ಶಾಲಾ ಮಕ್ಕಳಿಗೆ ನಾಡಿನ ವಿಭಿನ್ನ ಕಲೆ-ಸಂಸ್ಕೃತಿಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದ […]" /> ಶಾಲಾ ಮಕ್ಕಳಿಗೆ ನಾಡಿನ ವಿಭಿನ್ನ ಕಲೆ-ಸಂಸ್ಕೃತಿಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದ […]"> Mangalore-ಮಂಗಳೂರು: ಶಾಲಾ ರಂಗೋತ್ಸವದಲ್ಲಿ ದೈವಾರಾಧನೆ: ರಾಜ್ಯ ಸರ್ಕಾರದ ನಡೆಗೆ ಶಾಸಕ ಕಾಮತ್ ತೀವ್ರ ಆಕ್ರೋಶ - Nikhara News | Kannada News Website
Connect with us

ಮಂಗಳೂರು

Mangalore-ಮಂಗಳೂರು: ಶಾಲಾ ರಂಗೋತ್ಸವದಲ್ಲಿ ದೈವಾರಾಧನೆ: ರಾಜ್ಯ ಸರ್ಕಾರದ ನಡೆಗೆ ಶಾಸಕ ಕಾಮತ್ ತೀವ್ರ ಆಕ್ರೋಶ

Published

on

Ad Widget

Ad Widget

Ad Widget

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದಲ್ಲಿ ಭೂತಾರಾಧನೆ ಸೇರಿಸಿರುವುದು ಖಂಡನೀಯ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದಲ್ಲಿ ಭೂತಾರಾಧನೆ ಸೇರಿಸಿರುವುದು ಖಂಡನೀಯ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಶಾಲಾ ಮಕ್ಕಳಿಗೆ ನಾಡಿನ ವಿಭಿನ್ನ ಕಲೆ-ಸಂಸ್ಕೃತಿಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದ ಅನುಷ್ಠಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವು ಮುಂದಾಗಿದ್ದು ಇದರಲ್ಲಿ ಬೊಂಬೆಯಾಟ, ಕೋಲಾಟ ಮುಂತಾದ ಮನೋರಂಜನಾ ಕಲೆಗಳ ಸಾಲಿಗೆ ಭೂತಾರಾಧನೆ ಸೇರಿಸಿರುವುದು ಖಂಡನೀಯ ಎಂದು ಕಾಮತ್ ಆಕ್ಷೇಪಿಸಿದ್ದಾರೆ.

Ad Widget

Ad Widget <> Ad Widget

ಸಾವಿರಾರು ವರ್ಷಗಳಿಂದಲೂ ತುಳುನಾಡಿನ ಶ್ರದ್ಧಾ ಭಕ್ತಿಯ ಇತಿಹಾಸ ಹೊಂದಿರುವ ದೈವಾರಾಧನೆಯು ಧಾರ್ಮಿಕ ಆಚರಣೆಯಾಗಿದೆಯೇ ಹೊರತು ಅದು ಯಾವುದೇ ಮನೋರಂಜನೆಯ ಕಲೆಯಲ್ಲ. ಮಕ್ಕಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಮೋಜು ಮಸ್ತಿಗಳಿಂದ ಕೂಡಿದ ಪ್ರತಿಭಾ ಕಾರಂಜಿಗಳಿಗೆ ನಮ್ಮ ವಿರೋಧವಿಲ್ಲ.

ದೈವಗಳು ವೇದಿಕೆಯ ಮೇಲೆ ನರ್ತನ ಮಾಡಿ ತೋರಿಸುವಂತಹ ವಸ್ತುವಲ್ಲ ಎಂಬ ಕನಿಷ್ಠ ಜ್ಞಾನವೂ ಈ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲವೇ? ಇದು ಖಂಡಿತವಾಗಿಯೂ ಬೇಜವಾಬ್ದಾರಿ ನಡೆಯಾಗಿದ್ದು ಸಮಸ್ತ ತುಳುನಾಡಿನ ದೈವಭಕ್ತರುಗಳ ನಂಬಿಕೆಗೆ ಧಕ್ಕೆಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

Click to comment

Leave a Reply

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಮಂಗಳೂರು

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಮಂಗಳೂರು

Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ

Published

on

Ad Widget

Ad Widget

Ad Widget

Ad Widget

ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget

Ad Widget

Ad Widget

ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

​ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

Ad Widget

Ad Widget <> Ad Widget

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.

Ad Widget

Ad Widget

“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

​ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:

ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.

ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.

ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ‌ಮತ್ತು ಪ್ರವಾಸೋದ್ಯಮ‌ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!