಳ, ಬಜಕರೆ ಹಾಗೂ ಸುಬ್ರಹ್ಮಣ್ಯ ರೋಡ್ ಸೇರಿದಂತೆ ಒಂಬತ್ತು ನಿಲ್ದಾಣಗಳ ಅಂಕಿಅಂಶಗಳನ್ನು ಪರಿಗಣಿಸಲಾಗಿದೆ.

Ad Widget

Ad Widget <> Ad Widget

ಈ ನಿಲ್ದಾಣಗಳಲ್ಲಿ ಸುಮಾರು 10.51 ಲಕ್ಷ ಟಿಕೆಟ್ ಕಾಯ್ದಿರಿಸದ ಹಾಗೂ 5.87 ಲಕ್ಷ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರು ಸಂಚರಿಸಿದ್ದಾರೆ. ಕಾಯ್ದಿರಿಸದ ಟಿಕೆಟ್‌ಗಳಿಂದ ಸುಮಾರು ₹7.55 ಕೋಟಿ ಹಾಗೂ ಕಾಯ್ದಿರಿಸಿದ ಟಿಕೆಟ್‌ಗಳಿಂದ ₹23.76 ಕೋಟಿ ಆದಾಯ ಬಂದಿದೆ. ಇದೇ ಅವಧಿಯಲ್ಲಿ ಸುಮಾರು 1.06 ಲಕ್ಷ ಪ್ಲಾಟ್‌ಫಾರ್ಮ್ ಟಿಕೆಟ್‌ಗಳು ಮಾರಾಟವಾಗಿವೆ.



Ad Widget

ಸುಬ್ರಹ್ಮಣ್ಯ ರೋಡ್‌ಗೆ ಅಗ್ರಸ್ಥಾನ
ಪಡೀಲ್–ಸುಬ್ರಹ್ಮಣ್ಯ ನಡುವಿನ ಪ್ರಮುಖ ನಿಲ್ದಾಣವಾಗಿರುವ ಸುಬ್ರಹ್ಮಣ್ಯ ರೋಡ್ ಅತಿ ಹೆಚ್ಚು ಪ್ರಯಾಣಿಕ ದಟ್ಟಣೆ ದಾಖಲಿಸಿದೆ. 20 ತಿಂಗಳಲ್ಲಿ ಈ ನಿಲ್ದಾಣದ ಮೂಲಕ ಸುಮಾರು 8.05 ಲಕ್ಷ ಪ್ರಯಾಣಿಕರು ಸಂಚರಿಸಿದ್ದು, ₹18.86 ಕೋಟಿ ಪ್ರಯಾಣಿಕ ವರಮಾನ ಸಂಗ್ರಹವಾಗಿದೆ.

Ad Widget

Ad Widget

ಇದರಲ್ಲಿ 4.42 ಲಕ್ಷ ಕಾಯ್ದಿರಿಸದ ಹಾಗೂ 3.64 ಲಕ್ಷ ಕಾಯ್ದಿರಿಸಿದ ಪ್ರಯಾಣಿಕರು ಸೇರಿದ್ದಾರೆ. ಒಂಬತ್ತು ನಿಲ್ದಾಣಗಳ ಒಟ್ಟು ಪ್ರಯಾಣಿಕ ದಟ್ಟಣೆಯ ಸುಮಾರು ಶೇ.49 ಹಾಗೂ ಪ್ರಯಾಣಿಕ ವರಮಾನದ ಸುಮಾರು ಶೇ.60ರಷ್ಟು ಪಾಲು ಸುಬ್ರಹ್ಮಣ್ಯ ರೋಡ್ ನಿಲ್ದಾಣದ್ದಾಗಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರೈಲು ಸಂಪರ್ಕ ಕಲ್ಪಿಸುವುದರ ಜತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುವ ಭಕ್ತರಿಗೂ ಈ ನಿಲ್ದಾಣ ಪ್ರಮುಖ ಸಂಪರ್ಕ ಕೊಂಡಿಯಾಗಿದೆ. ಜಾತ್ರೆ, ತೀರ್ಥಯಾತ್ರೆ ಹಾಗೂ ಪ್ರಮುಖ ಹಬ್ಬಗಳ ಸಂದರ್ಭಗಳಲ್ಲಿ ಇಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಹೆಚ್ಚಾಗುತ್ತದೆ.

ಕಬಕ ಪುತ್ತೂರು ಎರಡನೇ ಸ್ಥಾನ
ಕಬಕ ಪುತ್ತೂರು ರೈಲು ನಿಲ್ದಾಣದ ಮೂಲಕ 20 ತಿಂಗಳಲ್ಲಿ ಸುಮಾರು 5.04 ಲಕ್ಷ ಪ್ರಯಾಣಿಕರು ಸಂಚರಿಸಿದ್ದಾರೆ. ಇವರಲ್ಲಿ 3.64 ಲಕ್ಷ ಕಾಯ್ದಿರಿಸದ ಹಾಗೂ 1.39 ಲಕ್ಷ ಕಾಯ್ದಿರಿಸಿದ ಪ್ರಯಾಣಿಕರಾಗಿದ್ದಾರೆ.

ನಿಲ್ದಾಣವು ಒಟ್ಟು ಸುಮಾರು ₹7.59 ಕೋಟಿ ಪ್ರಯಾಣಿಕ ವರಮಾನ ಗಳಿಸಿದೆ. ಕಾಯ್ದಿರಿಸದ ಪ್ರಯಾಣಿಕರಿಂದ ₹1.64 ಕೋಟಿ ಹಾಗೂ ಕಾಯ್ದಿರಿಸಿದ ಪ್ರಯಾಣಿಕರಿಂದ ₹5.94 ಕೋಟಿ ಆದಾಯ ಬಂದಿದೆ.

ಇದಲ್ಲದೆ, ಕಬಕ ಪುತ್ತೂರು ನಿಲ್ದಾಣದಲ್ಲಿ ಸುಮಾರು 53,000 ಪ್ಲಾಟ್‌ಫಾರ್ಮ್ ಟಿಕೆಟ್‌ಗಳು ಮಾರಾಟವಾಗಿದ್ದು, ಒಂಬತ್ತು ನಿಲ್ದಾಣಗಳ ಪೈಕಿ ಅತಿ ಹೆಚ್ಚು ಪ್ಲಾಟ್‌ಫಾರ್ಮ್ ಟಿಕೆಟ್ ಮಾರಾಟವಾದ ನಿಲ್ದಾಣವಾಗಿದೆ.

ಬಂಟ್ವಾಳದಲ್ಲೂ 2.15 ಲಕ್ಷ ಪ್ರಯಾಣಿಕರು
ಬಂಟ್ವಾಳ ರೈಲು ನಿಲ್ದಾಣದ ಮೂಲಕ ಈ ಅವಧಿಯಲ್ಲಿ ಸುಮಾರು 2.15 ಲಕ್ಷ ಪ್ರಯಾಣಿಕರು ಸಂಚರಿಸಿದ್ದಾರೆ. ಇದರಲ್ಲಿ 1.31 ಲಕ್ಷ ಕಾಯ್ದಿರಿಸದ ಹಾಗೂ 84,000 ಕಾಯ್ದಿರಿಸಿದ ಪ್ರಯಾಣಿಕರು ಸೇರಿದ್ದಾರೆ.

ಬಂಟ್ವಾಳ ನಿಲ್ದಾಣವು ಒಟ್ಟು ಸುಮಾರು ₹4.69 ಕೋಟಿ ಪ್ರಯಾಣಿಕ ವರಮಾನ ಗಳಿಸಿದೆ. ಕಾಯ್ದಿರಿಸದ ಪ್ರಯಾಣಿಕರಿಂದ ₹1.04 ಕೋಟಿ ಹಾಗೂ ಕಾಯ್ದಿರಿಸಿದ ಪ್ರಯಾಣಿಕರಿಂದ ₹3.65 ಕೋಟಿ ಆದಾಯ ಬಂದಿದೆ. ಇಲ್ಲಿ ಸುಮಾರು 37,180 ಪ್ಲಾಟ್‌ಫಾರ್ಮ್ ಟಿಕೆಟ್‌ಗಳು ಮಾರಾಟವಾಗಿವೆ.

ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು ಹಾಗೂ ಬಂಟ್ವಾಳ ಈ ಮೂರು ನಿಲ್ದಾಣಗಳ ಮೂಲಕವೇ ಒಟ್ಟು ಸುಮಾರು 14.25 ಲಕ್ಷ ಪ್ರಯಾಣಿಕರು ಸಂಚರಿಸಿದ್ದಾರೆ. ಇದು ಒಂಬತ್ತು ನಿಲ್ದಾಣಗಳ ಒಟ್ಟು ಪ್ರಯಾಣಿಕ ದಟ್ಟಣೆಯ ಸುಮಾರು ಶೇ.87ರಷ್ಟಾಗಿದೆ.

ಗ್ರಾಮೀಣ ನಿಲ್ದಾಣಗಳಲ್ಲೂ ಗಮನಾರ್ಹ ಬೇಡಿಕೆ
ಕಾಣಿಯೂರು ನಿಲ್ದಾಣದಿಂದ ಸುಮಾರು 31,700 ಪ್ರಯಾಣಿಕರು ಸಂಚರಿಸಿದ್ದು, ₹5.10 ಲಕ್ಷ ಆದಾಯ ಸಂಗ್ರಹವಾಗಿದೆ. ಕೋಡಿಂಬಾಳದಿಂದ ಸುಮಾರು 26,600 ಪ್ರಯಾಣಿಕರು ಹಾಗೂ ₹5.25 ಲಕ್ಷ ಆದಾಯ ದಾಖಲಾಗಿದೆ.

ಎಡಮಂಗಲದಿಂದ ಸುಮಾರು 25,300 ಪ್ರಯಾಣಿಕರು ಸಂಚರಿಸಿದ್ದು, ₹3.20 ಲಕ್ಷ ಆದಾಯ ಬಂದಿದೆ. ಬಜಕರೆ ನಿಲ್ದಾಣದಿಂದ ಸುಮಾರು 11,100 ಪ್ರಯಾಣಿಕರು ಹಾಗೂ ₹2 ಲಕ್ಷ, ನೇರಳಕಟ್ಟೆಯಿಂದ ಸುಮಾರು 10,100 ಪ್ರಯಾಣಿಕರು ಹಾಗೂ ₹63,000, ನರಿಮೊಗರು ನಿಲ್ದಾಣದಿಂದ ಸುಮಾರು 9,100 ಪ್ರಯಾಣಿಕರು ಹಾಗೂ ₹97,000 ಆದಾಯ ದಾಖಲಾಗಿದೆ.

ಒಂಬತ್ತು ನಿಲ್ದಾಣಗಳಲ್ಲಿ ಒಟ್ಟು 1.06 ಲಕ್ಷ ಪ್ಲಾಟ್‌ಫಾರ್ಮ್ ಟಿಕೆಟ್‌ಗಳು ಮಾರಾಟವಾಗಿದ್ದು, ಕಬಕ ಪುತ್ತೂರು, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳೇ ಬಹುಪಾಲು ಟಿಕೆಟ್ ಮಾರಾಟವನ್ನು ಹೊಂದಿವೆ.

ರೈಲ್ವೆಯ ಇತರ ವರಮಾನ
ಬಂಟ್ವಾಳ ಮತ್ತು ಕಬಕ ಪುತ್ತೂರಿನ ಪಾರ್ಕಿಂಗ್ ಗುತ್ತಿಗೆಗಳಿಂದ ಜಿಎಸ್‌ಟಿ ಹೊರತುಪಡಿಸಿ ಕ್ರಮವಾಗಿ ಸುಮಾರು ₹8,250 ಮತ್ತು ₹7,520 ಆದಾಯ ಬಂದಿದೆ.

ನಿಲ್ದಾಣಗಳ ವರ್ಗೀಕರಣ
ಈ ನಿಲ್ದಾಣಗಳನ್ನು ರೈಲು ನಿಲ್ದಾಣಗಳ ನಾನ್-ಸಬ್ ಅರ್ಬನ್ ವರ್ಗಗಳ ವಿವಿಧ ವರ್ಗಗಳಲ್ಲಿ ವರ್ಗೀಕರಿಸಲಾಗಿದೆ:
NSG-4: ಸುಬ್ರಹ್ಮಣ್ಯ ರೋಡ್
NSG-5: ಬಂಟ್ವಾಳ ಮತ್ತು ಕಬಕ ಪುತ್ತೂರು
NSG-6: ನೇರಳಕಟ್ಟೆ, ನರಿಮೊಗರು ಮತ್ತು ಎಡಮಂಗಲ
HG-3: ಕಾಣಿಯೂರು, ಕೊಡಿಂಬಾಳ ಮತ್ತು ಬಜಕರೆ

2025ರ ಜನವರಿಯಿಂದ ಈ ನಿಲ್ದಾಣಗಳ ವರ್ಗೀಕರಣದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ರೈಲು ಸೇವೆ ವಿಸ್ತರಣೆಗೆ ಅಂಕಿಅಂಶಗಳ ಬಲ
20 ತಿಂಗಳಲ್ಲಿ 16.38 ಲಕ್ಷ ಪ್ರಯಾಣಿಕರು ಸಂಚರಿಸಿರುವುದು ಈ ರೈಲ್ವೆ ಕಾರಿಡಾರ್‌ನ ಮಹತ್ವವನ್ನು ತೋರಿಸುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ರೈಲು ಬಳಕೆದಾರರ ಸಮಿತಿ ತಿಳಿಸಿದೆ.

ಸುಬ್ರಹ್ಮಣ್ಯ ರೋಡ್‌ನಲ್ಲಿ ದಾಖಲಾಗಿರುವ 8.05 ಲಕ್ಷ ಪ್ರಯಾಣಿಕರು ಹಾಗೂ ₹18.86 ಕೋಟಿ ಆದಾಯದ ಹಿನ್ನೆಲೆಯಲ್ಲಿ, ನಿಲ್ದಾಣವನ್ನು ಟರ್ಮಿನಲ್ ನಿಲ್ದಾಣವಾಗಿ ಅಭಿವೃದ್ಧಿಪಡಿಸುವುದು, ಮಂಗಳೂರಿನಿಂದ ಹೆಚ್ಚಿನ ರೈಲು ಸೇವೆಗಳನ್ನು ವಿಸ್ತರಿಸುವುದು ಹಾಗೂ ಕೊಂಕಣ, ಕೇರಳ ಮತ್ತು ತಮಿಳುನಾಡು ಭಾಗಗಳಿಗೆ ಉತ್ತಮ ಸಂಪರ್ಕ ಕಲ್ಪಿಸುವ ಬೇಡಿಕೆ ಮತ್ತಷ್ಟು ಬಲಗೊಂಡಿದೆ.

ಅದೇ ರೀತಿ ಕಬಕ ಪುತ್ತೂರು ನಿಲ್ದಾಣದಲ್ಲಿ 5.04 ಲಕ್ಷ ಪ್ರಯಾಣಿಕರ ಸಂಚಾರ, ₹7.59 ಕೋಟಿ ಆದಾಯ ಹಾಗೂ 53,000 ಪ್ಲಾಟ್‌ಫಾರ್ಮ್ ಟಿಕೆಟ್ ಮಾರಾಟವಾಗಿರುವುದರಿಂದ ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕೆಂಬ ಆಗ್ರಹ ಕೇಳಿಬಂದಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಇಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ನಿಲುಗಡೆ ನೀಡಬೇಕೆಂಬ ಬೇಡಿಕೆಯೂ ಇದೆ.

ಗ್ರಾಮೀಣ ನಿಲ್ದಾಣಗಳಲ್ಲೂ ಪ್ರಯಾಣಿಕರ ಬೇಡಿಕೆ ಇರುವುದರಿಂದ ಉತ್ತಮ ಸೌಲಭ್ಯ ಹಾಗೂ ಮೂಲಸೌಕರ್ಯ ಕಲ್ಪಿಸಬೇಕು. ಮಂಗಳೂರು ಸೆಂಟ್ರಲ್–ಕಬಕ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರೋಡ್‌ವರೆಗೆ ವಿಸ್ತರಿಸಿದ ಬಳಿಕ ಸ್ಥಳೀಯ ರೈಲು ಸೇವೆಗಳನ್ನು ಮತ್ತಷ್ಟು ಸುಧಾರಿಸುವ ಅಗತ್ಯವಿದೆ ಎಂದು ಸಮಿತಿ ಹೇಳಿದೆ.

ಇದರ ಜತೆಗೆ ಮಂಗಳೂರು–ಸುಬ್ರಹ್ಮಣ್ಯ ರೋಡ್ ನಡುವೆ ಕನಿಷ್ಠ ಹಳಿ ದ್ವಿಪಥೀಕರಣ ಮಾಡುವುದು, ಹೆಚ್ಚುವರಿ ಪ್ರಯಾಣಿಕ ಮತ್ತು ಪ್ರಾದೇಶಿಕ ರೈಲುಗಳ ಸಂಚಾರಕ್ಕೆ ಅವಕಾಶ ಕಲ್ಪಿಸುವುದು ಹಾಗೂ ಮಂಗಳೂರು, ಕಾಸರಗೋಡು, ಉಡುಪಿ ಸೇರಿದಂತೆ ಸಮೀಪದ ಪ್ರದೇಶಗಳಿಗೆ ಸ್ಥಳೀಯ ಮೆಮು ರೈಲು ಸೇವೆ ಆರಂಭಿಸುವ ಬೇಡಿಕೆಗೂ ಈ ಅಂಕಿಅಂಶಗಳು ಬಲ ನೀಡಿವೆ.

ಒಟ್ಟಾರೆ, 20 ತಿಂಗಳಲ್ಲಿ ದಾಖಲಾಗಿರುವ ಪ್ರಯಾಣಿಕರ ಸಂಖ್ಯೆ ಹಾಗೂ ಆದಾಯವು ದಕ್ಷಿಣ ಕನ್ನಡದ ನಗರ, ಗ್ರಾಮೀಣ ಪ್ರದೇಶಗಳು ಮತ್ತು ಪ್ರಮುಖ ಧಾರ್ಮಿಕ ಕ್ಷೇತ್ರಗಳನ್ನು ಸಂಪರ್ಕಿಸುವ ಈ ರೈಲು ಮಾರ್ಗದ ಮಹತ್ವವನ್ನು ಎತ್ತಿ ತೋರಿಸುತ್ತಿದ್ದು, ರೈಲ್ವೆ ಮೂಲಸೌಕರ್ಯ ವಿಸ್ತರಣೆಗೆ ದತ್ತಾಂಶ ಆಧಾರಿತ ಸಮರ್ಥನೆಯನ್ನು ಒದಗಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ರೈಲು ಬಳಕೆದಾರರ ಸಮಿತಿ ಅಭಿಪ್ರಾಯಪಟ್ಟಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading