ಸುಳ್ಯ
Sullia-ಸುಳ್ಯದಲ್ಲಿ ಹಿಟ್ and ರನ್ ಮಾಡಿ ಬೆಟ್ಟಂಪಾಡಿಯ ಇಬ್ಬರ ಸಾವಿಗೆ ಕಾರಣವಾದ ಕಾರು ಚಾಲಕ ಠಾಣೆಗೆ ಶರಣು – ಜಾಮೀನು ಮೂಲಕ ಬಿಡುಗಡೆ
ಮಾಣಿ-ಮೈಸೂರು ಹೆದ್ದಾರಿಯ ಕನಕಮಜಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗಳೀರ್ವರಿಗೆ ಕಾರಿನಲ್ಲಿ ಢಿಕ್ಕಿ ಹೊಡೆದು ಇಬ್ಬರ ಸಾವಿಗೆ ಕಾರಣನಾಗಿರುವ ಆರೋಪಿ ಇಕೋ ವಾಹನ ಚಾಲಕ ಅವ್ಯಕ್ತ ರಾಮಕೃಷ್ಣ ಭಟ್ ಎಂಬವರು ಸುಳ್ಯ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿಗೆ ಬಂದು ಶರಣಾಗಿದ್ದಾರೆ.
ಸುಳ್ಯ, ಫೆ.19: ಮಾಣಿ-ಮೈಸೂರು ಹೆದ್ದಾರಿಯ ಕನಕಮಜಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗಳೀರ್ವರಿಗೆ ಕಾರಿನಲ್ಲಿ ಢಿಕ್ಕಿ ಹೊಡೆದು ಇಬ್ಬರ ಸಾವಿಗೆ ಕಾರಣನಾಗಿರುವ ಆರೋಪಿ ಇಕೋ ವಾಹನ ಚಾಲಕ ಅವ್ಯಕ್ತ ರಾಮಕೃಷ್ಣ ಭಟ್ ಎಂಬವರು ಸುಳ್ಯ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿಗೆ ಬಂದು ಶರಣಾಗಿದ್ದಾರೆ.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜನಾರ್ದನ ರೈ ಮತ್ತು ರಾಮಯ್ಯ ರೈ ಎಂಬವವರಿಗೆ ಫೆ.8ರಂದು ರಾತ್ರಿ ಆರೋಪಿ ಚಲಾಯಿಸುತ್ತಿದ್ದ ಕಾರು ಢಿಕ್ಕಿಯಾಗಿ ನಿಲ್ಲಿಸದೆ ಪರಾರಿಯಾಗಿತ್ತು.
ಆರೋಪಿ ಸುಳ್ಯ ಬೀರಮಂಗಲದಲ್ಲಿರುವ ತನ್ನ ಮನೆಗೆ ಬಂದು ವಾಹನ ನಿಲ್ಲಿಸಿದ್ದು, ಬಳಿಕ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಈ ನಡುವೆ ಪೊಲೀಸರು ಕಾರು ಮತ್ತು ಮನೆಯನ್ನು ಪತ್ತೆ ಹಚ್ಚಿದ್ದರು.
ವಕೀಲರ ಜತೆ ಇದೀಗ ಆರೋಪಿ ಸುಳ್ಳ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿಗೆ ಹಾಜರಾಗಿದ್ದು ಠಾಣೆಯಲ್ಲಿ ಆತನನ್ನು ಜಾಮೀನು ಪಡೆದು ಬಿಡುಗಡೆಗೊಳಿಸಲಾಗಿದೆ. ಪೋಲೀಸರು ಆತನ ಡ್ರೈವಿಂಗ್ ಲೈಸೆನ್ಸ್ ಮುಟ್ಟುಗೋಲು ಹಾಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
ಮಂಗಳೂರು9 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ12 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ14 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್14 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ14 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಮಂಗಳೂರು8 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಸಿನೆಮಾ13 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್7 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ


















