ಮೈಸೂರು
Udayagiri-ಉದಯಗಿರಿ: ಗಲಭೆ ನಡೆದ 11 ದಿನಗಳ ಬಳಿಕ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನ
ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಮಕ್ಬೋಲಿಯನ್ನ ಸಿಸಿಬಿ ಪೊಲೀಸರು ಗಲಭೆ ನಡೆದ 11 ದಿನಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಮಕ್ಬೋಲಿಯನ್ನ ಸಿಸಿಬಿ ಪೊಲೀಸರು ಗಲಭೆ ನಡೆದ 11 ದಿನಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮುಂಜಾಗ್ರತ ಕ್ರಮವಾಗಿ ಉದಯಗಿರಿ ಪೊಲೀಸ್ ಠಾಣೆಗೆ ಬಿಗಿ ಬಂದೂಬಸ್ತ್ ನಿಯೋಜಿಸಲಾಗಿದೆ.
ಮೌಲ್ವಿಯಿಂದ ಉದ್ರಿಕ್ತ ಭಾಷಣ:
ಫೆ.10ರಂದು ಉದಯಗಿರಿ ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸುವುದಕ್ಕೂ ಮುನ್ನವೇ ಮೌಲ್ವಿ ಮುಫ್ತಿ ಮುಷ್ತಾಕ್ ಮಕ್ಬೋಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು. ಈತನ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದರು.
ಭಾಷಣದಲ್ಲಿ ಮೌಲ್ವಿ ಹೇಳಿದ್ದೇನು?
ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ. ಧರ್ಮ ರಕ್ಷಣೆಯ ಬದ್ಧತೆ ನಿನ್ನೆನೂ ಇತ್ತು, ಇವತ್ತೂ ಇದೆ. ಎಲ್ಲಾ ಘೋಷಣೆ ಕೂಗಿ ನಾವು ಪ್ರಾಣ ಬೇಕಾದರೂ ಕೊಡುತ್ತೇವೆ. ಸದಾ ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಸುರೇಶ್ ಹೆಸರಿನ ನಾಯಿ, ಸುರೇಶ್ ಹೆಸರಿನ ಹರಾಮಿ. ನನ್ನ ಮಾಲೀಕನ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾನೆ. ಆತನನ್ನು ಕೂಡಲೇ ಬಂಧಿಸಿ. ಆತನನ್ನು ನೇಣಿಗೆ ಹಾಕಬೇಕು, ಮರಣದಂಡನೆ ವಿಧಿಸಬೇಕು ಎಂದು ಮೌಲ್ವಿ ಮಾತನಾಡಿದ್ದ.
ಸಿನೆಮಾ
Rajinikanth-ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ತಲೈವಾ: ರಜಿನಿಕಾಂತ್ ನೋಡಲು ಮುಗಿಬಿದ್ದ ಅಭಿಮಾನಿಗಳು
‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರಿನ ಸುತ್ತಮುತ್ತ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ರಜಿನಿಕಾಂತ್ ಅವರು ನಗರದಲ್ಲಿರುವ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ʻತಲೈವಾʼನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಶೂಟಿಂಗ್ ಸ್ಥಳಗಳು ಹಾಗೂ ಅವರು ಭೇಟಿ ನೀಡುವ ಪ್ರದೇಶಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.
ಚಾಮುಂಡೇಶ್ವರಿ ದೇವಾಲಯಕ್ಕೆ ರಜಿನಿಕಾಂತ್ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಅವರನ್ನು ನೋಡಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ಕಂಡ ರಜಿನಿಕಾಂತ್ ಅವರು ಪ್ರೀತಿಯಿಂದ ಕೈಬೀಸಿ ಅಭಿಮಾನಿಗಳ ಖುಷಿಗೆ ಕಾರಣರಾದರು.
ಇದಕ್ಕೂ ಮುನ್ನ ಮಂಗಳವಾರ (ಸೆ.29) ಸೋಮನಾಥಪುರದಲ್ಲಿ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರು ರಜಿನಿಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕರ್ನಾಟಕದಲ್ಲಿ ರಜಿನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ರಾಜ್ಯಕ್ಕೆ ಆಗಮಿಸಿದಾಗಲೆಲ್ಲ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯುತ್ತದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ತಲೈವಾ ನಗರದಲ್ಲಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.
ರಜಿನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ಜೈಲರ್-2’ ಕೂಡ ಸದ್ಯ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಜೈಲರ್-2’ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.
ಅಪರಾಧ
Case filed-ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲು
ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಮೈಸೂರು, ಸೆ. 23: ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾ ಕಲಾ ಸಂಘದ ಅಧ್ಯಕ್ಷ ಮಧು ಕೆ.ಟಿ. ಅವರು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪ್ರತಾಪ್ ಸಿಂಹ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ದೂರಿನಲ್ಲಿ ತಿಳಿಸಿರುವಂತೆ, ಸೆಪ್ಟೆಂಬರ್ 18ರಂದು ಟಿ.ನರಸೀಪುರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಪ್ರತಾಪ್ ಸಿಂಹ ನೂರಾರು ಜನರ ಸಮ್ಮುಖದಲ್ಲಿ ಮತ್ತು ಮಾಧ್ಯಮಗಳ ಕ್ಯಾಮೆರಾ-ಮೈಕ್‌ಗಳ ಮುಂದೆ ನಿಂತು ದಲಿತ ಸಮುದಾಯವನ್ನು ಹೀಯಾಳಿಸುವ ಮತ್ತು ಕೀಳಾಗಿ ಚಿತ್ರಿಸುವ ಉದ್ದೇಶದಿಂದ ಅತ್ಯಂತ ಅವಹೇಳನಕಾರಿ ಹಾಗೂ ನಿಂದನಾತ್ಮಕ ಭಾಷಣ ಮಾಡಿದ್ದಾರೆ.
ತಮ್ಮ ಭಾಷಣದಲ್ಲಿ ದಲಿತ ಸಮುದಾಯದ ಕಾರ್ಯಕರ್ತರನ್ನು ನೇರವಾಗಿ ಗುರಿಯಾಗಿಸಿ, “ನೀವು ಕೇವಲ ನೀಲಿ ಶಾಲು ಹೊದ್ದು ನಾವು ಏನೇ ಮಾಡಿದರೂ ಅಡ್ಡ ಬಂದು ನಿಲ್ಲುತ್ತೀರಿ. ನಿಮಗೆ ಅಂಬೇಡ್ಕರ್ ಅವರ ಬಗ್ಗೆ ಏನೂ ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಓದಿ” ಎಂದು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಈ ಮೂಲಕ ದಲಿತ ಸಮುದಾಯದ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲಿನ ಗೌರವವನ್ನು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಸಾರ್ವಜನಿಕವಾಗಿ ಹೀಯಾಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಆರೋಪಿತರು ಕೇವಲ ಒಂದು ರಾಜಕೀಯ ಪಕ್ಷದ ವಿರುದ್ಧ ಮಾತನಾಡುತ್ತಿಲ್ಲ. ಬದಲಿಗೆ ಶೋಷಿತರ ಹಕ್ಕುಗಳಿಗಾಗಿ ಹೋರಾಡುವ ದಲಿತ ಸಂಘಟನೆಯ ಪದಾಧಿಕಾರಿಗಳನ್ನು “ಹಣದ ಆಸೆಗಾಗಿ ಅಥವಾ ವೈಯಕ್ತಿಕ ಲಾಭಕ್ಕಾಗಿ ಹೋರಾಟ ಮಾಡುವವರು” ಎಂದು ಸಾರಾಸಗಟಾಗಿ ಸುಳ್ಳು ಆರೋಪ ಮಾಡಿದ್ದಾರೆ. ಇದು ಸಂಘಟನೆಯ ನೈತಿಕತೆಯನ್ನು ಸಾರ್ವಜನಿಕವಾಗಿ ಹತ್ಯೆ ಮಾಡುವ ಉದ್ದೇಶಪೂರ್ವಕ ಜಾತಿ ನಿಂದನೆ ಎಂದು ದೂರುದಾರರು ತಿಳಿಸಿದ್ದಾರೆ.
ಇದಲ್ಲದೆ, ಅವರು ಒಬ್ಬ ಪೊಲೀಸ್ ಅಧಿಕಾರಿಯ ಜಾತಿಯನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ, “ನಿಮ್ಮ ಜಾತಿಯ ಅಧಿಕಾರಿ ಎಂಬ ಒಂದೇ ಕಾರಣಕ್ಕೆ ನೀವು ಅವರನ್ನು ಬೆಂಬಲಿಸುತ್ತೀರಿ ಮತ್ತು ರಕ್ಷಣೆಗೆ ನಿಲ್ಲುತ್ತೀರಿ. ಆತ ಒಬ್ಬ ಕ್ಷುಲ್ಲಕ, ಕಳಪೆ ವ್ಯಕ್ತಿತ್ವದ ಇನ್ಸ್‌ಪೆಕ್ಟರ್” ಎಂದು ಹೇಳುವ ಮೂಲಕ ಪರಿಶಿಷ್ಟ ಜಾತಿಗೆ ಸೇರಿದ ಧನಂಜಯರನ್ನು ಜಾತಿ ಹೆಸರಿನಲ್ಲಿ ನಿಂದಿಸಿ, ಬೆದರಿಕೆ ಹಾಗೂ ತುಚ್ಛವಾಗಿ ಮಾತನಾಡಿದ್ದಾರೆ. ಆ ಮೂಲಕ ಸಾರ್ವಜನಿಕವಾಗಿ ಅಪಮಾನಗೊಳಿಸಿ, ಜಾತಿ ವ್ಯವಸ್ಥೆಯನ್ನು ಕೆರಳಿಸುವ ಮತ್ತು ಸಮಾಜದಲ್ಲಿ ವಿವಿಧ ಜಾತಿಗಳ ನಡುವೆ ತಾರತಮ್ಯ, ದ್ವೇಷ ಹಾಗೂ ನಾಗರಿಕ ಸಂಘರ್ಷದ ವಾತಾವರಣವನ್ನು ಸೃಷ್ಟಿಸುವ ತೀವ್ರ ಪ್ರಯತ್ನ ಮಾಡಿದ್ದಾರೆ ಎಂದು ದೂರಲಾಗಿದೆ.
ಈ ಇಡೀ ಕೃತ್ಯವು ಆಕಸ್ಮಿಕವಾಗಿ ನಡೆದದ್ದಲ್ಲ. ಮುಖ್ಯ ಆರೋಪಿತರು ಹಾಗೂ ಶೋಭಾ ಯಾತ್ರೆಯ ಮುಖ್ಯ ಆಯೋಜಕರು (ಸಹ ಆರೋಪಿಗಳು) ಒಟ್ಟಾಗಿ ಸೇರಿ, ಪಟ್ಟಣದ ಸಾಮಾಜಿಕ ಶಾಂತಿ ಮತ್ತು ಸೌಹಾರ್ದ ಕೆಡಿಸುವ ಹಾಗೂ ದಲಿತ ಸಮುದಾಯವನ್ನು ಸಾರ್ವಜನಿಕವಾಗಿ ಅಪಮಾನಿಸುವ ಉದ್ದೇಶದಿಂದಲೇ ಮೊದಲೇ ಯೋಜಿತ ಸಂಚು ರೂಪಿಸಿ ಈ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಪ್ರಚೋದನಾತ್ಮಕ ಹೇಳಿಕೆ ನೀಡಲು ಮುಕ್ತವಾಗಿ ಅವಕಾಶ ಮಾಡಿಕೊಟ್ಟು, ಅದಕ್ಕೆ ಕುಮ್ಮಕ್ಕು ನೀಡಿ ಸಹಕರಿಸಿರುವ ಆಯೋಜಕರು ಸಹ ಈ ಅಪರಾಧದಲ್ಲಿ ಸಮಾನ ಭಾಗಿಗಳು ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರು
Pramodadevi-ದಸರಾ ವೇಳೆ ಕಂಬಳ ಆಯೋಜನೆ ಅಗತ್ಯವಿಲ್ಲ; ಕರಾವಳಿಯ ಕ್ರೀಡೆಗೆ ಪ್ರತ್ಯೇಕ ಮಹತ್ವ ಸಿಗಲಿ: ಪ್ರಮೋದಾದೇವಿ
ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಮೈಸೂರು: ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಕಂಬಳಕ್ಕೆ ಕರಾವಳಿ ಭಾಗದಲ್ಲಿ ತನ್ನದೇ ಆದ ವಿಶಿಷ್ಟ ಪರಂಪರೆ ಹಾಗೂ ಮಹತ್ವವಿದೆ. ಹೀಗಾಗಿ ದಸರಾ ಉತ್ಸವದೊಂದಿಗೆ ಕಂಬಳವನ್ನು ಸೇರಿಸುವುದು ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಕಂಬಳವನ್ನು ಪ್ರತ್ಯೇಕವಾಗಿ ಆಯೋಜಿಸಿದರೆ ಕ್ರೀಡೆಗೆ ಇನ್ನಷ್ಟು ಮಹತ್ವ ಹಾಗೂ ಗಮನ ಸಿಗಲಿದೆ. ಆದರೆ ದಸರಾ ಉತ್ಸವದ ಭಾಗವಾಗಿ ಆಯೋಜಿಸಿದರೆ ಕಂಬಳಕ್ಕೆ ಸಿಗಬೇಕಾದ ಪ್ರತ್ಯೇಕ ಗಮನ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಪ್ರಮೋದಾದೇವಿ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.
-
ನಿಧನ ವಾರ್ತೆ21 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು20 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು17 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ21 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ21 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ21 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಪರಾಧ17 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
-
ಅಂತರ ರಾಜ್ಯ21 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















